Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯರಾಷ್ಟ್ರಶಿಕ್ಷಣ

ಅಮೆರಿಕದ ಸ್ಯಾನ್ಹೋಸೆಯಲ್ಲಿ ಒಕ್ಕಲಿಗರ ಸಮ್ಮೇಳನ

by KM Shivaraju July 5, 2025
written by KM Shivaraju July 5, 2025 0 comments 2 minutes read
1FacebookTwitterPinterestEmail
256

ಸ್ಯಾನ್ಹೋಸೆ(ಅಮೆರಿಕ):ಅಮೆರಿಕದ ಸ್ಯಾನ್ಹೋಸೆ ನಗರದ ಮೆಕನರಿ ಕನ್ವೆನ್ಷನ್ ಸೆಂಟರ್‌ನಲ್ಲಿ ಮೂರು ದಿನಗಳ 18ನೇ ವಿಶ್ವ ಒಕ್ಕಲಿಗ ಮಹಾಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರೆಯಿತು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಮಹಾಸಮ್ಮೇಳನ ಉದ್ಘಾಟಿಸಿ, ಆಶೀರ್ವಚನ ನೀಡಿ, ಒಕ್ಕಲಿಗ ಸಮುದಾಯ ಜ್ಞಾನ ಮತ್ತು ಸ್ವಸಾಮರ್ಥ್ಯದಿಂದ ಸಮಾಜದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದು, ಅಮೆರಿಕ, ಯುರೋಪ್ ಸೇರಿದಂತೆ ಅನೇಕ ದೇಶಗಳಲ್ಲಿ ನೆಲೆಸಿದ್ದಾರೆ.

ಭಾರತಕ್ಕೆ ಮಹತ್ವದ ಕೊಡುಗೆ

ನೆಲೆಸಿದ ದೇಶ ಮತ್ತು ತಾಯ್ನಾಡು ಭಾರತಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ, ಮಾತೃಭೂಮಿಯಿಂದ ಸಾವಿರಾರು ಕಿಲೋ ಮೀಟರ್ ದೂರದಲ್ಲಿ ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ, ಗೌರವ ಉಳಿಸಿ ಬೆಳೆಸುತ್ತಿರುವುದು ಅತ್ಯಂತ ಸಂತಸದ ಸಂಗತಿಯಾಗಿದೆ ಎಂದರು.

ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ಸಂಸ್ಕೃತಿ, ಕಲೆ, ಪರಂಪರೆಯ ಪ್ರದರ್ಶನದ ಜೊತೆಗೆ ವ್ಯಾಪಾರ ಉದ್ಯಮ ಸ್ಥಾಪನೆ, ವಿಸ್ತರಣೆ, ಸ್ಟಾರ್ಟಪ್ ಐಡಿಯಾಗಳು, ನೆಟ್‌ವರ್ಕಿಂಗ್, ಅಮೆರಿಕದಲ್ಲಿನ ಹೊಸ ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಕಾಣಲು ಸಮ್ಮೇಳನ ಮಹತ್ವದ ಪಾತ್ರ ವಹಿಸುತ್ತದೆ.

ಅಮೆರಿಕದಲ್ಲಿ ನೆಲೆಸಿರುವವರು, ಕರ್ನಾಟಕ ಸೇರಿದಂತೆ ಜಗತ್ತಿನ ವಿವಿಧ ಭಾಗಗಳಿಂದ ಆಗಮಿಸಿರುವವರು ಸಮ್ಮೇಳನದ ಸಂಪೂರ್ಣ ಪ್ರಯೋಜನ ಪಡೆದು ಮತ್ತಷ್ಟು ಅಭಿವೃದ್ಧಿ ಕಾಣುವರೆಂಬ ಸಂಪೂರ್ಣ ವಿಶ್ವಾಸವಿದೆ ಎಂದರು.

ಉದ್ಯಮ ಅವಕಾಶ

ಶಾಸಕ ಸಿ.ಎಸ್.ಪುಟ್ಟರಾಜು ಮಾತನಾಡಿ, ಸಮ್ಮೇಳನದಲ್ಲಿ ಭಾಗವಹಿಸಿ ಅತ್ಯಂತ ಸಂತೋಷವಾಯಿತು, ಅಮೆರಿಕದಲ್ಲಿ ಒಕ್ಕಲಿಗ ಸಮುದಾಯ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿ ಸಂಸ್ಕೃತಿ, ಕಲೆ, ಪರಂಪರೆಯ ಪ್ರದರ್ಶನದ ಜೊತೆಗೆ ಉದ್ಯಮ ಅವಕಾಶಗಳು, ಬೆಳವಣಿಗೆ ಕುರಿತು ಚರ್ಚಿಸುವುದು ನಿಜಕ್ಕೂ ಶ್ಲಾಘನೀಯ, ಯಾವುದೇ ಸಮುದಾಯವಾಗಲಿ ಒಗ್ಗಟ್ಟಿನಿಂದ ಶ್ರಮಿಸಿದರೆ ಅಭಿವೃದ್ಧಿ ಕಾಣಬಹುದು ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದರು.

ವಿಶ್ವ ಒಕ್ಕಲಿಗ ಪರಿಷತ್ ಆಫ್ ಅಮೆರಿಕ ಅಧ್ಯಕ್ಷ ಧನಂಜಯ್ ಕೆಂಗಯ್ಯ ಮಾತನಾಡಿ, ಅಮೆರಿಕದಲ್ಲಿ ಒಕ್ಕಲಿಗರ ಸಮ್ಮೇಳನ ಆಯೋಜನೆಯೇ ಒಂದು ಹೆಮ್ಮೆಯ ಸಂಗತಿ, ಮೂಲತಃ ಕೃಷಿಕರಾಗಿರುವ ಒಕ್ಕಲಿಗ ಸಮುದಾಯ ಇಂದು ಜಗತ್ತಿನ ಮೂಲೆ ಮೂಲೆಯಲ್ಲಿದ್ದಾರೆ, ಅಮೆರಿಕದಲ್ಲಿ ದೊಡ್ಡ ಸಂಖ್ಯೆಯಲ್ಲಿರುವ ಒಕ್ಕಲಿಗರು ಒಂದೆಡೆ ಸೇರುವುದರಿಂದ ಸಮುದಾಯದ ಬೆಳವಣಿಗೆಗೆ ಇನ್ನಷ್ಟು ಅನುಕೂಲವಾಗುತ್ತದೆ, ಮುಂದಿನ ದಿನಗಳಲ್ಲಿ ಸಮ್ಮೇಳನವನ್ನು ಮತ್ತಷ್ಟು ವಿಸ್ತಾರಗೊಳಿಸುವ ಉದ್ದೇಶವಿದೆ ಎಂದರು.

ಮಹಾಸಮ್ಮೇಳನವು ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಮಾಜಮುಖಿ ಹಬ್ಬವಾಗಿ ರೂಪುಗೊಂಡಿದ್ದು ವಿಶ್ವದ ವಿವಿಧೆಡೆ ನೆಲೆಸಿರುವ ಒಕ್ಕಲಿಗ ಸಮುದಾಯದ ಬಂಧುಗಳನ್ನು ಒಂದೆಡೆ ಸೇರಿಸುವ ಅಪೂರ್ವ ಸನ್ನಿವೇಶವಾಗಿದೆ.

ವೈವಿಧ್ಯಮಯ ಸಂಸ್ಕೃತಿ

ಸಮುದಾಯದ ಸದಸ್ಯರು, ವೈವಿಧ್ಯಮಯ ಸಂಸ್ಕೃತಿ, ಪರಂಪರೆಯ ಉತ್ಸವವನ್ನು ಜಗತ್ತಿಗೆ ಪ್ರದರ್ಶಿಸಿದರು.

ಒಕ್ಕಲಿಗರ ಸಂಸ್ಕೃತಿಯ ಬಣ್ಣನೆ, ಭಕ್ತಿಯ ಮೆರವಣಿಗೆ, ಸುಗ್ಗಿ ಕುಣಿತ, ದೇವರ ಉತ್ಸವ, ಕೋಲಾಟ, ವೇಷ-ಭೂಷಣಗಳ ಪ್ರದರ್ಶನ ಸ್ಯಾನ್ಹೋಸೆ ರಸ್ತೆಗಳಲ್ಲಿ ಜಾತ್ರಾ ಉತ್ಸವದ ರಂಗು ಮೂಡಿಸಿದವು.

ಸಾಂಸ್ಕೃತಿಕ, ಕಲಾ ಪ್ರದರ್ಶನಗಳ ಜೊತೆಗೆ ಮೂರು ದಿನಗಳ ಕಾರ್ಯಕ್ರಮದಲ್ಲಿ ಸಮುದಾಯ ವಧು-ವರರ ಪರಿಚಯ ವೇದಿಕೆ, ಉದ್ಯಮಿಗಳಿಗೆ ‘ಬಿಸಿನೆಸ್ ಫೋರಂ’, ಮಕ್ಕಳಿಗಾಗಿ ವಿವಿಧ ಸ್ಪರ್ಧೆ, ಮಹಿಳಾ ಚಟುವಟಿಕೆ ಸೇರಿದಂತೆ ಹಲವು ವಿಷಯಾಧಾರಿತ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿಶ್ವಾದ್ಯಂತ ಒಕ್ಕಲಿಗ ಸಮುದಾಯದ ಬಲವರ್ಧನೆ ಹಾಗೂ ಪರಸ್ಪರ ಸಹಕಾರಕ್ಕೆ ನಾಂದಿಯಾಗಿದೆ.

ಸಾವಿರಾರು ಕುಟುಂಬ ಭಾಗಿ

ಅಮೆರಿಕದ ವಿವಿಧ ರಾಜ್ಯಗಳು ಹಾಗೂ ಇತರ ದೇಶಗಳಿಂದ ಸಾವಿರಾರು ಕುಟುಂಬಗಳು ಭಾಗವಹಿಸಿದ್ದ ಸಮ್ಮೇಳನ, ವಿದೇಶಿ ನೆಲದಲ್ಲಿ ಸಮುದಾಯದ ಹೆಗ್ಗಳಿಕೆ ಅನಾವರಣಗೊಳಿಸಿದ್ದು, “ಒಕ್ಕಲಿಗ ಸಮಾಜ ಜಗತ್ತಿನ ಮೂಲೆ ಮೂಲೆಗೂ ತಲುಪಿದೆ” ಎಂಬುದನ್ನು ಸಾರುತ್ತಿದೆ.

ಶಾಸಕರಾದ ಎಸ್.ಟಿ.ಸೋಮಶೇಖರ್, ಸತೀಶ್ ರೆಡ್ಡಿ, ಗುಬ್ಬಿ ಶ್ರೀನಿವಾಸ್ ಹಾಗೂ ಒಕ್ಕಲಿಗ ಸಮುದಾಯದ ಮುಖಂಡ ಸಚ್ಚಿದಾನಂದ ಸೇರಿದಂತೆ ಹಲವು ಗಣ್ಯರು ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aadichunchanagiri sree nirmalanandanatha swamijiamerica world okkaliga convensionc.s.puttarajudr.c.n.ashwathanarayanagubbi srinivaspresident dhanajaya kengaiahs.tsomashekharsatish reddy
1 FacebookTwitterPinterestEmail
KM Shivaraju

previous post
5 ಹುಲಿಗಳ ಅಸಹಜ ಸಾವು: 3 ಅಧಿಕಾರಿಗಳ ಅಮಾನತು
next post
ಶಿವಕುಮಾರ್ ಮುಖ್ಯಮಂತ್ರಿ ಗಾದಿ ಹಾದಿ ಸುಗಮ !

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ