Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸೈಬರ್ ಕ್ರೈಂಗೆ ಮಾಜಿ ಶಾಸಕನ 31 ಲಕ್ಷ ರೂ. ಸ್ವಾಹಾ !

by admin September 9, 2025
written by admin September 9, 2025 0 comments 2 minutes read
0FacebookTwitterPinterestEmail
124

ಬೆಂಗಳೂರು:ಬೀದರ್ ಜಿಲ್ಲೆ ಔರಾದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರೊಬ್ಬರು ಡಿಜಿಟಲ್ ಬಂಧನದ ಬ್ಲಾಕ್‌ಮೇಲ್‌ಗೆ ಹೆದರಿ ವಂಚಕರಿಗೆ 31 ಲಕ್ಷ ರೂ. ವರ್ಗಾಯಿಸಿ ಮೋಸ ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸಿಬಿಐ ಅಧಿಕಾರಿಗಳೆಂದು ಹಣ ಪಡೆದಿದ್ದು, ನಕಲಿ ವಿಡಿಯೊ ಕಾನ್ಫರೆನ್ಸಿಂಗ್ ನ್ಯಾಯಾಲಯ ಸೃಷ್ಟಿಸಿ, ವಾದ-ಪ್ರತಿವಿವಾದಗಳ ನಾಟಕವಾಡಿದ್ದಾರೆ.

ಮನಿ ಲಾಂಡರಿಂಗ್ ಆರೋಪ

ಕಳೆದ ಆಗಸ್ಟ್ 12ರ ಸಂಜೆ 6 ಗಂಟೆಗೆ ಮಾಜಿ ಶಾಸಕರಿಗೆ ಕರೆ ಮಾಡಿದ ವ್ಯಕ್ತಿ, ತಾನು ಸಿಬಿಐ ಅಧಿಕಾರಿಯಾಗಿದ್ದು, ನೀವು ಮನಿ ಲಾಂಡರಿಂಗ್‌ನಲ್ಲಿ ಭಾಗಿಯಾಗಿರುವ ಆರೋಪವಿದೆ, ಪುರಾವೆಯಾಗಿ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಮನೆ ಮೇಲೆ ದಾಳಿ ಮಾಡಿದಾಗ ನಿಮ್ಮ ಹೆಸರಿನ ಬ್ಯಾಂಕ್ ಖಾತೆಗಳು ಮತ್ತು ಡೆಬಿಟ್ ಕಾರ್ಡ್‌ಗಳು ಪತ್ತೆಯಾಗಿದ್ದು, ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿದ್ದಾನೆ.

ಮೊದಲಿಗೆ ಇದು ವಂಚನೆ ಎಂಬ ಅನುಮಾನ ಬಂದಿತಾದರೂ ತಾನು ತನಿಖಾಧಿಕಾರಿ ಎಂಬುದಾಗಿ ನಂಬಿಸುವಲ್ಲಿ ಯಶಸ್ವಿಯಾಗಿದ್ದಾನೆ.

ಸಾಕಷ್ಟು ಮಾತುಕತೆ ನಂತರ ವಂಚಕ ವ್ಯಕ್ತಿ ಮಾಜಿ ಶಾಸಕರ ಜೀವನ ಚರಿತ್ರೆ, ಆಸ್ತಿ ವಿವರ ಪಡೆದುಕೊಂಡು, ಕರೆಯನ್ನು ಇನ್ನೊಬ್ಬ ಹಿರಿಯ ಅಧಿಕಾರಿಗೆ ವರ್ಗಾಯಿಸುವುದಾಗಿ ಹೇಳಿದ್ದಾನೆ.

ವಿಚಾರಣೆಯಿಂದ ವಿನಾಯಿತಿ

ನಂತರ ನೀರಜ್ ಕುಮಾರ್ ಎಂಬ ವ್ಯಕ್ತಿ ಮಾತನಾಡಿ, ತಾನು ಡಿಸಿಪಿ ಎಂದು ಪರಿಚಯಿಸಿಕೊಂಡಾಗ ಮಾಜಿ ಶಾಸಕರು ಪ್ರಕರಣದ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಕೋರಿದ್ದಾರೆ.

ಆಗ ಆ ಅಧಿಕಾರಿ, ನಿಮ್ಮ ವಯಸ್ಸು ಮತ್ತು ಹಿನ್ನೆಲೆ ಪರಿಗಣಿಸಿ, ವರ್ಚುವಲ್ ತನಿಖೆ ನಡೆಸುವುದಾಗಿ ಮತ್ತು ಡಿಜಿಟಲ್ ಬಂಧನದಲ್ಲಿ ಇರಿಸುವುದಾಗಿ ತಿಳಿಸಿದ್ದಾನೆ.

ವಾಟ್ಸಾಪ್ ಕರೆ ಮೂಲಕ ಮಾಜಿ ಶಾಸಕರನ್ನು ಕಣ್ಗಾವಲಿನಲ್ಲಿ ಇರಿಸಿ, ಇದು ಬಹಳ ಸೂಕ್ಷ್ಮ ಪ್ರಕರಣವಾಗಿದ್ದು, ಯಾರಿಗೂ ತಿಳಿಸದಂತೆ ಎಚ್ಚರಿಸಿದ್ದಾರೆ.

ಪೊಲೀಸ್ ಠಾಣೆ ಸೆಟಪ್

ಅಲ್ಲದೆ, ವಿಡಿಯೊ ಕರೆಯಲ್ಲಿ ಪೊಲೀಸ್ ಠಾಣೆಯಂತೆ ಕಾಣುವ ಸೆಟಪ್‌ನಲ್ಲಿ ವಂಚಕರು ತಮ್ಮ ಐಡಿ ಕಾರ್ಡ್‌ಗಳು, ಬಂಧನ ವಾರೆಂಟ್ ಮತ್ತು ದಾಖಲಾದ ಪ್ರಕರಣದ ಪ್ರತಿ ತೋರಿಸಿದ್ದಾರೆ.

ಮರುದಿನ ಮಧ್ಯಾಹ್ನ 1 ಗಂಟೆ ಸುಮಾರಿಗೆ, ವಂಚಕರು ಮಾಜಿ ಶಾಸಕರನ್ನು ವಿಡಿಯೊ ಕರೆ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಪೊಲೀಸರ ವಾದ ಮತ್ತು ಆರೋಪಿತ ವ್ಯಕ್ತಿಯ ವಾದ-ಪ್ರತಿವಾದ ಆಲಿಸಲಾಗಿದೆ.

ನಂತರ ನ್ಯಾಯಾಧೀಶರು, ನೀವು ವಂಚನೆ ಮಾಡಿಲ್ಲ ಎಂಬುದಾಗಿ ಮುಚ್ಚಳಿಕೆ ಬರೆದುಕೊಡಿ ಎಂಬುದಾಗಿ ಆದೇಶಿಸಿದ್ದಲ್ಲದೆ, ಪೊಲೀಸ್ ಅಧಿಕಾರಿಗಳು ಸೂಚಿಸಿದ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್ ಮೂಲಕ 10.99 ಲಕ್ಷ ರೂ. ವರ್ಗಾಯಿಸಲು ತಿಳಿಸಿದಂತೆ ಆರೋಪಿತ ಮಾಜಿ ಶಾಸಕರು ಹಣ ವರ್ಗಾಯಿಸಿದ್ದಾರೆ.

ಜೈಲಿನಲ್ಲಿ ಬದುಕಲು ಆಗುತ್ತಿಲ್ಲ ವಿಷ ಕೊಡಿ: ದರ್ಶನ್
ಪ್ರತಿದಿನ ವಿಚಾರಣೆ

ಇಷ್ಟಕ್ಕೆ ಸುಮ್ಮನಾಗದ ವಂಚಕರು, ಆಗಸ್ಟ್ 14 ರಿಂದ, ನೀರಜ್ ಕುಮಾರ್ ಮತ್ತು ಸಂದೀಪ್ ಕುಮಾರ್ ಎಂಬ ಮತ್ತೊಬ್ಬ ಅಧಿಕಾರಿ ಸೇರಿಕೊಂಡು ಪ್ರತಿದಿನ ಮಾಜಿ ಶಾಸಕರನ್ನು ವಿಚಾರಣೆಗೆ ಒಳಪಡಿಸಿದ್ದಲ್ಲದೆ, ಅವರ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳು ಮತ್ತು ಇತರ ವೈಯಕ್ತಿಕ ವಿವರಗಳನ್ನೂ ಪಡೆದುಕೊಂಡಿದ್ದಾರೆ.

ನಾಲ್ಕು ದಿನಗಳ ನಂತರ, ಮತ್ತೆ ಕ್ಯಾಮೆರಾದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಆರೋಪಿಯ ಆಸ್ತಿ ಮತ್ತು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತು ಸಿಬಿಐನಿಂದ ತನಿಖೆಗೊಳಪಡಿಸಲು 20 ಲಕ್ಷ ರೂ. ಠೇವಣಿ ಇಡುವಂತೆ ಪರಿಶೀಲನೆ ನಂತರ ಖಾತೆಗೆ ಹಣ ಹಿಂತಿರುಗಿಸಲಾಗುವುದು ಎಂಬುದಾಗಿ ನ್ಯಾಯಾಧೀಶರು ಭರವಸೆ ನೀಡಿದ್ದಾರೆ.

ಆಗಸ್ಟ್ 18ರಂದು ಆರ್‌ಟಿಜಿಎಸ್ ಮೂಲಕ ಮತ್ತೊಂದು ಖಾತೆಗೆ 20 ಲಕ್ಷ ರೂ. ವರ್ಗಾಯಿಸಲಾಗಿದೆ, ಕೆಲವು ದಿನಗಳ ನಂತರ, ಇದು ವಂಚನೆ ಪ್ರಕರಣ ಎಂದು ಅರಿತ ಮಾಜಿ ಶಾಸಕ ತಮ್ಮ ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಗೆ ವಿಷಯ ತಿಳಿಸಿದ್ದಾರೆ.

ಪ್ರಕರಣ ದಾಖಲು

ಡಿಜಿಟಲ್ ವಂಚನೆಗೊಳಗಾದ ವ್ಯಕ್ತಿ ನೀಡಿದ ದೂರಿನನ್ವಯ ಸೈಬರ್ ಕ್ರೈಂ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಬಿಎನ್‌ಎಸ್ 318 ಮತ್ತು 319ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಾರ್ವಜನಿಕರು ಇಂತಹ ವಂಚನೆಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ಪೊಲೀಸರು ಎಚ್ಚರಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cyber crimeformer mla in traplost 31 lakh rupees
0 FacebookTwitterPinterestEmail
admin

previous post
ಗಣೇಶ ಗಲಭೆಗೆ ಸಿದ್ದರಾಮಯ್ಯ ಆಡಳಿತವೇ ಕಾರಣ
next post
‘ಜೈಲಿನಲ್ಲಿ ಬದುಕಲು ಆಗುತ್ತಿಲ್ಲ ನನಗೆ ವಿಷ ಕೊಡಿ’

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ