ಮೈಸೂರು: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೇ ಹೇಳಿದರೂ ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನು ಹೇಳಿಕೆಗಳನ್ನು ನೀಡಿದರೂ ನಾವು ಕೇಳುವುದಿಲ್ಲ, ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದರು.
ಶಾಸಕರ ಅಭಿಪ್ರಾಯ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡಿದ್ದು, ಪಕ್ಷದ ಶಾಸಕರ ಅಭಿಪ್ರಾಯ ಪಡೆಯುವ ತಮ್ಮ ಕೆಲಸ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂಬ ಬಿಜೆಪಿಯವರ ಹೇಳಿಕೆ ಶುದ್ಧ ಸುಳ್ಳು, ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು.
ಬಿಜೆಪಿ ನಾಯಕ ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಸೋತಿದ್ದು, ಇವರ ಭವಿಷ್ಯ ನಿಜವಾಗಲು ಸಾಧ್ಯವೇ ಎಂದರು.

