Friday, July 17, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, July 17, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆಶಿಕ್ಷಣ

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

by KM Shivaraju June 1, 2026
written by KM Shivaraju June 1, 2026 0 comments 1 minutes read
0FacebookTwitterPinterestEmail
124

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ತಮ್ಮ ಅಧಿಕೃತ ನಿವಾಸವನ್ನಾಗಿ ಕುಮಾರಕೃಪಾ ಅತಿಥಿಗೃಹವನ್ನು ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ.

ಕುಮಾರ ಕೃಪ ಅತಿಥಿ ಗೃಹದ ಹಳೆಯ ಕಟ್ಟಡ ಪ್ರದೇಶ ಸಾಕಷ್ಟು ವಿಶಾಲವಾಗಿದೆ. ಸಾರ್ವಜನಿಕರ ಭೇಟಿ, ಅಧಿಕಾರಿಗಳೊಂದಿಗೆ ಸಭೆ, ವಾಹನ ನಿಲುಗಡೆ ಸೇರಿದಂತೆ ಹಲವು ಅನುಕೂಲಕರ ಅಂಶಗಳನ್ನು ಈ ಕಟ್ಟಡ ಹೊಂದಿದೆ.

ಹೀಗಾಗಿ ಇದನ್ನು ತಮ್ಮ ಅಧಿಕೃತ ನಿವಾಸವಾಗಿ ಮಾರ್ಪಡಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದಾರೆ.

ಕುಮಾರಕೃಪಾ ಅತಿಥಿ ಗೃಹದ ಹಳೆಯ ಕಟ್ಟಡದಲ್ಲಿ ಇದೀಗ ಮುಖ್ಯಮಂತ್ರಿ ನಿವಾಸಕ್ಕೆ ಬೇಕಾಗಿರುವ ಮೂಲಸೌಕರ್ಯವನ್ನು ಸೃಷ್ಟಿಸಲು ತೀರ್ಮಾನಿಸಲಾಗಿದೆ.
ಕುಮಾರ ಕೃಪಾ ರಸ್ತೆಯಲ್ಲಿರುವ‌ ಈ ಭವ್ಯ ಕಟ್ಟಡವನ್ನು ಸುಮಾರು 100 ವರ್ಷಗಳಿಗಿಂತಲೂ ಹಿಂದೆ ನಿರ್ಮಿಸಲಾಗಿದೆ.

ಈ ಹಳೆಯ ಬಂಗಲೆಯು ಯುರೋಪಿಯನ್ ಶೈಲಿಯ ಶಾಸ್ತ್ರೀಯ ವಾಸ್ತುಶಿಲ್ಪವನ್ನು ಹೋಲುತ್ತದೆ. ಈ ಕಟ್ಟಡದಲ್ಲಿ ಎತ್ತರವಾದ ಸೀಲಿಂಗ್‌ಗಳು, ವಿಶಾಲವಾದ ವರಾಂಡಾಗಳು, ಕಮಾನು ಮಾದರಿಯ ಕಿಟಕಿಗಳು ಮತ್ತು ಸುತ್ತಲೂ ಹರಡಿರುವ ಹಸಿರು ಉದ್ಯಾನವನ. ಇದು ರಾಜ ಗಾಂಭೀರ್ಯವನ್ನು ಉಳಿಸಿಕೊಂಡಿದೆ.

ಮೈಸೂರಿನ ದಿವಾನರಾಗಿದ್ದ ಸರ್ ಕೆ. ಶೇಷಾದ್ರಿ ಅಯ್ಯರ್ ಅವರ ನಿವಾಸವಾಗಿ ಇದನ್ನು ನಿರ್ಮಿಸಲಾಗಿತ್ತು. ಶೇಷಾದ್ರಿ ಅಯ್ಯರ್ ಅವರ ನಿಧನದ ನಂತರ, ಈ ಆಸ್ತಿಯನ್ನು ಮೈಸೂರು ರಾಜಮನೆತನದವರು ಖರೀದಿಸಿದರು. ಮೈಸೂರಿನ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಬೆಂಗಳೂರಿಗೆ ಬಂದಾಗ ತಂಗಲು ಮತ್ತು ಅವರ ಆಪ್ತ ಅತಿಥಿಗಳಿಗೆ ಆತಿಥ್ಯ ನೀಡಲು ಈ ಬಂಗಲೆಯನ್ನು ಬಳಸುತ್ತಿದ್ದರು.

1923 ರ ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ಸುಮಾರು ನಾಲ್ಕು ತಿಂಗಳ ಕಾಲ ಗಾಂಧೀಜಿಯವರು ತಮ್ಮ ಆರೋಗ್ಯ ಸುಧಾರಣೆಗಾಗಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಆ ಸಮಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಗಾಂಧೀಜಿಯವರನ್ನು ಮೈಸೂರು ರಾಜ್ಯದ ಅಧಿಕೃತ ಅತಿಥಿಯನ್ನಾಗಿ ಘೋಷಿಸಿ, ಅವರಿಗೆ ಕುಮಾರಕೃಪಾ ಬಂಗಲೆಯಲ್ಲಿ ಉಳಿದುಕೊಳ್ಳಲು ರಾಜಾತಿಥ್ಯದ ವ್ಯವಸ್ಥೆ ಮಾಡಿಕೊಟ್ಟಿದ್ದರು.

​ಗಾಂಧೀಜಿಯವರು ಇಲ್ಲಿ ತಂಗಿದ್ದಾಗ ಪ್ರತಿದಿನ ಸಂಜೆ ಇಲ್ಲಿನ ವಿಶಾಲ ಮೈದಾನದಲ್ಲಿ ಸಾರ್ವಜನಿಕ ಪ್ರಾರ್ಥನಾ ಸಭೆಗಳು ನಡೆಯುತ್ತಿದ್ದವು. ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ, ಇದು ಕರ್ನಾಟಕ ಸರ್ಕಾರದ ಅಧಿಕೃತ ರಾಜ್ಯ ಅತಿಥಿ ಗೃಹವಾಗಿ ಮಾರ್ಪಟ್ಟಿತು.

ಈಗ ಇದನ್ನು ಮುಖ್ಯಮಂತ್ರಿಗಳ ಅಧಿಕೃತ ನಿವಾಸವಾಗಿ ಮಾರ್ಪಡಿಸಲಾಗುತ್ತಿದೆ. ಸದ್ಯ ಮುಖ್ಯಮಂತ್ರಿಗಳ ಅಧಿಕೃತ ನಿವಾಸವಾಗಿರುವ ಕಾವೇರಿ ಬಂಗ್ಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೇ ಆಧುನಿಕರಣಗೊಳಿಸಿದ್ದರು.

ಹೀಗಾಗಿ ಇನ್ನು ಕೆಲವು ದಿನಗಳ ಕಾಲ ಸಿದ್ದರಾಮಯ್ಯ ಅವರು ಅದೇ ಮನೆಯಲ್ಲಿ ವಾಸಿಸಲಿ ಎಂದು ಬಯಸಿರುವ ಡಿ.ಕೆ.ಶಿವಕುಮಾರ್ ಕುಮಾರ ಕೃಪಾ ಅತಿಥಿಗೃಹವನ್ನು ತಮ್ಮ ಅಧಿಕೃತ ನಿವಾಸವಾಗಿ ಬಳಸಲು ತೀರ್ಮಾನಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Chief MinisterconvertedDKGuest HouseKumara KruparesidenceShivakumartake charge
0 FacebookTwitterPinterestEmail
KM Shivaraju

previous post
ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ
next post
ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

You may also like

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

July 7, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (517)
  • ಅಂಕಣ (109)
  • ಉದ್ಯೋಗ (339)
  • ದಿನ ಭವಿಷ್ಯ (110)
  • ರಾಜಕೀಯ (2,011)
  • ರಾಜ್ಯ (2,325)
  • ರಾಷ್ಟ್ರ (2,290)
  • ವಿಶ್ಲೇಷಣೆ (198)
  • ಶಿಕ್ಷಣ (400)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

    July 16, 2026
  • ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

    July 15, 2026
  • ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

    July 14, 2026

KMS Special

  • ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

    July 16, 2026
  • ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

    July 15, 2026
  • ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

    July 14, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ