Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಸಿದ್ದರಾಮಯ್ಯ ಜಾತಿ ಜನಗಣತಿ ಸಮೀಕ್ಷೆ ನಾಟಕ ನಿಲ್ಲಿಸಿ

by admin June 11, 2025
written by admin June 11, 2025 0 comments 2 minutes read
0FacebookTwitterPinterestEmail
260

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಜಾತಿ ಜನಗಣತಿ ನಡೆಸುವ ಬದ್ಧತೆ ಮತ್ತು ಪ್ರಾಮಾಣಿಕತೆ ನಿಜಕ್ಕೂ ಇದ್ದರೆ, ಸಮೀಕ್ಷೆ ಹೇಗಿರಬೇಕು ಎಂಬ ಬಗ್ಗೆ ಸಾರ್ವಜನಿಕ ಚರ್ಚೆ ನಡೆಸಿ, ಸರ್ವಪಕ್ಷಗಳ ಸಭೆ ಕರೆದು ಎಲ್ಲರ ಅಭಿಪ್ರಾಯ ಆಲಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

90 ದಿನಗಳ ಕಾಲಮಿತಿಯಲ್ಲಿ ಜಾತಿ ಜನಗಣತಿ ಸಮೀಕ್ಷೆ ನಡೆಸುವ ಕುರಿತು ಹಲವು ಗಂಭೀರ ಪ್ರಶ್ನೆಗಳು ಎದುರಾಗಿವೆ, ಪ್ರಸ್ತುತ ಸನ್ನಿವೇಶದಲ್ಲಿ ಸಮೀಕ್ಷೆ ಹೇಗೆ ಸಾಧ್ಯ, ಶಾಲೆಗಳು ಈಗಾಗಲೇ ಆರಂಭವಾಗಿವೆ, ಸಮೀಕ್ಷಾ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿದರೆ, ಶೈಕ್ಷಣಿಕ ಚಟುವಟಿಕೆಗಳು ಬುಡಮೇಲಾಗುತ್ತವೆ.

ಸಮೀಕ್ಷೆಗೆ ಯಾರ ನಿಯೋಜನೆ

ಇದು ಮಕ್ಕಳ ಭವಿಷ್ಯದ ಮೇಲೆ ನೇರ ಪರಿಣಾಮ ಬೀರಲಿದೆ, ಪರಿಸ್ಥಿತಿ ಹೀಗಿರುವಾಗ 90 ದಿನಗಳಲ್ಲಿ ಸಮೀಕ್ಷೆ ನಡೆಸಲು ಸರ್ಕಾರ ಯಾರನ್ನು ನಿಯೋಜಿಸಲಿದೆ ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಆನ್‌ಲೈನ್ ಮೂಲಕ ಸಮೀಕ್ಷೆ ನಡೆಸುವ ಚಿಂತನೆ ಅವಿವೇಕದ ಕ್ರಮ, ಅನೇಕ ಅಕ್ಷರಸ್ಥರೇ ಇಂದಿಗೂ ಆನ್‌ಲೈನ್ ವ್ಯವಸ್ಥೆಯಿಂದ ದೂರ ಇರುವಾಗ ಮಾಹಿತಿಯ ನಿಖರತೆ ಮತ್ತು ಗುರುತು ಪತ್ತೆ ಹೇಗೆ ಸಾಧ್ಯವಾಗಲಿದೆ, ತಪ್ಪು ದಾಖಲಾತಿ ತಡೆಯಲು ಸರ್ಕಾರದ ಕ್ರಮ ಏನು.

ಆದ್ದರಿಂದ ಸಮಗ್ರ ಸಿದ್ಧತೆ ಮುಗಿಸಿ, ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿದ ನಂತರವಷ್ಟೇ ಶಿಕ್ಷಕರನ್ನು ಬಳಸಿ ಜಾತಿ ಜನಗಣತಿ ಸಮೀಕ್ಷೆ ನಡೆಸಿ, ರಾಜ್ಯದ ಹಿತದೃಷ್ಟಿಯಿಂದಲೂ ಇದು ಅತಿ ಅವಶ್ಯಕ ಎಂದಿದ್ದಾರೆ.

’ಚೌಚೌ ವರದಿ’ಗೆ ಎಳ್ಳು-ನೀರು

10 ವರ್ಷಗಳ ಹಿಂದೆ ಕಾಂತರಾಜು ನಡೆಸಿದ ಜಾತಿ ಜನಗಣತಿ ವರದಿ ಹಾಗೂ ನಂತರ ಜಯಪ್ರಕಾಶ್ ಹೆಗ್ಡೆ ಸಲ್ಲಿಸಿದ ’ಚೌಚೌ ವರದಿ’ಗೆ ಎಳ್ಳು-ನೀರು ಬಿಟ್ಟಂತಾಗಿದೆ, ಈ ಕಾರ್ಯಕ್ಕೆ ತೆರಿಗೆದಾರರ 167 ಕೋಟಿ ರೂ. ವೆಚ್ಚವಾಗಿದ್ದು, ವರದಿ ಕೈಬಿಟ್ಟಿರುವುದರಿಂದ ಸಮೀಕ್ಷೆಗೆ ವೆಚ್ಚವಾದ ಹಣವನ್ನು ಯಾರಿಂದ ವಸೂಲಿ ಮಾಡುತ್ತೀರಿ, ಈಗಾಗಲೇ ವ್ಯರ್ಥವಾದ ಬೃಹತ್ ಮೊತ್ತಕ್ಕೆ ಯಾರು ಹೊಣೆ.

ಕುರ್ಚಿಗೆ ಕಂಟಕ ಬಂದಾಗಲೆಲ್ಲ ಜಾತಿ ಜನಗಣತಿ ವರದಿ ಕಾರ್ಡ್ ಬಳಸಿ, ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಮೂಲಕ ಪರಿಶಿಷ್ಟ ಸಮುದಾಯ, ಹಿಂದುಳಿದ ವರ್ಗಗಳಿಗೆ ಅಪಮಾನ ಮಾಡುವ ಕುತಂತ್ರ ಈಗ ಗುಟ್ಟಾಗಿ ಉಳಿದಿಲ್ಲ, ಸಾಕು ನಿಲ್ಲಿಸಿ ನಿಮ್ಮ ನಾಟಕ.

ರಾಷ್ಟ್ರೀಯ ದಶವಾರ್ಷಿಕ ಜನಗಣತಿಯಲ್ಲಿ ಜಾತಿಗಣತಿ ವಿಷಯವನ್ನೂ ಸೇರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಈಗಾಗಲೇ ನಿರ್ಧಾರ ಮಾಡಿದ್ದು, ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಹೆಸರಿನಲ್ಲಿ ಕನ್ನಡಿಗರ ಬೆವರಿನ ತೆರಿಗೆ ಹಣವನ್ನು ವಿನಾಕಾರಣ ದುಂದು ವೆಚ್ಚ ಮಾಡಬೇಡಿ.

ಸಂಪುಟದ ಮುಂದೆ ತರುವ ಹಠ

ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ ಎಂಬುದಾಗಿ ಸಾರ್ವಜನಿಕರು, ಮಠಾಧೀಶರು, ಹಲವು ಸಮುದಾಯಗಳ ಮುಖಂಡರು, ಅಲ್ಲದೆ, ಆಡಳಿತಾರೂಢ ಕಾಂಗ್ರೆಸ್‌ನ ಅನೇಕ ಸಚಿವರು, ಶಾಸಕರು ವಿರೋಧ ಮಾಡಿದರೂ, ತಮ್ಮ ನಿಲುವನ್ನೇ ಬಲವಾಗಿ ಸಮರ್ಥಿಸಿಕೊಂಡು, ಹಠದಿಂದ ಸಚಿವ ಸಂಪುಟದ ಮುಂದೆ ತಂದಿರಿ.

ಈಗ ಕಾಂಗ್ರೆಸ್ ಹೈಕಮಾಂಡ್ ತಪರಾಕಿ ಹಾಕಿದ್ದಕ್ಕೆ ಮರು ಸಮೀಕ್ಷೆ ತೀರ್ಮಾನಕ್ಕೆ ಒಪ್ಪಿಗೆ ನೀಡಿದ್ದು ಜಗಜ್ಜಾಹೀರಾಗಿದೆ.

ಜನರ ಮೇಲೆ ವಿಶ್ವಾಸವಿಲ್ಲ

ಇದು ರಾಜ್ಯದ ಜನರ, ಮಠಾಧೀಶರ, ಸಮುದಾಯಗಳ ಮುಖಂಡರ ಮೇಲೆ ವಿಶ್ವಾಸವಿಲ್ಲ, ಹೈಕಮಾಂಡ್ ಹೇಳಿದರೆ ಮಾತ್ರ ಕೇಳುತ್ತೇವೆ ಎಂಬುದನ್ನು ತೋರಿಸುತ್ತದೆ.

ಇದೆಲ್ಲಕ್ಕಿಂತ ಐಪಿಎಲ್ ವಿಜಯೋತ್ಸವದ ದುರಂತ ಮರೆ ಮಾಚಲು, ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಮಾಡುತ್ತಿರುವ ಮತ್ತೊಂದು ಬೃಹತ್ ನಾಟಕ ಎಂಬ ಅನುಮಾನಗಳು ದಟ್ಟವಾಗಿವೆ ಎಂದು ಟೀಕಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
caste censuscm siddaramaiahcongres high commandr.ashok
0 FacebookTwitterPinterestEmail
admin

previous post
ಸಿದ್ದರಾಮಯ್ಯ, ಶಿವಕುಮಾರ್, ಡಾ.ಪರಮೇಶ್ವರ್ ದೆಹಲಿಗೆ
next post
ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ