Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕರ್ನಾಟಕ ಕಾಂಗ್ರೆಸ್‌ನ ಅಧಿಕಾರ ಹಸ್ತಾಂತರ ಗೊಂದಲಕ್ಕೆ ಹೈಕಮಾಂಡ್ ಮುಲಾಮು

by KM Shivaraju May 25, 2026
written by KM Shivaraju May 25, 2026 0 comments 1 minutes read
0FacebookTwitterPinterestEmail
66

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನ ಅಧಿಕಾರ ಹಸ್ತಾಂತರ ಗೊಂದಲಕ್ಕೆ ಕಾಂಗ್ರೆಸ್ ವರಿಷ್ಠರು ಅಂತು ಮಂಗಳವಾರ ತೆರೆ ಎಳೆಯಲಿದ್ದಾರೆ.


ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಪ್ರತ್ಯೇಕವಾಗಿ ಸಂಪರ್ಕಿಸಿ, ದೆಹಲಿಗೆ ಬರುವಂತೆ ಸೂಚಿಸಿದ್ದಾರೆ.


ವರಿಷ್ಠರ ಆದೇಶದ ಮೇರೆಗೆ ಉಭಯ ನಾಯಕರು ಸೋಮವಾರ ರಾತ್ರಿ ದೆಹಲಿಗೆ ತೆರಳಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಇಂದಿರಾಭವನದಲ್ಲಿ ಕರ್ನಾಟಕ ಕಾಂಗ್ರೆಸ್ ಗೊಂದಲದ ನಿವಾರಣೆಗೆ ಮಹತ್ವದ ಸಭೆ ನಡೆಯಲಿದೆ.
ಸಭೆಯಲ್ಲಿ ನಾಯಕತ್ವ ವಿಚಾರವಷ್ಟೇ ಅಲ್ಲದೆ, ಸಂಪುಟ ಪುನಾರಚನೆ, ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನಪರಿಷತ್ತಿಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮಹತ್ವದ ಚರ್ಚೆ ನಡೆಯಲಿದೆ.


ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿರುವ ಸಭೆಯಲ್ಲಿ ಪಕ್ಷದ ಅಧಿನಾಯಕ ರಾಹುಲ್‌ಗಾಂಧಿ, ಎಐಸಿಸಿ ಕಾರ್ಯದರ್ಶಿಗಳಾದ ವೇಣುಗೋಪಾಲ್, ಸುರ್ಜೆವಾಲ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.


ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಆಡಳಿತಕ್ಕೆ ಎರಡೂವರೆ ವರ್ಷಗಳು ತುಂಬುತ್ತಿದ್ದಂತೆ ಕಳೆದ ಆರೇಳು ತಿಂಗಳಿನಿಂದಲೂ ಅಧಿಕಾರ ಹಸ್ತಾಂತರ ವಿಚಾರ ಹಾದಿ ಬೀದಿಯಲ್ಲಿ ಚರ್ಚೆಗೆ ಗ್ರಾಸವಾಗಿ ಕಾಂಗ್ರೆಸ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.
ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಪೂರ್ಣಗೊಂಡು, ರಾಜ್ಯಸಭಾ ಚುನಾವಣೆ ಎದುರಾಗಿರುವ ಬೆನ್ನೆಲ್ಲೇ, ರಾಹುಲ್‌ಗಾಂಧಿ ಕರ್ನಾಟಕಕ್ಕೆ ಹೊಸ ಸೂತ್ರ ನೀಡಿ, ನಾಯಕತ್ವದ ವಿಚಾರ ಬಗೆಹರಿಸಲು ಹೊರಟಿದ್ದಾರೆ.


ರಾಜ್ಯ ವಿಧಾನ ಸಭೆಯಿಂದ ರಾಜ್ಯ ಸಭೆಗೆ ನಡೆಯುತ್ತಿರುವ ದೈವಾರ್ಷಿಕ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಅವಕಾಶ ಮಾಡಿಕೊಟ್ಟು, ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ನೀಡುವುದರ ಮೂಲಕ ಮುಖ್ಯಮಂತ್ರಿ ಸ್ಥಾನದಿಂದ ಗೌರವವಾಗಿ ಇಳಿಸಿ, ರಾಷ್ಟ್ರ ರಾಜಕಾರಣಕ್ಕೆ ಬಳಸಿಕೊಳ್ಳಲು ರಾಹುಲ್‌ಗಾಂಧಿ ಮುಂದಾಗಿದ್ದಾರೆ ಎನ್ನಲಾಗಿದೆ.


ರಾಷ್ಟ್ರೀಯ ಮಟ್ಟದಲ್ಲಿ ಹಿಂದುಳಿದ ವರ್ಗಗಳನ್ನು ಒಂದು ಮಾಡುವ ಉದ್ದೇಶದಿಂದ ಸಿದ್ದರಾಮಯ್ಯ ಅವರನ್ನೇ ಮುಂಚೂಣಿಗೆ ತರಲು ರಾಹುಲ್ ಚಿಂತನೆ ನಡೆಸಿದ್ದಾರೆ.
ರಾಜ್ಯಸಭಾ ಚುನಾವಣೆ ಅಸ್ತ್ರವಾಗಿ ಮಾಡಿಕೊಂಡು ಕರ್ನಾಟಕ ಕಾಂಗ್ರೆಸ್ ಗೊಂದಲವನ್ನು ಬಗೆಹರಿಸಲು ಶಿವಕುಮಾರ್‌ಗೆ ಪಟ್ಟಕಟ್ಟುವ ಉದ್ದೇಶವು ಇದಾಗಿದೆ.
ಮುಖ್ಯಮಂತ್ರಿಯವರಿಗೂ ರಾಹುಲ್ ಅವರ ಚಿಂತನೆ ಅರಿವಿಗೆ ಬಂದಿದೆ. ಅವರು ಈ ಸಂಬಂಧ ಆಪ್ತ ಸಚಿವರೊಟ್ಟಿಗೆ ಈಗಾಗಲೇ ಚರ್ಚೆ ಮಾಡಿದ್ದಾರೆ.


ಈ ವಿಷಯ ಪ್ರಸ್ತಾಪಗೊಂಡರೆ, ತಾವು ರಾಜ್ಯ ರಾಜಕಾರಣದಲ್ಲೇ ಮುಂದುವರೆಯುತ್ತೇನೆ. ತಮಗೆ ಮಂತ್ರಿಮಂಡಲ ಪುನಾರಚನೆಗೆ ಅವಕಾಶ ಮಾಡಿಕೊಡಿ ಎಂದು ರಾಹುಲ್ ಅವರಿಗೆ ಚರ್ಚೆ ಸಂದರ್ಭದಲ್ಲೇ ಮನವಿ ಮಾಡಿಕೊಳ್ಳಲಿದ್ದಾರೆ.
ಒಂದು ವೇಳೆ ರಾಹುಲ್ ತಮ್ಮ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ, ರಾಜ್ಯಸಭಾ ಸ್ಥಾನ ಸ್ವೀಕರಿಸಲು ಸಮ್ಮತಿಸಿ, ತಮ್ಮಿಂದ ತೆರವಾಗುವ ಸ್ಥಾನಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಆಯ್ಕೆ ಮಾಡಿ ಎಂದು ಕೋರಲಿದ್ದಾರಂತೆ.


ರಾಜ್ಯ ನಾಯಕತ್ವ ಸಂಬಂಧ ರಾಹುಲ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ.
ಕೊನೆಯವರೆಗೂ ನನ್ನ ಪ್ರಯತ್ನವನ್ನು ಮುಂದುವರೆಸುವುದಾಗಿಯೋ ಸಿದ್ದರಾಮಯ್ಯ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.
ಅಷ್ಟೇ ಅಲ್ಲ, ವರಿಷ್ಠರ ಮೇಲೆ ಒತ್ತಡ ಹೇರುವ ಉದ್ದೇಶದಿಂದಲೇ ದೆಹಲಿಗೆ ತಮ್ಮ ಆಪ್ತ ಸಚಿವರಾದ ಪರಮೇಶ್ವರ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಸತೀಶ್ ಜಾರಕಿಹೊಳಿ, ಡಾ. ಹೆಚ್.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್ ಸೇರಿದಂತೆ ಕೆಲವು ಸಚಿವರು, ಶಾಸಕರನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
confusioncongressHigh Commandkarnatakapowersolutiontransfer
0 FacebookTwitterPinterestEmail
KM Shivaraju

previous post
ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ರಣಕಹಳೆ
next post
ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

You may also like

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

July 7, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಎಸ್‌ಐಆರ್‌ನಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಆರೋಪ

July 3, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (514)
  • ಅಂಕಣ (109)
  • ಉದ್ಯೋಗ (339)
  • ದಿನ ಭವಿಷ್ಯ (110)
  • ರಾಜಕೀಯ (2,008)
  • ರಾಜ್ಯ (2,322)
  • ರಾಷ್ಟ್ರ (2,287)
  • ವಿಶ್ಲೇಷಣೆ (198)
  • ಶಿಕ್ಷಣ (400)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026

KMS Special

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ