Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

by admin April 23, 2026
written by admin April 23, 2026 0 comments 2 minutes read
0FacebookTwitterPinterestEmail
112

ಬೆಂಗಳೂರು:ಕಳೆದ ಮಾರ್ಚ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡ 94.10 ವಿದ್ಯಾರ್ಥಿಗಳು ತೇರ್ಗಡೆಗೊಂಡು ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.

ಕಳೆದ ವರ್ಷ ಶೇಕಡ 80.04 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದರು, ಈ ಬಾರಿ ಅದಕ್ಕಿಂತ ಶೇ.14ರಷ್ಟು ಫಲಿತಾಂಶ ಹೆಚ್ಚಳವಾಗಿದೆ.

625 ಅಂಕ ಪಡೆದ 7 ವಿದ್ಯಾರ್ಥಿಗಳು

ಈ ಬಾರಿ 7,70,209 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು ಅದರಲ್ಲಿ 7,24,794 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 625ಕ್ಕೆ 625 ಅಂಕ ಪಡೆದ 7 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಫಲಿತಾಂಶದ ಮಾಹಿತಿ ನೀಡಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇಲಾಖೆ ಪ್ರಾರಂಭದಿಂದಲೇ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವತ್ತ ಗಮನ ಹರಿಸಿತ್ತು, ಇದರ ಪರಿಣಾಮ ಹೆಚ್ಚಿನ ತೇರ್ಗಡೆ ಸಾಧ್ಯವಾಯಿತು ಎಂದರು.

ಸರ್ಕಾರ 20 ಅಂಶಗಳ ಸಮಗ್ರ ಸುತ್ತೋಲೆಯನ್ನು ಅಧಿಕಾರಿಗಳು ಮತ್ತು ಶಿಕ್ಷಕರಿಗೆ ನೀಡಿದ್ದಲ್ಲದೆ, ಮಕ್ಕಳಿಗೆ ಶಿಕ್ಷಣದಲ್ಲಿ ತೊಂದರೆ ಆಗದಂತೆ ಶಿಕ್ಷಕರ ನೇಮಕ ಕೈಗೊಂಡಿದ್ದರಿಂದ ಇಂತಹ ಫಲಿತಾಂಶ ಸಾಧ್ಯವಾಯಿತು.

ಸರ್ಕಾರಿ ಶಾಲೆಗಳ ಫಲಿತಾಂಶ ಗಮನಾರ್ಹ

ಈ ಬಾರಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳೂ ನಗರ ಪ್ರದೇಶಕ್ಕೆ ಸರಿಸಮನಾಗಿ ಫಲಿತಾಂಶ ಪಡೆದಿದ್ದಾರೆ.

ಎಂದಿನಂತೆ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಶೇ.98.4ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡು ಪ್ರಥಮ ಸ್ಥಾನದಲ್ಲಿದ್ದರೆ, ಕಲಬುರಗಿ ಶೇಕಡ 85.06ರಷ್ಟು ಫಲಿತಾಂಶದೊಂದಿಗೆ ಕೊನೆ ಸ್ಥಾನದಲ್ಲಿದೆ.

ಅನುದಾನ ರಹಿತ ಶಾಲೆಗಳಲ್ಲಿ ಫಲಿತಾಂಶ ಶೇಕಡ 95.04ರಷ್ಟಿದ್ದರೆ, ಸರ್ಕಾರಿ ಶಾಲೆಗಳಲ್ಲಿ ಶೇ.93.97ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡಿರುವುದು ಶಿಕ್ಷಣ ಗುಣಮಟ್ಟ ಹೆಚ್ಚಿರುವುದಕ್ಕೆ ಸಾಕ್ಷಿಯಾಗಿದೆ.

ಚಿಕ್ಕೋಡಿಯ ಕಟಿಗೇರಿ ಸರ್ಕಾರಿ ಶಾಲೆ

ಚಿಕ್ಕೋಡಿಯ ಕಟಿಗೇರಿ ಸರ್ಕಾರಿ ಶಾಲೆಯ ವಿದ್ಯಾರ್ಥಿ ಪ್ರಾರ್ಥನಾ ನಾಗಪ್ಪ ಬಿರಾದಾರ್ ಪಾಟೀಲ್ ಪೂರ್ಣ 625 ಅಂಕ ಗಳಿಸಿದ 7 ವಿದ್ಯಾರ್ಥಿಗಳ ಪೈಕಿ ಒಬ್ಬರು.

ಉಳಿದಂತೆ ಜಿ.ಭಾರತಿ, ಬೃಂದಾ ಎಂ. ತಾಪ್ಸೆ, ಧನುಷ್ ಎಂ. ಸುಧೀರ್, ಜಿ.ಪ್ರೀತಂ ಪೂಜಾರಿ, ಸೌಜನ್ಯ ಕಂದಕೂರ್ ಹಾಗೂ ಸುಖದೇವ್ ಪೂರ್ಣ ಅಂಕ ಗಳಿಸಿದವರ ಪಟ್ಟಿಯಲ್ಲಿದ್ದಾರೆ.

ಒಟ್ಟು 625ರಲ್ಲಿ 624 ಅಂಕ ಪಡೆದವರು 21 ವಿದ್ಯಾರ್ಥಿಗಳಿದ್ದು, 625ಕ್ಕೆ 623 ಅಂಕ ಗಳಿಸಿದ 28 ವಿದ್ಯಾರ್ಥಿಗಳಿದ್ದಾರೆ, 625ರಲ್ಲಿ 622 ಅಂಕ ಗಳಿಸಿದ 74 ವಿದ್ಯಾರ್ಥಿಗಳು, 625ರಲ್ಲಿ 621 ಅಂಕ ಪಡೆದ 98 ಮಂದಿ, ಐದನೇ ಸ್ಥಾನದಲ್ಲಿ 620 ಅಂಕ ಪಡೆದ ವಿದ್ಯಾರ್ಥಿಗಳ ಸಂಖ್ಯೆ 150 ಇದೆ.

ಒತ್ತಡಕ್ಕೆ ಒಳಗಾಗದೆ ಪರೀಕ್ಷೆ

ತೃತೀಯ ಭಾಷೆಗೆ ಅಂಕ ಬದಲಿಗೆ ಗ್ರೇಡಿಂಗ್ ನೀಡುವ ವಿಚಾರದಲ್ಲಿ ಗೊಂದಲ ಉಂಟಾದರೂ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದೆ ಪರೀಕ್ಷೆ ಬರೆದಿದ್ದರಿಂದ ಈ ಐತಿಹಾಸಿಕ ಫಲಿತಾಂಶ ಬರಲು ಕಾರಣವಾಗಿದೆ ಎಂದರು.

ಒಟ್ಟು 6,176 ಶಾಲೆಗಳಲ್ಲಿ ಶೇಕಡ 100ರಷ್ಟು ಫಲಿತಾಂಶ ಬಂದಿದ್ದರೆ, ಅದರಲ್ಲಿ 2,393 ಸರ್ಕಾರಿ ಶಾಲೆಗಳಾಗಿವೆ.

ಈ ಬಾರಿ ಶೇ.96.18ರಷ್ಟು ವಿದ್ಯಾರ್ಥಿನಿಯರು, ಶೇ.91.94ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ.

ಎರಡನೇ ಪರೀಕ್ಷೆಗೆ ಅವಕಾಶ

ಅನುತ್ತೀರ್ಣಗೊಂಡ ಶೇ.೬ರಷ್ಟು ವಿದ್ಯಾರ್ಥಿಗಳಿಗೆ ಎರಡನೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದರು.

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಸರ್ಕಾರಿ ಶಾಲೆಗಳ ಸಾಧನೆ ಗಮನಿಸಿ, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಲು ಮುಂದಾಗಬೇಕು ಎಂದು ಮಧು ಬಂಗಾರಪ್ಪ ಮನವಿ ಮಾಡಿದರು.

ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ

ವಿದ್ಯಾರ್ಥಿಗಳು ಬರೆದ ಉತ್ತರಗಳಿಗೆ ಮೌಲ್ಯಮಾಪಕರು ಎಷ್ಟು ಅಂಕ ನೀಡಿದ್ದಾರೆ, ಅಥವಾ ಉತ್ತರ ಪೂರ್ಣ ಪ್ರಮಾಣದಲ್ಲಿ ಮೌಲ್ಯಮಾಪನ ಆಗಿದೆಯೇ ಎಂಬುದನ್ನು ತಿಳಿಯಲು ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯಬಹುದಾಗಿದೆ.

ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಮುನ್ನ ಸ್ಕ್ಯಾನ್ ಪ್ರತಿ ಪಡೆಯುವುದು ಖಡ್ಡಾಯ, ನಿಗದಿತ ದಿನಾಂಕದ ನಂತರ ಬರುವ ಅರ್ಜಿಯನ್ನು ಪರೀಕ್ಷಾ ಮಂಡಳಿ ಸ್ವೀಕರಿಸುವುದಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Minister Madhu Bangarapparecord percent passsslc result
0 FacebookTwitterPinterestEmail
admin

previous post
ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ
next post
ಮೇನಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ !

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ