Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಜಂಟಿ ಅಧಿವೇಶನ ನಂತರ ಶಿವಕುಮಾರ್‌ಗೆ ಸಿಹಿ ಸುದ್ದಿ !

by KM Shivaraju January 17, 2026
written by KM Shivaraju January 17, 2026 0 comments 1 minutes read
0FacebookTwitterPinterestEmail
121

ನವದೆಹಲಿ:ವಿಧಾನಮಂಡಲದ ಜಂಟಿ ಅಧಿವೇಶನ ಮುಗಿಯುತ್ತಿದ್ದಂತೆ ಅಧಿಕಾರ ಹಸ್ತಾಂತರ ಗೊಂದಲ ಬಗೆಹರಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಸಭೆ ನಂತರ ಶಿವಕುಮಾರ್ ಅವರಿಗೆ ಈ ಭರವಸೆ ದೊರೆತಿದೆ.

ಅಸ್ಸಾಂ ಚುನಾವಣೆ ಸಭೆ

ಪಕ್ಷ ಅಸ್ಸಾಂ ಚುನಾವಣಾ ಉಸ್ತುವಾರಿ ವಹಿಸಿದ್ದರಿಂದ ಶುಕ್ರವಾರ ರಾತ್ರಿ ನಡೆದ ಸಭೆಯಲ್ಲಿ ಶಿವಕುಮಾರ್ ಪಾಲ್ಗೊಂಡಿದ್ದರು.

ಸಭೆ ನಂತರ ಅಧಿಕಾರ ಹಸ್ತಾಂತರ ವಿಷಯ ಪ್ರಸ್ತಾಪಿಸಿ, ಈ ಹಿಂದೆ ನೀಡಿದ ಭರವಸೆ ಈಡೇರಿಸಿ, ಇನ್ನು ಹೆಚ್ಚು ದಿನ ಸಹಿಸಿಕೊಂಡಿರಲು ಸಾಧ್ಯವಿಲ್ಲ ಎಂದು ಸ್ಪಷ್ಟ ನುಡಿಗಳಲ್ಲಿ ತಿಳಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಎದುರೇ ಈ ಮಾತುಗಳನ್ನು ನಿಮ್ಮ ಗಮನಕ್ಕೆ ತಂದಿದ್ದೆ, ನಂತರವೂ ವಿಧಾನಮಂಡಲ ಅಧಿವೇಶನ ಕರೆಯಲಾಗಿದೆ ಎಂದಿದ್ದಾರೆ.

ರಾಹುಲ್ ಆಶ್ವಾಸನೆ

ಶಿವಕುಮಾರ್ ಮಾತು ಆಲಿಸಿದ ನಂತರ, ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಮ್ಮುಖದಲ್ಲೇ, ಜಂಟಿ ಅಧಿವೇಶನ ಕಲಾಪ ಮುಗಿಯುತ್ತಿದ್ದಂತೆ ಅಧಿಕಾರ ಹಸ್ತಾಂತರ ಗೊಂದಲ ಪರಿಹರಿಸುತ್ತೇವೆ ಎಂಬ ಆಶ್ವಾಸನೆಯನ್ನು ರಾಹುಲ್ ನೀಡಿದ್ದಾರೆ.

ಫೆಬ್ರವರಿ ಮೊದಲ ವಾರದಲ್ಲಿ ಎಲ್ಲದಕ್ಕೂ ಸ್ಪಷ್ಟ ಚಿತ್ರಣ ದೊರೆಯಲಿದ್ದು, ನೀವು ಅಸ್ಸಾಂ ಚುನಾವಣೆ ಕಡೆ ಗಮನ ಹರಿಸಿ ಎಂಬುದಾಗಿ ಶಿವಕುಮಾರ್ ಅವರಿಗೆ ಸೂಚಿಸಿದರು ಎನ್ನಲಾಗಿದೆ.

ಈ ಬೆಳವಣಿಗೆ ನಂತರವೇ ಶಿವಕುಮಾರ್ ತಾವು, ಜನವರಿ 18ರಿಂದ ಕೈಗೊಳ್ಳಬೇಕಿದ್ದ ದಾವೋಸ್ ವಿದೇಶ ಪ್ರವಾಸ ರದ್ದುಗೊಳಿಸಿದ್ದಾರೆ.

ವಿದೇಶ ಪ್ರವಾಸ ರದ್ದು

ಅವರ ಹಿಂದಿನ ಕಾರ್ಯಕ್ರಮದಂತೆ ಜನವರಿ 22 ಇಲ್ಲವೇ 27ಕ್ಕೆ ಹಿಂತಿರುಗಬೇಕಿತ್ತು, ರಾಹುಲ್ ಅವರಿಂದ ಸ್ಪಷ್ಟ ಭರವಸೆ ದೊರೆಯುತ್ತಿದ್ದಂತೆ ಪ್ರವಾಸ ರದ್ದು ಮಾಡಿದ್ದಾರೆ.

ಪ್ರವಾಸ ರದ್ದು ಮಾಡಿರುವ ಬಗ್ಗೆ ಸ್ವತಃ ಪತ್ರಿಕಾ ಹೇಳಿಕೆ ನೀಡಿರುವ ಶಿವಕುಮಾರ್, ಜನವರಿ 18ರಂದು ನಿಗದಿಯಾಗಿದ್ದ ’ವರ್ಲ್ಡ್ ಎಕನಾಮಿಕ್ ಫೋರಂ’ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುತ್ತಿಲ್ಲ.

ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ತಮ್ಮ ದಾವೋಸ್ ಪ್ರವಾಸ ರದ್ದು ಮಾಡಿರುವುದಾಗಿ ತಿಳಿಸಿದ್ದಾರೆ.

ಕೆ.ಜೆ.ಜಾರ್ಜ್-ರಾಹುಲ್ ಭೇಟಿ

ಶಿವಕುಮಾರ್ ದೆಹಲಿಗೆ ತೆರಳಿದ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆ.ಜೆ.ಜಾರ್ಜ್ ಅವರನ್ನು ರಾಷ್ಟ್ರ ರಾಜಧಾನಿಗೆ ಕಳುಹಿಸಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿಸಿದ್ದರು.

ಐದು ಮಂದಿಯನ್ನು ಕೈಬಿಟ್ಟು, ಏಳು ಮಂದಿಯನ್ನು ಮಂತ್ರಿ ಮಾಡಲು ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡಿ ಎಂದು ವಕಾಲತ್ತು ವಹಿಸಿದ್ದರು.

ಜನವರಿ 25 ಅಥವಾ 27ಕ್ಕೆ ಸಂಪುಟ ಪುನರ್ ರಚನೆಗೆ ಅವಕಾಶ ನೀಡಿ ನಂತರ ನೀವು ರಾಜಕೀಯವಾಗಿ ಯಾವುದೇ ನಿರ್ಧಾರ ಕೈಗೊಳ್ಳಿ, ಮುಖ್ಯಮಂತ್ರಿ ತಮ್ಮ ಸಂಪುಟ ಪುನರ್ ರಚಿಸುವುದಾಗಿ ಸಾರ್ವಜನಿಕವಾಗಿ ಭರವಸೆ ನೀಡಿದ್ದಾರೆ.

ಮಂತ್ರಿಮಂಡಲ ಪುನರ್ ರಚನೆಗೆ ಮನವಿ

ಇದಕ್ಕೆ ವಿರುದ್ಧವಾಗಿ ನೀವು ರಾಜಕೀಯ ನಿರ್ಧಾರ ಕೈಗೊಂಡರೆ, ಸಿದ್ದರಾಮಯ್ಯ ಅವರಿಗೆ ಅಪಮಾನ ಮಾಡಿದಂತಾಗುತ್ತದೆ, ಇದನ್ನು ಗಮನದಲ್ಲಿ ಇಟ್ಟುಕೊಂಡು ಮಂತ್ರಿಮಂಡಲ ಪುನರ್ ರಚನೆಗೆ ಅವಕಾಶ ನೀಡಿ ಎಂದು ಮನವಿ ಮಾಡಿಕೊಂಡಿದ್ದರು.

ಜಾರ್ಜ್ ವಕಾಲತ್ತು ಶಿವಕುಮಾರ್ ಕಿವಿಗೂ ಬಿದ್ದಿತು, ಈ ವಿಷಯವನ್ನೂ ಖರ್ಗೆ ಮನೆಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾಪಿಸಿ, ಇಂತಹ ಬೆಳವಣಿಗೆಗಳಿಗೆ ಅವಕಾಶ ನೀಡಬಾರದು ಎಂದು ಅಸಹನೆಯಿಂದಲೇ ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aiccdcm d k shivakumark c venugopalmallikarjuna khargenew delhiRahul Gandhi
0 FacebookTwitterPinterestEmail
KM Shivaraju

previous post
ಗಾದಿ ಹಸ್ತಾಂತರ: ರಾಹುಲ್‌ಗೆ ಶಿವಕುಮಾರ್ ದುಂಬಾಲು
next post
ಶಕ್ತಿ ಪ್ರದರ್ಶನಕ್ಕೆ ಮುಂದಾದ ಶಿವಕುಮಾರ್ ಬಣ !

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ