Wednesday, August 26, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, August 26, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

by admin July 11, 2026
written by admin July 11, 2026 0 comments 1 minutes read
0FacebookTwitterPinterestEmail
74

ಬೆಂಗಳೂರು:ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್‌ಗಳಿಗೆ ಅಕ್ಟೋಬರ್-ನವೆಂಬರ್‌ನಲ್ಲಿ ಚುನಾವಣೆ ನಡೆಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಇಂದಿಲ್ಲಿ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಹುತೇಕ ಪಂಚಾಯತ್‌ಗಳ ಆಡಳಿತಾವಧಿ ಪೂರ್ಣ ಮುಗಿದಿದ್ದು, ಕೆಲವು ಮೇಲ್ದರ್ಜೆಯಿಂದ ಕ್ಷೇತ್ರ ಪುನರ್ ವಿಂಗಡಣೆ ಆಗಬೇಕಿದ್ದು, ಚುನಾವಣೆ ಸ್ವಲ್ಪ ವಿಳಂಬವಾಗುತ್ತಿದೆ ಎಂದರು.

ಚುನಾವಣಾ ಆಯೋಗಕ್ಕೆ ವರದಿ

ಜುಲೈ ಅಂತ್ಯ ಇಲ್ಲವೆ ಆಗಸ್ಟ್‌ನಲ್ಲಿ ಪ್ರಕ್ರಿಯೆ ಮುಗಿಸಿ, ಮೀಸಲಾತಿ ನಿರ್ಧರಿಸಿ, ರಾಜ್ಯ ಚುನಾವಣಾ ಆಯೋಗಕ್ಕೆ ಸರ್ಕಾರ ವರದಿ ಸಲ್ಲಿಸುತ್ತಿದ್ದಂತೆ ಆಯೋಗ 45 ದಿನಗಳಲ್ಲಿ ಚುನಾವಣೆಗೆ ಚಾಲನೆ ನೀಡಲಿದೆ.

ಕೇಂದ್ರ ಚುನಾವಣಾ ಆಯೋಗ ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ನಂತರ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.

ಕಾಂಗ್ರೆಸ್ ಯಾವುದೇ ಚುನಾವಣೆಗೆ ಹೆದರುವುದಿಲ್ಲ, ರಾಜಧಾನಿಯ ಆಡಳಿತವನ್ನು ಕೆಳಹಂತದವರೆಗೆ ಕೊಂಡೊಯ್ಯಲು ಸ್ಥಳೀಯ ಜನಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಲಾಗುವುದು.

ಅಧಿಕಾರ ವಿಕೇಂದ್ರೀಕರಣ

ಕರ್ನಾಟಕದಲ್ಲಿ 1980ರಲ್ಲಿ ಅಂದಿನ ಸಚಿವ ನಸೀರ್ ಸಾಬ್ ಅಧಿಕಾರ ವಿಕೇಂದ್ರೀಕರಣಕ್ಕೆ ನಾಂದಿ ಹಾಡಿದ್ದು, ಪ್ರಧಾನಿಯಾಗಿದ್ದ ವೇಳೆ ರಾಜೀವ್ ಗಾಂಧಿ ದೇಶದಾದ್ಯಂತ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ತರಲು 1986ರಲ್ಲಿ 64ನೇ ಸಂವಿಧಾನಿಕ ತಿದ್ದುಪಡಿಗೆ ಪ್ರಯತ್ನ ಮಾಡಿದ್ದರು.

ನಂತರ 1992ರಲ್ಲಿ 73ನೇ ಸಂವಿಧಾನಿಕ ತಿದ್ದುಪಡಿ ಮೂಲಕ 1993ರ ಏಪ್ರಿಲ್ 24ರಿಂದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ಬಂದು, ಗ್ರಾಮಸ್ಥರೇ ಗ್ರಾಮಗಳ ಆಡಳಿತ ನಿರ್ವಹಿಸುವಂತಾಯಿತು ಎಂದರು.

ಇ-ಸ್ವತ್ತಿಗೆ ಸಂಬಂಧಿಸಿದಂತೆ ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆ ಇದ್ದು, ಸಾಕಷ್ಟು ದೂರುಗಳು ಬರುತ್ತಿವೆ, ಎಸ್‌ಐಆರ್ ಪ್ರಕ್ರಿಯೆ ಮುಗಿದ ನಂತರ, ವ್ಯವಸ್ಥೆಯನ್ನು ಮತ್ತಷ್ಟು ಸರಳೀಕರಿಸಿ, ಎಲ್ಲ ಗ್ರಾಮೀಣ ಪ್ರದೇಶದ ಆಸ್ತಿ ಮಾಲಿಕರಿಗೆ ಯಾವುದೇ ತೊಡಕಾಗದಂತೆ ಮನೆ ಬಾಗಿಲಿಗೇ ಇ-ಸ್ವತ್ತು ಪತ್ರ ನೀಡಲು ಕ್ರಮ ವಹಿಸಲಾಗುವುದು.

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ
ಇ-ಸ್ವತ್ತು ನೀಡಲಾಗದು

ಬಿ-ಖರಾಬು ಜಮೀನು ಬಳಸಿಕೊಂಡು ಲೇಔಟ್ ನಿರ್ಮಿಸಿದ್ದರೆ ಇ-ಸ್ವತ್ತು ನೀಡಲಾಗದು, ಈ ಸಂಬಂಧ ಕಂದಾಯ ಇಲಾಖೆ ಸಚಿವರೊಂದಿಗೆ ಸಭೆ ನಡೆಸಬೇಕಾಗುತ್ತದೆ.

ಗ್ರಾಮ ಪಂಚಾಯತ್‌ಗಳಿಗೆ ಕೇಂದ್ರ ಸರ್ಕಾರದಿಂದ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬರಬೇಕಾದ 2186 ಕೋಟಿ ರೂ. ಬಿಡುಗಡೆ ಮಾಡಿಲ್ಲ ಎಂದರು.

ಸಂಸದರು ಧ್ವನಿ ಎತ್ತಬೇಕು

ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆ ಮುಂದಿಟ್ಟುಕೊಂಡು ಹಣ ಬಿಡುಗಡೆ ಮಾಡುವುದಿಲ್ಲ ಎನ್ನುವುದು ಸರಿಯಲ್ಲ, ರಾಜ್ಯದ ಸಂಸತ್ ಸದಸ್ಯರು ಒಕ್ಕೂರಲಿನಿಂದ ಈ ಬಗ್ಗೆ ಧ್ವನಿ ಎತ್ತಬೇಕು.

ಗ್ರಾಮೀಣ ಜನರ ಕುಡಿಯುವ ನೀರು ಪೂರೈಕೆಗೆ ಹಣಕಾಸಿನ ಕೊರತೆ ಇಲ್ಲ, 117 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ, ಮುಖ್ಯಮಂತ್ರಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದು ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ, ಬರ ಪರಿಸ್ಥಿತಿ ನಡುವೆಯೂ ನೀರು ಪೂರೈಕೆಗೆ ಆರ್ಥಿಕ ಸಮಸ್ಯೆ ಎದುರಾಗುವುದಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
election commissionjuly-augustminister eshwar b. khandreoctober-novemberpanchayat election
0 FacebookTwitterPinterestEmail
admin

previous post
ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ
next post
ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

You may also like

ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

August 25, 2026

ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

August 24, 2026

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

August 22, 2026

’ಬಿ’ ಯಿಂದ ’ಎ’ ಖಾತಾ ಕಾಯ್ದೆ ರಾಜ್ಯಾದ್ಯಂತ ವಿಸ್ತರಣೆ

August 21, 2026

ಕರ್ನಾಟಕಕ್ಕೆ ನ್ಯಾಯಯುತ ಅನುದಾನ ನೀಡಿ: ಡಿಕೆಶಿ

August 20, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

ವಿಧಾನಸಭೆ ಮತ್ತೆ ಪ್ರವೇಶಿಸಲು ಜನಪ್ರಿಯತೆ ಗಳಿಸಿ

August 19, 2026

ಆಪ್ತ ಸಚಿವರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ

August 18, 2026

ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

August 17, 2026

ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

August 14, 2026

Social Networks

Facebook Twitter Instagram Linkedin Youtube Email Rss

KMS Analysis

  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026

Categories

  • Special Story (548)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,041)
  • ರಾಜ್ಯ (2,356)
  • ರಾಷ್ಟ್ರ (2,321)
  • ವಿಶ್ಲೇಷಣೆ (200)
  • ಶಿಕ್ಷಣ (405)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

    August 25, 2026
  • ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

    August 24, 2026
  • ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

    August 22, 2026

KMS Special

  • ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

    August 25, 2026
  • ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

    August 24, 2026
  • ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

    August 22, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

August 25, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ