Friday, May 29, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, May 29, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

by KM Shivaraju May 29, 2026
written by KM Shivaraju May 29, 2026 0 comments 1 minutes read
0FacebookTwitterPinterestEmail
4

ಬೆಂಗಳೂರು:ಸಿದ್ದರಾಮಯ್ಯ ನೀಡಿದ ರಾಜೀನಾಮೆ ಅಂಗೀಕಾರ ಆಗುತ್ತಿದ್ದಂತೆ, ಡಿ.ಕೆ.ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲು ಕಾಂಗ್ರೆಸ್ ವರಿಷ್ಠರು ವೇದಿಕೆ ಸಿದ್ಧಪಡಿಸಿದ್ದಾರೆ.

ನಾಯಕನ ಆಯ್ಕೆಗೆ ಮೇ 30ರ ಶನಿವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಒಂದು ಸಾಲಿನ ನಿರ್ಣಯ

ಕಾಂಗ್ರೆಸ್ ಸಂಪ್ರದಾಯದಂತೆ ಎಐಸಿಸಿ ನಿಯೋಜಿಸಿರುವ ವೀಕ್ಷಕರು, ಒಂದು ಸಾಲಿನ ನಿರ್ಣಯ ತಂದು ಅಂಗೀಕಾರ ಪಡೆಯುವ ಮೂಲಕ ಸರ್ಕಾರ ರಚನೆಗೆ ಶಿವಕುಮಾರ್ ಹಾದಿ ಸುಗಮಗೊಳಿಸಲಿದ್ದಾರೆ.

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ, ಶಿವಕುಮಾರ್ ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕೋತ್ತಾಯ ಪ್ರಸ್ತಾವನೆ ಸಲ್ಲಿಸಲಿದ್ದಾರೆ.

ಶಿವಕುಮಾರ್ ಜೊತೆ ಕೆಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವೇದಿಕೆ ಸಿದ್ಧಗೊಳ್ಳುತ್ತಿದೆ.

ಮಳೆ ಬಂದರೆ ಸ್ಥಳಾಂತರ

ಒಂದೊಮ್ಮೆ ಮಳೆ ಬಂದರೆ, ಕೊನೆ ಗಳಿಗೆಯಲ್ಲಿ ಪ್ರಮಾಣವಚನ ಸಮಾರಂಭವನ್ನು ಕಂಠೀರವ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡುವ ಸಿದ್ಧತೆಯೂ ನಡೆದಿದೆ.

ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್, ಕೆಲವು ಶಾಸಕರು ಮತ್ತು ಪಕ್ಷದ ಮುಖಂಡರನ್ನು ಸಂಪರ್ಕಿಸಿ, ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯುವ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸುತ್ತಿದ್ದಾರೆ.

ಭಾನುವಾರ, ಸೋಮವಾರ ಇಲ್ಲವೇ ಬುಧವಾರದಂದು ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಸರ್ಕಾರ ರಚನೆ ಚರ್ಚೆ

ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತಿದ್ದಂತೆ ಗುರುವಾರ ರಾತ್ರಿಯೇ ದೆಹಲಿಗೆ ದೌಢಾಯಿಸಿದ ಶಿವಕುಮಾರ್ ಇಂದು ಇಡೀ ದಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಸರ್ಕಾರ ರಚನೆ ಕುರಿತು ಸಮಾಲೋಚಿಸಿದ್ದಾರೆ.

ನಂತರ ಶಾಸಕಾಂಗ ಪಕ್ಷದ ಸಭೆ ನಿಗದಿ ಮಾಡಲಾಯಿತು, ಈ ವೇಳೆ ದೆಹಲಿಯಲ್ಲೇ ಪುತ್ರನೊಂದಿಗೆ ಬಿಡಾರ ಹೂಡಿದ್ದ ಸಿದ್ದರಾಮಯ್ಯ ಅವರನ್ನೂ ಎರಡು-ಮೂರು ಬಾರಿ ಭೇಟಿ ಮಾಡಿ ಸಮಾಲೋಚಿಸಿದರು.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ವೇಳೆಯೇ ಮಂತ್ರಿಮಂಡಲಕ್ಕೆ ಯಾರನ್ನು ಸೇರ್ಪಡೆಗೊಳಿಸಬೇಕೆಂಬ ಕುರಿತು ಶಿವಕುಮಾರ್, ವರಿಷ್ಠರಿಗೆ ಸಂಭವನೀಯ ಸಚಿವರ ಪಟ್ಟಿ ನೀಡಿದ್ದಾರೆ ಎನ್ನಲಾಗಿದೆ.

ಮೌನ ಮುರಿದ ಶಿವಕುಮಾರ್

ಕಳೆದ ಮೂರು ದಿನಗಳಿಂದ ಮೌನವಾಗಿದ್ದ ಶಿವಕುಮಾರ್, ಇಂದು ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಶನಿವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದರು.

ಪಕ್ಷದ ಎಲ್ಲಾ ಶಾಸಕರು ಬೆಂಗಳೂರಿನಲ್ಲೇ ಇರುವಂತೆ ಸೂಚಿಸಲಾಗಿದೆ, ವರಿಷ್ಠರ ಆದೇಶದ ಮೇರೆಗೆ ಸಮಯ ನಿಗದಿ ಪಡಿಸಲಾಗಿದೆ ಎಂದರು.

ಮೊದಲು ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಂತರ ಉಳಿದೆಲ್ಲಾ ಪ್ರಕ್ರಿಯೆಗಳು ಪ್ರಾರಂಭವಾಗಲಿದೆ ಎಂದರಲ್ಲದೆ, ಇನ್ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡಲಿಲ್ಲ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
clp meetcongres leaders will attnedd k shivakumar will be new clp leadersaturday at 4 pmvidhana soudha
0 FacebookTwitterPinterestEmail
KM Shivaraju

previous post
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

You may also like

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 27, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ಕರ್ನಾಟಕ ಕಾಂಗ್ರೆಸ್‌ನ ಅಧಿಕಾರ ಹಸ್ತಾಂತರ ಗೊಂದಲಕ್ಕೆ ಹೈಕಮಾಂಡ್ ಮುಲಾಮು

May 25, 2026

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ರಣಕಹಳೆ

May 23, 2026

ಕರ್ನಾಟಕದಿಂದ ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಕಸರತ್ತು

May 22, 2026

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ ಸಾಧ್ಯವಿಲ್ಲ

May 21, 2026

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕ್ರಿಯೆ ಚುರುಕು

May 20, 2026

ರೈತರ ಆತ್ಮಹತ್ಯೆ ಪ್ರಕರಣಗಳನ್ನು ಜಾಣ್ಮೆಯಿಂದ ಮುಚ್ಚಿಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ

May 19, 2026

ಮುಂಗಾರು ಮಳೆ ಕೊರತೆ ಸಂಭವ; ಆಹಾರ ಉತ್ಪಾದನೆ ಶೇ.30 ಕುಂಠಿತ

May 18, 2026

Social Networks

Facebook Twitter Instagram Linkedin Youtube Email Rss

KMS Analysis

  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026
  • ಕರ್ನಾಟಕ ಕಾಂಗ್ರೆಸ್‌ನ ಅಧಿಕಾರ ಹಸ್ತಾಂತರ ಗೊಂದಲಕ್ಕೆ ಹೈಕಮಾಂಡ್ ಮುಲಾಮು

    May 25, 2026
  • ರೈತರ ಆತ್ಮಹತ್ಯೆ ಪ್ರಕರಣಗಳನ್ನು ಜಾಣ್ಮೆಯಿಂದ ಮುಚ್ಚಿಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ

    May 19, 2026
  • ಮುಂಗಾರು ಮಳೆ ಕೊರತೆ ಸಂಭವ; ಆಹಾರ ಉತ್ಪಾದನೆ ಶೇ.30 ಕುಂಠಿತ

    May 18, 2026

Categories

  • Special Story (475)
  • ಅಂಕಣ (109)
  • ಉದ್ಯೋಗ (331)
  • ದಿನ ಭವಿಷ್ಯ (110)
  • ರಾಜಕೀಯ (1,969)
  • ರಾಜ್ಯ (2,283)
  • ರಾಷ್ಟ್ರ (2,251)
  • ವಿಶ್ಲೇಷಣೆ (194)
  • ಶಿಕ್ಷಣ (395)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

    May 29, 2026
  • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 28, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

KMS Special

  • ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

    May 29, 2026
  • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 28, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ