Friday, July 17, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, July 17, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

by KM Shivaraju July 16, 2026
written by KM Shivaraju July 16, 2026 0 comments 1 minutes read
0FacebookTwitterPinterestEmail
4

ನವದೆಹಲಿ:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಮಂತ್ರಿಮಂಡಲ ವಿಸ್ತರಿಸಲು ಅನುಮತಿ ನೀಡಿರುವ ಕಾಂಗ್ರೆಸ್ ವರಿಷ್ಠರು ಯಾರನ್ನು ಸೇರಿಸಿಕೊಳ್ಳಬೇಕೆಂಬ ಸಂಭಾವ್ಯ ಸಚಿವರ ಪಟ್ಟಿಯನ್ನು ನಂತರ ರವಾನಿಸಲಿದ್ದಾರೆ.

ವರಿಷ್ಠರ ಅನುಮತಿ ದೊರೆತಿರುವ ಬೆನ್ನಲ್ಲೇ ಮುಖ್ಯಮಂತ್ರಿ, ಜುಲೈ 20 ಇಲ್ಲವೇ 22ರಂದು ಮಂತ್ರಿಮಂಡಲ ವಿಸ್ತರಿಸಿ 16ರಿಂದ 18 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲಿದ್ದಾರೆ.

ಸೋನಿಯಾ ನಿವಾಸದಲ್ಲಿ ಚರ್ಚೆ

ಸಂಪುಟ ವಿಸ್ತರಣೆ ಕುರಿತಂತೆ ಚರ್ಚಿಸಲು ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರನ್ನು ಬುಲಾವ್ ಮಾಡಿದ್ದ ವರಿಷ್ಠರು, ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ಇಂದು ವಿವಿಧ ಹಂತಗಳಲ್ಲಿ ಸುದೀರ್ಘ ಚರ್ಚೆ ನಡೆಸಿ, ವಿಸ್ತರಣೆ ಕಾರ್ಯಕ್ಕೆ ಹಸಿರು ನಿಶಾನೆ ತೋರಿದ್ದಾರೆ.

ದೆಹಲಿಗೆ ತೆರಳಿದ್ದ ಮೂವರು ನಾಯಕರು ತಮ್ಮದೇ ಅಭಿಪ್ರಾಯ ಹಾಗೂ ಬೆಂಬಲಿತ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿಕೊಂಡಿದ್ದರು.

ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಭೇಟಿಗೂ ಮುನ್ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನಿವಾಸದಲ್ಲಿ ಪ್ರತ್ಯೇಕ ಭೇಟಿ ಮಾಡಿದ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು.

ರಾಹುಲ್ ಜೊತೆಗೂ ಮಾತುಕತೆ

ನಂತರ ಮಧ್ಯಾನ್ಹ ಸೋನಿಯಾ ಗಾಂಧಿ ನಿವಾಸಕ್ಕೆ ತೆರಳಿದ ಮೂವರೂ ನಾಯಕರು ಸಂಪುಟ ವಿಸ್ತರಣೆ ಮತ್ತು ಇತರ ರಾಜಕೀಯ ನೇಮಕಾತಿ ಕುರಿತಂತೆ ಮೂರು ತಾಸಿಗೂ ಹೆಚ್ಚು ಕಾಲ ರಾಹುಲ್ ಜೊತೆ ಚರ್ಚೆ ಮಾಡಿದರು.

ಸಭೆ ಆರಂಭದಲ್ಲೇ ರಾಹುಲ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಹಾಗೂ ಸರ್ಕಾರದ ವರ್ಚಸ್ಸು ಹೆಚ್ಚಿಸುವ ವ್ಯಕ್ತಿಗಳಿಗೆ ಸಂಪುಟದಲ್ಲಿ ಅವಕಾಶ ನೀಡಿ ಎಂದು ರಾಜ್ಯ ನಾಯಕರುಗಳಿಗೆ ಕಟ್ಟಾದೇಶ ಮಾಡಿದರು.

ಒತ್ತಡ ಹಾಗೂ ಕಟ್ಟುಪಾಡುಗಳಿಗೆ ಮಣಿಯದೆ ಯುವ ಸಮುದಾಯಕ್ಕೆ ಅವಕಾಶ ನೀಡಿ, ಜನರ ಸೇವೆ ಮತ್ತು ಪಕ್ಷ ಸಂಘಟನೆಗೆ ಬಳಸಿಕೊಳ್ಳಿ.

ವಿಭಿನ್ನ ಸ್ವರಗಳು ಬೇಡ

ಸಂಪುಟಕ್ಕೆ ಆಯ್ಕೆ ಪ್ರಕ್ರಿಯೆಯಲ್ಲಿ ವಿಭಿನ್ನ ಸ್ವರಗಳು ಬೇಡ, ಒಳ್ಳೆಯ ಆಡಳಿತ ನೀಡುವುದಷ್ಟೇ ನಮ್ಮ ಗುರಿಯಾಗಿರಬೇಕು, ಈ ದಿಸೆಯಲ್ಲಿ ಮಂತ್ರಿಮಂಡಲ ವಿಸ್ತರಿಸಿ ಎಂದು ಸೂಚಿಸಿದರು.

ಸಂಪುಟ ವಿಸ್ತರಣೆ, ನಿಗಮ-ಮಂಡಳಿ ಅಧ್ಯಕ್ಷರ ನೇಮಕಾತಿ, ವಿಧಾನಮಂಡಲದ ಪೀಠಾಸೀನ ಅಧಿಕಾರಿಗಳ ಆಯ್ಕೆ, ವಿಧಾನ ಪರಿಷತ್‌ಗೆ ಐವರು ಸದಸ್ಯರ ನಾಮಕರಣ ಸಂಬಂಧ ಸುದೀರ್ಘ ಚರ್ಚೆ ನಡೆಸಿದರು.

ಸಭೆಯಲ್ಲಿ ರಾಜ್ಯ ನಾಯಕರಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ಸುರ್ಜೇವಾಲ ಪಾಲ್ಗೊಂಡಿದ್ದರು.

ನಗರಕ್ಕೆ ಖರ್ಗೆ ವಾಪಸ್

ಪುತ್ರನ ಆರೋಗ್ಯ ಏರುಪೇರು ಮಾಹಿತಿ ಹಿನ್ನೆಲೆಯಲ್ಲಿ ಖರ್ಗೆ ಸಭೆ ಮಧ್ಯೆಯೇ ಹೊರಟು ನಗರಕ್ಕೆ ಹಿಂತಿರುಗಿದರು.

ರಾಹುಲ್ ಸಮ್ಮುಖದಲ್ಲೇ ಸಂಭಾವ್ಯ ಸಚಿವರ ಪಟ್ಟಿ ಸಿದ್ಧಗೊಂಡಿದೆ, ಅಲ್ಲದೆ, ನಿಗಮ-ಮಂಡಳಿಗೆ ಹಿರಿಯ ಶಾಸಕರ ನೇಮಕಾತಿ, ಪರಿಷತ್ ಸದಸ್ಯರ ನಾಮಕರಣ ಸದಸ್ಯರ ಆಯ್ಕೆ ಅಂತಿಮಗೊಂಡಿದೆ.

ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ

ಸಂಪುಟ ವಿಸ್ತರಣೆವರೆಗೂ ಸಂಭಾವ್ಯ ಸಚಿವರ ಪಟ್ಟಿ ಗೌಪ್ಯವಾಗಿಡುವಂತೆ ಎಐಸಿಸಿ ಸೂಚಿಸಿದ್ದು, ಮಂತ್ರಿಮಂಡಲ ವಿಸ್ತರಣೆಗೂ ಮುನ್ನವೇ ನಿಗಮ-ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ.

ಸಂಪುಟ ಸೇರ್ಪಡೆ ಆಗಲು ಸಾಧ್ಯವಾಗದ ಸಚಿವಾಕಾಂಕ್ಷಿಗಳಿಗೆ ಈ ಪಟ್ಟಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b k hariprasadcm d k shivakumarkarnataka cabinet expansionmallikarjuna khargenewdelhiRahul Gandhiranadeep singh surjevalasiddaramaihsoniya gandhi
0 FacebookTwitterPinterestEmail
KM Shivaraju

previous post
ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

You may also like

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

July 7, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (517)
  • ಅಂಕಣ (109)
  • ಉದ್ಯೋಗ (339)
  • ದಿನ ಭವಿಷ್ಯ (110)
  • ರಾಜಕೀಯ (2,011)
  • ರಾಜ್ಯ (2,325)
  • ರಾಷ್ಟ್ರ (2,290)
  • ವಿಶ್ಲೇಷಣೆ (198)
  • ಶಿಕ್ಷಣ (400)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

    July 16, 2026
  • ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

    July 15, 2026
  • ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

    July 14, 2026

KMS Special

  • ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

    July 16, 2026
  • ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

    July 15, 2026
  • ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

    July 14, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ