Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

‘ಚಿಂತಿಸಬೇಡಿ’ ಶಿವಕುಮಾರ್‌ಗೆ ರಾಹುಲ್ ಅಭಯ !

by KM Shivaraju January 14, 2026
written by KM Shivaraju January 14, 2026 0 comments 1 minutes read
0FacebookTwitterPinterestEmail
152

ಮೈಸೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಪುಟ ಪುನರ್ ರಚನೆಗೆ ಅವಕಾಶ ನೀಡದ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ’ಚಿಂತಿಸಬೇಡಿ’ ಎಂಬ ಅಭಯ ನೀಡಿದ್ದಾರೆ.

ರಾಹುಲ್ ಅವರಿಂದ ಈ ಸಂದೇಶ ದೊರೆಯುತ್ತಿದ್ದಂತೆ ಶಿವಕುಮಾರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ, ಒಂದಲ್ಲಾ ಎರಡು ಬಾರಿ ಟ್ವೀಟ್ ಮಾಡಿ, ’ಪ್ರಯತ್ನ ವಿಫಲವಾದರೂ, ಪ್ರಾರ್ಥನೆ ವಿಫಲ ಆಗುವುದಿಲ್ಲ’ ಎಂಬ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ನೆನಪಿಸಿದ ಅಧಿಕಾರ ಹಂಚಿಕೆ

ವಯನಾಡ್ ಪ್ರವಾಸ ಹಿನ್ನೆಲೆಯಲ್ಲಿ ಮಂಗಳವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ, ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಶಿವಕುಮಾರ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಅವರಿಗೆ ನೆನಪಿಸಿದರು.

ವಯನಾಡಿಗೆ ತೆರಳುವ ಮುನ್ನ ಹಾಗೂ ದೆಹಲಿಗೆ ಹಿಂತಿರುಗುವ ಸಂದರ್ಭದಲ್ಲೂ ಶಿವಕುಮಾರ್ ತಮಗೆ ಸಿಕ್ಕ ಅಲ್ಪ ಸಮಯದಲ್ಲೇ, ತಾವು ಏನು ಹೇಳಬೇಕೋ ಅದನ್ನು ರಾಹುಲ್ ಕಿವಿಗೆ ಹಾಕಿದರು.

ವಿಷಯ ಕುರಿತಂತೆ ಚರ್ಚಿಸಲು ಕಳೆದ ಎರಡು ತಿಂಗಳಿಂದ ಭೇಟಿಗಾಗಿ ಹಾತೊರೆಯುತ್ತಿದ್ದೆ, ಆದರೆ, ಸಾಧ್ಯವಾಗಿರಲಿಲ್ಲ.

ಒಪ್ಪಂದದಂತೆ ಬಿಟ್ಟುಕೊಡಬೇಕಿತ್ತು

ಕರ್ನಾಟಕದಲ್ಲಿ ಪಕ್ಷ ಅಧಿಕಾರ ವಹಿಸಿಕೊಳ್ಳುವ ಸಂದರ್ಭದಲ್ಲಿ ನಡೆದ ಒಪ್ಪಂದದಂತೆ ಸಿದ್ದರಾಮಯ್ಯ ನವೆಂಬರ್ 20ಕ್ಕೆ ಅಧಿಕಾರ ಬಿಟ್ಟುಕೊಡಬೇಕಿತ್ತು.

ದೇವರಾಜ ಅರಸು ಆಡಳಿತ ದಾಖಲೆ ಮುರಿದ ನಂತರವೂ ತಮಗೆ ಅವಕಾಶ ನೀಡದೆ, ಅಧಿಕಾರದಲ್ಲಿ ಮುಂದುವರೆಯುವ ಹಾಗೂ ಸಂಪುಟ ಪುನರ್ ರಚನೆ ಪ್ರಯತ್ನಕ್ಕೂ ಮುಂದಾಗಿದ್ದಾರೆ.

ಇದಕ್ಕೆ ಅವಕಾಶ ನೀಡದೆ ತಮಗೆ ನೀಡಿದ ವಾಗ್ದಾನದಂತೆ ನಡೆದುಕೊಳ್ಳಲು ತಿಳಿಹೇಳಬೇಕು ಎನ್ನುತ್ತಿದ್ದಂತೆ, ರಾಹುಲ್, ’ನೀವೇನೂ ಚಿಂತೆ ಮಾಡಬೇಡಿ, ನಿಮ್ಮನ್ನು ಶೀಘ್ರವೇ ದೆಹಲಿಗೆ ಕರೆಸಿಕೊಳ್ಳುತ್ತೇನೆ’ ಎಂಬ ಭರವಸೆ ನೀಡಿದ್ದಾರೆ.

ಮಾರ್ಮಿಕ ಸಂದೇಶ

ಈ ಭರವಸೆ ಹಿನ್ನೆಲೆಯಲ್ಲಿ ಶಿವಕುಮಾರ್ ಇಂದು ಬೆಳಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾರ್ಮಿಕ ಸಂದೇಶ ಹಾಕಿದ್ದಾರೆ.

ಶಿವಕುಮಾರ್ ಅವರಿಗೂ ಮುನ್ನ ಮುಖ್ಯಮಂತ್ರಿ ಜೊತೆಗಿನ ಸಮಾಲೋಚನೆ ವೇಳೆ, ಸಂಪುಟ ಪುನರ್ ರಚನೆಗೆ ಅವಕಾಶ ನೀಡಬೇಕೆಂಬ ಪ್ರಸ್ತಾವನೆಯನ್ನು ರಾಹುಲ್ ಮುಂದಿಟ್ಟಿದ್ದಲ್ಲದೆ, ಪಕ್ಷದ ಯಾವ ಶಾಸಕರಿಗೂ ಅಧಿಕಾರ ಹಸ್ತಾಂತರದಲ್ಲಿ ಆಸಕ್ತಿ ಇಲ್ಲ ಎಂದಿದ್ದಾರೆ.

ಸಿದ್ದರಾಮಯ್ಯ ಮಾತು ಆಲಿಸಿದ ರಾಹುಲ್, ಸಂಪುಟ ಪುನರ್ ರಚನೆ ಕುರಿತು ತಕ್ಷಣದ ನಿರ್ಧಾರ ಬೇಡ, ಸ್ವಲ್ಪ ಸಮಯ ಕಾಯಿರಿ, ದೆಹಲಿಯಲ್ಲಿ ಚರ್ಚೆ ಮಾಡೋಣ ಎಂದು ತಿಳಿಸಿದ್ದಾರೆ.

ಇಬ್ಬರೊಂದಿಗೂ ಪ್ರತ್ಯೇಕ ಚರ್ಚೆ

ಇಬ್ಬರೊಂದಿಗೂ ಪ್ರತ್ಯೇಕವಾಗಿ ಮಾತನಾಡಿದ ನಂತರ ರಾಹುಲ್ ಒಟ್ಟಿಗೆ ಕರೆದು, ದೆಹಲಿಗೆ ಆಹ್ವಾನಿಸುತ್ತೇನೆ, ಅಲ್ಲಿ ಮಾತನಾಡೋಣ ಎಂದು ವಿಷಯಕ್ಕೆ ತೆರೆ ಎಳೆದು ಪ್ರಯಾಣ ಬೆಳೆಸಿದರು.

ರಾಹುಲ್ ಭರವಸೆಯಿಂದ ಪುಳಕಿತರಾದಂತಿರುವ ಶಿವಕುಮಾರ್ ಇಂದು ನಡೆದ ವಿಶೇಷ ಸಂಪುಟ ಸಭೆಗೂ ಮುನ್ನ ಕೆಲವು ಸಚಿವರು ಮತ್ತು ಶಾಸಕರನ್ನು ಸಂಪರ್ಕಿಸಿ, ಮೈಸೂರು ವಿಮಾನ ನಿಲ್ದಾಣದಲ್ಲಿನ ನಡೆದ ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಸೂಕ್ಷ್ಮವಾಗಿ ಮಾಹಿತಿ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres high commanddcm d k shivakumarmysuru airportpower sharingRahul Gandhi
0 FacebookTwitterPinterestEmail
KM Shivaraju

previous post
ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಧಕ್ಕೆ ಇಲ್ಲ
next post
ಗಾದಿ ಹಸ್ತಾಂತರ: ರಾಹುಲ್‌ಗೆ ಶಿವಕುಮಾರ್ ದುಂಬಾಲು

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ