Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಂಪುಟ ವಿಸ್ತರಣೆಯೂ ಇಲ್ಲ, ಪುನರ್ ರಚನೆಯೂ ಇಲ್ಲ

by admin October 11, 2025
written by admin October 11, 2025 0 comments 2 minutes read
0FacebookTwitterPinterestEmail
91

ಸುದ್ದಿ ತಿರುಚಿದರೆ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ

ಬೆಂಗಳೂರು:ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಬಂದಿದೆ ಎಂಬುದಾಗಿಯೂ ನಾನು ಹೇಳಿಲ್ಲ, ಸಂಪುಟ ವಿಸ್ತರಣೆಯೂ ಇಲ್ಲ, ಪುನರ್ ರಚನೆಯೂ ಇಲ್ಲ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮಗಳು ಸುದ್ದಿ ತಿರುಚಿ ಬರೆಯುವುದನ್ನು ನಿಲ್ಲಿಸಲಿ ಎಂದಿದ್ದಾರೆ.

ನಾವು ಹೇಳದ್ದನ್ನು ನಿಮ್ಮ ಬಾಯಲ್ಲಿ ಹಾಕಿಕೊಂಡು, ನಮ್ಮನ್ನು ಏಕೆ ಇಕ್ಕಟ್ಟಿಗೆ ಸಿಲುಕಿಸುತ್ತೀರಿ, ಇದೇ ರೀತಿ ಮುಂದುವರೆದರೆ ನಿಮ್ಮಗಳ ಮೇಲೆ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರೊಂದಿಗೆ ಸಂವಾದ

ನಗರದ ಲಾಲ್‌ಬಾಗ್ ಉದ್ಯಾನದಲ್ಲಿ ಬೆಳಗಿನ ನಡಿಗೆ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ’ನೀವು ಮುಖ್ಯಮಂತ್ರಿ ಆಗಬೇಕು, ಆ ಸಮಯ ಹತ್ತಿರ ಬರುತ್ತಿದೆಯೇ’ ಎಂದು ಕೇಳಿದರು, ಆದರೆ, ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಬರುತ್ತಿದೆ ಎಂಬುದಾಗಿ ನಾನೇ ಹೇಳಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಅಲ್ಲಗಳೆದರು.

ನಾನು ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಆತುರದಲ್ಲಿ ಇಲ್ಲ, ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು, ರಾಜಕಾರಣ ಮಾಡಲು ಅಲ್ಲ, ಜನರ ಸೇವೆ ಮಾಡಲು ಹಗಲು-ರಾತ್ರಿ ತಿರುಗುತ್ತಿದ್ದೇನೆ, ನೀವು ಇದೇ ರೀತಿ ಸುದ್ದಿ ತಿರುಚುವುದಾದರೆ, ನಾನು ನಿಮಗೆ ಸಹಕಾರ ನೀಡುವುದಿಲ್ಲ, ಕಾರ್ಯಕ್ರಮಗಳಿಗೆ ಕರೆಯುವುದೂ ಇಲ್ಲ, ಮಾಧ್ಯಮಗೋಷ್ಠಿ ಕರೆಯುವುದೂ ಇಲ್ಲ.

ಮಾಧ್ಯಮಗಳಿಗೆ ರಾಜಕಾರಣ ಬೇಡ,

ಮಾಧ್ಯಮಗಳು ರಾಜಕಾರಣ ಮಾಡುವುದು ಬೇಡ, ನಾನು ಆ ರೀತಿ ಹೇಳಿಲ್ಲ, ಅದರ ಅಗತ್ಯವೂ ನನಗೆ ಇಲ್ಲ, ನನಗೆ ನನ್ನ ಗುರಿ ಗೊತ್ತಿದೆ, ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೋ ಕೊಡಲಿ, ರಾಜ್ಯದ ಜನರ ಸೇವೆ ಹಾಗೂ ಬೆಂಗಳೂರಿನ ನಾಗರಿಕರಿಗೆ ಉತ್ತಮ ಆಡಳಿತ ನೀಡಲು ಶ್ರಮಿಸುತ್ತಿದ್ದೇನೆ, ಆದರೆ, ಒಳ್ಳೆಯ ಕೆಲಸ ಬಿಟ್ಟು ವಿವಾದ ಸೃಷ್ಟಿಸಲು ಕೆಲವು ಮಾಧ್ಯಮಗಳು ಪ್ರಯತ್ನಿಸುತ್ತಿವೆ.

ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಅಧಿಕಾರವೂ ಇಲ್ಲ, ಮಾಧ್ಯಮಗಳು ಗಾಳಿ ಸುದ್ದಿ ಪ್ರಕಟಿಸುತ್ತಿವೆ, ಈ ಬಗ್ಗೆ ಮುಖ್ಯಮಂತ್ರಿಗಳು ಅಥವಾ ನಾನು ಪ್ರಸ್ತಾವನೆ ಮಾಡಬೇಕು, ನಾವಿಬ್ಬರೂ ಪ್ರಸ್ತಾಪ ಮಾಡಲಿಲ್ಲ ಎಂದಾದರೆ ಅದು ಗಾಳಿ ಸುದ್ದಿ, ಆತುರದಲ್ಲಿರುವವರು, ಮಾಧ್ಯಮಗಳ ಮುಂದೆ ಮಾತನಾಡುತ್ತಾರೆ, ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

ಲಾಲ್‌ಬಾಗ್ ಅಭಿವೃದ್ಧಿ

ಸಾರ್ವಜನಿಕರು ಬಯಸಿದಂತೆ ಲಾಲ್‌ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಸಲಹೆ, ದೂರು ಆಲಿಸಿದ್ದೇನೆ, ಸಮಸ್ಯೆ ಬಗೆಹರಿಸಲಾಗುವುದು, ಹಿರಿಯರು ಹಾಗೂ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಮ್ ಮಾಡಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಅವಕಾಶ ಇರುವೆಡೆ ಲಾಲ್‌ಬಾಗ್ ಮಾದರಿ ಟ್ರೀ ಪಾರ್ಕ್ ಮಾಡಲು ಅರಣ್ಯ ಇಲಾಖೆ ಜೊತೆ ಚರ್ಚಿಸಿ ಆರ್ಥಿಕ ಬೆಂಬಲ ನೀಡಲಾಗುವುದು.

ವೈದ್ಯರು, ಆಂಬುಲೆನ್ಸ್ ಸೇವೆ

ಲಾಲ್‌ಬಾಗ್‌ನಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ವೈದ್ಯರು ಹಾಗೂ ಆಂಬುಲೆನ್ಸ್ ಸೇವೆ ನಿಯೋಜನೆಗೆ ತೀರ್ಮಾನಿಸಿದ್ದು, ಇನ್ನು ಮುಂದೆ ಇಲ್ಲಿನ ಶೌಚಾಲಯಗಳ ಸೌಲಭ್ಯವನ್ನು ಉಚಿತವಾಗಿ ಒದಗಿಸಲಾಗುವುದು.

ಲಾಲ್‌ಬಾಗ್ ಸಾರ್ವಜನಿಕರ ಆಸ್ತಿ, ಇದನ್ನು ಉಳಿಸಲು ಎಲ್ಲಾ ರೀತಿ ಕ್ರಮ ಕೈಗೊಳ್ಳುತ್ತೇವೆ, ಟನಲ್ ರಸ್ತೆಗೆ ಉದ್ಯಾನವನದ 6 ಎಕರೆ ಭೂಮಿ ವಶಪಡಿಸಿಕೊಳ್ಳುವ ಅಗತ್ಯವಿಲ್ಲ, ಅರ್ಧ ಎಕರೆಯಲ್ಲಿ ಅಶೋಕ ಪಿಲ್ಲರ್ ಕಡೆ ಪ್ರವೇಶ ಹಾಗೂ ನಿರ್ಗಮನಕ್ಕೆ ಅವಕಾಶ ಕಲ್ಪಿಸಲಾಗುವುದು, ಪಾರ್ಕಿಂಗ್ ಜಾಗದಲ್ಲಿ ಸುಮಾರು ಒಂದು ಎಕರೆ ಜಾಗ ಸ್ಟೋರೇಜ್‌ಗೆ ಬಳಸಿಕೊಳ್ಳುತ್ತೇವೆ, ನಂತರ ಅದನ್ನು ತೆರವುಗೊಳಿಸಿ ಲಾಲ್‌ಬಾಗ್‌ಗೆ ಕೊಡುತ್ತೇವೆ.

ಸಣ್ಣದಾಗಿರುವ ಗಿಡಗಳನ್ನು ತೆರವುಗೊಳಿಸಿ, ಮತ್ತೆ ಗಿಡ ನೆಡುತ್ತೇವೆ, ಉಳಿದಂತೆ ಲಾಲ್‌ಬಾಗ್ ಉದ್ಯಾನವನಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದರು.

ಬಿಜೆಪಿಗೆ ರಾಜಕೀಯವೇ ಮುಖ್ಯ

ಬಿಜೆಪಿಯವರಿಗೆ ಬೆಂಗಳೂರು ಅಭಿವೃದ್ಧಿ ಮುಖ್ಯವಲ್ಲ, ರಾಜಕೀಯವೇ ಮುಖ್ಯ, ಅವರು ಜಿಬಿಎ ಸಮಿತಿ ಸಭೆಯಲ್ಲಿ ತಮ್ಮ ಅಭಿಪ್ರಾಯ, ಸಲಹೆ, ದೂರು ಹೇಳಿಕೊಳ್ಳಬಹುದಾಗಿತ್ತು, ಅವರನ್ನು ಜನ ಗೆಲ್ಲಿಸಿ ಅಧಿಕಾರ ನೀಡಿದ್ದು, ಜನರ ಧ್ವನಿಯಾಗಬೇಕಿತ್ತು, ಆದರೆ, ಬದಲಿಗೆ ಜಿಬಿಎ ರದ್ದು ಮಾಡುವುದಾಗಿ ಹೇಳಿದ್ದಾರೆ, ಅದು ಅವರಿಗೆ ಬಿಟ್ಟ ವಿಚಾರ.

ಕಾಂಗ್ರೆಸ್ ಸರ್ಕಾರ ಕೈಗೊಂಡ ಯೋಜನೆ, ತೀರ್ಮಾನಗಳನ್ನು ಯಾವುದೇ ಸರ್ಕಾರ ಬದಲಿಸಲು ಸಾಧ್ಯವಾಗಿಲ್ಲ, ನಮ್ಮ ಸರ್ಕಾರ ಸಂವಿಧಾನದ ಚೌಕಟ್ಟಿನಲ್ಲಿ ಜನಪರ ತೀರ್ಮಾನ ಮಾಡುತ್ತದೆ, ಮುಂದೆಯೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ಅವರು ಈ ಆಲೋಚನೆ ಮಾಡುವುದು ಬೇಡ.

ಪಕ್ಷದ ಕಾರ್ಯಕರ್ತರ ಸಭೆ

ಪಾಲಿಕೆಗಳು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ ಬಗ್ಗೆ ಮುಖ್ಯಮಂತ್ರಿ ಮುಂದಿನ ದಿನಗಳಲ್ಲಿ ಚರ್ಚಿಸುತ್ತಾರೆ, ನಾನು ಸಹಾ ಜಿಬಿಎ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕರ್ತರ ಸಭೆ ಮಾಡಲಿದ್ದೇನೆ.

ಪಾಲಿಕೆಗಳಲ್ಲಿ ಸಿಬ್ಬಂದಿ ಹಾಗೂ ಕಟ್ಟಡ ಸಮಸ್ಯೆ ಪರಿಹರಿಸಲಾಗುವುದು, ಕಟ್ಟಡ ನಿರ್ಮಾಣಕ್ಕೆ ಜಾಗಗಳನ್ನು ಗುರುತಿಸಲಾಗಿದೆ, ೨ ವರ್ಷದಲ್ಲಿ ನಿರ್ಮಾಣ ಮಾಡುತ್ತೇವೆ, ಅಲ್ಲಿಯವರೆಗೂ ಬಾಡಿಗೆ ಕಟ್ಟಡದಲ್ಲಿ ವ್ಯವಸ್ಥೆ ಮಾಡುತ್ತೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dcm d k shivakumarlalbhaagno cabinet reshuffleno expansion
0 FacebookTwitterPinterestEmail
admin

previous post
ಸಿದ್ದರಾಮಯ್ಯ ಸಂಪುಟ ಪುನರ್ ರಚನೆ ಯತ್ನಕ್ಕೆ ಬ್ರೇಕ್
next post
ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಮನೆಗೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ