Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

by KM Shivaraju May 6, 2025
written by KM Shivaraju May 6, 2025 0 comments 1 minutes read
0FacebookTwitterPinterestEmail
155

ಜಾತಿ ಸಮೀಕ್ಷೆ: ಬೆಣ್ಣೆ ತಿಂದು, ಉಳಿದವರಿಗೆ ನೀರು ಮಜ್ಜಿಗೆ ಕೊಡಲು ಸಿದ್ದರಾಮಯ್ಯ ಹೊರಟಿದ್ದಾರೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಎಲ್ಲಾ ಕ್ರಮಗಳನ್ನು ಮುಕ್ತಕಂಠದಿಂದ ಬೆಂಬಲಿಸುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಘೋಷಿಸಿದರು.

ಈ ಬಗ್ಗೆ ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ಘಟನೆ ಅಮಾನವೀಯ. ಮೊದಲ ಬಾರಿಗೆ ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ಮಾಡಿದ್ದಾರೆ. ಇದು ಅತ್ಯಂತ ಹೇಯ. ಈ ಕೆಲಸ ಮಾಡಿದವರಿಗೆ ತಕ್ಕ ಶಾಸ್ತಿ ಆಗಲೇಬೇಕು. ಈ ಹಿನ್ನೆಲೆಯಲ್ಲಿ ಪ್ರಧಾನಿಗಳು ಕೈಗೊಳ್ಳುವ ನಿರ್ಧಾರಕ್ಕೆ ಜೆಡಿಎಸ್ ಬದ್ಧವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

ರಕ್ಷಣಾ ಪಡೆಗಳಿಗೆ ಮೋದಿ ಅವರು ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ. ಮೊದಲ ಬಾರಿಗೆ ದೇಶದ ಪ್ರಧಾನಿ ಮೋದಿ ಅವರು ಇಂತಹ ದಿಟ್ಟ ನಿರ್ಧಾರ ಮಾಡಿದ್ದಾರೆ. ಇತಿಹಾಸದಲ್ಲಿ ಈ ರೀತಿ ಎಂದೂ ನಿರ್ಧಾರ ಆಗಿರಲಿಲ್ಲ ಎಂದ ಮಾಜಿ ಪ್ರಧಾನಿಗಳು, ಗೃಹ, ರಕ್ಷಣೆ ಹಾಗೂ ವಿದೇಶಾಂಗ ಖಾತೆಗಳನ್ನು ನಿಭಾಯಿಸುತ್ತಿರುವ ಸಚಿವರುಗಳು ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.

ಇಡೀ ದೇಶ ಪ್ರಧಾನಿ ಮೋದಿಯವರ ಜೊತೆ ನಿಂತಿದೆ. ಎಲ್ಲಾ ರಾಜಕೀಯ ಪಕ್ಷಗಳು ಮೋದಿಯವರ ನಿರ್ಧಾರವನ್ನು ಬೆಂಬಲಿಸಿವೆ. ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಬೇಕಾಗಿದೆ. ಪಾಕಿಸ್ತಾನ ಪ್ರೇರಿತ ಉಗ್ರರನ್ನು ಸದೆಬಡಿಯುವವರೆಗೆ ವಿರಮಿಸುವುದಿಲ್ಲ ಎಂದು ಮೋದಿ‌ ಹೇಳಿದ್ದಾರೆ. ನಾನು, ನಮ್ಮ ಪಕ್ಷ, ಇಡಿ ದೇಶ ಪ್ರಧಾನಿ ಮೋದಿ ಜೊತೆಗಿರುತ್ತೇವೆ ಎಂದು ದೇವೇಗೌಡರು ಹೇಳಿದರು.

1971ರ ಯುದ್ಧ ಕಾಲಕ್ಕೂ ಈಗಿನ ಪರಿಸ್ಥಿತಿಗೂ ಬಹಳ ವ್ಯತ್ಯಾಸವಿದೆ. ಹೋಲಿಕೆ ಮಾಡಲು ಸಾಧ್ಯವಿಲ್ಲ. ಭಾರತ ಅಗಾಧವಾಗಿ ಬೆಳೆದಿದೆ. ಕಳೆದ ಹತ್ತು ವರ್ಷಗಳಲ್ಲಿ ದೇಶವು ಸಾಕಷ್ಟು ಅಭಿವೃದ್ಧಿ, ಬದಲಾವಣೆಯನ್ನು ಕಂಡಿದೆ. ಇಲ್ಲಿ ಹಿಂದೂ ಮುಸ್ಲಿಂ ಎನ್ನುವ ಪ್ರಶ್ನೆಯಲ್ಲ. ಧರ್ಮ, ಜಾತಿ ಪ್ರಶ್ನೆ ಉದ್ಭವವಾಗುದಿಲ್ಲ. ದೇಶದ ಭದ್ರತೆ ಮುಖ್ಯ. ಯುದ್ಧ ಮಾಡಬೇಕೋ ಬೇಡವೋ ಎನ್ನುವ ನಿರ್ಧಾರವನ್ನು ಸೇನೆಗೆ ಬಿಡಲಾಗಿದೆ. ಮೂರು ಸೇನೆಗಳ ಮುಖ್ಯಸ್ಥರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಅವರು ಹೇಳಿದರು.

ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಮುಂದಿನ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನು ಮಾಡುತ್ತಿರುವುದು ಸ್ವಾಗತಾರ್ಹ ಎಂದು ದೇವೇಗೌಡರು ಹೇಳಿದರು.
ಕೇಂದ್ರ ನಿಲುವಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಕರ್ನಾಟಕ ದ ಜಾತಿಗಣತಿಗೆ ಸಿದ್ದರಾಮಯ್ಯ ಅವರ ಸಂಪುಟದಲ್ಲಿಯೇ ಸಹಮತ ಇಲ್ಲ. ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ನಾನು ಪತ್ರ ಬರೆದಿದ್ದೆ. ನನಗೆ ಅವರು ಈವರೆಗೆ ಉತ್ತರ ಕೊಟ್ಟಿಲ್ಲ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆ. ಹಾಗಾದರೆ ಸಿಎಂ ಕಚೇರಿಯಲ್ಲಿ ಎಷ್ಟು ಹಿಂದುಳಿದವರು ಇದ್ದಾರೆ? ಸಿಎಂ ಕಚೇರಿಯಲ್ಲಿ ಎಷ್ಟು ಅವರದ್ದೆ ಸಮುದಾಯದ ಉದ್ಯೋಗಿಗಳು ಎಷ್ಟಿದ್ದಾರೆ? ಎನ್ನುವುದನ್ನು ಹೇಳಬೇಕು. ಅವರು ಹೇಳುತ್ತಾರೆಯೇ? ಅಂತಹ ಸಿದ್ದರಾಮಯ್ಯನವರು ಮೋದಿ ಅವರಿಗೆ ಪಾಠ ಮಾಡುತ್ತಾರೆ ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ಜಾತಿ ಸಮೀಕ್ಷೆಯ ಮೂಲಕ ಬೆಣ್ಣೆ ತಿಂದು, ಉಳಿದವರಿಗೆ ನೀರು ಮಜ್ಜಿಗೆ ಕೊಡಲು ಸಿದ್ದರಾಮಯ್ಯ ಹೊರಟಿದ್ದಾರೆ. ಇದು ಸರಿಯಲ್ಲ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಅವರು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
butterbuttermilkCaste surveycmdeclaresDeve Gowdafull supportHdModipmSiddaramaiahterrorismwater
0 FacebookTwitterPinterestEmail
KM Shivaraju

previous post
‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’
next post
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ