Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯರಾಷ್ಟ್ರಶಿಕ್ಷಣ

ಕೋವಿಡ್ ಎದುರಿಸಲು ಜಿಲ್ಲಾಸ್ಪತ್ರೆಗಳ ಸರ್ವ ಸನ್ನದ್ಧಕ್ಕೆ ಸೂಚನೆ

ಕೊರೋನಾ ಸಹಾಯವಾಣಿ ಪ್ರಾರಂಭ ಮಾಡಲು ಸೂಚನೆ

by KM Shivaraju May 26, 2025
written by KM Shivaraju May 26, 2025 0 comments 2 minutes read
0FacebookTwitterPinterestEmail
84

ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು: ಮಹಾ ಮಾರಿ ಕೋವಿಡ್ ಸೋಂಕು ರಾಜ್ಯದಲ್ಲಿ ಮತ್ತೆ ಉಲ್ಬಣಗೊಳ್ಳುತ್ತಿದ್ದು, ಎಂತಹುದೇ ಪರಿಸ್ಥಿತಿ ಎದುರಾದರೂ‌ ಅದನ್ನು ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ.
ಕೋವಿಡ್ ಗೆ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಕಾವೇರಿ ನಿವಾಸದಲ್ಲಿ ನಡೆಸಿದ ಸಭೆಯಲ್ಲಿ ಮುಖ್ಯಮಂತ್ರಿ ರಾಜ್ಯದಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭ ಮಾಡಲು ಸೂಚನೆ ನೀಡಿದರು .
ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ
ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಲು ಕ್ರಮ ವಹಿಸುವಂತೆ ನಿರ್ದೇಶಿಸಿದರು.


ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಇರಬಾರದು. ಎಲ್ಲಾ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರುವಂತೆ ಸೂಚಿಸಿದರು.
ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಈಗಾಗಲೇ ಪಾಲಿಸುತ್ತಿದ್ದೇವೆ. ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣ ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್ ಗಳನ್ನು ಸಿದ್ದವಾಗಿಟ್ಟು ಕೊಳ್ಳಲು ನಿರ್ದೇಶನ‌ ಮಾಡಿದರು.
ಸಾಮಾಜಿಕ ಮಾಧ್ಯಮಗಳ ಮೂಲಕ ಕಾಲ ಕಾಲಕ್ಕೆ
ಸಾರ್ವಜನಿಕರಿಗೆ ಮಾಹಿತಿ ನೀಡಲು ಸೂಚಿಸಿದರು.
ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ. ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಲು ಸೂಚಿಸಿದರು.
ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು. ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು ಎಂದು ಅವರು ಸಲಹೆ ಮಾಡಿದರು.
ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ, ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.
ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಿಂದ ಮಾಹಿತಿ ಪಡೆದ ಅವರು, ಕಳೆದ ಜನವರಿಯಿಂದಲೂ
ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೂ ಎರಡು ಕಂಡುಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ ಎಂದರು.
ಸಾರಿ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ‌.
ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ,
ಎಂತಹುದೇ ಪರಿಸ್ಥಿತಿ ಎದುರಿಸಲು. ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ
ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿರುವಂತೆ
ಕ್ರಮ ತೆಗೆದುಕೊಳ್ಳಬೇಕು. ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸಭೆಯಲ್ಲಿ ಉಪಸ್ಥಿತರಿದ್ದ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು .

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cmCovid-19district hospitalsfully preparedhealthinstructedMedical EducationmeetingministersofficialsSiddaramaiah
0 FacebookTwitterPinterestEmail
KM Shivaraju

previous post
ಪ್ರವಾಸಿಗರಿಗೆ ಜೂನ್ 1ರಿಂದ ಶಕ್ತಿಸೌಧ ವೀಕ್ಷಣೆ ಅವಕಾಶ
next post
ಶಿವಕುಮಾರ್ – ಕುಮಾರಸ್ವಾಮಿ ನಡುವೆ ಕದನ ವಿರಾಮ !

You may also like

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (562)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,055)
  • ರಾಜ್ಯ (2,370)
  • ರಾಷ್ಟ್ರ (2,334)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026

KMS Special

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್...

September 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ