Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ದೆಹಲಿಗೆ : ಕಾಂಗ್ರೆಸ್‌ನಲ್ಲಿ ಸಂಚಲನ

by KM Shivaraju May 29, 2025
written by KM Shivaraju May 29, 2025 0 comments 2 minutes read
0FacebookTwitterPinterestEmail
297

ಬೆಂಗಳೂರು:ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಬೆನ್ನಲ್ಲೇ ಆಂತರಿಕವಾಗಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಕ್ಷದ ವರಿಷ್ಠರು ದೆಹಲಿಗೆ ಬುಲಾವ್ ಮಾಡಿದ್ದಾರೆ.

ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿಕೊಂಡು ಸರ್ಕಾರ ಮತ್ತು ಪಕ್ಷಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮುಂದಾಗಿದ್ದಾರೆ.

ಎಐಸಿಸಿ ಸೂಚನೆ

ಮೇ 31 ಇಲ್ಲವೇ ಜೂನ್ 5ರಂದು ಬಿಡುವು ಮಾಡಿಕೊಂಡು ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಸೂಚಿಸಿದೆ.

ವಿಧಾನ ಪರಿಷತ್‌ನಲ್ಲಿ ತೆರವಾಗಿರುವ ಸ್ಥಾನಗಳ ಭರ್ತಿ ಹಾಗೂ ಪರಿಷತ್‌ನಲ್ಲಿ ಪಕ್ಷಕ್ಕೆ ಬಹುಮತ ಸಿಕ್ಕಿದ್ದು, ಸಭಾಪತಿ ಮತ್ತು ಉಪಸಭಾಪತಿ ಆಯ್ಕೆಗೆ ಸಂಬಂಧಿಸಿದಂತೆ ವರಿಷ್ಠರೊಂದಿಗೆ ಚರ್ಚೆ ನಡೆಸಿ, ಹೆಸರು ಅಂತಿಮಗೊಳಿಸಲು ಮುಂದಾಗಿದ್ದಾರೆ.

ಇದೂ ಸೇರಿದಂತೆ ಕೆಲವು ರಾಜಕೀಯ ನೇಮಕಾತಿಗೆ ಸಂಬಂಧಿಸಿದಂತೆ ವರಿಷ್ಠರೊಂದಿಗೆ ಮಾತುಕತೆಗೆ ಮುಖ್ಯಮಂತ್ರಿ ದೆಹಲಿ ಪ್ರಯಾಣ ಬಯಸಿದ್ದರು.

ಸೋನಿಯಾ ಗಾಂಧಿ ಭೇಟಿ

ಈ ಮಧ್ಯೆ ಸೋನಿಯಾ ಗಾಂಧಿ ಅವರೇ ಮುಖ್ಯಮಂತ್ರಿ ಭೇಟಿ ಮಾಡಲು ಆಸಕ್ತಿ ತೋರಿದ್ದರಿಂದ ಎಐಸಿಸಿ ಕಚೇರಿ ಮುಖ್ಯಮಂತ್ರಿ ಅವರಿಗೆ ದೆಹಲಿಗೆ ಬರುವಂತೆ ಹೇಳಿದೆ.

ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಇಲಾಖಾ ವರ್ಗಾವಣೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡಿರುವುದನ್ನು ಪರೋಕ್ಷವಾಗಿ ಆಕ್ಷೇಪಿಸಿ ಮುಖ್ಯಕಾರ್ಯದರ್ಶಿ ಅವರಿಗೆ ಮೇ 13 ರಂದು ಪತ್ರ ಬರೆದಿರುವುದು ಪಕ್ಷದಲ್ಲಿ ಸಂಚಲನ ಮೂಡಿಸಿದೆ.

ಇದರ ಬೆನ್ನಲ್ಲೇ ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ, ಸಣ್ಣ ಕಾರ್ಯಕ್ರಮ ನೆಪವಾಗಿಟ್ಟುಕೊಂಡು ಕರ್ನಾಟಕಕ್ಕೆ ದೌಢಾಯಿಸಿ ಶಿವಕುಮಾರ್ ಅವರನ್ನು ಕರೆಸಿಕೊಂಡು ಚರ್ಚೆ ನಡೆಸಿದರು.

ಖರ್ಗೆ ನಿವಾಸಕ್ಕೆ ದೌಢು

ನಂತರ ಬೆಂಗಳೂರಿನಲ್ಲೇ ಇದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಶಿವಕುಮಾರ್ ಅವರನ್ನು ಜೊತೆಯಲ್ಲಿ ಕರೆದೊಯ್ದ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ, ಎರಡು ಗಂಟೆಗಳ ಕಾಲ ರಹಸ್ಯ ಮಾತುಕತೆ ನಡೆಸಿದರು.

ಈ ಮಾತುಕತೆ ನಂತರ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಬರುವಂತೆ ಎಐಸಿಸಿಯಿಂದ ಸಂದೇಶ ತಲುಪಿತು ಎಂದು ಉನ್ನತ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಅವರ ಅಧೀನದಲ್ಲಿ ಬರುವ ಡಿಪಿಎಆರ್ ಮೂಲಕ ಮುಖ್ಯಇಂಜಿನಿಯರ್‌ಗಳ ವರ್ಗಾವಣೆ ನಡೆಯಲಿದೆ.

ಶಿವಕುಮಾರ್ ಕೋಪ

ತಮ್ಮ ಗಮನಕ್ಕೆ ತಾರದೆ ಆರು ಮುಖ್ಯ ಇಂಜಿನಿಯರ್‌ಗಳನ್ನು ವರ್ಗವಣೆ ಮಾಡಿದ್ದು ಶಿವಕುಮಾರ್ ಕೋಪಕ್ಕೆ ಕಾರಣವಾಗಿದೆ.

ಶಿವಕುಮಾರ್ ತಮ್ಮ ಕೋಪವನ್ನು ಮುಖ್ಯಮಂತ್ರಿ ಮೇಲೆ ತೋರಿಸದೆ, ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದು, ಆಗಿರುವ ವರ್ಗಾವಣೆ ತಡೆಹಿಡಿಯಬೇಕು, ನನ್ನ ಇಲಾಖೆಗೆ ಒಳಪಡುವ ವಿಭಾಗಗಳಿಗೆ ಸಂಬಂಧಿಸಿದಂತೆ ವರ್ಗಾವಣೆ, ನೇಮಕಾತಿ ಆದೇಶಕ್ಕೆ ನನ್ನ ಅನುಮತಿ ಬೇಕು ಎಂದಿದ್ದಾರೆ.

ಡಿಪಿಎಆರ್‌ನಿಂದ ಆದೇಶ ಹೊರಡಿಸಬೇಕಾದರೆ ನನ್ನ ಪೂರ್ವಾನುಮತಿ ಪಡೆದ ನಂತರವೇ ಹೊರಡಿಸಬೇಕು.

ಟಿಪ್ಪಣಿ ಮೂಲಕ ಸೂಚನೆ

ಈ ಸರ್ಕಾರ ಅಸ್ತಿತ್ವಕ್ಕೆ ಬಂದ ಆರಂಭದಲ್ಲಿಯೇ ಟಿಪ್ಪಣಿ ಮೂಲಕ ನಿಮಗೆ ತಿಳಿಸಲಾಗಿತ್ತು.

ಅಲ್ಲದೆ, ಮುಖ್ಯ ಎಂಜಿನಿಯರ್‌ಗಳ ಕರ್ತವ್ಯಕ್ಕೆ ಸಂಬಂಧಿಸಿದ ಕಾರ್ಯವ್ಯಾಪ್ತಿಯನ್ನು ಜಲಸಂಪನ್ಮೂಲ ಇಲಾಖೆಯಿಂದ ಡಿಪಿಎಆರ್‌ಗೆ ವಹಿಸುವ ಕಡತದಲ್ಲಿಯೂ ಸೂಚನೆ ಕೊಡಲಾಗಿತ್ತು.

ನನ್ನ ಗಮನಕ್ಕೆ ತಂದು ನನ್ನ ಅನುಮೋದನೆ ಪಡೆದ ನಂತರವೇ ಡಿಪಿಎಆರ್‌ನಿಂದ ಆದೇಶ ಹೊರಡಿಸಬಹುದೆಂದು ಸ್ಪಷ್ಟ ಸೂಚನೆ ನೀಡಿದ್ದೇನೆ.

ಜಾತಿ, ವರ್ಗ ಮುಕ್ತ ಸಮಸಮಾಜ ನಿರ್ಮಾಣವಾಗಬೇಕು
ಅನುಮೋದನೆ ಪಡೆದಿಲ್ಲ

ಆದಾಗ್ಯೂ, ಮೇ 9ರಂದು ಹೊರಡಿಸಿದ ಆದೇಶದಲ್ಲಿ ನನ್ನ ಅನುಮೋದನೆ ಪಡೆಯದೆ ಕೆಲವು ಮುಖ್ಯ ಎಂಜಿನಿಯರ್‌ಗಳನ್ನು ಜಲಸಂಪನ್ಮೂಲ ಇಲಾಖೆಗೆ ವರ್ಗಾವಣೆ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ.

ನನ್ನ ಸೂಚನೆ ಕಡೆಗಣಿಸಿ ಆದೇಶ ಹೊರಡಿಸಿರುವುದನ್ನು ಆಕ್ಷೇಪಿಸುತ್ತಿದ್ದೇನೆ, ಆದುದರಿಂದ ಈ ಆದೇಶವನ್ನು ಕೂಡಲೇ ವಾಪಸು ಪಡೆಯಬೇಕು, ಇಂತಹ ವಿಚಾರಗಳ ಬಗ್ಗೆ ಯಾವುದೇ ಆದೇಶ ಹೊರಡಿಸಬೇಕಾದರೆ ನನ್ನ ಪೂರ್ವಾನುಮತಿ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc president mallikarjuna khargecm siddaramaiahcongresdcm d k shivakumarsoniya gandhi
0 FacebookTwitterPinterestEmail
KM Shivaraju

previous post
ಜಾತಿ, ವರ್ಗ ಮುಕ್ತ ಸಮಸಮಾಜ ನಿರ್ಮಾಣವಾಗಬೇಕು
next post
ಮಳೆ-ಪ್ರವಾಹ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ವಿಫಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ