Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

by KM Shivaraju May 12, 2025
written by KM Shivaraju May 12, 2025 0 comments 1 minutes read
0FacebookTwitterPinterestEmail
109

ಬೆಂಗಳೂರು:ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಮೇ ೨೦ಕ್ಕೆ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಗೊಂದಲ ನಿರ್ಮಾಣವಾಗಿದೆ.

ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ಮೇ ೨೦ರಂದು ಬಳ್ಳಾರಿಯ ಹೊಸಪೇಟೆಯಲ್ಲಿ ನಡೆಯಬೇಕಿದ್ದ ಸಂಭ್ರಮಾಚರಣೆ ಸಮಾವೇಶ ಮುಂದೂಡಲ್ಪಟ್ಟಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಗಡಿ ಉದ್ವಿಗ್ನ ಪರಿಸ್ಥಿತಿ

ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆ ಸಂಭ್ರಮ ಮುಂದೂಡಲು ಆಲೋಚಿಸಲಾಗಿತ್ತು, ಆದರೆ, ಇದೀಗ ಅಂದೇ ಸಮಾವೇಶ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹೊಸಪೇಟೆಯಲ್ಲಿ ನಡೆಯಬೇಕಿದ್ದ ಸಂಭ್ರಮಾಚರಣೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದು, ಹೊಸ ದಿನಾಂಕ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಅವರು ಸುದ್ದಿಗಾರರಿಗೆ ಪತ್ಯೇಕವಾಗಿ ತಿಳಿಸಿದ್ದಾರೆ.

ಭಾರತ-ಪಾಕ್ ಯುದ್ಧ ಭೀತಿ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಬೇಡ ಎಂದು ಕಳೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದಲ್ಲದೆ, ಪಕ್ಷದ ಅಧಿನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಹಿತಿಯನ್ನೂ ರವಾನಿಸಿದ್ದೇವೆ.

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು
ದಿನಾಂಕ ಘೋಷಣೆ

ರಾಹುಲ್ ಮತ್ತು ಖರ್ಗೆ ಮುಂದಿನ ದಿನಗಳಲ್ಲಿ ತಿಳಿಸುವ ದಿನಾಂಕದಂದು ಸರ್ಕಾರದ ಸಂಭ್ರಮಾಚರಣೆ ನಡೆಸಲಾಗುವುದು.

ರಾಜ್ಯದಲ್ಲಿ ಪಕ್ಷದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಖರ್ಗೆ ಮತ್ತು ರಾಹುಲ್ ಅವರಿಂದ ದಿನಾಂಕ ಪಡೆದು ಪ್ರಕಟಿಸಲಿದ್ದಾರೆ ಎಂದರು.

ಇತ್ತ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ, ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ ಒಂದು ಲಕ್ಷ ಪಟ್ಟಾ ಖಾತೆ ಹಂಚಿಕೆ ಮಾಡಲಾಗುತ್ತಿದೆ, ಇದು ಸರ್ಕಾರದ ಸಂಭ್ರಮಾಚರಣೆ ಮಾತ್ರವಲ್ಲ, ಇಡೀ ರಾಜ್ಯದ ಜನ ಸಂಭ್ರಮಿಸುವ ಕ್ಷಣ ಎಂದರು.

ಕದನ ವಿರಾಮ

ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂಭ್ರಮ ಮುಂದೂಡಲು ಆಲೋಚಿಸಿದ್ದೆವು, ಆದರೆ, ಈಗ ಕದನ ವಿರಾಮ ಘೋಷಣೆಯಾಗಿದ್ದು, ಕಾರ್ಯಕ್ರಮ ನಡೆಸಲು ನಿರ್ಧರಿಸಿದ್ದೇವೆ.

ಐದಾರು ಜಿಲ್ಲೆಗಳ ಉಸ್ತುವಾರಿ ಸಚಿವರು, ಶಾಸಕರು ಹಾಗೂ ವಿಧಾನಸಭಾ ಕ್ಷೇತ್ರಮಟ್ಟದ ಕಾರ್ಯಕರ್ತರು, ಪದಾಧಿಕಾರಿಗಳಿಗೆ ಈ ಸಂಬಂಧ ಸಭೆ ನಡೆಸಲು ತಿಳಿಸಿದ್ದೇವೆ.

ಭಾರತ-ಪಾಕ್ ಕದನ ವಿರಾಮ ಬೆನ್ನಲ್ಲೇ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಹೇಳಿಕೆ ವೈರಲ್ ಆಗುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸುವುದಿಲ್ಲ, ಈ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರು ನಿಲುವು ತಿಳಿಸಲಿದ್ದಾರೆ ಎಂದರು.

ಆಪ್ತ ಸಚಿವರ ಯೋಜನೆ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷಗಳು ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಪ್ರಮಾಣದಲ್ಲಿ ಸಂಭ್ರಮಾಚರಣೆ ನಡೆಸಲು ಅವರ ಆಪ್ತ ಸಚಿವರು ದೊಡ್ಡ ಯೋಜನೆಗಳನ್ನೇ ರೂಪಿಸಿದ್ದಾರೆ.

ವಿಜಯನಗರದ ಉಸ್ತುವಾರಿ ಸಚಿವರೂ ಆಗಿರುವ ವಸತಿ ಸಚಿವ ಜಮೀರ್ ಅಹಮದ್ ಖಾನ್ ಈಗಾಗಲೇ ಜಿಲ್ಲಾಡಳಿತದ ಎರಡು ಸಭೆಗಳನ್ನು ನಡೆಸಿ ಪೂರ್ವ ಸಿದ್ಧತೆ ಮಾಡಿದ್ದಾರೆ.

ಅಲ್ಲದೆ, ವಿಜಯನಗರ ಗಡಿ ಭಾಗದ ಜಿಲ್ಲೆಗಳನ್ನು ಪ್ರತಿನಿಧಿಸುವ ಪಕ್ಷದ ಸಂಸದರು ಮತ್ತು ಶಾಸಕರ ಸಭೆ ನಡೆಸಿರುವ ಜಮೀರ್, ಕರ್ನಾಟಕದಲ್ಲಿ ಹಿಂದೆಂದೂ ಕಾಣದಂತಹ ಸಮಾವೇಶ ಇದಾಗಬೇಕೆಂದು ಕಾರ್ಯಕ್ರಮ ರೂಪಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
celebrationcm siddaramaiahcongres govt. completing 2 years ruledcm d k shivakumar
0 FacebookTwitterPinterestEmail
KM Shivaraju

previous post
ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು
next post
ಸಕಾರದಿಂದ 108 ಆಂಬುಲೆನ್ಸ್ ಸೇವೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ