Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಿಎಂ ಕುರ್ಚಿ ಕದನ ವಿರಾಮಕ್ಕೆ ಸುರ್ಜೇವಾಲ ಯತ್ನ !

by KM Shivaraju October 3, 2025
written by KM Shivaraju October 3, 2025 0 comments 2 minutes read
0FacebookTwitterPinterestEmail
101

ಬೆಂಗಳೂರು:ವಸತಿ ಸಚಿವ ಜಮೀರ್ ಅಹಮದ್ ಖಾನ್ ಸಿಡಿಸಿದ ಬಾಂಬ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಆಂತರಿಕ ಕದನದ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗಿದೆ.

ಅಧಿಕಾರ ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಬಣಗಳ ನಡುವೆ ವಾದ-ವಿವಾದ ಬಹಿರಂಗವಾಗೇ ನಡೆದು, ಸರ್ಕಾರ ಮತ್ತು ಪಕ್ಷಕ್ಕಾಗುತ್ತಿರುವ ಮುಜುಗರ ತಪ್ಪಿಸಲು ಎಐಸಿಸಿ ಪ್ರಧಾನಕಾರ್ಯದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಳ್ಳಂ ಬೆಳಗ್ಗೆ ನಗರಕ್ಕೆ ಧಾವಿಸಿದರು.

ಶಿವಕುಮಾರ್ ಜೊತೆ ಚರ್ಚೆ

ಪುಲಿಕೇಶಿ ವಿಧಾನಸಭಾ ಕ್ಷೇತ್ರದಲ್ಲಿಯೂ ಮತಗಳ್ಳತನ ಪ್ರಕರಣದ ಪರಿಶೀಲನೆ ನೆಪದಲ್ಲಿ ಸುರ್ಜೇವಾಲ ನಗರಕ್ಕೆ ಆಗಮಿಸುತ್ತಿದ್ದಂತೆ ಶಿವಕುಮಾರ್ ಅವರನ್ನು ತಾವು ತಂಗಿದ್ದ ಹೋಟೆಲ್‌ಗೆ ಕರೆಸಿಕೊಂಡು ಮುಖಾಮುಖಿ ಚರ್ಚೆ ಮಾಡಿದ್ದಾರೆ.

ನಂತರ ಶಿವಕುಮಾರ್ ಜೊತೆಗೂಡಿ ಪುಲಿಕೇಶಿ ವಿಧಾನಸಭಾ ಕ್ಷೇತ್ರದ ಕೆಲವು ಭಾಗಗಳಿಗೆ ತೆರಳಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರ ಜೊತೆ ಮತಗಳ್ಳತನದ ಬಗ್ಗೆ ಚರ್ಚೆ ನಡೆಸಿದರು.

ಕ್ಷೇತ್ರದಿಂದ ಹಿಂತಿರುಗಿದ ನಂತರವೂ ಸುರ್ಜೇವಾಲ ಹಾಗೂ ಶಿವಕುಮಾರ್ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಶಾಸಕರಿಗೂ ಬುಲಾವ್

ಸಂಜೆವರೆಗೂ ಮುಖ್ಯಮಂತ್ರಿ ಭೇಟಿ ಮಾಡದ ಸುರ್ಜೇವಾಲ, ಸಂಪುಟದ ಹಿರಿಯ ಸಚಿವರು ಮತ್ತು ಶಾಸಕರನ್ನು ತಮ್ಮ ಬಳಿ ಕರೆಸಿಕೊಂಡು ಚರ್ಚಿಸಿದರು.

ದಸರಾ ಉತ್ಸವಕ್ಕೂ ಮುನ್ನ ಜಮೀರ್ ಅಹಮದ್ ಬಳ್ಳಾರಿಯಲ್ಲಿ ಹಠಾತ್ ಹೇಳಿಕೆ ನೀಡಿ, ಇನ್ನು 8-10 ದಿನದಲ್ಲಿ ಮುಖ್ಯಮಂತ್ರಿ ಅವರು ಸಂಪುಟ ಪುನರ್ ರಚನೆ ಮಾಡಲಿದ್ದು ಬಿ.ನಾಗೇಂದ್ರ ಅವರನ್ನು ಮಂತ್ರಿಮಂಡಲಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳುತ್ತಾರೆ ಎಂದಿದ್ದರು.

ಅಲ್ಲದೆ, ಸಿದ್ದರಾಮಯ್ಯ ಅವರೇ ಐದು ವರ್ಷಗಳ ಆಡಳಿತಾವಧಿ ಪೂರ್ಣಗೊಳಿಸುತ್ತಾರೆ ಎಂದು ಬಾಂಬ್ ಸಿಡಿಸಿದ್ದರು.

‘ಜನರ ಪಾಲಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸತ್ತಿದೆ’
ಶಿವಕುಮಾರ್ ಬಣ

ತದನಂತರ ಶಿವಕುಮಾರ್ ಅವರ ಹತ್ತಿರ ಸಂಬಂಧಿ ಹಾಗೂ ಶಾಸಕ ರಂಗನಾಥ್ ಸೇರಿದಂತೆ ಕೆಲವರು ಉಪಮುಖ್ಯಮಂತ್ರಿ ಪರ ಬಹಿರಂಗವಾಗಿಯೇ ಹೇಳಿಕೆ ನೀಡಿ, ಶಿವಕುಮಾರ್ ಪಕ್ಷಕ್ಕಾಗಿ ಹಗಲು-ರಾತ್ರಿ ದುಡಿದಿದ್ದು, ಇದೇ ಅವಧಿಯಲ್ಲೇ ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದರು.

ಶಿವಕುಮಾರ್ ಬೆಂಬಲಿಗರು ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡುತ್ತಿದ್ದಂತೆ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರು ಪ್ರವಾಸದಲ್ಲಿದ್ದ ಸಿದ್ದರಾಮಯ್ಯ, ಐದು ವರ್ಷ ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎನ್ನುವ ಮೂಲಕ ತಿರುಗೇಟು ನೀಡಿದರು.

ಅಲ್ಲದೆ, ಮುಂದಿನ ವರ್ಷದ ದಸರಾ ಮಹೋತ್ಸವವನ್ನೂ ನಾನೇ ನಡೆಸುತ್ತೇನೆ ಎಂಬ ಹೇಳಿಕೆ ನೀಡುತ್ತಿದ್ದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಕೆಲವರು ಮುಖ್ಯಮಂತ್ರಿ ಹೇಳಿಕೆ ಬೆಂಬಲಿಸಿದರು.

ನೋಟಿಸ್ ಜಾರಿ

ಇದರ ಬೆನ್ನಲ್ಲೇ ಶಿವಕುಮಾರ್ ತಮ್ಮ ಪರ ಧ್ವನಿ ಎತ್ತಿದವರಿಗೆ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದರಾದರೂ, ಮುಖ್ಯಮಂತ್ರಿ ಪರ ಹೇಳಿಕೆ ನೀಡಿದ ಸಚಿವರು ಮತ್ತು ಇತರರಿಗೆ ಯಾವುದೇ ವಿವರಣೆ ಕೇಳಿ ನೋಟಿಸ್ ಜಾರಿ ಮಾಡದಿರುವುದು ಕಾಂಗ್ರೆಸ್ ವಲಯದಲ್ಲಿ ಕುತೂಹಲ ಮೂಡಿಸಿದೆ.

ಪಕ್ಷದ ವರಿಷ್ಠರು ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಬಹಿರಂಗ ಚರ್ಚೆ ಮಾಡಬಾರದೆಂದು ಪದೇ ಪದೇ ಎಚ್ಚರಿಸಿದರೂ ಮುಖ್ಯಮಂತ್ರಿ ಆಪ್ತ ಬಳಗದ ಸಚಿವರುಗಳೇ ಬಾಂಬ್ ಸಿಡಿಸಿ ರಾಜಕೀಯ ಮಾಡುತ್ತಿದ್ದಾರೆಂದು ಶಿವಕುಮಾರ್ ಆಪ್ತರು ವರಿಷ್ಠರಿಗೂ ದೂರು ತಲುಪಿಸಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಉಸ್ತುವಾರಿ ಸುರ್ಜೇವಾಲ ನಗರಕ್ಕೆ ಧಾವಿಸಿ, ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸುತ್ತಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc high commandcm siddaramaiahdcm d.k.shivakumarfight for cm postranadeep singh surjevala
0 FacebookTwitterPinterestEmail
KM Shivaraju

previous post
‘ಜನರ ಪಾಲಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸತ್ತಿದೆ’
next post
ಚಿನ್ನಾಭರಣ, ಆಸ್ತಿ ವಿವರಕ್ಕೆ ಶಿವಕುಮಾರ್ ನಿರಾಕರಣೆ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ