Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸುಳ್ಳು ಕೇಸ್ ದಾಖಲಿಸಿ ಬಿಜೆಪಿ ದ್ವೇಷ ರಾಜಕಾರಣ

by admin December 17, 2025
written by admin December 17, 2025 0 comments 2 minutes read
0FacebookTwitterPinterestEmail
127

ಬೆಳಗಾವಿ:ಬಿಜೆಪಿ ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅಪಪ್ರಚಾರ ಮಾಡುತ್ತಿದ್ದು, ಈ ಕುತಂತ್ರಕ್ಕೆ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ ಆರೋಪಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ ತೀರ್ಮಾನ ಬೆಂಬಲಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿರುವ ಕಡೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿ, ಅಪರಾಧಿಗಳಾಗಿ ಬಿಂಬಿಸಿ, ನ್ಯಾಯಾಲಯಕ್ಕೆ ಎಡತಾಕುವಂತೆ ಮಾಡುತ್ತಿದ್ದಾರೆ ಎಂದರು.

ಎಫ್‌ಐಆರ್ ಆಧರಿಸಿಲ್ಲ

ಬಿಜೆಪಿ ನಾಯಕ ಸುಬ್ರಮಣ್ಯಂ ಸ್ವಾಮಿ 2012ರಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಖಾಸಗಿ ಕಿಮಿನಲ್ ದಾವೆ ಹೂಡಿದ್ದರು, ಇದನ್ನು ಆಧರಿಸಿ ಇ.ಡಿ. ಸಲ್ಲಿಸಿದ್ದ ಆರೋಪ ಪಟ್ಟಿ ಎಫ್‌ಐಆರ್ ಆಧರಿಸದ ಕಾರಣ ಮೊಕದ್ದಮೆಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ದೇಶದ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಜಾಗೃತಿ ಮೂಡಿಸಲು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು 1937ರಲ್ಲಿ ಜವಾಹರ್ ಲಾಲ್ ನೆಹರೂ ಪ್ರಾರಂಭಿಸಿದರು, ಇದು ಕಾಂಗ್ರೆಸ್ ಪಕ್ಷದ ಆಸ್ತಿ, ನಂತರ ಪತ್ರಿಕೆಯನ್ನು ಯಂಗ್ ಇಂಡಿಯಾ ಸಂಸ್ಥೆ ವಹಿಸಿಕೊಂಡಿತು, ಸಂಸ್ಥೆಗೆ ಸೇರಿದ್ದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್ ವಿರುದ್ಧ ಪ್ರಕರಣ ದಾಖಲಿಸಿ, ಇ.ಡಿ. ತನಿಖೆ ಮಾಡಿಸಲಾಯಿತು.

ತೀರ್ಪಿನ ಪರ ಪ್ರತಿಭಟನೆ ಕೈಗೊಂಡಿದ್ದು, ಸದನದ ಒಳಗೆ ಮತ್ತು ಹೊರಗೆ ಮುಂದುವರೆಸುತ್ತೇವೆ, ರಾಜ್ಯ ಹಾಗೂ ದೇಶದುದ್ದಕ್ಕೂ ಬಿಜೆಪಿಯ ಕುತಂತ್ರ ನೀತಿ ವಿರೋಧಿಸಿ ಹೋರಾಟ ಮಾಡುತ್ತೇವೆ, ಕಾಂಗ್ರೆಸ್ ಕೈಕಟ್ಟಿ ಕೂರುವ ಪಕ್ಷವಲ್ಲ ಎಂದರು.

ಜನರ ಮೇಲೆ ಮನಬಂದಂತೆ ತೆರಿಗೆ

ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ, ಹಣದುಬ್ಬರ ಹೆಚ್ಚಿದೆ, ನಿರುದ್ಯೋಗ ಪ್ರಮಾಣ ಏರಿಕೆಯಾಗಿದೆ, ಜನರ ಮೇಲೆ ತೆರಿಗೆಗಳನ್ನು ಮನಬಂದಂತೆ ಹೇರಿ, ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಲಾಗುತ್ತಿದೆ.

ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ವೇಳೆ ದೇಶದ ಸಾಲ ಸುಮಾರು 53.11 ಲಕ್ಷ ಕೋಟಿ ರೂ. ಇತ್ತು, ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ 11 ವರ್ಷಗಳಲ್ಲಿ ಸಾಲದ ಮೊತ್ತ 148 ಲಕ್ಷ ಕೋಟಿ ರೂ.ಗಳಾಗಿದೆ, ಬಿಜೆಪಿ ತನ್ನ ತಪ್ಪು ಮರೆಮಾಚಲು ಸುಳ್ಳು ಪ್ರಕರಣಗಳ ಮೊರೆಹೋಗುತ್ತಿದೆ ಎಂದರು.

ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಘೋಷಿಸಿದ್ದರು, ವಿದೇಶದಲ್ಲಿನ ಕಪ್ಪುಹಣ ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ. ನೀಡುವುದಾಗಿ ಹೇಳಿದ್ದರು, ಈ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ.

ಸುಳ್ಳು ಪ್ರಕರಣಗಳಿಗೆ ಹೆಚ್ಚು ಒತ್ತು

ದೈನಂದಿನ ಬಳಕೆಯಾದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಗಳು ಗಗನಕ್ಕೇರಿವೆ, ಇಂತಹ ತಪ್ಪುಗಳನ್ನು ಮರೆಮಾಚಲು ಸುಳ್ಳು ಪ್ರಕರಣಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ.

ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಹೆಸರನ್ನು ವಿಕಸಿತ್ ಭಾರತ್ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ಆರ್‌ಎಎಂ ಜಿ) ಯೋಜನೆಯೆಂದು ಬದಲಿಸಿದ್ದಾರೆ.

ರಾಜಭವನ ಹೆಸರನ್ನು ಲೋಕಭವನ ಎಂದು ಬದಲಾಯಿಸಿದ್ದಾರೆ, ಇದು ಸರ್ಕಾರದ ಆಸ್ತಿಯಾಗಿದ್ದು, ಹೆಸರು ಬದಲಾವಣೆ ಸರಿಯಲ್ಲ, ಹೊಸ ನಾಮಕರಣ ಕಾರ್ಯದಲ್ಲಿ ಕೇಂದ್ರ ಸರ್ಕಾರ ನಿರತವಾಗಿದೆಯೇ ಹೊರತು ಬಡವರಿಗೆ ಅನುಕೂಲ ಕಲ್ಪಿಸುವ ಕೆಲಸ ಮಾಡುತ್ತಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳಿಗೆ ವಿರೋಧ

ಮಹಾತ್ಮಾಗಾಂಧಿ ಹಾಗೂ ಅಂಬೇಡ್ಕರ್ ಚಿಂತನೆಗಳನ್ನು ಇಷ್ಟಪಡದ ಬಿಜೆಪಿಗೆ ಬಡವರನ್ನು ಕಂಡರೆ ಆಗುವುದಿಲ್ಲ, ಬಡವರ ಯಾವುದೇ ಯೋಜನೆಗಳಿಗೆ ಬಿಜೆಪಿ ಸಹಮತಿಯಿಲ್ಲ, ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರನ್ನು ಕಡೆಗಣಿಸುವುದಲ್ಲದೆ, ಕರ್ನಾಟಕದಲ್ಲಿ ಬಡವರಿಗಾಗಿ ತಂದ ಗ್ಯಾರಂಟಿ ಯೋಜನೆಗಳನ್ನೂ ವಿರೋಧಿಸಿದರು, ಆದರೆ, ಜನಪರ ಯೋಜನೆಗಳನ್ನು ದೇಶದೆಲ್ಲೆಡೆ ಬಿಜೆಪಿ ಅನುಸರಿಸುತ್ತಿದೆ.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್ ಪಕ್ಷ, ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ, ಆದರೆ, ದ್ವೇಷ ರಾಜಕಾರಣ ಮಾಡುತ್ತಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Belagavicm siddaramaiahcongres protestdcm d k shivakumarministersnational herald case
0 FacebookTwitterPinterestEmail
admin

previous post
5 ವರ್ಷ ಮುಖ್ಯಮಂತ್ರಿ ಆಗಿರಲು ಜನರ ಆಶೀರ್ವಾದ
next post
ಸಿದ್ದರಾಮಯ್ಯ ಇನ್ನೆಷ್ಟು ದಿನ ಮುಖ್ಯಮಂತ್ರಿ ?

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ