Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕ್ರಿಯೆ ಚುರುಕು

by KM Shivaraju May 20, 2026
written by KM Shivaraju May 20, 2026 0 comments 1 minutes read
0FacebookTwitterPinterestEmail
71

ಬೆಂಗಳೂರು:ಕೇರಳಂ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ನ ವಿ.ಡಿ.ಸತೀಶನ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕರ್ನಾಟಕದಲ್ಲೂ ಅಧಿಕಾರ ಹಸ್ತಾಂತರ ಸಂಬಂಧ ಚಟುವಟಿಕೆಗಳು ಪಕ್ಷದ ಉನ್ನತ ಮಟ್ಟದಲ್ಲಿ ತೀವ್ರಗೊಂಡಿವೆ.

ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಸಚಿವರುಗಳು ಸತತವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ.

ಜಾರ್ಜ್ ನಿವಾಸದಲ್ಲಿ ಸಭೆ

ಕೇರಳಂನಲ್ಲಿ ಸತೀಶನ್ ಪ್ರಮಾಣವಚನ ಕಾರ್ಯಕ್ರಮ ಮುಗಿಸಿಕೊಂಡು ನಗರಕ್ಕೆ ಹಿಂತಿರುಗಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕೆಲವು ಸಚಿವರು ವಿಮಾನ ನಿಲ್ದಾಣ ಸಮೀಪವಿರುವ ಸಚಿವ ಕೆ.ಜೆ.ಜಾರ್ಜ್ ಅತಿಥಿ ಗೃಹದಲ್ಲಿ ರಾಜ್ಯ ಕಾಂಗ್ರೆಸ್ ನಾಯಕತ್ವ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದಾರೆ.

ಜಾರ್ಜ್ ನಿವಾಸದಲ್ಲಿ ಖರ್ಗೆ ಅವರು ಸಚಿವರೊಂದಿಗೆ ಸಮಾಲೋಚನೆ ನಂತರ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಜೊತೆ ಪ್ರತ್ಯೇಕ ಕೊಠಡಿಯಲ್ಲಿ ಮುಖಾಮುಖಿ ಚರ್ಚೆ ನಡೆಸಿದ್ದಾರೆ.

ಈ ವೇಳೆ ತಾವು ಅಧಿಕಾರ ಬಿಟ್ಟುಕೊಡಲು ಸಿದ್ಧ ಆದರೆ, ರಾಹುಲ್ ಗಾಂಧಿ ಅವರಿಂದ ನನಗೆ ಸಂದೇಶ ಬರಬೇಕೆಂದು ಸಿದ್ದರಾಮಯ್ಯ ಮತ್ತೊಮ್ಮೆ ತಮ್ಮ ಹಳೆಯ ಪಟ್ಟನ್ನೇ ಮುಂದಿಟ್ಟಿದ್ದಾರೆ.

ಸಿದ್ದರಾಮಯ್ಯ ಕಠಿಣ ನಿಲುವು

ಸಿದ್ದರಾಮಯ್ಯ ಅವರ ಕಠಿಣ ನಿಲುವಿನ ನಂತರ ಖರ್ಗೆ, ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ದೂರವಾಣಿ ಕರೆ ಮಾಡಿ, ಕೇರಳಂ ಸಮಸ್ಯೆ ಬಗೆಹರಿಯಿತು, ಅದೇ ರೀತಿ ಕರ್ನಾಟಕ ಕಾಂಗ್ರೆಸ್‌ನಲ್ಲಿನ ಗೊಂದಲ ನಿವಾರಣೆಗೆ ರಾಹುಲ್ ಗಾಂಧಿ ಅವರೊಂದಿಗೆ ಸಮಯ ನಿಗದಿ ಮಾಡಿ ಎಂದು ತಿಳಿಸಿದ್ದಾರೆ.

ಕರ್ನಾಟಕದ ಸಮಸ್ಯೆಯನ್ನು ದೀರ್ಘಕಾಲ ಎಳೆಯದೆ ಆದಷ್ಟು ಶೀಘ್ರ ಇತ್ಯರ್ಥಗೊಳಿಸಬೇಕಿದೆ, ತಪ್ಪಿದರೆ ನಾವೇ ಗೊಂದಲಕ್ಕೆ ಎಡೆ ಮಾಡಿಕೊಟ್ಟಂತಾಗುತ್ತದೆ.

ಕರ್ನಾಟಕದ ಬಗ್ಗೆ ಒಂದು ತೀರ್ಮಾನಕ್ಕೆ ಬರೋಣ ಎಂದು ಖರ್ಗೆ ಹೇಳುತ್ತಿದ್ದಂತೆ, ಆದಷ್ಟು ಶೀಘ್ರವೇ ಸಮಯ ನಿಗದಿ ಮಾಡುವುದಾಗಿ ವೇಣುಗೋಪಾಲ್ ಅತ್ತ ಕಡೆಯಿಂದ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಆಪ್ತರ ಸಭೆ

ಈ ಬೆಳವಣಿಗೆ ನಂತರವೇ ಮಂಗಳವಾರ ಬೆಳಗ್ಗೆ ಮತ್ತು ರಾತ್ರಿ ಮುಖ್ಯಮಂತ್ರಿ ಆಪ್ತರು ಪ್ರತ್ಯೇಕ ಸಭೆ ನಡೆಸಿದ್ದಲ್ಲದೆ, ಇಂದು ಬೆಳಗ್ಗೆ ಮತ್ತೆ ಜಾರ್ಜ್ ನಿವಾಸದಲ್ಲಿ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ಮಾಡಿದರು.

ಸಭೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಅವರನ್ನು ಸಂಪರ್ಕಿಸಿದ ಸಚಿವರು, ಸಿದ್ದರಾಮಯ್ಯ ಅವರನ್ನು ನಿಗೂಢ ಸ್ಥಳವೊಂದಕ್ಕೆ ಕರೆಸಿಕೊಂಡು ಚರ್ಚಿಸಿದರು.

ಇದರ ಬೆಳವಣಿಗೆ ಬೆನ್ನಲ್ಲೇ ಶಿವಕುಮಾರ್ ರಾಷ್ಟ್ರಮಟ್ಟದ ಆಂಗ್ಲ ವಾಹಿನಿಯೊಂದಕ್ಕೆ ಮಾಹಿತಿ ನೀಡಿ, ನನ್ನನ್ನು ಮತ್ತು ಮುಖ್ಯಮಂತ್ರಿ ಅವರನ್ನು ಎಐಸಿಸಿ ನಾಯಕರು ಶೀಘ್ರದಲ್ಲೇ ಮಾತುಕತೆಗೆ ಕರೆಯಲಿದ್ದಾರೆ ಎಂದಷ್ಟೇ ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicccm siddaramaiahcongres high command alertdcm d k shivakumark c venugopalMallikarjun Khargepower sharing
0 FacebookTwitterPinterestEmail
KM Shivaraju

previous post
ರೈತರ ಆತ್ಮಹತ್ಯೆ ಪ್ರಕರಣಗಳನ್ನು ಜಾಣ್ಮೆಯಿಂದ ಮುಚ್ಚಿಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ
next post
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ ಸಾಧ್ಯವಿಲ್ಲ

You may also like

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

July 7, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಎಸ್‌ಐಆರ್‌ನಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಆರೋಪ

July 3, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (514)
  • ಅಂಕಣ (109)
  • ಉದ್ಯೋಗ (339)
  • ದಿನ ಭವಿಷ್ಯ (110)
  • ರಾಜಕೀಯ (2,008)
  • ರಾಜ್ಯ (2,322)
  • ರಾಷ್ಟ್ರ (2,287)
  • ವಿಶ್ಲೇಷಣೆ (198)
  • ಶಿಕ್ಷಣ (400)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026

KMS Special

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ