Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಪ್ರಾಯೋಜಿತ ಮತಗಳ್ಳತನಕ್ಕೆ ರಾಹುಲ್ ಗಾಂಧಿ ಪುರಾವೆ

by KM Shivaraju August 7, 2025
written by KM Shivaraju August 7, 2025 0 comments 1 minutes read
0FacebookTwitterPinterestEmail
138

ಬೆಂಗಳೂರು:ಕೇಂದ್ರ ಚುನಾವಣಾ ಆಯೋಗ ಪ್ರಾಯೋಜಿತ ಮತಗಳ್ಳತನ ಅಕ್ರಮ ವಿರುದ್ಧ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ರಾಷ್ಟ್ರದ ಜನತೆಯ ಗಮನ ಸೆಳೆಯಲು ನಾಳೆ (ಶುಕ್ರವಾರ) ನಗರದಲ್ಲಿ ಬೃಹತ್ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪಕ್ಷದ ಕಾರ್ಯಕರ್ತರು, ಜನಪ್ರತಿನಿಧಿಗಳು ಮತ್ತು ವಿವಿಧ ಸಮುದಾಯಗಳ ಗಣ್ಯರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಸಮಾವೇಶದಲ್ಲಿ ಹಲವು ನಾಯಕರು

ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

ಬೆಂಗಳೂರು ಸಮಾವೇಶದ ನಂತರ ಇಡೀ ರಾಷ್ಟ್ರಾದ್ಯಂತ ಸಭೆ, ಸಮಾರಂಭ ನಡೆಸಿ ಚುನಾವಣಾ ಆಯೋಗದ ಮತಗಳ್ಳತನವನ್ನು ಜನರ ಮುಂದಿಡಲು ಹೊರಟಿದ್ದಾರೆ.

ಮತಗಳ್ಳತನಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಸಮಾರಂಭದಲ್ಲೇ ಬಹಿರಂಗಪಡಿಸಿ, ನಂತರ ಕೆಲವು ಮುಖಂಡರೊಂದಿಗೆ ಕಾಲ್ನಡಿಗೆಯಲ್ಲಿ ತೆರಳಿ ರಾಜ್ಯ ಮುಖ್ಯಚುನಾಚವಣಾ ಆಯುಕ್ತರಿಗೆ ಸಲ್ಲಿಸಲಿದ್ದಾರೆ.

ಬೃಹತ್ ಸಮಾವೇಶ

ಮತಗಳ್ಳತನಕ್ಕೆ ಸಂಬಂಧಿಸಿದಂತೆ ರಾಹುಲ್ ಇದುವರೆಗೂ ಹೇಳಿಕೆಗಳನ್ನು ನೀಡುತ್ತಿದ್ದರಾದರೂ ಬೃಹತ್ ಸಮಾವೇಶ ನಡೆಸಿ, ದಾಖಲೆಗಳನ್ನು ಜನರ ಮುಂದಿಡುವ ಕೆಲಸ ಮೊದಲ ಬಾರಿಯಾಗಿದೆ.

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬುದಕ್ಕೆ ಕೆಲವು ಪುರಾವೆಗಳನ್ನು ಸಂಗ್ರಹಿಸಿರುವ ರಾಹುಲ್, ಅವುಗಳನ್ನು ಅದೇ ಕ್ಷೇತ್ರದ ವ್ಯಾಪ್ತಿಗೆ ಬರುವ ಸ್ವಾತಂತ್ರ್ಯ ಉದ್ಯಾನವನದಲ್ಲಿ ಜನರ ಮುಂದಿಡುತ್ತಿದ್ದಾರೆ.

ಸಮಾವೇಶ ಯಶಸ್ವಿಗಾಗಿ ಪಕ್ಷ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ, ಜೊತೆಗೆ ಹೆಚ್ಚಿನ ಬಿಗಿ ಬಂದೋಬಸ್ತ್‌ಗಾಗಿ ಸರ್ಕಾರ ಹೆಚ್ಚುವರಿ ಪೋಲಿಸರನ್ನು ನಿಯೋಜಿಸಿದೆ.

ಕಾರ್ಯಕ್ರಮ ಯಶಸ್ವಿಗೆ ಶ್ರಮ

ಕಾರ್ಯಕ್ರಮ ಯಶಸ್ವಿಗೊಳಿಸುವ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್, ತಮ್ಮ ಹೈದರಾಬಾದ್ ಪ್ರವಾಸ ರದ್ದುಪಡಿಸಿ ಪಕ್ಷದ ಕಚೇರಿಯಲ್ಲಿ ಕುಳಿತು ಸಮಾವೇಶ ವ್ಯವಸ್ಥೆ ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸುವ ಕಾರ್ಯದಲ್ಲಿ ತೊಡಗಿದ್ದರು.

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಮತಗಳ್ಳತನ ವಿಚಾರವನ್ನು ನಮ್ಮ ವರಿಷ್ಠರು ಗಂಭೀರವಾಗಿ ಪರಿಗಣಿಸಿದ್ದು ಮತದಾರರ ಹಕ್ಕಿನ ರಕ್ಷಣೆಗಾಗಿ ಹೊರಟಿದ್ದಾರೆ.

ಆಯೋಗಕ್ಕೆ ಪುರಾವೆ ಸಲ್ಲಿಕೆ

ಆಗಸ್ಟ್ 8ರಂದು ಬೆಳಗ್ಗೆ 10-30ಕ್ಕೆ ಆಗಮಿಸುವ ರಾಹುಲ್, ನೇರವಾಗಿ ಸಮಾವೇಶ ಸ್ಥಳ ತಲುಪಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಪುರಾವೆಗಳ ಸಮೇತ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಿದ್ದಾರೆ ಎಂದರು.

ಈ ಮಧ್ಯೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನೆ ವೇಳೆ ಎಲ್ಲ ಪೊಲೀಸ್ ಭದ್ರತೆ ಕೈಗೊಂಡಿದ್ದು, ಕೇಂದ್ರದಿಂದ ಎಸ್‌ಪಿಜಿ ಬಂದಿದೆ, ಅವರೊಂದಿಗೆ ನಮ್ಮ ಪೊಲೀಸರು ಸಂಪರ್ಕದಲ್ಲಿದ್ದಾರೆ, ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರಿಗೂ ಭದ್ರತೆ ಒದಗಿಸಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluru rallycongres rallyrahul gandhi proof to state chief election commissionervote theft
0 FacebookTwitterPinterestEmail
KM Shivaraju

previous post
ರಾಹುಲ್ ಗಾಂಧಿ ರಾಜ್ಯ ಭೇಟಿ ಬೆನ್ನಲ್ಲೇ ಡಿಕೆಶಿ ಅಲರ್ಟ್ !
next post
ಕುತೂಹಲ ಮೂಡಿಸಿದ ಅಶೋಕ್-ಅಮಿತ್ ಷಾ ಭೇಟಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ