Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

by KM Shivaraju June 12, 2025
written by KM Shivaraju June 12, 2025 0 comments 2 minutes read
0FacebookTwitterPinterestEmail
1.1K

90 ದಿನದೊಳಗೆ ವರದಿ ಪಡೆಯಲು ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಮತ್ತೊಮ್ಮೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ (ಜನಗಣತಿ) ಸಮೀಕ್ಷೆ ನಡೆಸುವ ಮಹತ್ವದ ನಿರ್ಧಾರವನ್ನು ಇಂದಿಲ್ಲಿ ಸೇರಿದ್ದ ಸಚಿವ ಸಂಪುಟ ಸಭೆ ಕೈಗೊಂಡಿದೆ.

ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂತರಾಜ್ ಅಧ್ಯಕ್ಷರಾಗಿದ್ದಾಗ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ವರದಿ ಸಲ್ಲಿಸಿ 10 ವರ್ಷ ಕಳೆದಿರುವುದರಿಂದ ಹಿಂದುಳಿದ ವರ್ಗಗಳ ಕಾಯಿದೆ ಸೆಕ್ಷನ್ 11ರ ಪ್ರಕಾರ 10 ವರ್ಷದ ಬಳಿಕ ಹೊಸ ಸಮೀಕ್ಷೆ ನಡೆಸಬೇಕೆಂಬುದಾಗಿ ತಿಳಿಸಲಾಗಿದೆ ಎಂದರು.

ಕಾಂಗ್ರೆಸ್ ವರಿಷ್ಠರ ಒತ್ತಡಕ್ಕೆ ಮಣಿದು ಹೊಸ ಸಮೀಕ್ಷೆ ನಡೆಸುತ್ತಿದ್ದೇವೆ ಎಂಬುದನ್ನು ತಳ್ಳಿಹಾಕಿದ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಆಯೋಗದ ಕಾನೂನಿನ ಪ್ರಕಾರ ಈ ನಿರ್ಧಾರ ಕೈಗೊಂಡಿದ್ದೇವೆ.

ಮಾಜಿ ಅಡ್ವೋಕೇಟ್ ಜನರಲ್ ಮಧುಸೂಧನ್ ನಾಯಕ್ ಅವರನ್ನು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇನ್ನೆರಡು-ಮೂರು ದಿನಗಳಲ್ಲಿ ಉಳಿದ ಸದಸ್ಯರ ನೇಮಕ ಮಾಡಲಾಗುವುದು, ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರದ 90 ದಿನಗಳೊಳಗೆ ವರದಿ ನೀಡುವಂತೆ ತಿಳಿಸಲಾಗುವುದು.

ಕಾಂತರಾಜ್ ವರದಿಯನ್ನು ಏನು ಮಾಡುತ್ತೀರಿ ಎಂಬ ಪ್ರಶ್ನೆಗೆ ಹಾರಿಕೆ ಉತ್ತರ ನೀಡಿದ ಮುಖ್ಯಮಂತ್ರಿ, ಕಾನೂನಿನ ಪ್ರಕಾರ ಹೊಸ ಸಮೀಕ್ಷೆ ಮಾಡುತ್ತಿದ್ದೇವೆ 2001ರ ಜನಗಣತಿ ಪ್ರಕಾರ ರಾಜ್ಯದಲ್ಲಿ 6.11 ಕೋಟಿ ಜನಸಂಖ್ಯೆ ಇತ್ತು, 2015ರಲ್ಲಿ 6.35 ಕೋಟಿ ಜನಸಂಖ್ಯೆ ಇದೆ ಎಂಬುದಾಗಿ ಅಂದಾಜಿಸಲಾಗಿತ್ತು. ನಾನು ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಅಂದರೆ 2015ರಲ್ಲಿ ಜಾತಿಗಣತಿ ನಡೆಸಲು ಆಯೋಗವನ್ನು ಕೋರಲಾಗಿತ್ತು.

2015ರಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿ ಬಗ್ಗೆ ಸರ್ವೆ ನಡೆಸಲಾಗಿತ್ತು, 54 ಮಾನದಂಡ ಇಟ್ಟುಕೊಂಡು ಮನೆ ಮನೆಗೆ ತೆರಳಿ ಸರ್ವೆ ಮಾಡಿ ವರದಿ ಪಡೆದಿದ್ದೆವು. 1.60 ಲಕ್ಷ ಸಿಬ್ಬಂದಿ ಸಮೀಕ್ಷೆಯಲ್ಲಿ ಭಾಗಿಯಾಗಿದ್ದರು. ಆಯೋಗ 5.98 ಕೋಟಿ ಜನರ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ, ಅಂತಿಮ ವರದಿ ಶಿಫಾರಸು ಸಲ್ಲಿಸುವ ವೇಳೆಗೆ ನಾನು ಅಧಿಕಾರದಲ್ಲಿ ಇರಲಿಲ್ಲ, ನಂತರ ಬಂದಂತಹ ಸರ್ಕಾರಗಳು ವರದಿ ಸ್ವೀಕರಿಸಿರಲಿಲ್ಲ ಎಂದು ಹೇಳಿದರು.

ನಂತರ ಕಾಂತರಾಜು ಸರ್ವೆ ದತ್ತಾಂಶ ಪಡೆದು ಜಯಪ್ರಕಾಶ್ ಹೆಗ್ಡೆ ವರದಿ ನೀಡಿದರು, 2024ರ ಫೆಬ್ರವರಿ 29ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವರದಿ ಕುರಿತು ಚರ್ಚಿಸಲಿಲ್ಲ. ಬಳಿಕ ವರದಿ ಸ್ವೀಕರಿಸಿ 2025ರಲ್ಲಿ ಸಂಪುಟದ ಮುಂದೆ ಮಂಡಿಸಲಾಯಿತು. ಸಚಿವರು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ ಎಂದರು.

ಮೂರ‍್ನಾಲ್ಕು ಸಚಿವ ಸಂಪುಟ ಸಭೆಗಳಲ್ಲಿ ಚರ್ಚೆ ಮಾಡಿದ್ದೆವು. ವರದಿ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಇಂದು ವಿಶೇಷ ಸಂಪುಟ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ 10 ವರ್ಷಗಳ ಹಿಂದಿನ ವರದಿ ಜಾರಿಗೊಳಿಸುವುದರಿಂದ ಎಲ್ಲರಿಗೂ ನ್ಯಾಯ ದೊರಕಿಸಲು ಸಾಧ್ಯವಿಲ್ಲ. ಅಲ್ಲದೆ, ಕಾನೂನಿನಲ್ಲೂ ಇದಕ್ಕೆ ಅವಕಾಶ ಇಲ್ಲವೆಂದ ನಂತರ ಮರುಸಮೀಕ್ಷೆ ನಡೆಸಲು ಸಂಪುಟ ತೀರ್ಮಾನ ಮಾಡಿದೆ.
ತೆಲಂಗಾಣ ಸರ್ಕಾರ 70 ದಿನಗಳಲ್ಲಿ ಸಮೀಕ್ಷೆ ನಡೆಸಿ ವರದಿ ಅನುಷ್ಟಾನಗೊಳಿಸಿದೆ. ನಾವೂ ಸಹಾ 90 ದಿನಗಳಲ್ಲಿ ಸಮೀಕ್ಷೆ ನಡೆಸಿ, ಹಿಂದುಳಿದ ವರ್ಗದವರನ್ನು ಗುರುತಿಸಿ ನ್ಯಾಯ ಕಲ್ಪಿಸಲಾಗುವುದು.
ಯಾವ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಸಬಹುದು ಅಥವಾ ಕೈಬಿಡಬಹುದು ಎಂಬ ನಿರ್ಧಾರ ಕೈಗೊಳ್ಳುವ ಪರಮಾಧಿಕಾರ ಆಯೋಗದ್ದಾಗಿರುತ್ತದೆ ಎಂದು ವಿವರಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
10 years oldcaste censuskantaraju reportkarnatakaNewreportw90 days
0 FacebookTwitterPinterestEmail
KM Shivaraju

previous post
ಸಿದ್ದರಾಮಯ್ಯ ಜಾತಿ ಜನಗಣತಿ ಸಮೀಕ್ಷೆ ನಾಟಕ ನಿಲ್ಲಿಸಿ
next post
ವೀರಶೈವ, ಲಿಂಗಾಯತ, ಒಕ್ಕಲಿಗ ಉಪಜಾತಿ ಬೇಡ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ