Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ರಿಯಲ್ ಎಸ್ಟೇಟ್ ದಂಧೆಗೆ ಇಳಿದ ಕಾಂಗ್ರೆಸ್ ಸರ್ಕಾರ

by admin May 14, 2026
written by admin May 14, 2026 0 comments 1 minutes read
0FacebookTwitterPinterestEmail
68

ಬೆಂಗಳೂರು:ರಾಜಧಾನಿಗೆ ಪರ್ಯಾಯವಾಗಿ ಬಿಡದಿ ಬಳಿ ನವನಗರ ನಿರ್ಮಾಣ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಿಯಲ್ ಎಸ್ಟೇಟ್ ದಂಧೆಗೆ ಇಳಿದಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಗುರುತರ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿವಿಧ ಅಭಿವೃದ್ಧಿ ಹೆಸರಿನಲ್ಲಿ ರೈತರಿಂದ ಸ್ವಾಧೀನಪಡಿಸಿಕೊಂಡಿರುವ ಭೂಮಿ ಕುರಿತು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಗೆ ಕಿವಿಮಾತು

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪಿಸದ ಅವರು, ಯಾವುದೋ ಒಬ್ಬ ವ್ಯಕ್ತಿಯ ದಾಕ್ಷಿಣ್ಯಕ್ಕೆ ಬಲಿಯಾಗಿ ಮುಖ್ಯಮಂತ್ರಿ ರಿಯಲ್ ಎಸ್ಟೇಟ್ ದಲ್ಲಾಳಿ ಆಗಬಾರದು ಎಂದು ಕಿವಿಮಾತು ಹೇಳಿದರು.

ಆ ವ್ಯಕ್ತಿ ಹೇಳಿದಂತೆ ಕೇಳುವ ಮೂಲಕ ಇನ್ನೆರಡು ವರ್ಷ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ.

ಕುರ್ಚಿಗಾಗಿ ಸಿದ್ದರಾಮಯ್ಯ ತಮ್ಮ ಸಹಿಯನ್ನು ಮಾರಾಟ ಮಾಡಿಕೊಳ್ಳುತ್ತಿದ್ದಾರೆ, ಅಧಿಕಾರದ ಕೊನೆಗಾಲದಲ್ಲಿ ಹೆಸರು ಕೆಡಿಸಿಕೊಳ್ಳದೆ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು ಎಂದರು.

ಟೌನ್‌ಶಿಪ್‌ಗೆ ವಿರೋಧಿಸಿತ್ತು

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಗರದ ಹೊರವಲಯದಲ್ಲಿ ಐದು ಟೌನ್‌ಶಿಪ್‌ಗಳ ನಿರ್ಮಾಣಕ್ಕೆ ಮುಂದಾಗಿದ್ದೆ, ಆಗ ನನ್ನ ಸರ್ಕಾರಕ್ಕೆ ಬೆಂಬಲ ನೀಡಿದ್ದ ಕಾಂಗ್ರೆಸ್ ವಿರೋಧಿಸಿತ್ತು.

ಆ ಸಂದರ್ಭದಲ್ಲಿ ಕಾಂಗ್ರೆಸ್‌ನ ಎಚ್.ಕೆ.ಪಾಟೀಲ್ ಅಧ್ಯಕ್ಷತೆಯಲ್ಲಿ ಸತ್ಯಶೋಧನಾ ಸಮಿತಿ ರಚಿಸಲಾಯಿತು, ಆ ವರದಿಯಲ್ಲಿ ನವನಗರಗಳ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಲಾಗಿತ್ತು.

ಬಿಡದಿ ಬಳಿ ಟೌನ್‌ಶಿಪ್ ನಿರ್ಮಾಣ ಸಂಬಂಧ ಸ್ಥಳೀಯ ರೈತರ ಜೊತೆ ಎರಡು-ಮೂರು ಸಭೆಗಳನ್ನೂ ಮಾಡಿದ್ದೆ, ವಿರೋಧ ವ್ಯಕ್ತವಾದಾಗ ಯೋಜನೆಯನ್ನು ಕೈಬಿಟ್ಟಿದ್ದೆ ಎಂದರು.

ಬಿಡದಿ ರೈತರು ಕೃಷಿಕರೇ ಅಲ್ಲ

ಆದರೆ, ಇಂದು ಉಪಮುಖ್ಯಮಂತ್ರಿ, ಬಿಡದಿ ರೈತರು ಕೃಷಿಕರೇ ಅಲ್ಲ ಎಂಬುದಾಗಿ ಒಮ್ಮೆ ಹೇಳಿದರೆ, ಮತ್ತೊಮ್ಮೆ ಶೇಕಡ 80ರಷ್ಟು ರೈತರು ನವನಗರ ನಿರ್ಮಾಣಕ್ಕೆ ಅನುಮತಿ ಕೊಟ್ಟಿದ್ದಾರೆ ಎನ್ನುತ್ತಾರೆ.

ರೈತರನ್ನು ಬೆದರಿಸಿ ಭೂಸ್ವಾಧೀನಕ್ಕೆ ಶಿವಕುಮಾರ್ ಕೈಹಾಕಿದ್ದಾರೆ, ಈ ಯೋಜನೆಯಿಂದ ಸಾವಿರಾರು ಎಕರೆ ಕಬಳಿಕೆ ಆಗುತ್ತದೆ.

ವಶಪಡಿಸಿಕೊಂಡ ಭೂಮಿಯನ್ನು ಯಾರ‍್ಯಾರಿಗೆ ಹಂಚಲು ಹೊರಟಿದ್ದಾರೋ ತಿಳಿಯದು.

ಜಮೀನು ಯಾರ ಹೆಸರಿಗೆ

ಎಂಟು ಹಳ್ಳಿಗಳ ವ್ಯಾಪ್ತಿಯಲ್ಲಿ 2,320 ಎಕರೆ ಜಮೀನಿದೆ ಎಂದು ಉಲ್ಲೇಖಿಸಲಾಗಿತ್ತು, ಆದರೆ, ಅಧಿಸೂಚನೆಯಲ್ಲಿ 750 ಎಕರೆ ಎಂದಷ್ಟೇ ತಿಳಿಸಲಾಗಿದೆ, ಉಳಿದ ಜಮೀನು ಯಾರ ಹೆಸರಿಗೆ ಹೋಯಿತು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಶಾಸಕರು, ಅಧಿಕಾರಿಗಳು ಈ ಭೂಮಿಯನ್ನು ತಮ್ಮ ಹೆಸರಿಗೆ ಮಾಡಿಕೊಂಡು ಸರ್ಕಾರಿ ಹಣ ಲೂಟಿಗೆ ಹೊರಟಿದ್ದಾರೆ ಎಂದು ಆರೋಪಿಸಿದರು.

’ಎ’ ಖಾತಾ ಮತ್ತು ’ಬಿ’ ಖಾತಾ ಹೆಸರಿನಲ್ಲಿ ಬೆಂಗಳೂರು ಉಸ್ತುವಾರಿ ಸಚಿವರು ಹಣ ಹೊಡೆಯಲು ಹೊರಟಿದ್ದಾರೆ, ಅದಕ್ಕೆ ನಾಗರಿಕರು ಬಲಿಯಾಗಬಾರದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bidadi townshipcentral minister h d kumaraswamycm siddaramaiahcongres govt. real estate business
0 FacebookTwitterPinterestEmail
admin

previous post
ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ
next post
ಸಿದ್ದರಾಮಯ್ಯ ರಾಜ್ಯಸಭೆಗೆ

You may also like

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

July 7, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಎಸ್‌ಐಆರ್‌ನಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಆರೋಪ

July 3, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (514)
  • ಅಂಕಣ (109)
  • ಉದ್ಯೋಗ (339)
  • ದಿನ ಭವಿಷ್ಯ (110)
  • ರಾಜಕೀಯ (2,008)
  • ರಾಜ್ಯ (2,322)
  • ರಾಷ್ಟ್ರ (2,287)
  • ವಿಶ್ಲೇಷಣೆ (198)
  • ಶಿಕ್ಷಣ (400)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026

KMS Special

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ