Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಹೈಕಮಾಂಡ್ ಮಧ್ಯಪ್ರವೇಶಕ್ಕೆ ಸಿದ್ದರಾಮಯ್ಯ ಮನವಿ

by admin November 25, 2025
written by admin November 25, 2025 0 comments 1 minutes read
0FacebookTwitterPinterestEmail
80

ಅಧಿಕಾರ ಹಸ್ತಾಂತರ ಗೊಂದಲ ಕಾಂಗ್ರೆಸ್ ವರಿಷ್ಠರು ನಿವಾರಿಸಲಿ

ಬೆಂಗಳೂರು:ಅಧಿಕಾರ ಹಸ್ತಾಂತರ ಗೊಂದಲ ನಿವಾರಿಸಲು ಕಾಂಗ್ರೆಸ್ ವರಿಷ್ಠರು ಮಧ್ಯಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಮನವಿ ಮಾಡಿದ್ದಾರೆ.

ಮತ್ತೊಂದೆಡೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಎರಡೂವರೆ ವರ್ಷ ಆಡಳಿತದ ನಂತರ ಏನಾಗಬೇಕು ಎಂಬುದರ ಬಗ್ಗೆ ದೆಹಲಿಯಲ್ಲಿ ಐದಾರು ಮಂದಿ ನಡುವೆ ನಡೆದ ಮಾತುಕತೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಕೆಲವು ಶಾಸಕರ ಅಭಿಪ್ರಾಯ

ಸುದ್ದಿಗಾರರೊಂದಿಗೆ ಮುಂದುವರೆದು ಮಾತನಾಡಿದ ಮುಖ್ಯಮಂತ್ರಿ ಅವರು, ಪಕ್ಷದ ಕೆಲವು ಶಾಸಕರು ದೆಹಲಿಗೆ ತೆರಳಿ ವರಿಷ್ಠರ ಮುಂದೆ ತಮ್ಮ ಅಭಿಪ್ರಾಯಗಳನ್ನು ಹೇಳಿಕೊಳ್ಳುತ್ತಿದ್ದಾರೆ.

ಶಾಸಕರಿಗೆ ಅವರ ಅಭಿಪ್ರಾಯ ಮಂಡಿಸಲು ಸ್ವಾತಂತ್ರ್ಯ ಇದೆ, ವರಿಷ್ಠರು ಏನು ಹೇಳುತ್ತಾರೋ ನೋಡೋಣ ಎಂದರು.

ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ವರಿಷ್ಠರು ತ್ವರಿತವಾಗಿ ತೀರ್ಮಾನ ಕೈಗೊಳ್ಳುವಂತೆ ಮನವಿ ಮಾಡಿದರು.

ರಾಹುಲ್ ಗಾಂಧಿ ಭೇಟಿ ಇಲ್ಲ

ಇಂತಹ ಸನ್ನಿವೇಶದಲ್ಲಿ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ.

ಸಂಪುಟ ವಿಸ್ತರಣೆ ಇಲ್ಲವೇ ಪುನರ್ ರಚನೆಗೆ ವರಿಷ್ಠರು ಏನು ತೀರ್ಮಾನ ಕೈಗೊಳ್ಳುತ್ತಾರೋ ಅದರಂತೆ ನಡೆದುಕೊಳ್ಳುತ್ತೇನೆ, ಎಲ್ಲವೂ ದೆಹಲಿ ನಾಯಕರೇ ನಿರ್ಧರಿಸಬೇಕು ಎಂದರು.

ಕನಕಪುರದ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಮತದಾನ ಮಾಡುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಕೆಲವು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುತ್ತಿರುವ ವಿಚಾರ ನನಗೆ ತಿಳಿದಿಲ್ಲ.

ಶಾಸಕರನ್ನು ದೆಹಲಿಗೆ ಕಳುಹಿಸಿಲ್ಲ

ನನ್ನನ್ನು ಮುಖ್ಯಮಂತ್ರಿ ಮಾಡಬೇಕೆಂದು ಯಾರನ್ನೂ ಕೇಳುತ್ತಿಲ್ಲ, ಯಾವ ಶಾಸಕರನ್ನೂ ದೆಹಲಿಗೆ ಕಳುಹಿಸಿಲ್ಲ, ಅಷ್ಟೇ ಅಲ್ಲ, ಯಾರ ಜೊತೆಯೂ ಚರ್ಚೆಯೂ ಮಾಡಿಲ್ಲ.

ಪಕ್ಷದ ಶಾಸಕರಿಗೆ ಸ್ವಾತಂತ್ರ್ಯವಿದೆ ಅವರು ತಮ್ಮ ಅಭಿಪ್ರಾಯ ಮತ್ತು ನಿಲುವುಗಳನ್ನು ವರಿಷ್ಠರ ಮುಂದೆ ಹೇಳಿಕೊಳ್ಳಬಹುದು, ನಾಯಕನ ಆಯ್ಕೆ ಮತ್ತು ಅಧಿಕಾರ ಹಸ್ತಾಂತರ ವಿಷಯದ ಬಗ್ಗೆ ಪರೋಕ್ಷವಾಗಿ ಮಾತನಾಡಿದ ಶಿವಕುಮಾರ್, ಅದು ನಾಲ್ಕು ಗೋಡೆ ಮಧ್ಯೆ ನಮ್ಮ ನಾಯಕರು ಮಾತನಾಡಿದ ವಿಚಾರ ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

ನನ್ನ ಆತ್ಮಸಾಕ್ಷಿಯಂತೆ ನಡೆದುಕೊಳ್ಳುತ್ತೇನೆ, ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡುವುದಿಲ್ಲ, ಪಕ್ಷ, ಕಾರ್ಯಕರ್ತರಿದ್ದರೆ ನಾವು, ಯಾವುದೇ ಕಾರಣಕ್ಕೂ ಪಕ್ಷವನ್ನು ದುರ್ಬಲಗೊಳಿಸಲು ಅವಕಾಶ ನೀಡುವುದಿಲ್ಲ ಎನ್ನುವ ಮೂಲಕ ಅಧಿಕಾರ ಹಸ್ತಾಂತರ ಮಾತುಕತೆ ನಡೆದಿದೆ ಎಂಬುದನ್ನು ಪರೋಕ್ಷವಾಗಿ ತಿಳಿಸಿದರು.

ಏಳೂವರೆ ವರ್ಷ ಮುಖ್ಯಮಂತ್ರಿ

ಸಿದ್ದರಾಮಯ್ಯ ನಮ್ಮ ನಾಯಕರು, ಏಳೂವರೆ ವರ್ಷ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ, ಎರಡು ಬಾರಿ ಪ್ರತಿಪಕ್ಷ ನಾಯಕರೂ ಆಗಿದ್ದಾರೆ, ಮುಂದಿನ ಮುಂಗಡಪತ್ರವನ್ನೂ ಮಂಡಿಸುವುದಾಗಿ ಹೇಳಿದ್ದಾರೆ, ಬಹಳ ಸಂತೋಷ.

ಅವರು ದುಡಿದಿದ್ದಾರೆ, ಪಕ್ಷ ಕಟ್ಟಿದ್ದಾರೆ ಮುಂದಿನ 2028ರ ಚುನಾವಣೆ ನಮ್ಮ ಗುರಿ, ಅದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುವುದಾಗಿ ತಿಳಿಸಿದ್ದಲ್ಲದೆ, ಪಕ್ಷ ಸಿದ್ದರಾಮಯ್ಯ ಅವರಿಗೆ ಏನೆಲ್ಲಾ ಅಧಿಕಾರ ನೀಡಿದೆ ಎಂಬುದನ್ನು ಜನರ ಮುಂದೆ ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc president mallikarjuna khargecm siddaramaiahcongres high commanddcm d k shivakumarRahul Gandhi
0 FacebookTwitterPinterestEmail
admin

previous post
ಶಿವಕುಮಾರ್ ಪರ 63 ಶಾಸಕರು: ಉನ್ನತ ಮೂಲಗಳ ಮಾಹಿತಿ !
next post
ಶಿವಕುಮಾರ್ ಬಣದಲ್ಲಿ ಗರಿಗೆದರಿದ ಆಶಾಭಾವನೆ !

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ