Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಎಂಟತ್ತು ದಿನದಲ್ಲಿ ಅಧಿಕಾರ ಹಂಚಿಕೆ ಗೊಂದಲಕ್ಕೆ ತೆರೆ

by KM Shivaraju February 4, 2026
written by KM Shivaraju February 4, 2026 0 comments 2 minutes read
0FacebookTwitterPinterestEmail
143

ಬೆಂಗಳೂರು:ಕರ್ನಾಟಕ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಂಚಿಕೆ ಗೊಂದಲ ನಿವಾರಿಸಲು ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಕೊನೆಗೂ ಸಮಯ ನಿಗದಿಪಡಿಸಿದ್ದಾರೆ.

ಫೆಬ್ರವರಿ 8ರಂದು ದೆಹಲಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳಿಗೆ ಆಹ್ವಾನ ನೀಡಿದ್ದಾರೆ.

ವಾಟ್ಸ್ ಆಪ್ ಸಂದೇಶ

ಉಭಯ ನಾಯಕರಿಗೂ ವಾಟ್ಸ್ ಆಪ್ ಸಂದೇಶ ಕಳುಹಿಸಿ, ದೆಹಲಿಯ ಇಂದಿರಾ ಭವನಕ್ಕೆ ಬರುವಂತೆ ಸೂಚಿಸಿದ್ದಾರೆ.

ರಾಹುಲ್ ಆಹ್ವಾನ ಖಚಿತವಾಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿನ ವೀರಶೈವ/ಲಿಂಗಾಯತ ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗದ ಸಚಿವರು, ಶಾಸಕರು ದಿಢೀರ್ ಪ್ರತ್ಯೇಕ ಸಭೆ ಸೇರಿ ಹಠಾತ್ ಬೆಳವಣಿಗೆ ಕುರಿತು ಚರ್ಚಿಸಿದ್ದಾರೆ.

ಕಳೆದ ರಾತ್ರಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಸೇರಿದ ಸಚಿವರು, ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿ, ಸಿದ್ದರಾಮಯ್ಯ ಬದಲಾವಣೆ ಮಾಡುವುದೇ ಆದರೆ, ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಬೇಕೆಂಬ ನಿರ್ಣಯ ಕೈಗೊಂಡಿದ್ದು, ವರಿಷ್ಠರಿಗೆ ತಿಳಿಸುವ ತೀರ್ಮಾನ ಕೈಗೊಂಡಿದ್ದಾರೆ.

ಶಾಸಕರ ಸಭೆ

ಸಭೆಯಲ್ಲಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಮಾಜಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ 20ಕ್ಕೂ ಹೆಚ್ಚು ಶಾಸಕರು ಭಾಗವಹಿಸಿದ್ದರು.

ಸಿದ್ದರಾಮಯ್ಯ ಬದಲಿಸಿದರೆ, ನಮ್ಮ ಸಮುದಾಯಕ್ಕೆ ಅವಕಾಶ ನೀಡಬೇಕು, ಜೊತೆಗೆ ಎಸ್‌ಟಿಪಿಎಸ್/ಟಿಎಸ್‌ಪಿ ಅನುದಾನ ಬಳಕೆ, ಮುಂಗಡಪತ್ರದಲ್ಲಿ ದಲಿತರಿಗೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಲು ಸಭೆ ನಿರ್ಣಯಿಸಿತು.

ಸೋಮಾವಾರ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ವೀರಶೈವ/ಲಿಂಗಾಯತ ಸಮುದಾಯಕ್ಕೆ ಸೇರಿದ 28 ಶಾಸಕರು ಸಭೆ ಸೇರಿ, ಮುಂದೆ ಆಗಲಿರುವ ರಾಜಕೀಯ ಬೆಳವಣಿಗೆ ಕುರಿತು ಸುದೀರ್ಘ ಸಮಾಲೋಚನೆ ನಡೆಸಿ, ಹೊಸ ಸರ್ಕಾರ ರಚನೆ ಅಥವಾ ಸಂಪುಟ ಪುನರ್ ರಚನೆ ವೇಳೆ ತಮ್ಮ ಸಮುದಾಯಕ್ಕೆ ಹೆಚ್ಚಿನ ಅವಕಾಶ ನೀಡಬೇಕೆಂಬ ನಿರ್ಣಯ ಮಾಡಿ ವರಿಷ್ಠರಿಗೆ ಕಳುಹಿಸಲು ತೀರ್ಮಾನಿಸಿದರು.

ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಕಡಿವಾಣ
ಒಗ್ಗಟ್ಟಿನ ಪ್ರದರ್ಶನ

ಸಮುದಾಯದ ದೃಷ್ಟಿಯಿಂದ ಒಗ್ಗಟ್ಟಿನ ಪ್ರದರ್ಶನ ಮಾಡಿದ್ದೇವೆಯೇ ಹೊರತು ಯಾವುದೇ ನಾಯಕರ ಪರ ಅಥವಾ ವಿರೋಧಕ್ಕಲ್ಲ.

ಸಿದ್ದರಾಮಯ್ಯ ಅವರ ಬದಲಾವಣೆ ಮಾಡುವುದೇ ಆದರೆ, ನಮ್ಮ ಸಮುದಾಯ ಆ ಸ್ಥಾನ ಪಡೆಯಲು ಮುಂದಾಗುವುದಿಲ್ಲ, ಆದರೆ, ನಮಗೆ ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು.

ಅಲ್ಲದೆ, ಸಮುದಾಯದ ಅಭಿವೃದ್ಧಿಗೆ ಮುಂಗಡಪತ್ರದಲ್ಲಿ ಹೊಸ ಕಾರ್ಯಕ್ರಮ ರೂಪಿಸಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಲು ತೀರ್ಮಾನಿಸಲಾಯಿತು.

ಆಪ್ತ ಶಾಸಕರಿಗೆ ಮಾಹಿತಿ

ದೆಹಲಿಯಲ್ಲಿ ಭಾನುವಾರ ನಡೆಯಲಿರುವ ಸಭೆಯ ಮಾಹಿತಿಯನ್ನು ಶಿವಕುಮಾರ್ ಅವರೇ ತಮ್ಮ ಆಪ್ತ ಶಾಸಕರಿಗೆ ಖಚಿತ ಪಡಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಸದಾಶಿವನಗರದ ತಮ್ಮ ನಿವಾಸದಲ್ಲಿ ಆಪ್ತ ಶಾಸಕರೊಂದಿಗಿನ ಸಮಾಲೋಚನೆ ವೇಳೆ ಕೆಲವರು, ಅಧಿಕಾರ ಪಡೆಯುವಲ್ಲಿ ಕಠಿಣ ನಿಲುವು ಕೈಗೊಳ್ಳುವಂತೆ ಶಿವಕುಮಾರ್ ಅವರನ್ನು ಒತ್ತಾಯಿಸಿದರು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಸಭೆ ಕರೆಯುವಂತೆ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದೆ, ಇದಕ್ಕೆ ಸ್ಪಂದಿಸಿದ ಅವರು ವಾಟ್ಸ್ ಆಪ್ ಮೂಲಕವೇ ಫೆಬ್ರವರಿ 8ರಂದು ಸಭೆ ನಿಗದಿಪಡಿಸಿರುವುದಾಗಿ ತಿಳಿಸಿದ್ದಾರೆ.

ಸಭೆ ನಂತರ ತೀರ್ಮಾನ

ಭಾನುವಾರದ ಸಭೆ ನಂತರ ಮುಂದಿನ ತೀರ್ಮಾನ ಕೈಗೊಳ್ಳೋಣ ಎಂಬುದಾಗಿ ಆಪ್ತರಿಗೆ ಶಿವಕುಮಾರ್ ಹೇಳಿದ್ದಾರೆ.

ಉನ್ನತ ಮೂಲಗಳ ಪ್ರಕಾರ ಮುಂದಿನ ಎಂಟು-ಹತ್ತು ದಿನಗಳಲ್ಲಿ ಕರ್ನಾಟಕ ಕಾಂಗ್ರೆಸ್‌ನಲ್ಲಿನ ಗೊಂದಲ ಪರಿಹಾರವಾಗಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres high commanddcm d k shivakumarpower sharingRahul Gandhi
0 FacebookTwitterPinterestEmail
KM Shivaraju

previous post
ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಕಡಿವಾಣ
next post
ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಗುರಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ