Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ಸರ್ಕಾರದಲ್ಲಿ ಮಿತಿ ಮೀರಿದ ಭ್ರಷ್ಟಾಚಾರ

by admin June 20, 2025
written by admin June 20, 2025 0 comments 2 minutes read
0FacebookTwitterPinterestEmail
78

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತೀ ಹಂತದಲ್ಲಿಯೂ ಕಮೀಷನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ನೇರ ಆರೋಪ ಮಾಡಿದ್ದಾರೆ.

ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಹೇಳಿಕೆಗಳೇ ಸಾಕ್ಷಿಯಾಗಿದೆ.

ಕಮಿಷನ್ ಹಾವಳಿ

ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ಕುರಿತ ಆಡಿಯೋ ವೈರಲ್ ಆಗಿದೆ, ಇದು ಆಶ್ಚರ್ಯದ ವಿಷಯವೇ ಅಲ್ಲ, ಭ್ರಷ್ಟಾಚಾರ ಅಷ್ಟರ ಮಟ್ಟಿಗೆ ಮಿತಿ ಮೀರಿದೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ಮತ್ತು ಮುಖ್ಯಮಂತ್ರಿ ಸಲಹೆಗಾರರು ನೀಡಿರುವ ಹೇಳಿಕೆ ನಿಮಗೆ ಅಚ್ಚರಿನಾ ಎಂಬುದಾಗಿ ಸುದ್ದಿಗಾರರನ್ನು ಪ್ರಶ್ನಿಸಿದರಲ್ಲದೆ, ಇದು ನಿರಂತರವಾಗಿ ನಡೆಯುತ್ತಲೇ ಇದೆ, ಸೈಟ್ ಕೊಡಬೇಕಾದರೆ, ದುಡ್ಡು, ಗುತ್ತಿಗೆ ಹಣ ನೀಡಲು ಕಮಿಷನ್, ಸರ್ಕಾರದ ಎಲ್ಲ ಇಲಾಖೆಗಳದ್ದೂ ಇದೇ ಕರ್ಮ.

ಯಾವುದಕ್ಕೆ ಎಷ್ಟೆಷ್ಟು ರೇಟ್

ಕೃಷ್ಣಬೈರೇಗೌಡ ಏನು ಹೇಳಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂಬುದಾಗಿ ಅವರು ನೇರವಾಗಿ ಹೇಳಿದ್ದಾರೆ, ತಮ್ಮ ಇಲ್ಲಾಖೆಗಳಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ಆಯಾ ಇಲಾಖೆಯ ಮಂತ್ರಿಗಳಿಗೆ ಗೊತ್ತಿದೆ.

ಕೃಷ್ಣಬೈರೇಗೌಡ ಅವರ ಇಲಾಖೆಯಲ್ಲಿ ಯಾವ ರೀತಿ ಕೆಲಸ ನಡೆಯುತ್ತಿದೆ ಎಂಬುದನ್ನು ಅವರೇ ಹೇಳಿದ್ದಾರೆ, ಈ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕೆ.

ಸಿದ್ದರಾಮಯ್ಯ ಸರ್ಕಾರವನ್ನು ಕಿತ್ತೊಗೆಯಲೇಬೇಕು
ಬಿ.ಆರ್.ಪಾಟೀಲ್ ಹೇಳಿಕೆ

ಬಿ.ಆರ್.ಪಾಟೀಲ್ ಹೇಳಿರುವುದು ನಿಜ, ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ ಎಂದಿದ್ದಾರೆ, ಇದನ್ನು ನಾನಾಗಲಿ, ವಿರೋಧ ಪಕ್ಷವಾಗಲಿ ಹೇಳುತ್ತಿಲ್ಲ, ಸಾಕ್ಷಾತ್ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಮುಖ್ಯಮಂತ್ರಿಗಳ ಸಲಹೆಗಾರರೇ ಹೇಳಿದ್ದಾರೆ, ಈಗ ಚೆನ್ನಾಗಿ ಹಣ ಲೂಟಿ ಹೊಡೆದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇವರ ಉದ್ದೇಶ ಎಂದರು.

ಕೇತಗಾನಹಳ್ಳಿ ಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ಮಾಡುತ್ತಿದ್ದೇನೆ, ಕಾನೂನು ವ್ಯಾಪ್ತಿಯಲ್ಲಿ ಖರೀದಿಸಿರುವುದಾಗಿ ನಾನು ಮೊದಲೇ ಹೇಳಿದ್ದೇನೆ, ರಾಜ್ಯ ಸರ್ಕಾರ ರಾಜಕೀಯ ದುರುದ್ದೇಶದಿಂದ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು.

ಭೂಮಿ ವಿವಾದ ತನಿಖೆಗೆ ರಚಿಸಿರುವ ಎಸ್‌ಐಟಿ ಕಾರ್ಯಕ್ಕೆ ಹೈಕೋರ್ಟ್ ತಡೆ ನೀಡಿದ್ದು, ೪೦ ವರ್ಷಗಳ ಹಿಂದೆ ಖರೀದಿ ಮಾಡಿದ ಭೂಮಿ, ಯಾವುದೇ ಒತ್ತುವರಿ ಆಗಿಲ್ಲ, ನ್ಯಾಯಾಲಯದಲ್ಲಿ ತೀರ್ಮಾನ ಆಗುತ್ತದೆ.

ದ್ವೇಷ ರಾಜಕಾರಣ

ರಾಜ್ಯ ಸರ್ಕಾರ ಕೇಂದ್ರದ ಮೇಲೆ ರಾಜಕೀಯ ದ್ವೇಷ ಆರೋಪ ಮಾಡುತ್ತಿದೆ, ಕರ್ನಾಟಕದಲ್ಲಿ ಇವರು ಮಾಡುತ್ತಿರುವುದು ಏನು, ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಇಟ್ಟುಕೊಂಡು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ, ಇದಕ್ಕೆಲ್ಲ ಕಾಲವೇ ಉತ್ತರ ನೀಡುತ್ತದೆ ಎಂದರು.

ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾನೇ ಬಟ್ಟೆ ಹೊಲಿಸಿಕೊಡುತ್ತೇನೆ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಅಹಂಕಾರದ ಮಾತುಗಳು, ನನಗೆ ಅಂತಹ ದಾರಿದ್ರ್ಯ ಇನ್ನೂ ಬಂದಿಲ್ಲ.

ಮನುಷ್ಯತ್ವದ ದಾರಿದ್ರ್ಯ

ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವಷ್ಟು ದಾರಿದ್ರ್ಯ ಈ ನಾಡಿನ ಜನತೆ ನನಗೆ ಕೊಟ್ಟಿಲ್ಲ, ದಾರಿದ್ರ್ಯ ಇರುವುದು ಅವರಿಗೆ, ಮನುಷ್ಯತ್ವದ ದಾರಿದ್ರ್ಯ ಅವರಿಗಿದೆ.

ಜನರಿಂದ ಕೊಳ್ಳೆ ಹೊಡೆದ ಪಾಪದ ಹಣದಿಂದ ನಾನು ಬಟ್ಟೆ ಹೊಲಿಸಿಕೊಳ್ಳಬೇಕೇ, ನನಗೆ ಬಟ್ಟೆ ಬೇಕಾದರೆ ನಾಡಿನ ಜನರಿದ್ದಾರೆ, ನನ್ನನ್ನು ಇಲ್ಲಿಯವರೆಗೂ ಬೆಳೆಸಿರುವ ಅವರೇ ತಂದು ಕೊಡುತ್ತಾರೆ, ಪಾಪದ ಹಣ, ಲೂಟಿ ಹೊಡೆದಿರುವ ಹಣದಿಂದ ಬಟ್ಟೆ ತರಿಸಿಕೊಳ್ಳಬೇಕಾ ಎಂದು ವಾಗ್ದಾಳಿ ನಡೆಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central minister h d kumara swamycm siddaramaiahcorrupt govt.
0 FacebookTwitterPinterestEmail
admin

previous post
ಕುಮಾರಸ್ವಾಮಿ ಭೂಒತ್ತುವರಿ ತನಿಖೆಗೆ ಹೈಕೋರ್ಟ್ ತಡೆ
next post
ಸಿದ್ದರಾಮಯ್ಯ ಸರ್ಕಾರವನ್ನು ಕಿತ್ತೊಗೆಯಲೇಬೇಕು

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ