Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

by admin February 23, 2026
written by admin February 23, 2026 0 comments 1 minutes read
0FacebookTwitterPinterestEmail
89

ಬೆಂಗಳೂರು:ಗ್ರಾಮೀಣ ಜನರ ಉದ್ಯೋಗದ ಹಕ್ಕು ಕಸಿಯುತ್ತಿರುವ ವಿಬಿ-ಜಿ-ರಾಮ್-ಜಿ ಕಾಯ್ದೆ ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ಹೋರಾಟ ಬೆಂಬಲಿಸಿ ಎಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ನರೇಗಾ ಬಚಾವ್ ಆಂದೋಲನದಲ್ಲಿ ಮಾತನಾಡಿದ ಅವರು, ದೇಶಾದ್ಯಂತ ‘ಮನರೇಗಾ ಉಳಿಸಿ’ ಅಭಿಯಾನ ಪ್ರಾರಂಭಿಸಲಾಗಿದೆ, ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮನರೆಗಾ ರದ್ದುಪಡಿಸಿ, ವಿಬಿ-ಜಿ-ರಾಮ್-ಜಿ ಕಾಯ್ದೆ ಜಾರಿ ಮಾಡಿದೆ, ಮನರೇಗಾದ ರದ್ದು ಅಗತ್ಯವಿರಲಿಲ್ಲ ಎಂದರು.

2005ರಲ್ಲಿ ಕಾಯ್ದೆ ಜಾರಿ

ಕೂಲಿಕಾರರು, ಆದಿವಾಸಿಗಳು, ಸಣ್ಣ ರೈತರು, ಮಹಿಳೆಯರಿಗೆ ಉದ್ಯೋಗ ಅನುಕೂಲ ಕಲ್ಪಿಸುವಲ್ಲಿ 2005ರಲ್ಲಿ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಯ್ದೆ ಜಾರಿಯಾಯಿತು.

ಅಲ್ಲದೇ, ಶಿಕ್ಷಣ, ಆಹಾರ, ಮಾಹಿತಿ ಹಕ್ಕು ಸೇರಿದಂತೆ ಹಲವು ಜನಪರ ಕಾಯ್ದೆಗಳನ್ನು ಜಾರಿಗೆ ತಂದಿದ್ದರು, ಈ ಎಲ್ಲ ಜನಪರ ಕಾಯ್ದೆಗಳನ್ನು ದುರ್ಬಲಗೊಳಿಸುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಾಡುತ್ತಿದೆ.

ಲೋಕಸಭೆಯಲ್ಲಿ ಕೇವಲ 8 ಗಂಟೆಗಳ ಕಾಲ ಚರ್ಚೆ ನಡೆಸಿದ ಕೇಂದ್ರ ಸರ್ಕಾರ ಹೊಸ ಕಾಯ್ದೆ ಜಾರಿಗೆ ತಂದಿತು.

ಜನರ ಹಕ್ಕು ಕಸಿದುಕೊಳ್ಳಲಾಗಿದೆ

ಹಳೇ ಕಾಯಿದೆಯಡಿ 12.16 ಕೋಟಿ ಜನರು ಕೆಲಸ ಪಡೆಯುತ್ತಿದ್ದರು, ಇದರಲ್ಲಿ ಸುಮಾರು 53% ಉದ್ಯೋಗ ಪಡೆಯುತ್ತಿದ್ದರು, ಪರಿಶಿಷ್ಟ ಜಾತಿಯ 17% ಮತ್ತು ಪರಿಶಿಷ್ಟ ವರ್ಗದ 11% ಜನರು ಉದ್ಯೋಗ ಪಡೆಯುತ್ತಿದ್ದರು. ಈ ಎಲ್ಲ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ.

ಮನರೇಗಾ ಕಾಯ್ದೆಗೆ ಗ್ರಾಮೀಣಾಭಿವೃದ್ಧಿಯ ಕನಸು ಕಂಡಿದ್ದ ಮಹಾತ್ಮಾಗಾಂಧಿ ಹೆಸರನ್ನು ಇಡಲಾಗಿತ್ತು, ಅವರ ಗ್ರಾಮ ಸ್ವರಾಜ್ಯದ ಕಲ್ಪನೆಗೆ ಮನರೇಗಾ ಶಕ್ತಿ ತುಂಬಿತ್ತು, 100 ದಿನಗಳ ಉದ್ಯೋಗದ ಖಾತ್ರಿ ನೀಡುತ್ತಿದ್ದ ಮನರೇಗಾ ಕಾಯ್ದೆಯಡಿ, ಕೂಲಿಕಾರರು ಸ್ಥಳೀಯ ಮಟ್ಟದಲ್ಲಿಯೇ ಕೆಲಸ ಮಾಡಬಹುದಿತ್ತು, ಗ್ರಾಮಪಂಚಾಯತಿ ಮತ್ತು ಗ್ರಾಮಸಭೆಗಳು ನಿರ್ಧರಿಸುವ ಅಧಿಕಾರವಿತ್ತು.

ಈಗ ಈ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ, ಕೇಂದ್ರದ ಅನುದಾನ, ಅನುಮತಿ ಇಲ್ಲದೇ, ಗ್ರಾಮ ಪಂಚಾಯತ್ ಕೆಲಸ ಮಾಡಲು ಸಾಧ್ಯವಿಲ್ಲ, ಆದ್ದರಿಂದ ಮನರೇಗಾ ಮುಂದುವರೆಸಬೇಕೆಂಬುದು ಕಾಂಗ್ರೆಸ್ ಸರ್ಕಾರದ ಒತ್ತಾಯವಾಗಿದೆ.

ವಿಬಿ-ಜಿ-ರಾಮ್-ಜಿ ರದ್ದುಪಡಿಸಿ

ಮನರೇಗಾದಲ್ಲಿ 100 ದಿನ ಭತ್ಯೆ ತಪ್ಪದೇ ಕೊಡಲಾಗುತ್ತಿತ್ತು, ಹೊಸ ಕಾಯ್ದೆಯಂತೆ ಕೇಂದ್ರ 60% ಅನುದಾನ ಮತ್ತು ರಾಜ್ಯಗಳು 40% ಅನುದಾನ ಕೊಡಬೇಕಾಗಿದೆ, ರಾಜ್ಯದ ಹಿತವನ್ನು ಕಾಪಾಡುವಲ್ಲಿ ಕೇಂದ್ರ ಸೋತಿದೆ, ಅದ್ದರಿಂದ ವಿಬಿ-ಜಿ-ರಾಮ್-ಜಿ ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸಲು ದೇಶಾದ್ಯಂತ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದೆ.

ಮನರೇಗಾ ಮರು ಜಾರಿ ಮೂಲಕ ಜನರ ಉದ್ಯೋಗದ ಹಕ್ಕನ್ನು ಮರುಸ್ಥಾಪಿಸಬೇಕು, ಪಂಚಾಯತ್ ಸ್ವಯಂ ಆಡಳಿತದ ಹಕ್ಕು ಮರುಸ್ಥಾಪನೆ, ದಿನಕ್ಕೆ 400 ರೂ. ಕನಿಷ್ಠ ವೇತನ ದೇಶಾದ್ಯಂತ ನೀಡಬೇಕು, ಈ ಬೇಡಿಕೆಗಳು ಈಡೇರುವವರೆಗೆ ನಮ್ಮ ಆಂದೋಲನ ನಿಲ್ಲುವುದಿಲ್ಲ ಎಂದರು.

ರೈತವಿರೋಧಿ ಕಾಯ್ದೆಗಳನ್ನು ಹೋರಾಟದ ಫಲವಾಗಿ ರದ್ದುಗೊಳಿಸಲಾಯಿತು, ಅದೇ ರೀತಿ ಈ ಹೋರಾಟವೂ ನಿಲ್ಲುವುದಿಲ್ಲ, ಹೋರಾಟಕ್ಕೆ ರಾಜ್ಯದ ಜನರೆಲ್ಲರೂ ನಮ್ಮ ಜೊತೆಯಾಗಬೇಕು, ಹಳ್ಳಿಗಾಡಿನ ಜನರಿಗೆ ಅನುಕೂಲ ಕಲ್ಪಿಸುವ ಮನರೇಗಾ ಯೋಜನೆ ಮರುಸ್ಥಾಪಿಸುವ ಕಾಂಗ್ರೆಸ್‌ನ ಸಾರ್ಥಕ ಉದ್ದೇಶಕ್ಕೆ ಜನರು ಬೆಂಬಲಿಸಬೇಕು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahmanreganda govt.vb-g-ram-g
0 FacebookTwitterPinterestEmail
admin

previous post
ಕೌನ್ಸಿಲಿಂಗ್ ವರ್ಗಾವಣೆ ಭ್ರಷ್ಟಾಚಾರ ತಡೆಗೆ ಅಸ್ತ್ರ
next post
ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ