ಬೆಂಗಳೂರು:ದೇಶದಲ್ಲಿ ಮತಗಳ್ಳತನ, ಚುನಾವಣಾ ಅಕ್ರಮದ ಪಿತಾಮಹ ಕಾಂಗ್ರೆಸ್ ಮತ್ತು ನೆಹರೂ-ಗಾಂಧಿ ಕುಟುಂಬ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮತಗಳ್ಳತನದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡುತ್ತಾರೆಂದರೆ, ಭೂತದ ಬಾಯಲ್ಲಿ ಭಗವದ್ಗೀತೆ ನುಡಿದಂತೆ ಎಂದು ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯ ಸೋಲಿಸಿದ್ದು ಕಾಂಗ್ರೆಸ್
ಸಿದ್ದರಾಮಯ್ಯ 1991ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾಗ, ಅವರನ್ನು ಮೋಸದಿಂದ ಸೋಲಿಸಿದ್ದು ಕಾಂಗ್ರೆಸ್.
ಬಾದಾಮಿಯಲ್ಲಿ 2018ಲ್ಲಿ ಸಿದ್ದರಾಮಯ್ಯ ಮತ ಖರೀದಿ ಮೂಲಕ ಹೇಗೆ ಗೆದ್ದರು ಎಂಬುದನ್ನು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಬಯಲು ಮಾಡಿದ್ದಾರೆ.
ಪಂಚಾಯತ್‌ನಿಂದ ಸಂಸತ್‌ವರೆಗೆ ಕಾಂಗ್ರೆಸ್‌ನ ಏಕಚಕ್ರಾಧಿಪತ್ಯ ಇದ್ದ ಕಾಲದಲ್ಲಿ, ವಿದ್ಯುನ್ಮಾನ ಮತಯಂತ್ರ (ಇವಿಎಂ) ಇರಲಿಲ್ಲ, ಆದರೂ ಕಾಂಗ್ರೆಸ್ ಪಕ್ಷ 60 ವರ್ಷ ಹೇಗೆ ಚುನಾವಣೆಗಳನ್ನು ಗೆಲ್ಲುತ್ತಿತ್ತು ಎಂಬುದನ್ನ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿವರಿಸಿದ್ದಾರೆ.
ಮತಗಳ್ಳತನ ನಾಟಕ
“ಮತಗಳ್ಳತನ” ಎಂಬ ಕಪೋಲಕಲ್ಪಿತ ನಾಟಕದ ಬಗ್ಗೆ ಸತ್ಯ ನುಡಿದ ಕೆ.ಎನ್.ರಾಜಣ್ಣ ಅವರನ್ನು ಅಗೌರವವಾಗಿ ಸಂಪುಟದಿಂದ ವಜಾ ಮಾಡಿದ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ, ಪಕ್ಷದ ಮೋಸ ಬಯಲು ಮಾಡಿರುವ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡುವ ಧೈರ್ಯ ತೋರುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್‌ನ ಪ್ರತಾಪ, ಶಿಸ್ತು ಕ್ರಮ ಏನಿದ್ದರೂ ದಲಿತ ನಾಯಕರ ಮೇಲೆ ಪ್ರಯೋಗ ಮಾಡಲು ಮಾತ್ರ ಸೀಮಿತ ಎಂದಿದ್ದಾರೆ.

