Saturday, July 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

by KM Shivaraju July 17, 2026
written by KM Shivaraju July 17, 2026 0 comments 2 minutes read
0FacebookTwitterPinterestEmail
7

ನವದೆಹಲಿ:ಪಕ್ಷದ ವರಿಷ್ಠರು ಹಸಿರು ನಿಶಾನೆ ತೋರಿದ ದಿನ ಮಂತ್ರಿಮಂಡಲ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ.

ಕಳೆದ ಎರಡು ದಿನಗಳಿಂದ ದೆಹಲಿಯಲ್ಲೇ ಬಿಡಾರ ಹೂಡಿ ಸಂಪುಟ ವಿಸ್ತರಣೆ ಕಸರತ್ತು ಪೂರ್ಣಗೊಳಿಸಿದ ನಂತರ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಪ್ರವಾಸದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಿಂತಿರುಗಿದ ನಂತರ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಜೊತೆ ಸಮಾಲೋಚಿಸಿ ನಮಗೆ ಪಟ್ಟಿ ರವಾನಿಸುತ್ತಾರೆ ಎಂದರು.

ವರಿಷ್ಠರ ಮುಂದೆ ಅಭಿಪ್ರಾಯ

ಮಂತ್ರಿಮಂಡಲ ವಿಸ್ತರಣೆಗೆ ಸಂಬಂಧಿಸಿದಂತೆ ನಾನು, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಅಭಿಪ್ರಾಯಗಳನ್ನು ವರಿಷ್ಠರ ಮುಂದೆ ಇಟ್ಟಿದ್ದೇವೆ.

ಖರ್ಗೆ ಜೊತೆ ನಮ್ಮ ದೆಹಲಿ ನಾಯಕರು ಚರ್ಚಿಸಿ, ನಮಗೆ ಸಂದೇಶ ನೀಡಲಿದ್ದಾರೆ.

ವಿಸ್ತರಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ, ಅನುಮತಿ ದೊರೆಯುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಿಸುವುದಾಗಿ ತಿಳಿಸಿದರು.

ಕಳೆದ ಗುರುವಾರ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಿದ ರಾಜ್ಯ ನಾಯಕರು, ಇಂದು ಬೆಳಗ್ಗೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆ ಮಂತ್ರಿಮಂಡಲ ವಿಸ್ತರಣೆಗೆ ಸಂಬಂಧಿಸಿದಂತೆ ಚರ್ಚಿಸಿದ್ದಾರೆ.

ತಡರಾತ್ರಿವರೆಗೂ ಚರ್ಚೆ

ಇದಕ್ಕೂ ಮುನ್ನವೇ ತಡರಾತ್ರಿವರೆಗೂ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಜೊತೆಯೂ ಈ ಸಂಬಂಧ ಸುದೀರ್ಘ ಚರ್ಚೆ ನಡೆಯಿತು.

ರಾಹುಲ್ ಸಲಹೆಯಂತೆ ಯುವಪೀಳಿಗೆಗೆ ಮಂತ್ರಿಮಂಡಲದಲ್ಲಿ ಹೆಚ್ಚು ಸ್ಥಾನ ದೊರೆಯಲಿದೆ, ಆದರೆ, ಮೊದಲ ಬಾರಿ ಶಾಸಕರಾದವರಿಗೆ ಅವಕಾಶ ಇಲ್ಲ.

ಎರಡು ಹಾಗೂ ಅದಕ್ಕಿಂತ ಹೆಚ್ಚು ಬಾರಿ ಆಯ್ಕೆಗೊಂಡವರಿಗೆ ಅವಕಾಶ ದೊರೆಯಲಿದೆ, ಆದರೆ, ತುಂಬಾ ಹಿರಿಯರಿಗೆ ಮಂತ್ರಿಗಿರಿ ಇಲ್ಲ.

ಹಿರಿಯರಿಗೆ ಅವಕಾಶ ಇಲ್ಲ

ಸಿದ್ದರಾಮಯ್ಯ ಮತ್ತು ಹರಿಪ್ರಸಾದ್, ಹಿರಿಯರಿಗೆ ಅವಕಾಶ ನೀಡುವಂತೆ ಮಾಡಿದ ಶಿಫಾರಸ್ಸನ್ನು ರಾಹುಲ್ ತಳ್ಳಿಹಾಕಿ, ನಿಮ್ಮ ಸಂಪುಟದಲ್ಲಿ ಅವರೇ ತುಂಬಿದ್ದರು, ಆ ವಿಚಾರ ಬಿಟ್ಟು ಹೊಸಬರಿಗೆ ಅವಕಾಶ ಮಾಡಿಕೊಡೋಣ ಎಂದು ಖಂಡತುಂಡವಾಗಿ ತಿಳಿಸಿದರು.

ರಾಹುಲ್ ಸೂಚನೆ ಮೇರೆಗೆ ವೇಣುಗೋಪಾಲ್ ಜೊತೆ ಚರ್ಚೆ ನಡೆದು, ಪಟ್ಟಿ ಅಂತಿಮಗೊಂಡಿದೆ, ಅದಕ್ಕೆ ಖರ್ಗೆ ಅನುಮೋದನೆ ದೊರೆಯುತ್ತಿದ್ದಂತೆ ಶಿವಕುಮಾರ್ ತಮ್ಮ ಮಂತ್ರಿಮಂಡಲ ವಿಸ್ತರಿಸಿಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಬಿ.ಕೆ.ಹರಿಪ್ರಸಾದ್, ಎ.ಎಸ್.ಪೊನ್ನಣ್ಣ, ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಲಕ್ಷ್ಮಣ ಸವದಿ ಅವರ ಸಂಪುಟ ಸೇರ್ಪಡೆ ವಿಚಾರ ಗೊಂದಲಕ್ಕೆ ಎಡೆ ಮಾಡಿತ್ತು.

ಒಬ್ಬರಿಗೆ ಒಂದೇ ಹುದ್ದೆ

ಇದರ ಬಗ್ಗೆ ಸುರ್ಜೇವಾಲ ಇಂದು ಬೆಳಗ್ಗೆ ಮಾತುಕತೆ ನಡೆಸಿ, ಮೊದಲ ಬಾರಿಗೆ ಆಯ್ಕೆಗೊಂಡಿರುವ ಪೊನ್ನಣ್ಣ ಅವರಿಗೆ ಅವಕಾಶ ನೀಡಲು ಸಾಧ್ಯವೇ ಇಲ್ಲ, ಪಕ್ಷದ ಸಿದ್ಧಾಂತದ ಪ್ರಕಾರ ಒಬ್ಬರಿಗೆ ಒಂದೇ ಹುದ್ದೆ, ಹರಿಪ್ರಸಾದ್ ಅವರಿಗೆ ಮಂತ್ರಿ ಸ್ಥಾನ ನೀಡಲು ಆಗದು.

ಅವರಿಗೆ ಅಧಿಕಾರ ನೀಡುವುದಿದ್ದರೆ, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ ಹಾಗೂ ಶರಣಪ್ರಕಾಶ್ ಪಾಟೀಲ್ ಅವರ ಹೆಸರೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮುನ್ನೆಲೆಗೆ ಬಂದಿತ್ತು.

ಆದರೆ, ಅವರುಗಳು ಮಂತ್ರಿ ಸ್ಥಾನವೂ ಬೇಕು ಎಂದ ಕಾರಣಕ್ಕೆ ಅಧ್ಯಕ್ಷ ಹುದ್ದೆ ನೀಡಲಿಲ್ಲ, ಈಗ ಅದೇ ನಿಯಮ ಇವರಿಗೂ ಅನ್ವಯ ಆಗುತ್ತದೆ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ.

ಜಾರಕಿಹೊಳಿ ಅಸಮಾಧಾನ

ಹೆಬ್ಬಾಳ್ಕರ್ ಹಾಗೂ ಸವದಿ ಸೇರ್ಪಡೆಗೆ ಸಚಿವ ಸತೀಶ್ ಜಾರಕಿಹೊಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇವರೊಂದಿಗೆ ಶಿವಕುಮಾರ್ ಚರ್ಚೆ ನಡೆಸಿ ತಿಳಿಸುವಂತೆ ಸೂಚಿಸಿದ್ದರು.

ಈ ಸೂಚನೆ ಮೇರೆಗೆ ಶಿವಕುಮಾರ್ ದೆಹಲಿಯ ಹಳೇ ಕಾಂಗ್ರೆಸ್ ಭವನದಲ್ಲೇ ಸತೀಶ್ ಅವರೊಂದಿಗೆ ಮುಖಾಮುಖಿ ಚರ್ಚೆ ಮಾಡಿ ಮಾಹಿತಿ ತಲುಪಿಸಿದ್ದಾರೆ.

ಸಂಪುಟ ವಿಸ್ತರಣೆ ಕುರಿತಂತೆ ದೆಹಲಿ ಮುಖಂಡರೊಂದಿಗೆ ಚರ್ಚೆ ನಡೆಸಿದ ನಂತರ ಶಿವಕುಮಾರ್ ಮತ್ತಿತರ ನಾಯಕರು ನಗರಕ್ಕೆ ಹಿಂತಿರುಗಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b k hariprasadbengalurucabinet expansioncm d k shivakumarmallikarjuna khargenewdelhiRahul GandhiSiddaramaiahstate leaders
0 FacebookTwitterPinterestEmail
KM Shivaraju

previous post
ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

You may also like

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

July 7, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (518)
  • ಅಂಕಣ (109)
  • ಉದ್ಯೋಗ (339)
  • ದಿನ ಭವಿಷ್ಯ (110)
  • ರಾಜಕೀಯ (2,012)
  • ರಾಜ್ಯ (2,326)
  • ರಾಷ್ಟ್ರ (2,291)
  • ವಿಶ್ಲೇಷಣೆ (198)
  • ಶಿಕ್ಷಣ (400)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

    July 17, 2026
  • ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

    July 16, 2026
  • ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

    July 15, 2026

KMS Special

  • ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

    July 17, 2026
  • ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

    July 16, 2026
  • ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

    July 15, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ