Saturday, April 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, April 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

by admin April 17, 2026
written by admin April 17, 2026 0 comments 2 minutes read
0FacebookTwitterPinterestEmail
18

ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದ ಅಪರಾಧಿ

ಬೆಂಗಳೂರು:ಕರ್ನಾಟಕ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದ ಅಪರಾಧಿ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.

ಅಲ್ಲದೆ, ಪ್ರಕರಣದ ಎಲ್ಲಾ 16 ಅಪರಾಧಿಗಳಿಗೂ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಹತ್ಯೆ ಪ್ರಕರಣದ 19ನೇ ಆರೋಪಿ ಚನ್ನಕೇಶವ ಟಿಂಗರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ನೀಡಿದರೆ, ಒಂದನೇ ಆರೋಪಿ ಬಸವರಾಜ ಮುತ್ತಗಿಗೆ ಮಾಫಿ ಸಾಕ್ಷಿ ಸ್ಥಾನ ಸ್ಥಿರೀಕರಿಸಿ ತೀರ್ಪು ನೀಡಿದೆ.

ಶಾಸಕ ಸ್ಥಾನದಿಂದ ಪದಚ್ಯುತ

ಪ್ರಕರಣದ 15ನೇ ಆರೋಪಿ ಆಗಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆ ಜೊತೆಗೆ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಶಾಸಕ ಸ್ಥಾನದಿಂದಲೂ ಪದಚ್ಯುತರಾಗಿದ್ದಾರೆ.

ಹತ್ಯೆಗೊಳಗಾದ ಬಿಜೆಪಿ ನಾಯಕ ಯೋಗೇಶ್ ಗೌಡ ಅವರ ಮಕ್ಕಳಿಗೆ 16 ಲಕ್ಷ ರೂ. ಪರಿಹಾರವಾಗಿ ನೀಡುವಂತೆ ನ್ಯಾಯಾಲಯ ತೀರ್ಪಿನಲ್ಲಿ ಸೂಚಿಸಿದೆ.

ಪ್ರಕರಣದ 21 ಆರೋಪಿಗಳ ಪೈಕಿ ಇಬ್ಬರು ಮಾಫಿ ಸಾಕ್ಷಿಯಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಉಳಿದ ಎಲ್ಲಾ 17 ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿದೆ, 17ನೇ ಆರೋಪಿ ಶಿವಾನಂದ ಮಾಫಿ ಸಾಕ್ಷಿಯಾದ ನಂತರವೂ ಪ್ರತಿಕೂಲ ಹೇಳಿಕೆ ನೀಡಿದ್ದರಿಂದ ಪುನಃ ಆರೋಪಿಯನ್ನಾಗಿ ಪರಿಗಣಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ.

ಇಬ್ಬರು ಆರೋಪಿಗಳ ಬಿಡುಗಡೆ

ಇನ್ನು ಪ್ರಕರಣದ 20ನೇ ಆರೋಪಿ ವಾಸುದೇವ ನಿಲೇಕಣಿ, 21ನೇ ಆರೋಪಿ ಸೋಮಶೇಖರ ಬಿಡುಗಡೆಗೆ ನ್ಯಾಯಾಲಯ ಆದೇಶಿಸಿತ್ತು.

ಉಳಿದಂತೆ 2ನೇ ಆರೋಪಿ ವಿಕ್ರಮ್, 3ನೇ ಆರೋಪಿ ಕೀರ್ತಿ ಕುಮಾರ್, 4ನೇ ಆರೋಪಿ ಸಂದೀಪ್, 5ನೇ ಆರೋಪಿ ವಿನಾಯಕ್, 6ನೇ ಆರೋಪಿ ಮಹಾಬಲೇಶ್ವರ್ ಅಲಿಯಾಸ್ ಮುದಕ, 7ನೇ ಆರೋಪಿ ಸಂತೋಷ್, 8ನೇ ಆರೋಪಿ ದಿನೇಶ್, 9ನೇ ಆರೋಪಿ ಅಶ್ವಥ್, 10ನೇ ಆರೋಪಿ ಸುನಿಲ್, 11ನೇ ಆರೋಪಿ ನಜೀರ್ ಅಹಮದ್, 12ನೇ ಆರೋಪಿ ಷಾನವಾಜ್, 13ನೇ ಆರೋಪಿ ನೂತನ್, 14ನೇ ಆರೋಪಿ ಹರ್ಷಿತ್, 16ನೇ ಆರೋಪಿ ಚಂದ್ರು ಮಾಮ, 18ನೇ ಆರೋಪಿ ವಿಕಾಸ್ ಕಲಬುರ್ಗಿ ಅವರುಗಳಿಗೂ ಶಿಕ್ಷೆ ವಿಧಿಸಿದೆ.

ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಅವರನ್ನು ಸಪ್ತಾಪುರ ಬಡಾವಣೆಯ ಜಿಮ್‌ನಲ್ಲಿ 2016ರ ಜೂನ್ 15ರಂದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು.

ಪ್ರಕರಣಕ್ಕೆ ಮಹತ್ವದ ತಿರುವು

ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದ ಉಪನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದರು, ಮೊದಲು ಆಸ್ತಿ ವಿವಾದದ ವಿಚಾರಕ್ಕೆ ನಡೆದ ಕೊಲೆ ಎಂದು ಹೇಳಲಾಗಿತ್ತು.

ಆರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಲಾಗಿತ್ತು, ಆದರೆ, ಕೊಲೆಯಾದ ಯೋಗೇಶ್ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು.

ಸಿಬಿಐ ತನಿಖೆಯಿಂದ ಇದು ರಾಜಕೀಯ ಪ್ರೇರಿತ ಕೊಲೆ ಎಂದು ದೃಢಪಟ್ಟು ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು.

ಶಾಸಕ ಕುಲಕರ್ಣಿ ಕೈವಾಡ ಶಂಕೆ

ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಕೈವಾಡ ಶಂಕೆ ವ್ಯಕ್ತವಾಗಿತ್ತಲ್ಲದೆ, 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು, ಅವರನ್ನು ಬಂಧಿಸಿದ್ದರು.

ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಲಾಗಿತ್ತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp leader yogesh gowda murder casecongres mla vinay kulakarni gets life imprisonmentother 16 also sentenced
0 FacebookTwitterPinterestEmail
admin

previous post
ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ
next post
ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

You may also like

ಮೇನಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ !

April 24, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (444)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,938)
  • ರಾಜ್ಯ (2,253)
  • ರಾಷ್ಟ್ರ (2,223)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮೇನಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ !

    April 24, 2026
  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026

KMS Special

  • ಮೇನಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ !

    April 24, 2026
  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮೇನಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ !

April 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ