Saturday, April 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, April 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ವರಸೆ ಬದಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

by KM Shivaraju April 1, 2026
written by KM Shivaraju April 1, 2026 0 comments 1 minutes read
0FacebookTwitterPinterestEmail
34

ಬಾಗಲಕೋಟೆ:ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದ ಸಿದ್ದರಾಮಯ್ಯ, ಇದೀಗ ತಮ್ಮ ವರಸೆ ಬದಲಿಸಿ, ಮುಂದಿನ ಎರಡು ವರ್ಷ ’ನಾವೇ’ ಮುಖ್ಯಮಂತ್ರಿ ಆಗಿರುತ್ತೇವೆ ಎಂದಿದ್ದಾರೆ.

ನನ್ನ ಸರ್ಕಾರ ಎನ್ನುತ್ತಿದ್ದವರು, ನಮ್ಮದೇ ಸರ್ಕಾರ ಇರುತ್ತದೆ, ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ, ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲು ಸಹಕಾರಿಯಾಗಲಿದೆ ಎಂದಿದ್ದಾರೆ.

’ನಾನೇ’ ಬಿಟ್ಟು ’ನಮ್ಮದೇ’

ಮಂಗಳವಾರ ಬಾಗಲಕೋಟೆ ವಿಧಾನಸಭಾ ಉಪಚುನಾವಣಾ ಪ್ರಚಾರ ವೇಳೆ ಹಾಗೂ ಪತ್ರಿಕಾಗೋಷ್ಠಿಗಳಲ್ಲಿ ’ನಾನೇ’ ಎಂಬುದನ್ನು ಬಿಟ್ಟು ’ನಮ್ಮದೇ’ ಎಂಬ ಪದ ಬಳಕೆ ಮಾಡಿದ್ದಾರೆ.

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ, ಕಳೆದ ನಾಲ್ಕು ದಿನಗಳಿಂದ ಈ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ನಮ್ಮ ಸರ್ಕಾರಕ್ಕೆ ಮತ್ತಷ್ಟು ಬಲ ಬರುತ್ತದೆ ಎಂಬ ಮಾತುಗಳನ್ನು ಆಡಿದ್ದಾರೆ.

ಗೊಂದಲ ಬಗೆಹರಿಸಲು ಮನವಿ

ಕಳೆದ ಮೂರು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಧಿನಾಯಕ ರಾಹುಲ್ ಗಾಂಧಿ ಭೇಟಿ ಮಾಡಿ, ಕರ್ನಾಟಕ ಕಾಂಗ್ರೆಸ್‌ನಲ್ಲಿನ ಗೊಂದಲ ಬಗೆಹರಿಸಲು ನಿರ್ಣಯ ಕೈಗೊಳ್ಳಿ ಎಂಬುದಾಗಿ ಮನವಿ ಮಾಡಿದ್ದಾರೆ.

ಖರ್ಗೆ ಸಲಹೆಗೆ, ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ಈ ಬಗ್ಗೆ ನಾವು ತೀರ್ಮಾನ ಕೈಗೊಳ್ಳೋಣ ಎಂಬ ಭರವಸೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪಂಚರಾಜ್ಯಗಳ ವಿಧಾನಸಭೆಗಳಿಗೆ ಮತದಾನ ಮುಗಿಯುತ್ತಿದ್ದಂತೆ ತಮಗೆ ಮುಖ್ಯಮಂತ್ರಿ ಪಟ್ಟ ಕೊಡಿಸಿ ಎಂದು ವರಿಷ್ಠರಲ್ಲಿ ಪಟ್ಟು ಹಿಡಿದಿದ್ದಾರೆ.

ಒಂದಲ್ಲಾ ಒಂದು ನೆಪ

ಪಕ್ಷ ನೀಡಿದ ಭರವಸೆಯಂತೆ ಕಳೆದ ನವೆಂಬರ್ 20ಕ್ಕೆ ಅಧಿಕಾರ ಹಸ್ತಾಂತರ ಆಗಬೇಕಿತ್ತು, ಅದು ಮುಗಿದು 5 ತಿಂಗಳು ಕಳೆದಿದೆ, ಒಂದಲ್ಲಾ ಒಂದು ನೆಪ ಮುಂದಿಟ್ಟುಕೊಂಡು ಸಿದ್ದರಾಮಯ್ಯ ಅವರನ್ನು ಅಧಿಕಾರದಲ್ಲಿ ಮುಮದುವರೆಸಲಾಗುತ್ತಿದೆ.

ಪಕ್ಷದ ಬಹುತೇಕ ಶಾಸಕರು ಅಧಿಕಾರ ಹಂಚಿಕೆ ಆಗಬೇಕೆಂದು ಬಯಸಿದ್ದಾರೆ, ಮತ್ತಷ್ಟು ವಿಳಂಬ ಮಾಡದೆ, ಮತದಾನ ಮುಗಿಯುತ್ತಿದ್ದಂತೆ ತಮಗೆ ಅಧಿಕಾರ ಕೊಡಿಸಿ ಎಂದು ಎಐಸಿಸಿಯ ಎಲ್ಲಾ ಪ್ರಮುಖ ನಾಯಕರ ಬಳಿಯೂ ಮನವಿ ಮಾಡಿದ್ದಾರೆ.

ಖರ್ಗೆ-ರಾಹುಲ್ ಭೇಟಿ

ಪಂಚರಾಜ್ಯಗಳ ಚುನಾವಣೆ ಕುರಿತಂತೆ ಚರ್ಚಿಸಲು ಖರ್ಗೆ ಅವರು ರಾಹುಲ್ ಭೇಟಿ ಮಾಡಿದ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್‌ನಲ್ಲಿನ ಗೊಂದಲದ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

ಚುನಾವಣೆ ಮುಗಿದ ನಂತರ ಗೊಂದಲ ಸರಿಪಡಿಸೋಣ ಎಂಬ ರಾಹುಲ್ ಮಾತು ಮುಖ್ಯಮಂತ್ರಿ ಅವರಿಗೂ ತಲುಪಿರಬಹುದು, ಈ ಬೆಳವಣಿಗೆ ನಂತರವೇ ’ನಾನು’ ಎನ್ನುವುದನ್ನು ಬಿಟ್ಟು ’ನಾವು’ ಎನ್ನುತ್ತಿದ್ದಾರೆ ಎಂಬುದು ಪಕ್ಷದ ವಲಯಗಳಲ್ಲಿ ಕೇಳಿಬರುತ್ತಿರುವ ಮಾತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahdcm d k shivakumarmallikarjuna khargepower sharingRahul Gandhi
0 FacebookTwitterPinterestEmail
KM Shivaraju

previous post
ನಾನೇ ಎಲ್ಲ, ನನ್ನಿಂದ ಎಲ್ಲಾ ಎಂಬ ಭ್ರಮೆ ಬೇಡ
next post
ಸೈಬರ್ ಅಪರಾಧ : ಕರ್ನಾಟಕದಲ್ಲಿ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚು

You may also like

ಮೇನಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ !

April 24, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (444)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,938)
  • ರಾಜ್ಯ (2,253)
  • ರಾಷ್ಟ್ರ (2,223)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮೇನಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ !

    April 24, 2026
  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026

KMS Special

  • ಮೇನಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ !

    April 24, 2026
  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮೇನಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ !

April 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ