Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಹೈಕೋರ್ಟ್ ಮತ್ತೊಮ್ಮೆ ಚಾಟಿ: ಬಸ್ ಮುಷ್ಕರ ವಾಪಸ್

by admin August 5, 2025
written by admin August 5, 2025 0 comments 2 minutes read
0FacebookTwitterPinterestEmail
215

ಬೆಂಗಳೂರು:ಹೈಕೋರ್ಟ್ ಇಂದು ಮತ್ತೊಮ್ಮೆ ಚಾಟಿ ಬೀಸಿದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ನಾಲ್ಕು ನಿಗಮಗಳ ನೌಕರರ ಮುಷ್ಕರ ಹಿಂಪಡೆಯಲಾಗಿದೆ.

ನ್ಯಾಯಾಲಯ ಚಾಟಿ ಬೀಸುತ್ತಿದ್ದಂತೆ ಸಾರಿಗೆ ಸಂಸ್ಥೆ ನೌಕರರ ಒಕ್ಕೂಟದ ಪದಾಧಿಕಾರಿಗಳು ಸಭೆ ಸೇರಿ ತಕ್ಷಣವೇ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿ ಎಂದು ಸೂಚಿಸಿದರು.

ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್, ವಕೀಲರ ಸಲಹೆ ಮೇರೆಗೆ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದ್ದೇವೆ.

ತಕ್ಷಣದಿಂದ ಸೇವೆಗೆ

ನೌಕರರು ತಕ್ಷಣದಿಂದಲೇ ಸೇವೆಗೆ ಹಾಜರಾಗಬೇಕು, ನಿಮ್ಮ ರಕ್ಷಣೆಗೆ ನಾವಿದ್ದೇವೆ ಎಂಬ ಭರವಸೆ ನೀಡಿದರು.

ಸಾರಿಗೆ ಸಂಸ್ಥೆಯಲ್ಲಿ ಕೈಗಾರಿಕಾ ವ್ಯವಸ್ಥೆ ಸ್ಥಾಪಿಸಲು ಹಾಗೂ ಶಾಂತಿ ಮೂಡಿಸಲು ಸರ್ಕಾರ ಕೂಡಲೇ ಸಭೆ ಕರೆದು ಚರ್ಚಿಸುವಂತೆ ಒತ್ತಾಯಿಸಿದರು.

ನ್ಯಾಯಾಲಯದ ಆದೇಶ ಗೌರವಿಸುವ ಮತ್ತು ಪ್ರಯಾಣಿಕರ ಹಿತದೃಷ್ಟಿಯಿಂದ ನಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದೇವೆ, ಇದು ತಾತ್ಕಾಲಿಕ.

ಬೇಡಿಕೆ ಈಡೇರಿಕೆಗೆ ಒತ್ತಾಯಿಸುತ್ತೇವೆ

ನಮ್ಮ ಬೇಡಿಕೆಗಳು ಏನೆಂಬುದನ್ನು ಈಗಾಗಲೇ ಮುಖ್ಯಮಂತ್ರಿಗಳು ಕರೆದಿದ್ದ ಸಭೆಯಲ್ಲಿ ಸ್ಪಷ್ಟಪಡಿಸಿದ್ದು, ಅವುಗಳ ಈಡೇರಿಕೆಗೆ ಒತ್ತಾಯಿಸುತ್ತೇವೆ ಎಂದರು.

ಮುಷ್ಕರ ಕರೆ ಹಿನ್ನೆಲೆಯಲ್ಲಿ ಬೆಳಗ್ಗೆ ರಾಜ್ಯದ ಹಲವೆಡೆ ಸಾರಿಗೆ ಸಂಸ್ಥೆ ಬಸ್‌ಗಳ ಸಂಚಾರವಿಲ್ಲದೆ, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪರದಾಡಬೇಕಾಯಿತು.

ಮುಷ್ಕರ ಒಂದು ದಿನ ಮುಂದೂಡುವಂತೆ ಹೈಕೋರ್ಟ್ ನಿನ್ನೆ ನೀಡಿದ್ದ ಆದೇಶ ಹಾಗೂ ಒಕ್ಕೂಟದಲ್ಲಿನ ಕೆಲವು ಕಾರ್ಮಿಕ ಸಂಘಟನೆಗಳು ಮುಷ್ಕರದಿಂದ ದೂರ ಉಳಿದಿದ್ದರಿಂದ ಶೇಕಡ ೩೦ರಿಂದ ೪೦ರಷ್ಟು ಬಸ್‌ಗಳು ಮಾತ್ರ ರಸ್ತೆಗಿಳಿದಿದ್ದವು.

ಪೋಲಿಸ್ ಬಿಗಿ ಬಂದೋಬಸ್ತ್

ಮುನ್ನೆಚ್ಚರಿಕೆಯಾಗಿ ಪೋಲಿಸ್ ಬಿಗಿ ಬಂದೋಬಸ್ತ್ ಮಾಡಿದ್ದರಿಂದ ಕಲ್ಲು ತೋರಾಟದ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಅನಾಹುತಗಳು ಜರುಗಲಿಲ್ಲ.

ಹೊರಗುತ್ತಿಗೆ ಚಾಲಕರನ್ನು ಹೊಂದಿದ ಎಲೆಕ್ಟ್ರಿಕ್ ಬಸ್‌ಗಳು ಎಂದಿನಂತೆ ಸಂಚರಿಸಿದವು, ಇದರೊಂದಿಗೆ ಸರ್ಕಾರ ಹಲವೆಡೆ ಖಾಸಗಿ ಬಸ್‌ಗಳ ಸಹಕಾರ ಪಡೆದುಕೊಂಡಿದ್ದರಿಂದ ಇಂತಹ ಪ್ರದೇಶಗಳಲ್ಲಿ ಮುಷ್ಕರದ ಬಿಸಿ ತಟ್ಟಲಿಲ್ಲ.

ಕೆಲವು ಬಸ್‌ಗಳು ರಸ್ತೆಗಳಿದ ಬಗ್ಗೆ ತನ್ನದೇ ದಾಟಿಯಲ್ಲಿ ಸಮರ್ಥಿಸಿಕೊಂಡಿರುವ ಒಕ್ಕೂಟ, ಇಂದು ಒಂದು ದಿನದ ಮಟ್ಟಿಗೆ ಬಸ್ ಸಂಚಾರಕ್ಕೆ ಅನುವು ಮಾಡುವಂತೆ ಆದೇಶಿಸಿತ್ತು.

ಪರೀಕ್ಷೆಗಳ ಮುಂದೂಡಿಕೆ

ಸಾರಿಗೆ ಬಸ್ ಮುಷ್ಕರದ ಹಿನ್ನೆಲೆಯಲ್ಲಿ ಕೆಲವು ಪರೀಕ್ಷೆಗಳನ್ನು ಮುಂದೂಡಬೇಕಾಯಿತು, ರಾಜ್ಯದ ಹಲವೆಡೆ ಸಾರಿಗೆ ಮುಷ್ಕರ ಇದೆಯೋ, ಇಲ್ಲವೋ ಎಂಬ ಬಗ್ಗೆ ಗೊಂದಲವೂ ಸೃಷ್ಟಿಯಾಗಿತ್ತು.

ಉತ್ತರ ಕರ್ನಾಟಕದ ಬಹಳಷ್ಟು ಕಡೆಗಳಲ್ಲಿ ಮುಷ್ಕರದ ಬಿಸಿ ತಟ್ಟಿತ್ತು, ಮನೆಯಿಂದ ಹೊರಟ ವಿದ್ಯಾರ್ಥಿಗಳು ಬಸ್‌ಗಳಿಲ್ಲದೆ ಹಿಂತಿರುಗಿದ ದೃಶ್ಯಗಳೂ ಕೆಲವಡೆ ಕಂಡುಬಂದಿತು.

ದೂರದ ಊರುಗಳಿಂದ ಬರುವ ಬಸ್‌ಗಳಿಗೆ ಮುಷ್ಕರ ನಿರತರು ತೊಂದರೆ ಮಾಡದಂತೆ ಪೋಲಿಸ್ ಭದ್ರತೆಯಲ್ಲಿ ನಿಲ್ದಾಣದವರೆಗೂ ಬೆಂಗಾವಲಿನಲ್ಲಿ ಕರೆತಂದು ಪ್ರಯಾಣಿಕರು ಮನೆಗಳಿಗೆ ತೆರಳುವ ವ್ಯವಸ್ಥೆ ಮಾಡಲಾಯಿತು ಎಂದು ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆದೇಶ ಪಾಲಿಸಬೇಕು

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ನೌಕರರು ಹೈಕೋರ್ಟ್ ಆದೇಶ ಪಾಲಿಸಬೇಕು, ತಕ್ಷಣ ಮುಷ್ಕರ ಹಿಂಪಡೆಯಬೇಕು ಎಂದರು.

ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ನೌಕರರು ಹಠ ಮಾಡುವುದರಿಂದ ಪ್ರಯೋಜನವಿಲ್ಲ, ಸಾರ್ವಜನಿಕರ ದೈನಂದಿನ ಬದುಕನ್ನು ಗಮನದಲ್ಲಿಟ್ಟುಕೊಂಡು ಸಹಕರಿಸಬೇಕು ಎಂದರು.

ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ

ಸಾರಿಗೆ ಸಂಸ್ಥೆ ನೌಕರರ ಬೇಡಿಕೆ ತಪ್ಪು ಎಂಬುದಾಗಿ ಸರ್ಕಾರ ಹೇಳುತ್ತಿಲ್ಲ, ಅವರು ಸಹಾ ಸರ್ಕಾರದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು, ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರು ಪರಿಹಾರಕ್ಕೆ ಪ್ರಯತ್ನಿಸುತ್ತಿದ್ದಾರೆ.

ಅಸಾಧ್ಯವಾದುದನ್ನು ಮಾಡಿ ಎಂಬ ಒತ್ತಡ ಹಾಕಬಾರದು, ಸಹಕಾರ ನೀಡಬೇಕು, ಕರ್ತವ್ಯಕ್ಕೆ ಹಾಜರಾಗಿರುವ ಚಾಲಕರು ಹಾಗೂ ನಿರ್ವಾಹಕರನ್ನು ಅಭಿನಂದಿಸುತ್ತೇನೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bmtchigh court orderksrtcstop bus strike
0 FacebookTwitterPinterestEmail
admin

previous post
ಮಧ್ಯರಾತ್ರಿಯಿಂದ ಸಾರಿಗೆ ಸಂಸ್ಥೆ ಬಸ್ ಸಂಚಾರ ಬಂದ್
next post
ರಾಹುಲ್ ಗಾಂಧಿ ರಾಜ್ಯ ಭೇಟಿ ಬೆನ್ನಲ್ಲೇ ಡಿಕೆಶಿ ಅಲರ್ಟ್ !

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ