Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಅಧಿಕಾರ ಹಂಚಿಕೆ: ರಾಹುಲ್ ಮನವೊಲಿಸಿದ ಡಿಕೆಶಿ

by KM Shivaraju February 12, 2026
written by KM Shivaraju February 12, 2026 0 comments 1 minutes read
0FacebookTwitterPinterestEmail
174

ನವದೆಹಲಿ:ಅಧಿಕಾರ ಹಂಚಿಕೆ ಸಂಬಂಧ ಕೊನೆಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿವಕುಮಾರ್ ಮನವಿ ಆಲಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿ ಚರ್ಚಿಸುವ ಭರವಸೆ ನೀಡಿದ್ದಾರೆ.

ಸೋನಿಯಾ ಸಮ್ಮುಖದಲ್ಲೇ ಚರ್ಚೆ

ಕಳೆದ ಮೂರು ದಿನಗಳಿಂದ ದೆಹಲಿಯಲ್ಲೇ ಬಿಡಾರ ಹೂಡಿದ್ದ ಶಿವಕುಮಾರ್ ಇಂದು ಬೆಳಗ್ಗೆ 10 ಜನಪಥ್‌ಗೆ ತೆರಳಿ, ಸೋನಿಯಾ ಗಾಂಧಿ ಸಮ್ಮುಖದಲ್ಲೇ ರಾಹುಲ್ ಗಾಂಧಿ ಭೇಟಿ ಮಾಡಿ ಸುಮಾರು ೧೫ ನಿಮಿಷಗಳವರೆಗೆ ಚರ್ಚೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ, ನೀವು ಮಧ್ಯಪ್ರವೇಶಿಸಿ ಇತ್ಯರ್ಥಪಡಿಸಿ ಎಂದು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ವೇಳೆ ಪಕ್ಷದ ಪ್ರಧಾನಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಹಾ ಉಪಸ್ಥಿತರಿದ್ದು, ಶಿವಕುಮಾರ್ ಮನವಿ ಆಲಿಸಿದರು.

ನಡೆದ ಒಪ್ಪಂದ ಪಾಲಿಸುತ್ತಿಲ್ಲ

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ನಡೆದ ಒಪ್ಪಂದ ಪಾಲಿಸುವಲ್ಲಿ ಸಿದ್ದರಾಮಯ್ಯ ಹಿಂದೆ ಸರಿಯುತ್ತಿದ್ದಾರೆ.

ಒಪ್ಪಂದದಂತೆ ನಡೆದುಕೊಳ್ಳದಿರುವುದು ಪಕ್ಷದಲ್ಲಿ ಶಾಸಕರ ಒಂದು ಗುಂಪಿಗೆ ತೀವ್ರ ಬೇಸರ ತರಿಸಿದ್ದು, ನಾಯಕತ್ವ ವಿರುದ್ಧವೇ ಧ್ವನಿ ಎತ್ತಲು ಮುಂದಾಗಿದ್ದಾರೆ.

ಅದರಲ್ಲೂ ಕೆಲವು ಶಾಸಕರು ನನ್ನ ಮಾತಿಗೂ ಓಗೊಡದೆ, ಬಹಿರಂಗವಾಗಿಯೇ ಅಧಿಕಾರ ಹಸ್ತಾಂತರ ಕುರಿತು ಪ್ರಸ್ತಾಪಿಸುತ್ತಿದ್ದಾರೆ.

ಪಕ್ಷದ ಹಿತದೃಷ್ಠಿಯಿಂದ ಮನವೊಲಿಕೆ

ಸರ್ಕಾರ ಮತ್ತು ಪಕ್ಷದ ಹಿತದೃಷ್ಠಿಯಿಂದ ಅವರುಗಳ ಮನವೊಲಿಕೆಗೆ ಇಷ್ಟು ದಿನ ಯತ್ನಿಸಿದ್ದು, ಈ ಪರಿಸ್ಥಿತಿ ಹೆಚ್ಚು ಸಮಯ ಮುಂದುವರಿಯದಂತೆ ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಿಷ್ಠರಿಗೆ ಬೆಲೆ ಸಿಗುತ್ತಿಲ್ಲ ಎಂಬ ಭಾವನೆ ಅವರಲ್ಲಿ ಮೂಡಿದೆ, ನೀವುಗಳು ತಕ್ಷಣವೇ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದಕ್ಕೂ ಮೊದಲು ಬುಧವಾರ ರಾತ್ರಿ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡದೆ ನಡೆಸುತ್ತಿರುವ ತಂತ್ರಗಾರಿಕೆ ಬಗ್ಗೆ ವಿವರಿಸಿದ್ದಾರೆ.

ಹಾದಿಬೀದಿಯಲ್ಲಿ ಹೇಳಲು ಆಗದು

ರಾಹುಲ್ ಮತ್ತು ಸೋನಿಯಾ ಗಾಂಧಿ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಪಕ್ಷದ ನಾಯಕಿ ಹಾಗೂ ಅಲ್ಲಿದ್ದ ಇತರ ನಾಯಕರೊಂದಿಗೆ ಏನು ಚರ್ಚಿಸಿದೆ ಎಂಬುದನ್ನು ಹಾದಿಬೀದಿಯಲ್ಲಿ ಹೇಳಲು ಆಗುವುದಿಲ್ಲ ಎಂದರು.

ಏನು ಮಾತನಾಡಬೇಕೋ, ಅದನ್ನು ಮಾತನಾಡಿದ್ದೇನೆ, ದೆಹಲಿಗೆ ಬಂದಿದ್ದೇ ರಾಜಕೀಯ ಮಾಡಲು, ಎಲ್ಲಾ ವಿಚಾರ ಮಾತನಾಡದೆ ಇಲ್ಲಿಂದ ಹೋಗುತ್ತೇನೆಯೇ, ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂಬುದಾಗಿ ತಿಳಿಸಿ, ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ಇಚ್ಚಿಸಲಿಲ್ಲ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dcm d k shivakumarnew delhipower sharingpriyanka gandhiRahul Gandhisoniya gandhi
0 FacebookTwitterPinterestEmail
KM Shivaraju

previous post
ವಿದೇಶ ಪ್ರವಾಸಕ್ಕೆ ತಿರುಗಿದ ಅಧಿಕಾರ ಹಂಚಿಕೆ ತಂತ್ರ !
next post
ಬಿಜೆಪಿ-ಜೆಡಿಎಸ್ ಮೈತ್ರಿ ಮುಖ್ಯಮಂತ್ರಿ ಪ್ರಶ್ನೆ ಈಗೇಕೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ