Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ, ಶಿವಕುಮಾರ್‌ಗೆ ದೆಹಲಿ ಬುಲಾವ್

by KM Shivaraju November 27, 2025
written by KM Shivaraju November 27, 2025 0 comments 2 minutes read
0FacebookTwitterPinterestEmail
104

ಅಧಿಕಾರ ಹಸ್ತಾಂತರ ಗೊಂದಲ ನಿವಾರಣೆಗೆ ನ.29ಕ್ಕೆ ಸಭೆ ನಿಗದಿ

ಬೆಂಗಳೂರು:ಅಧಿಕಾರ ಹಸ್ತಾಂತರ ಗೊಂದಲ ನಿವಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕರ್ನಾಟಕದ ಐವರು ಮುಖಂಡರಿಗೆ ಕಾಂಗ್ರೆಸ್ ವರಿಷ್ಠರು ಶನಿವಾರ ದೆಹಲಿಗೆ ಬರುವಂತೆ ಆಹ್ವಾನಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ಹಿಂತಿರುಗುತ್ತಿದ್ದಂತೆ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಜೊತೆ ಸಮಾಲೋಚನೆ ನಡೆಸಿ, ನವೆಂಬರ್ 29ಕ್ಕೆ ಸಭೆ ನಿಗದಿ ಮಾಡಿದ್ದಾರೆ.

ಸಭೆ ನಡೆಸುವ ಮಾಹಿತಿ

ರಾಹುಲ್ ಜೊತೆ ಚರ್ಚಿಸಿದ ನಂತರ ಖರ್ಗೆ ಅವರು ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಸಭೆ ನಡೆಸುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಅಧ್ಯಕ್ಷ ಸಲಹೆಯಂತೆ ಸುರ್ಜೇವಾಲ ಅವರು, ಸಿದ್ದರಾಮಯ್ಯ, ಶಿವಕುಮಾರ್ ಸೇರಿದಂತೆ ಐವರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಇಂದಿರಾ ಭವನದಲ್ಲಿ ನಿಗದಿಯಾಗಿರುವ ಸಭೆಯಲ್ಲಿ ಭಾಗವಹಿಸುವಂತೆ ಸೂಚಿಸಿದ್ದಾರೆ.

ಸಿದ್ದರಾಮಯ್ಯ ಆಡಳಿತ ಎರಡೂವರೆ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಎದ್ದಿರುವ ಅಧಿಕಾರ ಹಸ್ತಾಂತರ ಪಕ್ಷ ಮತ್ತು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ನಾಯಕರುಗಳಿಗೆ ಆಹ್ವಾನ

ಇಡೀ ರಾಷ್ಟ್ರವ್ಯಾಪಿ, ದಿನವಿಡೀ ಸುದ್ದಿಯಾಗಿ ರಾಷ್ಟ್ರೀಯ ನಾಯಕರಿಗೂ ಮುಜುಗರ ತಂದಿದೆ, ಈ ಗೊಂದಲ ನಿವಾರಣೆಗೆ ವರಿಷ್ಠರು ಕೊನೆಗೂ ಸಮಯ ನಿಗದಿ ಮಾಡಿ ನಾಯಕರುಗಳಿಗೆ ಆಹ್ವಾನ ನೀಡಿದ್ದಾರೆ.

ವಿದೇಶ ಪ್ರವಾಸದಲ್ಲಿರುವ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ನವೆಂಬರ್ 28ಕ್ಕೆ ಭಾರತಕ್ಕೆ ಹಿಂತಿರುಗಲಿದ್ದಾರೆ, ಇದನ್ನು ಗಮನದಲ್ಲಿಟ್ಟುಕೊಂಡು ದಿನಾಂಕ ನಿಗದಿ ಪಡಿಸಲಾಗಿದೆ.

ರಾಜ್ಯ ಪ್ರವಾಸದಲ್ಲಿದ್ದ ಖರ್ಗೆ ಅವರು ದೆಹಲಿಗೆ ತೆರವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಅಧಿಕಾರ ಹಸ್ತಾಂತರ ಗೊಂದಲ ನಿವಾರಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಮೂರ‍್ನಾಲ್ಕು ಪ್ರಮುಖ ನಾಯಕರನ್ನು ದೆಹಲಿಗೆ ಕರೆಸಿ ಚರ್ಚೆ ಮಾಡುವುದಾಗಿ ತಿಳಿಸಿದ್ದರು.

‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ’
ಎರಡು ಬಣಗಳ ಜಟಾಪಟಿ

ಮುಖ್ಯಮಂತ್ರಿ ಗಾದಿಗಾಗಿ ಎರಡು ಬಣಗಳ ನಡುವೆ ಜಟಾಪಟಿ ಬೀದಿಗೆ ಬರುತ್ತಿದ್ದಂತೆ ಕಾಂಗ್ರೆಸ್ ವರಿಷ್ಠರಿಂದ ಇದೇ ಮೊದಲ ಬಾರಿಗೆ ಬಹಿರಂಗವಾಗಿ ಹೇಳಿಕೆ ಹೊರಬಿದ್ದಿದೆ.

ಕಾಂಗ್ರೆಸ್ ಹೈಕಮಾಂಡ್ ಏಕಾಂಗಿಯಲ್ಲ, ಅದೊಂದು ತಂಡ, ಸಮಸ್ಯೆಗಳು ಎದುರಾದಾಗ ತಂಡದ ಪ್ರಮುಖರು ಕುಳಿತು ಮಾತನಾಡಿ ನಂತರ ಸಂಬಂಧಪಟ್ಟವರನ್ನು ದೆಹಲಿಗೆ ಕರೆಸಿ ಮಾತನಾಡುವುದು ವಾಡಿಕೆ.

ಇದೀಗ ಕರ್ನಾಟಕದಲ್ಲಿ ಅಧಿಕಾರ ಹಂಚಿಕೆ ಸಮಸ್ಯೆ ಎದುರಾಗಿದೆ, ರಾಹುಲ್ ಗಾಂಧಿ ಸಮ್ಮುಖದಲ್ಲೇ ಉಭಯ ನಾಯಕರನ್ನು ಕರೆಸಿ ಚರ್ಚಿಸಿ ಹೈಕಮಾಂಡ್ ತನ್ನ ನಿರ್ಧಾರ ಪ್ರಕಟಿಸಲಿದೆ.

ರಾಹುಲ್ ಉಪಸ್ಥಿತಿಯಲ್ಲಿ ತೀರ್ಮಾನ

ಇದಕ್ಕೂ ಮುನ್ನ ನಾನು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಜೊತೆಯೂ ಚರ್ಚೆ ಮಾಡುತ್ತೇನೆ, ಆ ನಂತರ ರಾಹುಲ್ ಉಪಸ್ಥಿತಿಯಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ, ಇವೆಲ್ಲವೂ ಇನ್ನು ಎರಡು-ಮೂರು ದಿನಗಳಲ್ಲಿ ಮುಗಿಯಲಿದೆ ಎಂದಿದ್ದರು.

ಅಧಿಕಾರ ಹಸ್ತಾಂತರ ಕುರಿತಂತೆ ಕಳೆದ ಒಂದು ವಾರದಿಂದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕುರ್ಚಿಗಾಗಿ ಹಗ್ಗ ಜಗ್ಗಾಟ ನಡೆದಿದೆ.

ಶಿವಕುಮಾರ್ ಪರ ಕೆಲವು ಶಾಸಕರು ದೆಹಲಿ ಪ್ರವಾಸ ಕೈಗೊಂಡು ವರಿಷ್ಠರನ್ನು ಭೇಟಿ ಮಾಡಿ ಈ ಹಿಂದೆ ಕೊಟ್ಟ ಮಾತಿನಂತೆ ಅಧಿಕಾರ ಹಸ್ತಾಂತರ ಮಾಡಿಸಿ ಎಂದು ಮನವಿ ಮಾಡಿದ್ದಾರೆ.

ವರಿಷ್ಠರೊಂದಿಗೆ ಸಮಾಲೋಚನೆ

ಶಾಸಕರ ದಂಡು ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಸಮಾಲೋಚನೆ ಮಾಡುವ ಸಮಯದಲ್ಲೇ ಎಐಸಿಸಿ ಅಧ್ಯಕ್ಷ ಖರ್ಗೆ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಿ ಹಿಂತಿರುಗಿದ್ದಾರೆ.

ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಪ್ರತ್ಯೇಕವಾಗಿ ಖರ್ಗೆ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಖರ್ಗೆ ರಾಜ್ಯದಲ್ಲಿ ಕೆಲವು ನಾಯಕರ ಜೊತೆ ಸಮಾಲೋಚನೆ ಮಾಡುವ ಸಂದರ್ಭದಲ್ಲೇ ರಾಹುಲ್ ಗಾಂಧಿ ಕರ್ನಾಟಕ ಕಾಂಗ್ರೆಸ್‌ನ ನಿಷ್ಠಾವಂತ ಸಚಿವರು ಮತ್ತು ಮುಖಂಡರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡಿದ್ದಾರೆ.

ಈ ಎಲ್ಲಾ ಬೆಳವಣಿಗೆ ನಡೆಯುತ್ತಿದ್ದಂತೆ ಶಿವಕುಮಾರ್ ಬಹಿರಂಗವಾಗೇ, ಕೊಟ್ಟ ಭರವಸೆ ಈಡೇರಿಸಬೇಕೆಂಬ ಹೇಳಿಕೆ ಮೂಲಕ, ಸಿದ್ದರಾಮಯ್ಯ ಅಧಿಕಾರಿ ಬಿಡಿ ಎಂಬುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc president mallikarjuna khargecm siddaramaiahdcm d k shivakumark c venugopalRahul Gandhiranadeep singh surjevalSonia Gandhi
0 FacebookTwitterPinterestEmail
KM Shivaraju

previous post
‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ’
next post
ಅಧಿಕಾರ ಹಂಚಿಕೆ ವಿವಾದ ಇತ್ಯರ್ಥಕ್ಕೆ ಹೈಕಮಾಂಡ್ ಸಭೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ