Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

5 ಹುಲಿಗಳ ಅಸಹಜ ಸಾವು: 3 ಅಧಿಕಾರಿಗಳ ಅಮಾನತು

by admin July 4, 2025
written by admin July 4, 2025 0 comments 1 minutes read
0FacebookTwitterPinterestEmail
95

ಬೆಂಗಳೂರು:ಮಲೆಮಹದೇಶ್ವರ ಬೆಟ್ಟ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳ ಅಮಾನತಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಶಿಫಾರಸು ಮಾಡಿದ್ದಾರೆ.

ಘಟನೆ ಸಂಬಂಧ ಉನ್ನತಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಪರಾಮರ್ಶೆ ನಂತರ ಸಚಿವರು, ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಮೇಲ್ನೋಟಕ್ಕೆ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದ ಹಿನ್ನೆಲೆಯಲ್ಲಿ ತಪ್ಪಿತಸ್ತ ಅಧಿಕಾರಿಗಳ ಅಮಾನತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಶಿಫಾರಸು ಮಾಡಿದರು.

ಕರ್ತವ್ಯ ಲೋಪ

ಹೊರಗುತ್ತಿಗೆ ಸಿಬ್ಬಂದಿ ವೇತನಕ್ಕೆ ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್‌ವರೆಗೆ ಪಾವತಿಸದೆ ಡಿಸಿಎಫ್ ಚಕ್ರಪಾಣಿ ಮೂಲಭೂತ ಕರ್ತವ್ಯ ಲೋಪ ಎಸಗಿದ್ದು, ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟಾಯಿತು, ಈ ಸಂಬಂಧ ಅಧಿಕಾರಿಯನ್ನು ಅಮಾನತು ಮಾಡಿ, ಇಲಾಖಾ ವಿಚಾರಣೆ ನಡೆಸುವಂತೆ ಶಿಫಾರಸು ಮಾಡಿದರು.

ಮಾರ್ಚ್‌ನಿಂದ 3 ತಿಂಗಳ ವೇತನ ಪಾವತಿಯಾಗಿಲ್ಲ ಎಂದು ಹೊರಗುತ್ತಿಗೆ ಸಿಬ್ಬಂದಿ ಜೂನ್ 23ರಂದು ಪ್ರತಿಭಟನೆ ನಡೆಸಿದ್ದರು, ಸಕಾಲದಲ್ಲಿ ವೇತನ ಸಿಗದೆ ಮುಂಚೂಣಿ ಸಿಬ್ಬಂದಿ ಕರ್ತವ್ಯ ವಿಮುಖರಾಗಲು ಕಾರಣವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

ಸುಮಾರು 11 ವರ್ಷದ ತಾಯಿ ಹುಲಿ ಮತ್ತು ಅದರ 10 ರಿಂದ 11 ತಿಂಗಳ 4 ಮರಿ ಹುಲಿಗಳ ಸಾವಿಗೆ, ಹುಲಿ ಕೊಂದ ಹಸುವಿನ ಮೃತದೇಹದೊಳಗೆ ಸಿಂಪಡಿಸಲಾದ ರಾಸಾಯನಿಕ ಸಂಯುಕ್ತವೇ ಕಾರಣ ಎಂಬುದು ಪ್ರಾಥಮಿಕ ತನಿಖಾ ವರದಿಯಿಂದ ತಿಳಿದುಬಂದಿದೆ.

ಜೆಡಿಎಸ್ ಬಲ ಇರುವ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ
ಹಸು ಸಾವಿಗೆ ಸೇಡು

ಹುಲಿಯಿಂದ ಹಸು ಸಾವಿಗೆ ಸೇಡು ತೀರಿಸಿಕೊಳ್ಳಲು ಈ ಕೃತ್ಯ ಎಸಗಲಾಗಿದೆ ಎಂಬುದಾಗಿ ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ.

ಗಸ್ತು ಸಿಬ್ಬಂದಿ ಕಾರ್ಯಕ್ಷಮತೆ ಮೇಲೆ ಸಂಬಂಧಿತ ವಲಯದ ಎ.ಸಿ.ಎಫ್, ಆರ್.ಎಫ್.ಓ. ಮತ್ತು ಡಿ.ಆರ್.ಎಫ್.ಓ. ನಿಗಾ ಇಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಅರಣ್ಯ ರಕ್ಷಣೆಯ ಮೂಲಭೂತ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುತ್ತಾರೆ ಎಂದಿರುವ ಈಶ್ವರ ಖಂಡ್ರೆ, ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿ, ಇಲಾಖಾ ವಿಚಾರಣೆ ನಡೆಸಲು ಸೂಚಿಸಿದರು.

10ರೊಳಗೆ ಅಂತಿಮ ವರದಿ

ಅಲ್ಲದೆ, ಈ ತಿಂಗಳ 10ರೊಳಗೆ ಅಂತಿಮ ವರದಿ ಸಲ್ಲಿಸುವಂತೆಯೂ ಸಮಿತಿಗೆ ಅರಣ್ಯ ಸಚಿವರು ಸೂಚಿಸಿದ್ದಾರೆ.

ಪ್ರಾಥಮಿಕ ತನಿಖಾ ವರದಿ ಸಲ್ಲಿಸಿರುವ ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಶ್ಕರ್ ನೇತೃತ್ವದ ಉನ್ನತಮಟ್ಟದ ಸಮಿತಿಯಲ್ಲಿ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಶ್ರೀನಿವಾಸುಲು, ಚಾಮರಾಜನಗರ ಸಿಸಿಎಫ್ ಹೀರಾಲಾಲ್, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಎ.ಐ.ಜಿ ಹರಿಣಿ ವೇಣುಗೋಪಾಲ್, ವನ್ಯಜೀವಿ ತಜ್ಞ ಡಾ.ಸಂಜಯ್ ಗುಬ್ಬಿ ಮತ್ತು ಮೈಸೂರು ಮೃಗಾಲಯದ ಸಹಾಯಕ ನಿರ್ದೇಶಕ ಡಾ.ಶಶಿಧರ್ ಸದಸ್ಯರಾಗಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
3 officers suspendedfive tigers deathminister eshwar b. khandre
0 FacebookTwitterPinterestEmail
admin

previous post
ಜೆಡಿಎಸ್ ಬಲ ಇರುವ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ
next post
ಅಮೆರಿಕದ ಸ್ಯಾನ್ಹೋಸೆಯಲ್ಲಿ ಒಕ್ಕಲಿಗರ ಸಮ್ಮೇಳನ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ