Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹನಿಟ್ರ್ಯಾಪ್, ಪೆನ್‌ಡ್ರೈವ್ ಕೈವಾಡ ಬಯಲು ಮಾಡುವೆ

by admin March 20, 2025
written by admin March 20, 2025 0 comments 3 minutes read
0FacebookTwitterPinterestEmail
252

ಬೆಂಗಳೂರು:ರಾಜಕಾರಣಿಗಳ ಹನಿಟ್ರ್ಯಾಪ್ ಪ್ರಕರಣಗಳನ್ನು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿಂದು ಘೋಷಿಸಿದರು.

ಹನಿಟ್ರ್ಯಾಪ್ ಪ್ರಕರಣಗಳಿಂದ ಸಾರ್ವಜನಿಕ ಜೀವನದಲ್ಲಿರುವ ರಾಜಕಾರಣಿಗಳ ಬದುಕಿಗೆ ಹಾನಿ ಉಂಟು ಮಾಡುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಸುನೀಲ್ ಕುಮಾರ್ ಹಾಗೂ ಮುನಿರತ್ನ ಅವರು ಸದನದಲ್ಲಿ ಮಾಡಿರುವ ಪ್ರಸ್ತಾಪವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ.

ಹನಿಟ್ರ್ಯಾಪ್ ಸುದ್ದಿ ಮೊದಲು ಬ್ರೇಕ್ ಮಾಡಿದ್ದು kmskannada.com

ಸಿದ್ದರಾಮಯ್ಯ ಆಪ್ತ ಸಚಿವರ ಹನಿಟ್ರ್ಯಾಪ್‌ಗೆ ಯತ್ನ !
ಉನ್ನತ ಮಟ್ಟದ ತನಿಖೆ

ಸಚಿವ ರಾಜಣ್ಣ ತಮಗೆ ಲಿಖಿತ ದೂರು ನೀಡುವುದಾಗಿ ಹೇಳಿದ್ದಾರೆ, ಅವರ ದೂರನ್ನು ಆಧರಿಸಿ ಉನ್ನತ ಮಟ್ಟದ ತನಿಖೆ ನಡೆಸಿ, ಸತ್ಯಾಸತ್ಯತೆ ಬಯಲು ಮಾಡುತ್ತೇನೆ.

ಸದನದ ಪ್ರತಿಯೊಬ್ಬ ಸದಸ್ಯರ ಹಕ್ಕು ಕಾಪಾಡುವುದು ನಮ್ಮ ಕರ್ತವ್ಯ, ಹನಿಟ್ರ್ಯಾಪ್ ಮೂಲಕ ಜನಪ್ರತಿನಿಧಿಗಳ ಗೌರವಕ್ಕೆ ಚ್ಯುತಿ ತರುವುದನ್ನು ಕೊನೆಗಾಣಿಸುತ್ತೇನೆ.

ರಾಜ್ಯ ವಿಧಾನಮಂಡಲಕ್ಕೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಗೌರವ ಇದೆ, ಅದಕ್ಕೆ ಚ್ಯುತಿ ತರಲು ಬಿಡುವುದಿಲ್ಲ, ಈ ಸದನದಲ್ಲಿ ದೊಡ್ಡ ಮಹನೀಯರು ತಮ್ಮ ಆದರ್ಶ ಮತ್ತು ಛಾಪು ಮೂಡಿಸಿದ್ದಾರೆ.

ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ !
ಸದಸ್ಯರ ಗೌರವಕ್ಕೆ ಚ್ಯುತಿ

ಹನಿಟ್ರ್ಯಾಪ್ ಮೂಲಕ ಸದಸ್ಯರ ಗೌರವಕ್ಕೆ ಚ್ಯುತಿ ತಂದು ಅವರುಗಳ ಕುಟುಂಬದ ಮಾನ ತೆಗೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ತಗೆದುಕೊಳ್ಳುವುದಾಗಿ ತಿಳಿಸಿದರು.

ಇದಕ್ಕೂ ಮುನ್ನ ಬಜೆಟ್ ಮೇಲಿನ ಚರ್ಚೆ ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಸಚಿವರು, ಶಾಸಕರನ್ನು ಹನಿಟ್ರ್ಯಾಪ್ ಮಾಡಲಾಗಿದೆ.

ಸಹಕಾರಿ ಸಚಿವ ರಾಜಣ್ಣ ಅವರ ಮೇಲೆಯೇ ಹನಿಟ್ರ್ಯಾಪ್ ಆಗಿದೆ, ಇದನ್ನು ಸರ್ಕಾರ ಮಾಡಿಸುತ್ತಿದೆಯೇ ಅಥವಾ ಸರ್ಕಾರದಲ್ಲಿರುವವರು ಮಾಡುತ್ತಿದ್ದಾರೆಯೇ ಎಂದು ಖಾರವಾಗಿ ಪ್ರಶ್ನಿಸಿದರು.

ಹನಿಟ್ರ್ಯಾಪ್ ಮಾಡುವವರ ಪತ್ತೆ ಹಚ್ಚಿ

ಗೃಹ ಸಚಿವರೂ ಸದನದಲ್ಲಿದ್ದಾರೆ, ಅವರು ಉತ್ತರ ನೀಡಬೇಕು ಮತ್ತು ಹನಿಟ್ರ್ಯಾಪ್ ಮಾಡುವವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು, ಇದಕ್ಕೆ ಉನ್ನತ ಮಟ್ಟದ ತನಿಖೆ ನಡೆಸಿ ಎಂದು ಆಗ್ರಹಿಸಿದರು.

ಸದನದಲ್ಲೇ ಇದ್ದ ರಾಜಣ್ಣ, ನನ್ನ ಹೆಸರನ್ನು ಪ್ರಸ್ತಾಪಿಸಿರುವುದರಿಂದ ನಾನು ವಾಸ್ತವಾಂಶ ತಿಳಿಸಲೇಬೇಕು.

ಕರ್ನಾಟಕ ಎಂದರೆ, ಪೆನ್‌ಡ್ರೈವ್ ಮತ್ತು ಸಿ.ಡಿ. ಫ್ಯಾಕ್ಟರಿ ಎಂಬ ಕುಖ್ಯಾತಿ ಆಗಿದೆ, ಸದನದಲ್ಲಿರುವ ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರಲ್ಲದೆ, ರಾಷ್ಟ್ರಮಟ್ಟದ ರಾಜಕಾರಣಿಗಳ 48 ಮಂದಿಯ ಹನಿಟ್ರ್ಯಾಪ್ ನಡೆದಿದೆ.

ಡಾ.ಪರಮೇಶ್ವರ್ – ಕುಮಾರಸ್ವಾಮಿ ರಹಸ್ಯ ಚರ್ಚೆ !
ಭಾಗಿಯಾಗಿದವರನ್ನು ಹೊರಗೆಳೆಯಬೇಕು

ಇದರ ಹಿಂದಿರುವವರು ಬಹಿರಂಗಗೊಳ್ಳಬೇಕು, ಇದಕ್ಕೆ ಸಂಬಂಧಿಸಿದಂತೆ ನಾನು, ಗೃಹ ಸಚಿವರಿಗೆ ಲಿಖಿತ ದೂರು ನೀಡುತ್ತೇನೆ, ಈ ಸಿ.ಡಿ. ಮತ್ತು ಪೆನ್‌ಡ್ರೈವ್‌ಗಳ ನಿರ್ಮಾಪಕರು, ನಿರ್ದೇಶಕರು, ನಟರು ಸೇರಿದಂತೆ ಯಾರೆಲ್ಲಾ ಭಾಗಿಯಾಗಿದ್ದಾರೆ ಅವರನ್ನು ಹೊರಗೆಳೆಯಬೇಕು.

ನನ್ನ ಬಳಿ ಕೆಲವು ಮಹತ್ವದ ದಾಖಲೆಗಳಿವೆ, ಅವುಗಳನ್ನು ಗೃಹ ಸಚಿವರಿಗೆ ದೂರು ಪ್ರತಿಯ ಜೊತೆ ನೀಡುತ್ತೇನೆ.

ಹಾಸನದಲ್ಲಿ ನಡೆದ ಸಿ.ಡಿ. ಮತ್ತು ಪೆನ್‌ಡ್ರೈವ್ ಪ್ರಕರಣ ಬಯಲಾಗಿ ನೂರಾರು ಹೆಣ್ಣುಮಕ್ಕಳ ಬಾಳು ಹಾಳಾಗಿದೆ, ಇನ್ನು ಮುಂದೆ ಇಂತಹ ಕೃತ್ಯಗಳು ರಾಜ್ಯದಲ್ಲಿ ನಡೆಯಬಾರದು.

ಮುಖವಾಡ ಕಳಚಬೇಕು

ಈ ಪಿತೂರಿ ಹಿಂದೆ ಯಾರೆಲ್ಲಾ ಇದ್ದಾರೋ ಅವರ ಮುಖವಾಡ ಕಳಚಬೇಕು, ಗೃಹ ಸಚಿವರು ಇದರತ್ತ ತಕ್ಷಣ ಕಾರ್ಯಮಗ್ನರಾಗಬೇಕು ಎಂದು ಮನವಿ ಮಾಡಿದರು.

ರಾಜಣ್ಣ ಮಾತು ಮುಗಿಸುತ್ತಿದ್ದಂತೆ ಹನಿಟ್ರ್ಯಾಪ್‌ಗೆ ಒಳಗಾಗಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನ ಮಾತನಾಡಿ, ರಾಜಕೀಯ ದ್ವೇಷದಿಂದ ಸಿ.ಡಿ. ಮಾಡಿ ನನ್ನ ಮನೆ ಹಾಳು ಮಾಡಿದರು.

ನಾನೊಬ್ಬನೇ ಅಲ್ಲ, ರಮೇಶ್ ಜಾರಕಿಹೊಳಿ, ಎಚ್.ಡಿ.ರೇವಣ್ಣ ಕುಟುಂಬವನ್ನು ಸಿ.ಡಿ. ಮತ್ತು ಪೆನ್‌ಡ್ರೈವ್ ಫ್ಯಾಕ್ಟರಿ ಮಾಲಿಕ ನಾಶ ಮಾಡಿದ, ನನ್ನ ಮೇಲೆ ಸುಳ್ಳು ರೇಪ್ ಕೇಸ್ ಹಾಕಿಸಿ ಜೈಲಿಗೆ ಹೋಗುವಂತೆ ಮಾಡಿದ.

ಮಂಡ್ಯ, ಕೋಲಾರ ಹೆದ್ದಾರಿಗಳ ಅಭಿವೃದ್ಧಿಗೆ ಮನವಿ
ನಾನು ರೇಪ್ ಮಾಡಿಲ್ಲ

ನಾನು ರೇಪ್ ಮಾಡಿಲ್ಲ ಬೇಕಿದ್ದರೆ, ಆತ ನಂಬುವ ದೇವರುಗಳ ಮೇಲೆ ಆಣೆ ಮಾಡಲಿ, ನಾನೂ ಮಾಡುತ್ತೇನೆ ಎಂದು ಸದನದಲ್ಲಿ ದೇವರುಗಳ ಚಿತ್ರಗಳನ್ನು ಪ್ರದರ್ಶಿಸಿದರು.

ನನ್ನ ಮೇಲೆ ರೇಪ್ ಆರೋಪ ಮಾಡಿದಾಕೆ ಇರುವುದು ಎಲ್ಲೋ, ನನ್ನ ವಿರುದ್ಧ ರಾಮನಗರದಲ್ಲಿ ಪ್ರಕರಣ ದಾಖಲಿಸಿ, ನಮ್ಮ ಕುಟುಂಬದ ಮಾನ ಹರಾಜು ಮಾಡಿದ, ಈಗಲೂ ನಮ್ಮ ಮೊಮ್ಮಕ್ಕಳು ಬೀದಿಯಲ್ಲಿ ತಲೆ ಎತ್ತಿ ಓಡಾಡದಂತೆ ಆಗಿದೆ.

ನನ್ನ ಮೇಲಿನ ರೇಪ್ ಪ್ರಕರಣವನ್ನು ಸಿಬಿಐಗೆ ವಹಿಸಿ, ಸತ್ಯಾಸತ್ಯತೆ ಹೊರಬರಲಿ, ನೀವು ಇದನ್ನು ಹೀಗೇ ಬಿಟ್ಟರೆ ಅವನು ಉನ್ನತ ಅಧಿಕಾರ ಪಡೆಯಲು ತನ್ನ ವಿರೋಧಿಗಳೆಲ್ಲರನ್ನೂ ಹನಿಟ್ರ್ಯಾಪ್ ಮಾಡುತ್ತಾನೆ ಎಂದು ಗುಡುಗಿದರು.

ಮುನಿರತ್ನ ಮಾತಿಗೆ ಬೆಂಬಲ

ಮುನಿರತ್ನ ಮಾತಿಗೆ ಬೆಂಬಲ ವ್ಯಕ್ತಪಡಿಸಿದ ಸುನೀಲ್ ಕುಮಾರ್, ಸಿ.ಡಿ. ಮತ್ತು ಪೆನ್‌ಡ್ರೈವ್ ಫ್ಯಾಕ್ಟರಿ ಹಿಂದಿರುವ ಕೈಗಳನ್ನು ಬಹಿರಂಗಪಡಿಸಿ, ನಾವು ಸಾರ್ವಜನಿಕ ಜೀವನದಲ್ಲಿ ಇರುವವರು ಕೆಲವು ವಿಷಯಗಳನ್ನು ವಿರೋಧಿಸುತ್ತೇವೆ.

ಹಾಗಂತ, ನಮ್ಮಗಳ ವಿರುದ್ಧ ಹನಿಟ್ರ್ಯಾಪ್ ಮಾಡಿಸಿದರೆ, 224 ಸದಸ್ಯರ ಗತಿ ಏನು, ಉನ್ನತ ಹುದ್ದೆ ಪಡೆಯಲೋ ಅಥವಾ ಬೇರೆ ಉದ್ದೇಶಕ್ಕೋ ಅವರನ್ನು ವಿರೋಧಿಸುವವರನ್ನೆಲ್ಲಾ ಹನಿಟ್ರ್ಯಾಪ್ ಮಾಡುತ್ತಾ ಹೋದರೆ, ಇದು ಎಲ್ಲಿಗೆ ತಲುಪುತ್ತೆ.

ರಾಜ್ಯ ವಿಧಾನಮಂಡಲದ ಗೌರವ ಕಾಪಾಡಲು ಗೃಹ ಸಚಿವರು ಸಿ.ಡಿ., ಪೆನ್‌ಡ್ರೈವ್ ಪ್ರಕರಣಗಳಿಗೆ ಇತಿಶ್ರೀ ಹಾಡಬೇಕು ಎಂದು ಆಗ್ರಹಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dr.g.parameshwarhigh power enquiryhoney traplegislative assemblypen drive
0 FacebookTwitterPinterestEmail
admin

previous post
ಮಂಡ್ಯ, ಕೋಲಾರ ಹೆದ್ದಾರಿಗಳ ಅಭಿವೃದ್ಧಿಗೆ ಮನವಿ
next post
ಹನಿಟ್ರ್ಯಾಪ್ ತಪ್ಪಿತಸ್ತರ ರಕ್ಷಿಸುವ ಪ್ರಶ್ನೆಯೇ ಇಲ್ಲ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ