Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ರೂಪದರ್ಶಿ ತಮನ್ನಾ ಪರ ಎಂ.ಬಿ.ಪಾಟೀಲ್ ಬ್ಯಾಟಿಂಗ್

by admin May 23, 2025
written by admin May 23, 2025 0 comments 1 minutes read
0FacebookTwitterPinterestEmail
128

ಬೆಂಗಳೂರು:ಕರ್ನಾಟಕ ಸಾಬೂನು ಮತ್ತು ಮಾರ್ಜಕ (ಕೆಎಸ್‌ಡಿಎಲ್) ಸಂಸ್ಥೆ ವಹಿವಾಟನ್ನು ಮುಂದಿನ 3 ವರ್ಷಗಳಲ್ಲಿ 5,000 ಕೋಟಿ ರೂ.ಗೆ ಕೊಂಡೊಯ್ಯುವ ಕಾರ್ಯತಂತ್ರದ ಭಾಗವಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ಬ್ರ್ಯಾಂಡ್ ಅಂಬಾಸಿಡರ್ (ಪ್ರಚಾರ ರಾಯಭಾರಿ) ಆಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಾಪಾರದ ಪ್ರಶ್ನೆ ಬಂದಾಗ ಸ್ಪರ್ಧಾತ್ಮಕತೆ ನೋಡಬೇಕು ಹಾಗೂ ಅದಕ್ಕೆ ತಕ್ಕ ಕಾರ್ಯತಂತ್ರ ರೂಪಿಸಬೇಕಾಗುತ್ತದೆ, ಕೆಎಸ್‌ಡಿಎಲ್ ವಹಿವಾಟು 1,700 ಕೋಟಿ ರೂ. ಮೀರಿದೆ, ಆದರೆ, ರಾಜ್ಯದಲ್ಲಿ ವಹಿವಾಟು ಮೊತ್ತ ಕೇವಲ 320 ಕೋಟಿ ರೂ. ಆಸುಪಾಸಿನಲ್ಲಿದೆ ಎಂದರು.

ನಕಾರಾತ್ಮಕವಾಗಿ ನೋಡಬಾರದು

ಪರಿಣತರ ತೀರ್ಮಾನದಂತೆ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿದ್ದು, ಕೆಲವರು ಕನ್ನಡದ ನಟ-ನಟಿಯರು ಇರಲಿಲ್ಲವೇ ಎಂಬ ಆಕ್ಷೇಪ ವ್ಯಕ್ತಪಡಿಸಿದ್ದಾರೆ, ಈ ವಿಷಯವನ್ನು ನಕಾರಾತ್ಮಕವಾಗಿ ನೋಡಬಾರದು.

ತಮನ್ನಾ ನೇಮಕಕ್ಕೂ ಮುನ್ನ ಕನ್ನಡದವರಾದ ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ ಶ್ರೀಲೀಲಾ, ಪೂಜಾ ಹೆಗಡೆ, ಕಿಯಾರ ಅಡ್ವಾಣಿ ಅವರನ್ನೂ ಸಂಪರ್ಕಿಸಲಾಗಿತ್ತು.

ದೀಪಿಕಾ ತಮ್ಮದೇ ಉತ್ಪನ್ನಗಳ ಪ್ರಚಾರದಲ್ಲಿ ತೊಡಗಿದ್ದು, ಉಳಿದವರು ಬೇರೆ ಬೇರೆ ಸೌಂದರ್ಯವರ್ಧಕ, ಕ್ರೀಮ್ ಮತ್ತು ಸಾಬೂನುಗಳಿಗೆ ರೂಪದರ್ಶಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

28 ಮಿಲಿಯನ್ ಫಾಲೋಯರ್ಸ್

ಮುಂದಿನ ಎರಡು ವರ್ಷ ತಮಗೆ ಬಿಡುವಿಲ್ಲ ಎಂಬುದಾಗಿ ತಿಳಿಸಿದ್ದರಿಂದ ಹಾಗೂ ತಮನ್ನಾ ಭಾಟಿಯಾ ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ 28 ಮಿಲಿಯನ್ ಫಾಲೋಯರ್ಸ್ ಹೊಂದಿದ್ದು, ಅವರ ಅಖಿಲ ಭಾರತ ಮಟ್ಟದ ವರ್ಚಸ್ಸಿನ ಹಿನ್ನೆಲೆಯಲ್ಲಿ ಕೆಎಸ್‌ಡಿಎಲ್ ರೂಪದರ್ಶಿಯಾಗಿ ನೇಮಕ ಮಾಡಿಕೊಳ್ಳಲಾಯಿತು.

ಕೆಎಸ್‌ಡಿಎಲ್ ಇತ್ತೀಚೆಗೆ 21 ಹೊಸ ಉತ್ಪನ್ನ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಸಂಸ್ಥೆಯು ಪರಿಮಳಗಳ ಕ್ಷೇತ್ರಕ್ಕೂ ಕಾಲಿಡುತ್ತಿದೆ, ಇದಕ್ಕೆಂದೇ ನಮ್ಮ ಅಧಿಕಾರಿಗಳನ್ನು ಅತ್ತರ್‌ಗೆ ಹೆಸರಾದ ಉತ್ತರಪ್ರದೇಶದ ಕನೌಜ್‌ಗೂ ಕಳುಹಿಸಿ ಅಧ್ಯಯನ ನಡೆಸಲಾಗಿದೆ.

ಹೊಸ ಯಂತ್ರೋಪಕರಣಗಳ ಖರೀದಿ ಇಲ್ಲದೆಯೇ ಕೆಎಸ್‌ಡಿಎಲ್ ಉತ್ಪಾದನೆ ಶೇಕಡ 40ರಷ್ಟು ಹೆಚ್ಚಿದೆ, ಎಫ್‌ಎಂಸಿಜಿ ವಲಯದಲ್ಲಿ ಸಂಸ್ಥೆ ಬೆಳವಣಿಗೆ ಶೇಕಡ 15ರಷ್ಟಿದೆ.

ಕೆಎಸ್‌ಡಿಎಲ್ ಮುನ್ನಡೆಯಲ್ಲಿ

ಈ ಕ್ಷೇತ್ರದಲ್ಲಿ ಗೋದ್ರೇಜ್ ಶೇ.11, ಹಿಂದೂಸ್ತಾನ್ ಲಿವರ್ಸ್ ಶೇ.9, ಐಟಿಸಿ ಶೇ.8, ವಿಪ್ರೋ ಶೇ.7 ಹೊಂದಿದ್ದು ಕೆಎಸ್‌ಡಿಎಲ್ ಇವುಗಳನ್ನು ಹಿಂದಿಕ್ಕಿದೆ.

ಈ ಎಲ್ಲಾ ಸಕಾರಾತ್ಮಕ ಬೆಳವಣಿಗೆ ದೃಷ್ಟಿಯಿಂದ ಕೆಎಸ್‌ಡಿಎಲ್ ವಹಿವಾಟು 5,000 ಕೋಟಿ ರೂ.ಗೆ ತಲುಪಿಸಲು ಬಾಲಿವುಡ್ ನಟಿಯೊಬ್ಬರನ್ನೇ ಪ್ರಚಾರ ರಾಯಭಾರಿಯನ್ನಾಗಿ ನೇಮಕ ಮಾಡಿಕೊಳ್ಳಬೇಕಾಗುತ್ತದೆ.

ಹಾಲಿವುಡ್ ನಟಿ ರಾಯಭಾರಿ

ಕೆಎಸ್‌ಡಿಎಲ್ ಸಂಸ್ಥೆ ಭಾರತವಷ್ಟೇ ಅಲ್ಲದೆ, ಅಂತಾರಾಷ್ಟ್ರೀಯ ಬ್ರ್ಯಾಂಡ್ ಆಗಬೇಕೆನ್ನುವುದು ನಮ್ಮ ಹೆಗ್ಗುರಿಯಾಗಿದೆ, ಮುಂದೊಂದು ದಿನ ಹಾಲಿವುಡ್ ನಟಿಯನ್ನು ಪ್ರಚಾರ ರಾಯಭಾರಿಯಾಗಿ ಆಯ್ಕೆ ಮಾಡುವ ಪರಿಸ್ಥಿತಿ ಬರಬಹುದು, ಅಂತಹ ಸ್ಥಿತಿ ಬರಲಿ ಎಂಬುದೂ ನಮ್ಮೆಲ್ಲರ ಆಶಯ.

ಕೆಎಸ್‌ಡಿಎಲ್‌ನಂತೆ ಎಂಎಸ್‌ಐಎಲ್‌ಗೂ ಹೊಸ ರೂಪ ನೀಡಲಾಗುತ್ತಿದ್ದು, ಸದ್ಯದಲ್ಲೇ ವಾರ್ಷಿಕ 10 ಸಾವಿರ ಕೋಟಿ ರೂ. ವಹಿವಾಟಿನ ಗುರಿಯುಳ್ಳ ಚಿಟ್‌ಫಂಡ್ ಆರಂಭಿಸಲು ಆಲೋಚಿಸಲಾಗಿದೆ, ಅಲ್ಲದೆ, ಹುಬ್ಬಳ್ಳಿಯ ಎನ್‌ಜಿಎಫ್ ಉಳಿಸಿಕೊಳ್ಳಬೇಕಿದೆ, ಆದ್ದರಿಂದ ಅಖಿಲ ಭಾರತ ಮೀರಿ ಜಾಗತಿಕ ಮಟ್ಟದಲ್ಲಿ ಯೋಚಿಸಬೇಕಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
actress tamanna bhatiyabrand ambassadorKSDLMinister M B Patil
0 FacebookTwitterPinterestEmail
admin

previous post
ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು
next post
ಸಿ.ಡಿ.ಫ್ಯಾಕ್ಟರಿ ಮಾಲಿಕರಿಂದ ಡಾ.ಪರಮೇಶ್ವರ್‌ಗೆ ಸಂಕಷ್ಟ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ