Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕೋರ್ ಕಮಿಟಿ: ವಿಜಯೇಂದ್ರ – ಅಶೋಕ್ ಜಟಾಪಟಿ

by KM Shivaraju June 2, 2025
written by KM Shivaraju June 2, 2025 0 comments 1 minutes read
0FacebookTwitterPinterestEmail
212

ಬೆಂಗಳೂರು:ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರುಗಳನ್ನು ಹೊರಗಿಟ್ಟು ಬಿಜೆಪಿಯ ಹೊಸ ಕೋರ್ ಕಮಿಟಿ ರಚನೆಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಂದಾಗಿದ್ದಾರೆ.

ಅಲ್ಲದೆ, ಹಿಂದುಳಿದ ವರ್ಗದ ಯಾವುದೇ ನಾಯಕರಿಗೆ ಪಕ್ಷದ ಉನ್ನತ ಮಟ್ಟದ ಈ ಸಮಿತಿಯಲ್ಲಿ ಅವಕಾಶ ನೀಡಿಲ್ಲ.

ಪ್ರಮುಖ ಸಭೆಗಳಿಂದ ದೂರ

ಪಟ್ಟಿಯಿಂದ ನಮ್ಮನ್ನು ಕೈಬಿಡಲಾಗಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಅಶೋಕ್, ಕಳೆದ ವಾರ ಪಕ್ಷದ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸೇರಿದಂತೆ ಪ್ರಮುಖ ಸಭೆಗಳಿಂದ ದೂರ ಉಳಿದಿದ್ದಾರೆ.

ವಿಜಯೇಂದ್ರ ಮತ್ತು ಅಶೋಕ್ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತಷ್ಟು ಉಲ್ಬಣಗೊಂಡಿದೆ.

ರಾಜ್ಯಾಧ್ಯಕ್ಷರು ಹೇಳುವುದನ್ನು ಅಶೋಕ್ ಪಾಲಿಸುತ್ತಿಲ್ಲ, ಪ್ರತಿಪಕ್ಷ ನಾಯಕರು ಹೇಳುವುದನ್ನು ವಿಜಯೇಂದ್ರ ಪಾಲನೆ ಮಾಡದೆ, ವಿರುದ್ಧ ದಿಕ್ಕಿನಲ್ಲಿ ಉಭಯ ನಾಯಕರು ನಡೆಯುತ್ತಿರುವುದು ಪಕ್ಷದ ವರಿಷ್ಠರು ಮತ್ತು ರಾಜ್ಯ ನಾಯಕರಿಗೆ ತಲೆ ನೋವಾಗಿದೆ.

ಹೊರಗಿಡಲು ಸಾಧ್ಯವಿಲ್ಲ

ಪಕ್ಷ ಅಧಿಕಾರದಲ್ಲಿದ್ದರೆ, ಮುಖ್ಯಮಂತ್ರಿ, ಇಲ್ಲವೇ ಪ್ರತಿಪಕ್ಷವಾಗಿದ್ದರೆ ಶಾಸಕಾಂಗ ಪಕ್ಷದ ನಾಯಕರನ್ನು ಕೋರ್ ಕಮಿಟಿಯಿಂದ ಹೊರಗಿಡಲು ಸಾಧ್ಯವಿಲ್ಲ.

ಆದರೂ, ಅಶೋಕ್ ಅಲ್ಲದೆ, ಹಿಂದುಳಿದ ವರ್ಗದವರಿಗೂ ಅವಕಾಶ ನೀಡದೆ, ಕೋರ್ ಕಮಿಟಿ ಪುನರ್ ರಚಿಸಿ ವರಿಷ್ಠರ ಅನುಮತಿಗೆ ಕಳುಹಿಸಿರುವುದು ರಾಜ್ಯ ಬಿಜೆಪಿಯಲ್ಲಿ ಭಾರೀ ಗೊಂದಲಕ್ಕೆ ಕಾರಣವಾಗಿದೆ.

ವಿಧಾನಸಭೆ ಒಳಗೆ ಹಾಗೂ ಹೊರಗೆ ವಿಜಯೇಂದ್ರ ಮತ್ತು ಅಶೋಕ್ ತಮ್ಮ ತಮ್ಮ ಅನಿಸಿಕೆಗೆ ತಕ್ಕಂತೆ ನಡೆದುಕೊಳ್ಳುತ್ತಿದ್ದಾರೆ.

ತಮ್ಮವರದೇ ಮೇಲುಗೈ

ಅಶೋಕ್, ಬಸವರಾಜ ಬೊಮ್ಮಾಯಿ, ಡಾ.ಕೆ.ಸುಧಾಕರ್ ಸೇರಿದಂತೆ ಕೆಲವು ಹಿರಿಯ ಮುಖಂಡರು ವಿಜಯೇಂದ್ರ ವಿರುದ್ಧ ಇದ್ದರೂ ಕಡೆಗಣಿಸಿ ಪಕ್ಷದ ಪದಾಧಿಕಾರಿ ಹಾಗೂ ಜಿಲ್ಲಾಧ್ಯಕ್ಷರ ನೇಮಕಾತಿಯಲ್ಲಿ ತಮ್ಮವರದೇ ಮೇಲುಗೈ ಮಾಡಿಕೊಂಡಿದ್ದಾರೆ.

ಕೋರ್ ಕಮಿಟಿಯಲ್ಲಿ ಒಕ್ಕಲಿಗ ಹಾಗೂ ಲಿಂಗಾಯತರಿಗೆ ಹೆಚ್ಚು ಪ್ರಾತಿನಿಧ್ಯ ನೀಡಿದ್ದು, ಪರಿಶಿಷ್ಟರಲ್ಲಿ ಎಡಗೈ ಮತ್ತು ಬಲಗೈಗೆ ತಲಾ ಒಂದು ಸ್ಥಾನ ಹಾಗೂ ಅಲ್ಪಸಂಖ್ಯಾತರೊಬ್ಬರಿಗೆ ಸ್ಥಾನ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಜಯೇಂದ್ರ ಸಿದ್ಧಪಡಿಸಿರುವ ಕೋರ್ ಕಮಿಟಿಯಲ್ಲಿದ್ದಾರೆ.

ಕೇಂದ್ರ ಸಚಿವರೂ ಇಲ್ಲ

ಪ್ರಲ್ಹಾದ್ ಜೋಷಿ ಸೇರಿದಂತೆ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಅವರಿಗೂ ಅವಕಾಶ ನೀಡಿಲ್ಲ.

ಮಾಜಿ ಸಚಿವ ಅರವಿಂದ್ ಲಿಂಬಾವಳಿ ಅವರನ್ನು ಕೈಬಿಟ್ಟು ತಮ್ಮ ಆಪ್ತ, ಮಾಜಿ ಶಾಸಕ ನಂದೀಶ್ ರೆಡ್ಡಿಗೆ ಅವಕಾಶ ನೀಡಲಾಗಿದೆ.

ಅಗರ್ವಾಲ್ ಇತ್ತೀಚೆಗೆ ಕರ್ನಾಟಕಕ್ಕೆ ಭೇಟಿ ನೀಡಿದ್ದ ವೇಳೆ ಸರಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಂತರ ವಿಜಯೇಂದ್ರ ಅವರು, ಉನ್ನತ ಸಮಿತಿ ಪುನರ್ ರಚನೆಯನ್ನು ಅವರ ಗಮನಕ್ಕೆ ತಂದು ಪಟ್ಟಿ ಸಿದ್ಧಪಡಿಸಿದ್ದಾರೆ.

ಚರ್ಚಿಸಿ ತೀರ್ಮಾನ

ಅಶೋಕ್ ಸೇರಿದಂತೆ ಕೆಲವರ ಹೆಸರು ಕೈಬಿಟ್ಟಿರುವುದನ್ನು ಗಮನಿಸಿದ ಅಗರ್ವಾಲ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಹಾಗೂ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರೊಂದಿಗೆ ಚರ್ಚಿಸಿ ಪಟ್ಟಿ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಜಿಲ್ಲಾಧ್ಯಕ್ಷರ ನೇಮಕಾತಿ ಮಾದರಿಯಲ್ಲೇ ಕೋರ್ ಕಮಿಟಿ ರಚಿಸಿದ್ದು, ಇದಕ್ಕೆ ವರಿಷ್ಠರು ಯಾವ ತೀರ್ಮಾನ ಕೈಗೊಳ್ಳುವರೆಂಬುದನ್ನು ಕಾದುನೋಡಬೇಕಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b.l.santoshb.y.vijayendraj.p.naddar.ashokradhamohan das agarvalstate bjp core committee
0 FacebookTwitterPinterestEmail
KM Shivaraju

previous post
ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್, ತಂಬಾಕು ನಿಷೇಧ
next post
ಆರ್‌ಸಿಬಿ ತಂಡಕ್ಕೆ ಬೆಂಗಳೂರಿನಲ್ಲಿ ಭವ್ಯ ಸ್ವಾಗತ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ