Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹನಿಟ್ರ್ಯಾಪ್ ಪ್ರಕರಣ: ಎಸ್‌ಐಟಿ ತನಿಖೆಗೆ ಚಿಂತನೆ

by admin March 25, 2025
written by admin March 25, 2025 0 comments 2 minutes read
0FacebookTwitterPinterestEmail
145

ಬೆಂಗಳೂರು:ಹನಿಟ್ರ್ಯಾಪ್ ಪ್ರಕರಣವನ್ನು ಎಸ್‌ಐಟಿ ಮೂಲಕ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ.

ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಹಿರಿಯ ಪೋಲಿಸ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ ಹನಿಟ್ರ್ಯಾಪ್ ಹಿಂದಿರುವ ವ್ಯಕ್ತಿಗಳ ಪತ್ತೆಗೆ ಮುಂದಾಗಿದ್ದಾರೆ.

ಗುರುವಾರ ಸಚಿವ ಸಂಪುಟ ಸಭೆ ನಡೆಯಲಿದ್ದು, ಅಂದು ಪ್ರಕರಣವನ್ನು ಸಿಬಿಐ ಇಲ್ಲವೇ ಎಸ್‌ಐಟಿ ಮೂಲಕ ತನಿಖೆ ನಡೆಸಬೇಕೆ ಎಂಬ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.

ದೂರು ದಾಖಲಿಸುವಂತೆ ಸಲಹೆ

ಇದರ ಹಿನ್ನೆಲೆಯಲ್ಲಿ ಪ್ರವಾಸದಲ್ಲಿದ್ದ ರಾಜಣ್ಣ ಅವರನ್ನು ಸಂಪರ್ಕಿಸಿದ ಮುಖ್ಯಮಂತ್ರಿ ಅವರು, ನೀವು ವಿಧಾನಸಭೆಯಲ್ಲಿ ಹೇಳಿದಂತೆ ಗೃಹ ಸಚಿವ ಡಾ.ಪರಮೇಶ್ವರ್ ಅವರಲ್ಲಿ ದೂರು ದಾಖಲಿಸುವಂತೆ ಸಲಹೆ ನೀಡಿದರು.

ಮುಖ್ಯಮಂತ್ರಿ ಸಲಹೆ ಮೇರೆಗೆ ರಾಜಣ್ಣ, ಗುರುವಾರ ನೀಡಬೇಕಿದ್ದ ದೂರನ್ನು ಇಂದೇ ಗೃಹ ಸಚಿವ ಡಾ.ಪರಮೇಶ್ವರ್ ಅವರನ್ನು ನೆಲೆಮಂಗಲದ ಬಳಿ ಇರುವ ವೈದ್ಯಕೀಯ ಕಾಲೇಜಿನಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿ ದೂರು ನೀಡಿದರು.

ಪರಮೇಶ್ವರ್ ಸಲಹೆಯಂತೆ ಸದಾಶಿವನಗರದ ಅವರ ಮನೆಯಲ್ಲಿ ಪೋಲಿಸ್ ಅಧಿಕಾರಿಗಳ ಸಮ್ಮುಖದಲ್ಲೇ ಮತ್ತೊಂದು ದೂರಿನ ಪತ್ರವನ್ನು ತಲುಪಿಸಿದರು.

ಹನಿಟ್ರ್ಯಾಪ್‌ಗೆ ಯತ್ನಿಸಿದ ವಿವರ ಬಹಿರಂಗ

ಇದಕ್ಕೂ ಮುನ್ನ ರಾಜಣ್ಣ ತುರ್ತು ಪತ್ರಿಕಾಗೋಷ್ಠಿ ಕರೆದು, ತಮ್ಮ ಮೇಲೆ ಹನಿಟ್ರ್ಯಾಪ್‌ಗೆ ಯತ್ನಿಸಿದ ವಿವರವನ್ನು ಬಹಿರಂಗಪಡಿಸಿದರು.

ಸುದ್ದಿಗೋಷ್ಠಿಗೂ ಮುನ್ನ ರಾಜಣ್ಣ ತಮ್ಮ ಆಪ್ತ ಕಾನೂನು ಹಾಗೂ ಪೋಲಿಸ್ ಅಧಿಕಾರಿಗಳ ಸಲಹೆ ಪಡೆದು ಮೂರು ಪುಟಗಳ ದೂರನ್ನು ಸಿದ್ಧಪಡಿಸಿದ್ದಾರೆ.

ಘಟನೆ ಕುರಿತು ವಿವರ ನೀಡಿದ ಅವರು, ಎರಡು ಬಾರಿ ಒಬ್ಬ ಹುಡುಗ, ಇಬ್ಬರು ಹುಡುಗಿಯರನ್ನು ಪ್ರತ್ಯೇಕವಾಗಿ ಕರೆತಂದು ನನ್ನ ಹನಿಟ್ರ್ಯಾಪ್‌ಗೆ ಯತ್ನಿಸಿದ.

ಎರಡು ಬಾರಿ ಬಂದಿದ್ದ ಹುಡುಗಿಯರು ನೀಲಿ ಜೀನ್ಸ್ ಪ್ಯಾಂಟ್ ಹಾಗೂ ಟಾಪ್ ಧರಿಸಿದ್ದರು, ಅವರ ಭೇಟಿ ಸಂದರ್ಭದಲ್ಲೆಲ್ಲಾ, ನಿಮ್ಮ ಬಳಿ ಖಾಸಗಿಯಾಗಿ ಕೆಲವು ವಿಷಯಗಳನ್ನು ಹಂಚಿಕೊಳ್ಳಬೇಕಿದೆ, ನಮಗೆ ಬಹಳ ಸಮಯ ನೀಡಿ ಎಂದು ಮನವಿ ಮಾಡಿದ್ದರು.

ಸ್ಮಾರ್ಟ್ ಮೀಟರ್: 15,568 ಕೋಟಿ ರೂ. ಅವ್ಯವಹಾರ
ಎರಡನೇ ಬಾರಿಗೆ ಬಂದಿದ್ದ ಮಹಿಳೆ

ಎರಡನೇ ಬಾರಿಗೆ ಬಂದಿದ್ದ ಮಹಿಳೆ ತಾನು ವಕೀಲೆ ಎಂದು ಪರಿಚಯ ಮಾಡಿಕೊಂಡಿದ್ದರು.

ಅವರುಗಳ ನಡವಳಿಕೆ ಬಗ್ಗೆ ನನಗೆ ಭಾರೀ ಅನುಮಾನ ಕಾಡಿತು, ನಾನು ಅವರಿಗೆ ಹೆಚ್ಚಿನ ಸಮಯ ನೀಡಲಿಲ್ಲ ಎಂದರು.

ನನ್ನ ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾ ಇಲ್ಲದ ಕಾರಣ ಅವರುಗಳು ಭೇಟಿ ನೀಡಿದ ದೃಶ್ಯಗಳು ಲಭ್ಯವಿಲ್ಲ, ಆದರೆ, ಆ ಹುಡುಗ ಮತ್ತು ಹುಡುಗಿಯರನ್ನು ಗುರುತು ಹಿಡಿಯಬಲ್ಲೆ.

ಗುರುತು ಹಿಡಿಯಬಲ್ಲೆ

ಮನೆಗೆ ಬಂದವರ ವಿವರ ತಿಳಿಯಲು ಪ್ರಯತ್ನಿಸಿದೆ, ಆದರೆ, ಯಾವುದೇ ಮಾಹಿತಿ ಸಿಕ್ಕಿಲ್ಲ, ಅವರ ಫೋಟೋ ತೋರಿಸಿದರೆ ಗುರುತು ಹಿಡಿಯಬಲ್ಲೆ ಎಂದರು.

ನಾನು ವಿಧಾನಸಭೆಯಲ್ಲಿ ನೀಡಿರುವ ಹೇಳಿಕೆಗೆ ಇಂದಿಗೂ ಬದ್ಧನಾಗಿದ್ದೇನೆ, ಆಡಳಿತ ಪಕ್ಷ ಮಾತ್ರವಲ್ಲ, ಪ್ರತಿಪಕ್ಷದವರು ಮತ್ತು ದೆಹಲಿ ನಾಯಕರೂ ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ.

ನ್ಯಾಯಾಧೀಶರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂಬುದಾಗಿ ನಾನು ಹೇಳಿಲ್ಲ, ಎಲ್ಲ ಪಕ್ಷದ ನಾಯಕರ ಮೇಲೆ ಕಳಂಕ ತರಲು ಈ ರೀತಿ ಮಾಡಿದ್ದಾರೆಂದು ಹೇಳಿದ್ದೇನೆ.

ಗೃಹ ಸಚಿವರಿಗೆ ಬಿಟ್ಟ ವಿಚಾರ

ನನ್ನ ಪತ್ರದ ಆಧಾರದ ಮೇಲೆ ಗೃಹ ಸಚಿವರು ಯಾವುದೇ ರೀತಿಯ ತನಿಖೆ ನಡೆಸುವುದು ಅವರಿಗೆ ಬಿಟ್ಟ ವಿಚಾರ ಎಂದರು.

ಸಂಜೆ ಪರಮೇಶ್ವರ್ ಭೇಟಿ ನಂತರ ಮತ್ತೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ, ದೂರು ನೀಡಿದ್ದೇನೆ, ಅವರು, ಎಸ್‌ಐಟಿ ರಚನೆ ಮಾಡುತ್ತಾರೋ, ಇಲ್ಲವೇ ಎಡಿಜಿಪಿ ಶ್ರೇಣಿ ಅಧಿಕಾರಿಯಿಂದ ತನಿಖೆ ನಡೆಸುತ್ತಾರೋ ಅವರಿಗೆ ಬಿಟ್ಟ ವಿಚಾರ.

ನಾನು ದೂರು ನೀಡುವುದಕ್ಕೂ ಮುನ್ನವೇ ಗೃಹ ಸಚಿವರು ತಮ್ಮ ಇಲಾಖೆಯಿಂದ ಒಂದಷ್ಟು ಮಾಹಿತಿ ಮತ್ತು ದಾಖಲೆಗಳನ್ನು ಸಂಗ್ರಹಿಸಿದ್ದಾರೆ.

ಸಮಾಲೋಚಿಸಿ ತೀರ್ಮಾನ

ಅವರು, ನನ್ನ ದೂರು ಮತ್ತು ತಮ್ಮಲ್ಲಿರುವ ದಾಖಲೆಗಳ ಸಮೇತ ಮುಖ್ಯಮಂತ್ರಿ ಬಳಿ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಪಕ್ಷದ ವರಿಷ್ಠರನ್ನೂ ಭೇಟಿ ಮಾಡಿ ದೂರು ನೀಡಲಿದ್ದೇನೆ ಎಂದ ರಾಜಣ್ಣ, ಈಗಾಗಲೇ ಅವರಿಗೂ ಇದರ ಬಗ್ಗೆ ಒಂದಷ್ಟು ಮಾಹಿತಿಗಳಿವೆ ಎಂದು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahhoney trap allegationminister k n rajannarajanna press meetsit investigation
0 FacebookTwitterPinterestEmail
admin

previous post
ಸ್ಮಾರ್ಟ್ ಮೀಟರ್: 15,568 ಕೋಟಿ ರೂ. ಅವ್ಯವಹಾರ
next post
ಕುಮಾರಸ್ವಾಮಿ-ಸತೀಶ್ ಜಾರಕಿಹೊಳಿ ರಣತಂತ್ರ !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ