Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಸರ್ಕಾರಿ ಆಸ್ಪತ್ರೆ ಜನೌಷಧ ಕೇಂದ್ರ ಸ್ಥಗಿತಕ್ಕೆ ತಡೆಯಾಜ್ಞೆ

by admin July 8, 2025
written by admin July 8, 2025 0 comments 1 minutes read
0FacebookTwitterPinterestEmail
107

ಬೆಂಗಳೂರು:ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.

ಜನೌಷಧ ಕೇಂದ್ರಗಳ ಸ್ಥಗಿತಕ್ಕೆ ಬಡ ಜನರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು, ಅಲ್ಲದೇ, ಈ ಕ್ರಮ ಪ್ರಶ್ನಿಸಿ 16 ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಮಧ್ಯಂತರ ಆದೇಶ

ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ನೇತೃತ್ವದ ನ್ಯಾಯಪೀಠ, ಮುಂದಿನ ವಿಚಾರಣೆವರೆಗೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಬಾರದು ಎಂದು ಮಧ್ಯಂತರ ಆದೇಶ ನೀಡಿತು.

ಜನೌಷಧ ಕೇಂದ್ರಗಳಲ್ಲಿ ಬಡಜನರಿಗೆ ಶೇ.50ರಿಂದ ಶೇ.90ರ ರಿಯಾಯಿತಿ ದರದಲ್ಲಿ ಔಷಧಗಳನ್ನು ನೀಡಲಾಗುತ್ತಿದೆ, ಔಷಧ ಮಳಿಗೆಗಳ ಸ್ಥಾಪನೆಗೂ ಹಣ ವೆಚ್ಚವಾಗಿದೆ, ರಾಜ್ಯ ಸರ್ಕಾರದ ಆದೇಶದಿಂದ ಬಡಜನರ ಮೂಲಭೂತ ಹಕ್ಕಿಗೆ ಧಕ್ಕೆ ಆಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು.

ವಾದ ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆವರೆಗೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಅರ್ಜಿದಾರರ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸದಂತೆ ಸೂಚಿಸಿತು.

ರಾಜ್ಯ ಸರ್ಕಾರದ ಆದೇಶ

ರಾಜ್ಯ ಆರೋಗ್ಯ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಮಾತ್ರ ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಮುಚ್ಚಲಾಗಿತ್ತು.

ವಿರೋಧ ಪಕ್ಷ ಬಿಜೆಪಿ ಸೇರಿದಂತೆ ಸಾರ್ವಜನಿಕರು ಸರ್ಕಾರದ ಈ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು, ಅಲ್ಲದೆ, ಕಡಿಮೆ ದರದಲ್ಲಿ ಬಡವರಿಗೆ ಔಷಧಗಳನ್ನು ನೀಡುವ ಜನೌಷಧ ಕೇಂದ್ರಗಳನ್ನು ಮುಚ್ಚುವುದು ಸರಿಯಲ್ಲ, ರಾಜ್ಯ ಸರ್ಕಾರ ಈ ಕೂಡಲೇ ತನ್ನ ಆದೇಶ ವಾಪಸ್ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದವು.

ರಾಜ್ಯ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರ್ಯಾಂಡೆಡ್ ಔಷಧಿಗಳನ್ನು ಹೊರಗಡೆಯಿಂದ ತರುವಂತೆ ರೋಗಿಗಳಿಗೆ ಸಲಹಾ ಚೀಟಿ ನೀಡುವುದನ್ನು ಸರ್ಕಾರ ನಿಷೇಧಿಸಿತ್ತು, ಇದರಿಂದ ರೋಗಿಗಳು ಹೊರಗಿನಿಂದ ಯಾವುದೇ ಔಷಧ ಖರೀದಿಸಲು ಶಿಫಾರಸ್ಸು ಮಾಡದಿರುವುದು ಸರ್ಕಾರದ ನೀತಿಯಾಗಿದೆ.

ಪ್ರಧಾನಮಂತ್ರಿ ಜನೌಷಧಿ ಕೇಂದ್ರ

ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ವಹಿವಾಟು ನಡೆಸುವುದು, ಜನೌಷಧ ಮಳಿಗೆ ತೆರೆಯುವುದು ಸರ್ಕಾರದ ನೀತಿಗೆ ವಿರುದ್ಧವಾಗಿದೆ.

ಈ ಕಾರಣದಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಅಲ್ಲದೇ ಜನೌಷಧ ಮಳಿಗೆ ಆರಂಭಿಸಲು ಅನುಮತಿ ಕೋರಿ ಸಲ್ಲಿಸಲಾಗಿರುವ ಸುಮಾರು 31 ಅರ್ಜಿಗಳು ಪರಿಶೀಲನೆ ಹಂತದಲ್ಲಿದ್ದು, ಇವುಗಳಿಗೆ ಅನುಮತಿ ನೀಡದಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿತ್ತು.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
generic medicinekarnataka high court staystate govt. hospital premises
0 FacebookTwitterPinterestEmail
admin

previous post
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ
next post
ಸುರ್ಜೇವಾಲ ವಿರುದ್ಧ ಸಿದ್ದರಾಮಯ್ಯ ಆಪ್ತರ ಸಿಟ್ಟು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ