Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಅಧಿಕಾರ ಹಂಚಿಕೆ: ಪ್ರಿಯಾಂಕಾ ಗಾಂಧಿ ಮಧ್ಯಪ್ರವೇಶ !

by KM Shivaraju January 27, 2026
written by KM Shivaraju January 27, 2026 0 comments 1 minutes read
0FacebookTwitterPinterestEmail
77

ಜನವರಿ 31ಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ದೆಹಲಿಗೆ

ಬೆಂಗಳೂರು:ಕರ್ನಾಟಕ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಂಚಿಕೆ ಗೊಂದಲ ನಿವಾರಣೆಗೆ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಮಧ್ಯಪ್ರವೇಶ ಮಾಡಿದ್ದಾರೆ.

ಪ್ರಿಯಾಂಕಾ ಪ್ರವೇಶದ ನಂತರ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಜನವರಿ 31ರಂದು ದೆಹಲಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳಿಗೆ ಆಹ್ವಾನ ನೀಡಲಿದ್ದಾರೆ.

ವಿಬಿ-ಜಿ-ರಾಮ್-ಜಿ ವಿರೋಧಿಸಿ ನಿರ್ಣಯ ಕೈಗೊಳ್ಳಲು ಜನವರಿ 30ರವರೆಗೆ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದೆ.

ಅಧಿವೇಶನ ಮುಗಿಸಿ ಬರಲು ಸೂಚನೆ

ಅಧಿವೇಶನ ಮುಗಿಸಿಕೊಂಡು ದೆಹಲಿಗೆ ಬರುವಂತೆ ಉಭಯ ನಾಯಕರಿಗೂ ಈಗಾಗಲೇ ಎಐಸಿಸಿ ಸಂದೇಶ ರವಾನಿಸಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಅಧಿಕಾರ ಹಂಚಿಕೆ ಗೊಂದಲಕ್ಕೆ ಸಂಬಂಧಿಸಿದಂತೆ ಫೆಬ್ರವರಿ 2ರ ವೇಳೆಗೆ ಎಐಸಿಸಿ ಮಹತ್ವದ ನಿರ್ಣಯ ಕೈಗೊಳ್ಳಲಿದ್ದು, ಮುಂದೆ ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಉಭಯ ನಾಯಕರಿಗೂ ಸ್ಪಷ್ಟ ಸೂಚನೆ ನೀಡಲಿದೆ.

ದಾವೋಸ್ ಪ್ರವಾಸ ವೇಳೆ ಜಾಗತಿಕ ಉದ್ಯಮಿಗಳಿಗೆ, ಕರ್ನಾಟಕದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಮುಖ್ಯಮಂತ್ರಿಯಾಗಿ ಎಲ್ಲ ಸೌಲಭ್ಯ ನೀಡುವುದಾಗಿ ಶಿವಕುಮಾರ್ ಆಶ್ವಾಸನೆ ನೀಡಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.

ಶಿವಕುಮಾರ್ ಭರವಸೆ

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಕೆಲವು ರಾಜ್ಯಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲೇ ಜಾಗತಿಕ ಉದ್ಯಮಿಗಳಿಗೆ ಶಿವಕುಮಾರ್ ಈ ಭರವಸೆ ನೀಡಿದರು ಎನ್ನಲಾಗಿದೆ.

ಕಳೆದ ನವೆಂಬರ್ 20ಕ್ಕೆ ಸಿದ್ದರಾಮಯ್ಯ ನೇತೃತ್ವದ ಆಡಳಿತ ಎರಡೂವರೆ ವರ್ಷಗಳ ಆಡಳಿತ ಪೂರೈಸಿದ್ದು, ನಂತರ ಅಧಿಕಾರ ಹಂಚಿಕೆ ಗೊಂದಲ ಬಹಿರಂಗವಾಗಿಯೇ ಪರಸ್ಪರ ವಾಗ್ದಾಳಿಗಳಿಗೆ ಕಾರಣವಾಯಿತು.

ಸಿದ್ದರಾಮಯ್ಯ ತಮ್ಮ ಅಧಿಕಾರ ಉಳಿಸಿಕೊಳ್ಳಲು ಒಂದೆಡೆ ಭಾರೀ ಕಸರತ್ತು ನಡೆಸಿದರೆ, ಶಿವಕುಮಾರ್ ಅಧಿಕಾರ ಪಡೆಯಲು ಮತ್ತೊಂದೆಡೆ ತೀವ್ರ ಯತ್ನ ಮಾಡುತ್ತಿದ್ದಾರೆ.

ರಾಹುಲ್ ಗಾಂಧಿ ಮೌನ

ಅಧಿಕಾರ ಹಸ್ತಾಂತರ ವಿಚಾರ ಸಾರ್ವಜನಿಕವಾಗಿ ಚರ್ಚೆಗೆ ಗ್ರಾಸವಾಗಿ ರಾಷ್ಟ್ರವ್ಯಾಪಿ ಕೂತೂಹಲಕ್ಕೆ ಕಾರಣವಾಗಿದ್ದರೂ ರಾಹುಲ್ ಗಾಂಧಿ ಮಾತ್ರ ಸ್ಪಷ್ಟ ನಿಲುವು ತಳೆದಿರಲಿಲ್ಲ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಪ್ರಮುಖರು ಶಿವಕುಮಾರ್ ಪರ ಇದ್ದರೂ ಗೊಂದಲ ನಿವಾರಿಸಲು ಸಾಧ್ಯವಾಗಿರಲಿಲ್ಲ.

ಇದೀಗ ಪ್ರಿಯಾಂಕಾ ಗಾಂಧಿ ಮಧ್ಯಪ್ರವೇಶಿಸಿದ್ದು, ಸದ್ಯದಲ್ಲೇ ಗೊಂದಲಕ್ಕೆ ತೆರೆ ಬೀಳುವ ಸಾಧ್ಯತೆ ಇದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres high commanddcm d k shivakumarpower sharingpriyanka gandhiRahul Gandhi
0 FacebookTwitterPinterestEmail
KM Shivaraju

previous post
ಅಧಿಕಾರ ಹಂಚಿಕೆ ಗೊಂದಲ: ಶಕ್ತಿ ಕೇಂದ್ರ ನಿಸ್ತೇಜ !
next post
ಸರ್ಕಾರದಿಂದ ರಾಜ್ಯಪಾಲರ ಕಚೇರಿ ಫೋನ್ ಟ್ಯಾಪಿಂಗ್ !

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ