Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ವೇಣುಗೋಪಾಲ್‌ಗೆ ನಾಯಕತ್ವ ವಿವಾದ ಇತ್ಯರ್ಥ ಹೊಣೆ

by KM Shivaraju November 15, 2025
written by KM Shivaraju November 15, 2025 0 comments 1 minutes read
0FacebookTwitterPinterestEmail
107

ನವದೆಹಲಿ:ಕರ್ನಾಟಕದಲ್ಲಿನ ಅಧಿಕಾರ ಹಸ್ತಾಂತರ ವಿವಾದ ನಿಭಾಯಿಸುವ ಅಧಿಕಾರವನ್ನು ಪಕ್ಷದ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಕಾಂಗ್ರೆಸ್ ವರಿಷ್ಠರು ವಹಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ಎರಡೂವರೆ ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಳಿದ ಅವಧಿಗೆ ತಮಗೆ ನಾಯಕತ್ವ ನೀಡಬೇಕೆಂದು ವರಿಷ್ಠರ ಮೇಲೆ ಒತ್ತಡ ಹೇರಿದ್ದಾರೆ.

ಪರ-ವಿರೋಧ ಹೇಳಿಕೆ

ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಬೆಂಬಲಿಗರು ಪರ ಹಾಗೂ ವಿರೋಧ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡುತ್ತಾ ಗೊಂದಲ ಸೃಷ್ಟಿ ಮಾಡಿದ್ದಾರೆ.

ಶಿವಕುಮಾರ್ ಪಕ್ಷದ ಅಧಿನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ದೆಹಲಿ ಮಟ್ಟದ ಪ್ರಮುಖ ನಾಯಕರನ್ನು ಪದೇ ಪದೇ ಭೇಟಿ ಮಾಡಿ ತಮ್ಮ ಹಕ್ಕೋತ್ತಾಯ ಮಂಡಿಸಿದ್ದಾರೆ.

ಕರ್ನಾಟಕದಲ್ಲಿ ಪಕ್ಷ ಅಧಿಕಾರ ಉಳಿಸಿಕೊಂಡು, ನಾಯಕತ್ವ ಗೊಂದಲವನ್ನು ಬಗೆಹರಿಸಲು ರಾಹುಲ್ ಮತ್ತು ಖರ್ಗೆ ಅವರು ವೇಣುಗೋಪಾಲ್ ಅವರಿಗೆ ಅಧಿಕಾರ ನೀಡಿದ್ದಾರೆ.

ಬಿಹಾರ ಚುನಾವಣೆ

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವೇಣುಗೋಪಾಲ್ ಇತ್ತ ಕಡೆ ಗಮನ ಹರಿಸಲು ಸಾಧ್ಯವಾಗಿರಲಿಲ್ಲ.

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವಿಚಾರವನ್ನು ವೇಣುಗೋಪಾಲ್ ಅವರಿಗೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಸಿದ್ದರಾಮಯ್ಯ ಬಣದ ಸಚಿವರಾದ ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಖಾನ್, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ ಸೇರಿದಂತೆ ಕೆಲವರು ಕಳೆದ ವಾರ ದೆಹಲಿಗೆ ತೆರಳಿ ರಾಜಕೀಯ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿದ್ದಾರೆ.

ಈ ಭೇಟಿ ವೇಳೆ ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿಗೆ ಅಧಿಕಾರದಲ್ಲಿ ಮುಂದುವರಿಸುವುದೂ ಸೇರಿದಂತೆ ನಾಯಕತ್ವ ಬದಲಾವಣೆ ನಂತರ ಆಗಬಹುದಾದ ರಾಜಕೀಯ ಸನ್ನಿವೇಶಗಳನ್ನು ಬಿಡಿಸಿಟ್ಟಿದ್ದಾರೆ.

ವರಿಷ್ಠರ ಪ್ರತ್ಯೇಕ ಭೇಟಿ

ಖಾಸಗಿ ಕಾರ್ಯಕ್ರಮ ನಿಮಿತ್ತ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು, ಮಲ್ಲಿಕಾರ್ಜುನ ಖರ್ಗೆ ಮತ್ತು ವೇಣುಗೋಪಾಲ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಅವರು ವಿಶೇಷ ವಿಮಾನದಲ್ಲಿ ತಡರಾತ್ರಿಯೇ ನಗರಕ್ಕೆ ಹಿಂತಿರುಗಲಿದ್ದು, ಶಿವಕುಮಾರ್ ದೆಹಲಿಯಲ್ಲಿಯೇ ಕೆಲವು ದಿನ ಉಳಿಯಲಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನವೆಂಬರ್ 20ಕ್ಕೆ ಎರಡೂವರೆ ವರ್ಷ ಪೂರೈಸಲಿದೆ.

ನವೆಂಬರ್‌ನಲ್ಲೇ ನಾಯಕತ್ವ

ನವೆಂಬರ್‌ನಲ್ಲೇ ತಾವು ನಾಯಕತ್ವ ವಹಿಸಿಕೊಳ್ಳಬೇಕೆಂದು ಪಣತೊಟ್ಟಂತಿರುವ ಶಿವಕುಮಾರ್, ಅಧಿನಾಯಕ ರಾಹುಲ್ ಮತ್ತು ಉಳಿದ ನಾಯಕರನ್ನು ಭೇಟಿ ಮಾಡಿ ತಮ್ಮ ಹಕ್ಕೋತ್ತಾಯ ಮಾಡಲಿದ್ದಾರೆ.

ದೆಹಲಿಗೆ ತೆರಳುವುದಕ್ಕೂ ಮುನ್ನ ತಮ್ಮ ಆಪ್ತರ ಬಳಿ ಖಾಸಗಿ ಚರ್ಚೆ ಮಾಡುತ್ತಾ ಮುಖ್ಯಮಂತ್ರಿ ಆಗುವುದು ಖಚಿತ ಎಂಬ ಸಂದೇಶ ನೀಡಿದ್ದಾರೆ.

ನಾಯಕತ್ವ ವಿಚಾರ

ವೇಣುಗೋಪಾಲ್ ಅವರಿಗೆ ರಾಹುಲ್ ಪೂರ್ಣ ಅಧಿಕಾರ ನೀಡಿದ್ದಾರೆ, ಆದರೆ, ಅವರಿನ್ನೂ ನಾಯಕತ್ವದ ಬಗ್ಗೆ ಯಾವುದೇ ವಿಚಾರ ಕೈಗೊಂಡಿಲ್ಲ.

ಬಿಹಾರ ವಿಧಾನಸಭಾ ಚುನಾವಣಾ ಪ್ರಕ್ರಿಯೆ ಮುಗಿದಿರುವುದರಿಂದ ಕರ್ನಾಟಕ ವಿಚಾರವನ್ನು ಕೈಗೆತ್ತಿಕೊಳ್ಳುವ ಅವಕಾಶ ಇದ್ದು, ದೆಹಲಿ ಪ್ರವಾಸ ಸಂದರ್ಭದಲ್ಲಿ ವೇಣುಗೋಪಾಲ್ ಸೇರಿದಂತೆ ಇತರ ವರಿಷ್ಠರನ್ನು ಭೇಟಿ ಮಾಡುತ್ತೇನೆ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahdcm d k shivakumardelhi high commandk c venugopalkarnataka congresleadership change
0 FacebookTwitterPinterestEmail
KM Shivaraju

previous post
ಸಿದ್ದರಾಮಯ್ಯ, ಶಿವಕುಮಾರ್ ವ್ಯರ್ಥ ದೆಹಲಿ ಪ್ರವಾಸ !
next post
ಅಧಿಕಾರ ಹಸ್ತಾಂತರ ವಿಷಯಕ್ಕೆ ಹೈಕಮಾಂಡ್ ಚಾಲನೆ ?

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ