Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

by KM Shivaraju May 28, 2026
written by KM Shivaraju May 28, 2026 0 comments 1 minutes read
0FacebookTwitterPinterestEmail
69

ಬೆಂಗಳೂರು:ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ.

ಗುರುವಾರ ಮಧ್ಯಾನ್ಹ ತಮ್ಮ ಸಹೋದ್ಯೋಗಿಗಳೊಂದಿಗೆ ಲೋಕಭವನಕ್ಕೆ ತೆರಳಿದ ಮುಖ್ಯಮಂತ್ರಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅನುಪಸ್ಥಿತಿಯಲ್ಲಿ ಅವರ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ಪತ್ರ ಸ್ವೀಕರಿಸಿದ ಕಾರ್ಯದರ್ಶಿ, ರಾಜೀನಾಮೆ ವಿಷಯವನ್ನು ಇಂದೋರ್ ಪ್ರವಾಸದಲ್ಲಿರುವ ರಾಜ್ಯಪಾಲರ ಗಮನಕ್ಕೆ ತಂದು, ಅವರ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ರಾಜ್ಯಪಾಲರ ಅನುಪಸ್ಥಿತಿ

ರಾಜ್ಯಪಾಲರು ಬುಧವಾರ ತಡರಾತ್ರಿ ಮುಂಬೈಗೆ ತೆರಳಿ ಅಲ್ಲಿನ ಲೋಕಭವನದಲ್ಲಿ ತಂಗಿ ಇಂದು ಬೆಳಗ್ಗೆ ಇಂದೋರ್‌ಗೆ ಪ್ರಯಾಣಿಸಿದ್ದಾರೆ.

ರಾಜ್ಯಪಾಲರ ಹಠಾತ್ ಪ್ರವಾಸದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಅನೇಕ ವಂದತಿಗಳು ಕೇಳಿಬಂದವಾದರೂ, ಪಕ್ಷದ ವರಿಷ್ಠರ ಆದೇಶದಂತೆ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿ ಹಿಂತಿರುಗಿದರು.

ರಾಜೀನಾಮೆ ಪತ್ರ ನೀಡುವುದಕ್ಕೂ ಮುನ್ನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ ಮತ್ತು ಕಾವೇರಿಯಲ್ಲಿ ಅನೇಕ ನಾಟಕೀಯ ಬೆಳವಣಿಗೆಗಳು ನಡೆದವು.

ಶಿವಕುಮಾರ್ ಜೊತೆ ಚರ್ಚೆ

ತಮ್ಮ ಸಹೋದ್ಯೋಗಿಗಳಿಗೆ ಉಪಹಾರ ಕೂಟ ಏರ್ಪಡಿಸಿದ್ದ ಮುಖ್ಯಮಂತ್ರಿ, ಅದಕ್ಕೂ ಮುನ್ನ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಸುಮಾರು 30 ನಿಮಿಷ ಮುಖಾಮುಖಿ ಚರ್ಚೆ ನಡೆಸಿದರು.

ಸಿದ್ದರಾಮಯ್ಯ ಭೇಟಿ ಮಾಡುತ್ತಿದ್ದಂತೆ ಅವರನ್ನು ಶಿವಕುಮಾರ್ ಅಪ್ಪಿಕೊಂಡು, ಕಾಲಿಗೆರಗಿ ಆಶೀರ್ವಾದ ಪಡೆದರು.

ನಂತರ ಉಪಹಾರ ಕೂಟದಲ್ಲಿ ಸಿದ್ದರಾಮಯ್ಯ ಸ್ವಯಂ ಪ್ರೇರಿತರಾಗಿ ಪಕ್ಷದ ಆದೇಶದ ಮೇರೆಗೆ ಮುಖ್ಯಮಂತ್ರಿ ಸ್ಥಾನ ತ್ಯಜಿಸುತ್ತಿದ್ದೇನೆ.

ಅಸಮಾಧಾನ ಇಲ್ಲ

ಈ ಬೆಳವಣಿಗೆಯಿಂದ ನನಗೆ ಯಾವುದೇ ಅಸಮಾಧಾನ ಇಲ್ಲ, ಮನಃಪೂರ್ವಕವಾಗಿಯೇ ಅಧಿಕಾರದಿಂದ ಕೆಳಗಿಯುತ್ತಿದ್ದೇನೆ, ಎನ್ನುತ್ತಾ ಪಕ್ಕದಲ್ಲೇ ಕುಳಿತಿದ್ದ ಶಿವಕುಮಾರ್ ಹೆಗಲು ತಟ್ಟಿ ಒಳ್ಳೆಯದಾಗಲಿ ಎನ್ನುವ ಮೂಲಕ ಪರೋಕ್ಷವಾಗಿ, ಇವರೇ ಮುಂದಿನ ನಮ್ಮ ನಾಯಕರು ಎಂಬುದನ್ನು ತಮ್ಮ ಸಹೋದ್ಯೋಗಿಗಳಿಗೆ ತಿಳಿಸಿದರು.

ನಾನು ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ದೆಹಲಿ ವರಿಷ್ಠರ ಮುಂದೆ ಆಗಿದ್ದ ಒಪ್ಪಂದದಂತೆ ಅಧಿಕಾರದಿಂದ ಕೆಳಗಿಳಿಯುತ್ತಿದ್ದೇನೆ.

ವರಿಷ್ಠರು ಸೂಚಿಸದ್ದನ್ನು ಪಾಲಿಸುವುದು ನನ್ನ ಕರ್ತವ್ಯ ಎಂದರಾದರೂ, ತಮ್ಮ ನಂತರ ಯಾರು ಮುಖ್ಯಮಂತ್ರಿ ಎಂಬುದನ್ನು ಬಹಿರಂಗ ಪಡಿಸಲಿಲ್ಲ.

ಮುಂದಿನ ನಾಯಕನನ್ನು ನಿರ್ಧರಿಸುತ್ತೇವೆ

ದೆಹಲಿಯಲ್ಲಿ ಮಂಗಳವಾರ ನಡೆದ ಮಾತುಕತೆ ವೇಳೆ, ನೀವು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ, ನಂತರ ಯಾರು ನಾಯಕರು ಎಂಬುದನ್ನು ನಾವು ನಿರ್ಧರಿಸುತ್ತೇವೆ ಎಂಬುದಾಗಿ ತಿಳಿಸಿದ್ದಾರೆ ಎಂದರು.

ಸಿದ್ದರಾಮಯ್ಯ ರಾಜೀನಾಮೆ ಪದ ಬಳಸುತ್ತಿದ್ದಂತೆ ಶಿವಕುಮಾರ್ ಸೇರಿದಂತೆ ಅನೇಕ ಸಚಿವರು ಬಾವುಕರಾದರು.

ಉಪಹಾರದ ನಂತರ ಕಾವೇರಿ ನಿವಾಸದಲ್ಲಿ ಸಚಿವರು, ಶಾಸಕರು ಮತ್ತು ಮುಖಂಡರೊಂದಿಗೆ ಸಮಾಲೋಚಿಸಿ, ಮಧ್ಯಾನ್ಹ ರಾಜೀನಾಮೆ ನೀಡಲು ಲೋಕಭವನಕ್ಕೆ ತೆರಳಲು ಸಜ್ಜಾದರು.

ಅಭಿಮಾನಿಗಳ ಕೋರಿಕೆ

ಈ ವೇಳೆ ಕೆಲವು ಶಾಸಕರು ಮತ್ತು ಅಭಿಮಾನಿಗಳು ಬಾಗಿಲಲ್ಲಿ ಅಡ್ಡ ನಿಂತು ’ನೀವು ರಾಜೀನಾಮೆ ನೀಡಬೇಡಿ’ ಎಂದು ಬೇಡಿಕೊಂಡರು.

ಆದರೆ, ಸಿದ್ದರಾಮಯ್ಯ ಏನನ್ನೂ ಪ್ರತಿಕ್ರಿಯಿಸದೆ, ಅವರನ್ನು ದೂರ ಸರಿಸಿ ಲೋಕಭವನಕ್ಕೆ ತೆರಳಿದರು.

ವರಿಷ್ಠರ ಭೇಟಿಗೆ ದೆಹಲಿಗೆ

ಲೋಕಭವನದಿಂದ ಹಿಂತಿರುಗಿ, ಪತ್ರಿಕಾಗೋಷ್ಠಿ ನಡೆಸಿದ ತಕ್ಷಣವೇ ಪಕ್ಷದ ವರಿಷ್ಠರ ಭೇಟಿಗಾಗಿ ದೆಹಲಿಗೆ ದೌಢಾಯಿಸಿದರು.

ಈ ಮಧ್ಯೆ, ಸಿದ್ದರಾಮಯ್ಯ ತಮ್ಮ ರಾಜೀನಾಮೆ ಪತ್ರ ನೀಡುತ್ತಿದ್ದಂತೆ ಉಪಮುಖ್ಯಮಂತ್ರಿಗಳ ಕಾರ್ಯಾಲಯ ಐದಾರು ಪುಟಗಳ ವ್ಯಕ್ತಿ ಪರಿಚಯ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
clp to choose new leaderresignation letter hanaded over to governor officesiddaramaiah resigns as chief minister
0 FacebookTwitterPinterestEmail
KM Shivaraju

previous post
ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
next post
ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

You may also like

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

July 7, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಎಸ್‌ಐಆರ್‌ನಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಆರೋಪ

July 3, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (514)
  • ಅಂಕಣ (109)
  • ಉದ್ಯೋಗ (339)
  • ದಿನ ಭವಿಷ್ಯ (110)
  • ರಾಜಕೀಯ (2,008)
  • ರಾಜ್ಯ (2,322)
  • ರಾಷ್ಟ್ರ (2,287)
  • ವಿಶ್ಲೇಷಣೆ (198)
  • ಶಿಕ್ಷಣ (400)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026

KMS Special

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ