Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿ.ಡಿ.ಫ್ಯಾಕ್ಟರಿ ಮಾಲಿಕರಿಂದ ಡಾ.ಪರಮೇಶ್ವರ್‌ಗೆ ಸಂಕಷ್ಟ

by admin May 23, 2025
written by admin May 23, 2025 0 comments 2 minutes read
0FacebookTwitterPinterestEmail
119

ನವದೆಹಲಿ:ಪೆನ್‌ಡ್ರೈವ್, ಸಿ.ಡಿ. ಫ್ಯಾಕ್ಟರಿ ಮಾಲಿಕರೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ.) ಇಕ್ಕಳಕ್ಕೆ ಸಿಲುಕಿಸಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ.

ಬಹಳ ದಿನಗಳ ನಂತರ ನವದೆಹಲಿಯ ತಮ್ಮ ಸರ್ಕಾರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಸಚಿವ ಕೆ.ಎನ್.ರಾಜಣ್ಣ ವಿಧಾನಸಭೆಯಲ್ಲಿ ಯಾರನ್ನು ಗುರಿಯಾಗಿಟ್ಟುಕೊಂಡು ಸಿ.ಡಿ. ಮತ್ತು ಪೆನ್‌ಡ್ರೈವ್ ಬಗ್ಗೆ ಮಾತನಾಡಿದರೋ ಅವರೇ ಇವರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರನ್ನು ಎಲ್ಲೂ ಪ್ರಸ್ತಾಪಿಸದೆ ವಾಗ್ದಾಳಿ ಮಾಡಿದರು.

ಅಡ್ಡಿ ಬರುವವರಿಗೆ ಖೆಡ್ಡಾ

ಮುಖ್ಯಮಂತ್ರಿ ಆಗಲು ಟವೆಲ್ ಹಾಕಿಕೊಂಡಿರುವ ಈ ಮಹಾನ್ ನಾಯಕ ತಮ್ಮ ಉದ್ದೇಶಕ್ಕೆ ಅಡ್ಡಿ ಬರುವ ಎಲ್ಲರನ್ನೂ ಒಂದಲ್ಲಾ ಒಂದು ರೀತಿ ಖೆಡ್ಡಾಕ್ಕೆ ಬೀಳಿಸುತ್ತಾರೆ.

ದಲಿತ ಮುಖಂಡ ಮತ್ತು ಅನುಭವಿ ರಾಜಕಾರಣಿ ಡಾ.ಪರಮೇಶ್ವರ್ ಮುಖ್ಯಮಂತ್ರಿ ರೇಸ್‌ನಲ್ಲಿದ್ದರು, ಅವರು ಇದನ್ನು ಹೇಳಿಕೊಂಡೂ ಇದ್ದರು.

ಅಷ್ಟೇ ಅಲ್ಲ, ಪರಿಶಿಷ್ಟ ಜಾತಿ, ಪಂಗಡದ ಶಾಸಕರು, ಸಚಿವರ ಸಂಘಟನೆ ಮಾಡಿ ದಲಿತರ ಬೃಹತ್ ಸಮಾವೇಶ ನಡೆಸಲೂ ಹೊರಟಿದ್ದರು.

ರೂಪದರ್ಶಿ ತಮನ್ನಾ ಪರ ಎಂ.ಬಿ.ಪಾಟೀಲ್ ಬ್ಯಾಟಿಂಗ್
ಚಿನ್ನ ಸ್ಮಗ್ಲಿಂಗ್ ಮಾಹಿತಿ ಸೋರಿಕೆ

ಮುಖ್ಯಮಂತ್ರಿ ಗಾದಿಯ ಪ್ರಮುಖ ರೇಸ್‌ನಲ್ಲಿದ್ದ ಡಾ.ಪರಮೇಶ್ವರ್ ನಡೆ ಸಹಿಸಿಕೊಳ್ಳದೆ, ದುಬೈನಿಂದ ಮಹಿಳೆ ಚಿನ್ನ ತರುವ ಮಾಹಿತಿ ಸೋರಿಕೆ ಮಾಡಿದ್ದೇ ಈ ಪ್ರಭಾವೀ ನಾಯಕ, ಆಕೆ ದುಬೈನಿಂದ ಚಿನ್ನ ಸ್ಮಗ್ಲಿಂಗ್ ಮಾಡುತ್ತಿದ್ದಾಳೆ ಎನ್ನುವ ವಿಚಾರ ಈ ಪ್ರಭಾವೀ ನಾಯಕನಿಗೆ ಹೇಗೆ ಗೊತ್ತು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಗುಪ್ತಚರ ವಿಭಾಗ ಇದೆಯಲ್ಲ, ಅವರಿಗೆ ಈ ವಿಷಯ ಗೊತ್ತಿಲ್ಲವೇ, ಆ ಮಹಿಳೆ ವಿಮಾನ ನಿಲ್ದಾಣದ ಮೂಲಕ ಚಿನ್ನ ತರುತ್ತಿರುವ ಮಾಹಿತಿ ಕೊಟ್ಟಿದ್ದೇ ಈ ಪ್ರಭಾವಿ ನಾಯಕ.

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಮಾಡುವ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಗೆ ನೀಡಿ ಪರೋಕ್ಷವಾಗಿ ಡಾ.ಪರಮೇಶ್ವರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದರು.

ದಲಿತ ನಾಯಕರ ಮುಗಿಸಲು ಕುತಂತ್ರ

ದಲಿತ ನಾಯಕರನ್ನು ಮುಗಿಸಲು ಕುತಂತ್ರ ಮಾಡುತ್ತಿರುವ ಮಹಾನಾಯಕನೇ ಡಾ.ಪರಮೇಶ್ವರ್ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದಾರೆ.

ದಲಿತ, ಹಿಂದುಳಿದ ವರ್ಗದ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂಬುದಾಗಿ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ನೀಡಿರುವ ಹೇಳಿಕೆ ಗಮನಿಸಿದ್ದೇನೆ, ಡಾ.ಪರಮೇಶ್ವರ್ ಇಂಥ ಸಂಕಷ್ಟಕ್ಕೆ ಒಳಗಾಗಲು ಕಾಂಗ್ರೆಸ್ ಪಕ್ಷದ ಆ ಪ್ರಭಾವೀ ನಾಯಕನೇ ಕಾರಣ ಎಂದು ನೇರ ಆರೋಪ ಮಾಡಿದರು.

ರಾಜ್ಯದಲ್ಲಿ ಏನಾಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ, ಮೇಲಾಗಿ ಕಾಂಗ್ರೆಸ್‌ನಲ್ಲಿ ಯಾರು ಯಾರಿಗೆ ಗುನ್ನ ಹೊಡೆಯುತ್ತಿದ್ದಾರೆ ಎನ್ನುವ ಮಾಹಿತಿ ಎಲ್ಲರಿಗೂ ತಿಳಿದಿದೆ.

ಕಾಂಗ್ರೆಸ್‌ನಲ್ಲಿ ರಾಜಕೀಯ ಮೇಲಾಟ

ರಾಜ್ಯ ಕಾಂಗ್ರೆಸ್‌ನಲ್ಲಿ ಇಷ್ಟೆಲ್ಲಾ ರಾಜಕೀಯ ಮೇಲಾಟ ನಡೆಯುತ್ತಿದ್ದರೂ, ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ವ್ಯರ್ಥ ಪ್ರಯತ್ನ ನಡೆಯುತ್ತಿದೆ, ಕಾಂಗ್ರೆಸ್ ಪಕ್ಷದ ಪ್ರಭಾವೀ ನಾಯಕನಿಂದಲೇ ಇದೆಲ್ಲಾ ನಡೆದಿದೆ.

ಅದೆಷ್ಟೋ ಎಸ್‌ಐಟಿ, ಕಮಿಟಿ, ಸಮಿತಿ ಎಲ್ಲಾ ಮಾಡಿದ್ದೀರಲ್ಲ ಅವೆಲ್ಲಾ ಏನಾದವು, ಬಾಯಿ ಬಿಟ್ಟರೆ ನುಡಿದಂತೆ ನಡೆದಿದ್ದೇವೆ ಎನ್ನುತ್ತಾರೆ, ಆದರೆ, ನುಡಿದಂತೆ ನಡೆಯಲು ಎಷ್ಟು ತೆರಿಗೆ ಹಾಕಿದ್ದಾರೆ.

ಕೇಂದ್ರ ಗೃಹ ಸಚಿವ ಪ್ರಲ್ಹಾದ್ ಜೋಷಿ ನಿನ್ನೆಯಷ್ಟೇ, ದಲಿತ ನಾಯಕ ಡಾ.ಪರಮೇಶ್ವರ್ ವಿರುದ್ಧ ಇ.ಡಿ.ಗೆ ದಾಖಲೆ ಸಹಿತ ದೂರು ನೀಡಿ ಅವರನ್ನು ರಾಜ್ಯ ಕಾಂಗ್ರೆಸ್ ಮುಖಂಡರೇ ಸಂಕಷ್ಟಕ್ಕೆ ಸಿಲುಕಿಸಿದ್ದಾರೆಂದು ಆರೋಪಿಸಿದ ಬೆನ್ನಲ್ಲೇ ಕುಮಾರಸ್ವಾಮಿ ಈ ಮಾಹಿತಿಯನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central minister h d kumara swamypen drive and cd factorystate congres people know the truth
0 FacebookTwitterPinterestEmail
admin

previous post
ರೂಪದರ್ಶಿ ತಮನ್ನಾ ಪರ ಎಂ.ಬಿ.ಪಾಟೀಲ್ ಬ್ಯಾಟಿಂಗ್
next post
ಪ್ರವಾಸಿಗರಿಗೆ ಜೂನ್ 1ರಿಂದ ಶಕ್ತಿಸೌಧ ವೀಕ್ಷಣೆ ಅವಕಾಶ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ