Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಗೊಂದಲ ಇಲ್ಲ

by admin March 23, 2026
written by admin March 23, 2026 0 comments 2 minutes read
0FacebookTwitterPinterestEmail
144

ಬೆಂಗಳೂರು:ಶಾಮನೂರು ಶಿವಶಂಕರಪ್ಪ ನೀಡಿರುವ ಕೊಡುಗೆ ಹಿನ್ನೆಲೆಯಲ್ಲಿ ಮತದಾರರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಯುಬ್ ಜೊತೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ, ಕಾಂಗ್ರೆಸ್ ಎಲ್ಲರನ್ನು ವಿಶ್ವಾಸಕ್ಕೆ ಪಡೆದು, ಒಮ್ಮತದಿಂದ ಸಮರ್ಥ್ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ ಎಂದರು.

ಗ್ರಾಮೀಣ ಜನರ ಸೇವೆ

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿದ್ದರೂ ಗ್ರಾಮೀಣ ಜನರ ಸೇವೆ ಮಾಡುವ ಆಸೆ, ಆಕಾಂಕ್ಷೆಯೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಸಮರ್ಥ್ ವ್ಯಾಸಂಗಕ್ಕೆ ಮತ್ತೆ ವಿದೇಶಕ್ಕೆ ಹೋಗುವ ಬದಲು ಇಲ್ಲೇ ವೃತ್ತಿ ಮಾಡುವಂತೆ ಶಾಮನೂರು ಶಿವಶಂಕರಪ್ಪನ ಹೇಳಿದ್ದರು, ಕ್ಷೇತ್ರದ ಜನತೆ, ಎಲ್ಲಾ ವರ್ಗದ ಮುಖಂಡರು, ಪಕ್ಷದ ವರಿಷ್ಠರು ಎಲ್ಲರೂ ಚರ್ಚೆ ಮಾಡಿ ಈ ತೀರ್ಮಾನ ಮಾಡಿದ್ದೇವೆ.

ಕ್ಷೇತ್ರದಲ್ಲಿ ಮುಸ್ಲೀಂ ಸಮುದಾಯದವರ ಸಂಖ್ಯೆ ಹೆಚ್ಚಿದೆ, ನಮಗೇ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು, ನಾವು ಲೆಕ್ಕಾಚಾರ ಹಾಕಿದೆವು, ಕಾಂಗ್ರೆಸ್ ಪಕ್ಷ ಈ ಹಿಂದೆ ಟಿಕೆಟ್ ನೀಡಲಾಗದ ಕಾರಣಕ್ಕೆ ಜಬ್ಬಾರ್ ಅವರನ್ನು ಮೂರು ಬಾರಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದೆವು.

ಮುಸ್ಲೀಂ ಸಮಾಜಕ್ಕೆ ನ್ಯಾಯ

ಮುಂದಿನ ದಿನಗಳಲ್ಲಿ ರಾಜ್ಯಸಭೆ, ವಿಧಾನ ಪರಿಷತ್ ಹಾಗೂ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಮುಸ್ಲೀಂ ಸಮಾಜಕ್ಕೆ ನ್ಯಾಯ ಒದಗಿಸಿಕೊಂಡು ಬಂದಿದ್ದೇವೆ, ಇದನ್ನು ಮುಂದುವರಿಸುತ್ತೇವೆ, ಇದು ನಮ್ಮ ಪಕ್ಷದ ಸಿದ್ಧಾಂತ ಎಂದರು.

ಬಿಜೆಪಿ ಹಲವು ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ, ಪಕ್ಷ ಸೇರ್ಪಡೆಗೆ ಇನ್ನು ಹಲವರು ಮುಂದಾಗಿದ್ದು, ಅವರನ್ನೂ ಸೇರಿಸಿಕೊಳ್ಳುತ್ತೇವೆ, ಬಿಜೆಪಿ ಅಭ್ಯರ್ಥಿ ಆಯ್ಕೆ ಗೊಂದಲದಿಂದ ಕಾಂಗ್ರೆಸ್ ಸೇರುತ್ತಿರುವವರನ್ನು ಪಕ್ಷಕ್ಕೆ ಸ್ವಾಗತಿಸುತ್ತಿದ್ದೇವೆ.

ಈ ಜವಾಬ್ದಾರಿಯನ್ನು ಸ್ಥಳೀಯ ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ್ ಅವರಿಗೆ ವಹಿಸಿದ್ದೇವೆ, ಯಾರೂ ಆಂತಕಕ್ಕೆ ಒಳಗಾಗುವುದು ಬೇಡ, ಪಕ್ಷ ಸಿದ್ಧಾಂತ, ನಾಯಕತ್ವದ ಮೇಲೆ ನಂಬಿಕೆ ಇಟ್ಟು ಬರುವವರನ್ನು ಸೇರಿಸಿಕೊಳ್ಳುತ್ತೇವೆ.

ದಾವಣಗೆರೆ ಜಿಲ್ಲೆ ಉತ್ತಮ

ದಾವಣಗೆರೆ ಜಿಲ್ಲೆ ಬೆಂಗಳೂರಿಗಿಂತ ಬಹಳ ಉತ್ತಮವಾಗಿ ಯೋಜಿತವಾಗಿ ರೂಪುಗೊಂಡಿರುವ ನಗರವಾಗಿದೆ, ಇದರ ಅಭಿವೃದ್ಧಿಗೆ ನೂರಾರು ಕೋಟಿ ರೂ. ಮೊತ್ತದ ಪ್ಯಾಕೇಜ್ ನೀಡಲಾಗಿದೆ, ಈ ಭಾಗಕ್ಕೆ ಶಾಮನೂರು ಶಿವಶಂಕರಪ್ಪ ಕೊಟ್ಟಿರುವ ಕೊಡುಗೆ, ಶಿಕ್ಷಣ ಸಂಸ್ಥೆ ಮೂಲಕ ಜಿಲ್ಲೆ ಶಿಕ್ಷಣ ಕೇಂದ್ರವಾಗಿ ರೂಪುಗೊಂಡಿದೆ.

ಜಿಲ್ಲೆಯ ಪ್ರಗತಿಗೆ ಕೊಡುಗೆ ನೀಡಿದ್ದು ಶಾಮನೂರು ಶಿವಶಂಕರಪ್ಪ ಅವರ ಕುಟುಂಬ ಹಾಗೂ ಅವರ ಸಂಸ್ಥೆ, ಇದೆಲ್ಲವನ್ನು ಜನ ಸ್ಮರಿಸುತ್ತಿದ್ದಾರೆ.

ಎಲ್ಲರಿಗೂ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ, ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ನೀಡಿರುವ ಕೊಡುಗೆಯನ್ನು ಜನ ಸ್ಮರಿಸುತ್ತಿದ್ದಾರೆ, ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಸಮರ್ಥ್ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ.

ಬೇಡಿಕೆ ಕೇಳುವ ಅಧಿಕಾರವಿದೆ

ರಾಜಕೀಯದಲ್ಲಿ ಎಲ್ಲರಿಗೂ ತಮ್ಮ ಬೇಡಿಕೆ ಕೇಳುವ ಅಧಿಕಾರವಿದೆ, ಅವರು ಕೇಳುವುದರಲ್ಲಿ ತಪ್ಪಿಲ್ಲ, ಪಕ್ಷಕ್ಕೆ ದುಡಿದಿರುತ್ತಾರೆ, ಅವರಿಗೆ ಕೇಳುವ ಹಕ್ಕಿರುತ್ತದೆ, ಇರುವುದು ಒಂದು ಸೀಟು, ನಾವು ಮೊದಲಿನಿಂದಲೂ ಎಲ್ಲರಿಗೂ ಅಧಿಕಾರ ನೀಡುತ್ತಾ ಬಂದಿದ್ದು, ಎಲ್ಲಾ ವಿಚಾರವನ್ನು ಬಗೆಹರಿಸುತ್ತೇವೆ.

ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ, ಒಬ್ಬರು ಬಂಡಾಯವಾಗಿ ನಾಮಪತ್ರ ಸಲ್ಲಿಸಿದ್ದಾರೆ, ಅವರಿಗೂ ಶಾಮನೂರು ಶಿವಶಂಕರಪ್ಪ ಆತ್ಮೀಯರು, ಎಲ್ಲವನ್ನು ಸರಿ ಮಾಡುತ್ತೇವೆ.

ಅಭಿವೃದ್ಧಿ, ಸಾಮಾಜಿಕ ಚಿಂತನೆ, ಎಲ್ಲಾ ಸಮಾಜಕ್ಕೂ ನೀಡುತ್ತಿರುವ ನ್ಯಾಯದ ಮೇಲೆ ಚುನಾವಣೆ ಎದುರಿಸುತ್ತಿದ್ದೇವೆ, ಇದೇ ನಮ್ಮ ಪಕ್ಷದ ಮೂಲ ಸಿದ್ಧಾಂತ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres will windavanagere by-electiondcm d k shivakumar
0 FacebookTwitterPinterestEmail
admin

previous post
ಹಳಸಿದ ಸಿದ್ದರಾಮಯ್ಯ ಸಚಿವ ಜಮೀರ್ ದೋಸ್ತಿ !
next post
ರಾಜ್ಯ ಜಲಾಶಯಗಳ ನೀರು ಕುಡಿಯಲು ಮಾತ್ರ ಬಳಕೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ