Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್ ಹೋರಾಟ

by admin November 8, 2025
written by admin November 8, 2025 0 comments 2 minutes read
0FacebookTwitterPinterestEmail
85

ಬೆಂಗಳೂರು:ನರೇಂದ್ರ ಮೋದಿ ದೇಶದ ಪ್ರಧಾನಿ ಆದ ಬಳಿಕ ಸಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳಾಗಿದ್ದು, ಮುಖ್ಯ ಚುನಾವಣಾ ಆಯೋಗ, ಸಿಬಿಐ ಕೇಂದ್ರ ಸರ್ಕಾರದ ಅಡಿಯಾಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಆರೋಪಿಸಿದ್ದಾರೆ.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವ್ಯವಸ್ಥಿತ ಷಡ್ಯಂತ್ರ ಮತ್ತು ಕಾರ್ಯತಂತ್ರದ ಮೂಲಕ ಮತಗಳ್ಳತನ ನಡೆದಿದೆ ಎಂದು ದಾಖಲೆಗಳ ಸಹಿತ ವಿವರಿಸಿದರು.

ಬಿಜೆಪಿಯವರು ಮತಗಳ್ಳತನದಲ್ಲೂ ನಿಸ್ಸೀಮರು

ಬಿಜೆಪಿಯವರು ಸುಳ್ಳಿನಲ್ಲಿ ಮಾತ್ರವಲ್ಲದೆ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಕಾಂಗ್ರೆಸ್ ಹೋರಾಟ ನಡೆಸಲಿದೆ.

ಮತಗಳ್ಳತನದ ಮೂಲಕ ಅನೇಕ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿದೆ, ಲೋಕಸಭೆಯಲ್ಲಿನ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ನಿರಂತರ ಅಧ್ಯಯನ, ತಪಾಸಣೆಯಿಂದ ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಸಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನವನ್ನು ಸ್ಪಷ್ಟ ದಾಖಲೆ ಸಮೇತ ಬಯಲಿಗೆಳೆದು ದೇಶದ ಜನರ ಮುಂದಿಟ್ಟಿದ್ದಾರೆ, ಇಷ್ಟಾದರೂ ಚುನಾವಣಾ ಆಯೋಗ ಪಕ್ಷ ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ, ದಾಖಲೆಗಳಿಗೂ ಉತ್ತರ ನೀಡುತ್ತಿಲ್ಲ.

ಎಲ್ಲಾ ಪಕ್ಷಗಳ ಜವಾಬ್ದಾರಿ

ನಮ್ಮ ಸಂವಿಧಾನ ಮುಕ್ತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆ ರೂಪಿಸಿದೆ, ಸಂವಿಧಾನದ ಮೌಲ್ಯ ಉಳಿಯಬೇಕಾದರೆ ಸ್ವತಂತ್ರ ಚುನಾವಣಾ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳುವುದು ಎಲ್ಲಾ ಪಕ್ಷಗಳ ಜವಾಬ್ದಾರಿ.

ಸಂವಿಧಾನ ಮತ್ತು ಪ್ತಜಾಪ್ರಭುತ್ವ ವ್ಯವಸ್ಥೆ ಕಾಪಾಡಲು ಕಾಂಗ್ರೆಸ್‌ನಿಂದ ಕೋಟಿಗೂ ಅಧಿಕ ಸಹಿ ಸಂಗ್ರಹ ಮಾಡಲಾಗಿದ್ದು, ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿ ಅವರಿಗೆ ಅರ್ಪಿಸಲಾಗುವುದು.

ಸಹಿ ಸಂಗ್ರಹ ಅಭಿಯಾನದಲ್ಲಿ ಕರ್ನಾಟಕದಿಂದ 1,12,40,000 ಸಹಿ ಸಂಗ್ರಹಿಸಲಾಗಿದೆ, ಎಲ್ಲಾ ವಿಧಾನಸಭಾ ಕ್ಷೇತ್ರ ಹಾಗೂ ಜಿಲ್ಲೆಗಳಿಂದ ಸಹಿ ಸಂಗ್ರಹಿಸಿದ್ದು, ಪಕ್ಷದ ಕಾರ್ಯಕರ್ತರು ಪ್ರಾಮಾಣಿಕ ಕೆಲಸ ಮಾಡಿದ್ದಾರೆ, ಬೂತ್‌ವಾರು ಸಹಿ ಸಂಗ್ರಹಿಸಲಾಗಿದೆ, ಅಲ್ಲದೆ, ಜನರಲ್ಲಿ ಮತಗಳ್ಳತನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಸಹಿ ಸಂಗ್ರಹ ವಿಮಾನದಲ್ಲಿ ದೆಹಲಿಗೆ

ಸಹಿ ಸಂಗ್ರಹ ಅರ್ಜಿಗಳನ್ನು ವಿಮಾನದಲ್ಲಿ ದೆಹಲಿಗೆ ತಲುಪಿಸಲಾಗುವುದು, ನವೆಂಬರ್ 25ಕ್ಕೆ ಅಂದರೆ, ಮೂರನೇ ವಾರದಲ್ಲಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲು ಚಿಂತನೆ ಇದೆ.

ಮುಂಬರುವ ಪಾಲಿಕೆ ಚುನಾವಣೆಗಳನ್ನು ಮತಪತ್ರಗಳ ಮೂಲಕ ನಡೆಸಲು ಚಿಂತನೆ ನಡೆದಿದೆ ಎಂದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶದಾದ್ಯಂತ ಪ್ರಜಾಪ್ರಭುತ್ವ, ಸಂವಿಧಾನ ಉಳಿಸಿ, ಮತದಾನದ ಹಕ್ಕು ಕಾಪಾಡಲು ಸಹಿ ಸಂಗ್ರಹ ಮೂಲಕ ಬೃಹತ್ ಆಂದೋಲನ ನಡೆಸಲಾಗುತ್ತಿದೆ.

151 ಮತದಾರರು ದೂರು

ಚುನಾವಣಾ ಪ್ರಕ್ರಿಯೆಯ ಸಂಪೂರ್ಣ ಜವಾಬ್ದಾರಿ ಮುಖ್ಯಚುನಾವಣಾ ಆಯೋಗದ್ದಾಗಿದೆ, ಉತ್ತರ ಪ್ರದೇಶ, ಬಿಹಾರ, ದೆಹಲಿ, ಜಾರ್ಖಂಡ್ ರಾಜ್ಯಗಳ ಜನರ ಮೊಬೈಲ್‌ನಿಂದ ಅರ್ಜಿ ಸಲ್ಲಿಕೆಯಾಗಿ ಮತದಾರ ಪಟ್ಟಿಯಿಂದ ಹೆಸರು ರದ್ದಾದ ಬಗ್ಗೆ 151 ಮತದಾರರು ದೂರು ನೀಡಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಮತದಾರರ ಪಟ್ಟಿ ಸೇರಿದಂತೆ ಅನೇಕ ದಾಖಲೆ ಸುಟ್ಟು ಹಾಕಿದ ಮಾಹಿತಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ, ಈ ಪ್ರಕರಣದಲ್ಲಿ ಒಂದು ಮತ ಡಿಲೀಟ್‌ಗೆ 80 ರೂ. ನೀಡಲಾಗಿದೆ ಎಂಬ ಅಂಶವೂ ಬೆಳಕಿಗೆ ಬಂದಿದೆ.

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ರಾಹುಲ್ ಗಾಂಧಿ ಬೆಳಕು ಚೆಲ್ಲಿದ್ದು, ಸುಮಾರು 25 ಲಕ್ಷ ಮತಗಳು ಅಕ್ರಮವಾಗಿವೆ ಎಂದಿದ್ದಾರೆ, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸುವುದು ಅವರ ಹೋರಾಟದ ಚಿಂತನೆಯಾಗಿದ್ದು, ಕರ್ನಾಟಕದಿಂದ ಹೋರಾಟ ಆರಂಭವಾಗಿದೆ.

ಬಿಹಾರದಲ್ಲಿ ಬಹುಮತದ ವಿಶ್ವಾಸ

ಬಿಹಾರ ಚುನಾವಣೆಯಲ್ಲಿ ಅಲ್ಲಿನ ಜನತೆ ಬದಲಾವಣೆ ಬಯಸಿ, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ರಕ್ಷಣೆಗೆ ನಮಗೆ ಸಂಪೂರ್ಣ ಬಹುಮತ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ರಾಜ್ಯದಲ್ಲಿ ಪಕ್ಷದ 3 ಸಾವಿರ ಕಾರ್ಯಕರ್ತರಿಗೆ ನಿಗಮ, ಮಂಡಳಿಗಳಲ್ಲಿ ಅಧಿಕಾರ ನೀಡಲಾಗಿದೆ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 15 ಜನರಿಗೆ ಗ್ಯಾರಂಟಿ ಸಮಿತಿ ಜವಾಬ್ದಾರಿ, ಪ್ರತಿ ಕ್ಷೇತ್ರಗಳಲ್ಲಿ 60 ಜನರ ನಾಮನಿರ್ದೇಶನ ಮಾಡಿದ್ದು, ರಾಜ್ಯ ಮಟ್ಟದಲ್ಲಿ ನಿಗಮ, ಮಂಡಳಿಗಳಲ್ಲಿನ 600 ಸ್ಥಾನಗಳಿಗೆ ಇನ್ನೊಂದು ವಾರದಲ್ಲಿ ನೇಮಕ ಮಾಡಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiah and dcm d k shivakumarcongres fight against vote theftjoint press conference
0 FacebookTwitterPinterestEmail
admin

previous post
ಸಿದ್ದರಾಮಯ್ಯ ನುಣುಚಿಕೊಳ್ಳಲು ಪ್ರಧಾನಮಂತ್ರಿಗೆ ಪತ್ರ
next post
ಜೈಲು ಬಂಧಿಗಳಿಗೆ ಐಶಾರಾಮಿ ಸೌಲಭ್ಯ ನಾಚಿಕೆಗೇಡು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ