Wednesday, July 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, July 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

by KM Shivaraju July 21, 2026
written by KM Shivaraju July 21, 2026 0 comments 1 minutes read
0FacebookTwitterPinterestEmail
4

ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಮಂತ್ರಿಮಂಡಲವನ್ನು ಜುಲೈ 22ರ ಬುಧವಾರ ವಿಸ್ತರಿಸಿ 18 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲಿದ್ದಾರೆ.

ಲೋಕಭವನದ ಗಾಜಿನಮನೆಯಲ್ಲಿ ಮಧ್ಯಾನ್ಹ 2-20ಕ್ಕೆ ನಡೆಯುವ ಸರಳ ಸಮಾರಂಭದಲ್ಲಿ ನೂತನ ಸದಸ್ಯರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಲಿದ್ದಾರೆ.

ತಡರಾತ್ರಿ ಪಟ್ಟಿ ಬಿಡುಗಡೆ

ಶಿವಕುಮಾರ್ ಸಂಪುಟಕ್ಕೆ ಸೇರ್ಪಡೆಗೊಳ್ಳವವರ ಪಟ್ಟಿ ಇಂದು ತಡರಾತ್ರಿ ಬಿಡುಗಡೆ ಆಗಲಿದೆ.

ಸಂಪುಟದಲ್ಲಿ ಖಾಲಿ ಇರುವ 20 ಸ್ಥಾನಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ, ಕಳೆದ ವಾರವೇ ದೆಹಲಿಗೆ ತೆರಳಿ ವರಿಷ್ಠರ ಭೇಟಿ ಮಾಡಿ ತಮ್ಮ ಸಚಿವಾಕಾಂಕ್ಷಿಗಳ ಪಟ್ಟಿ ನೀಡಿದ್ದರು.

ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನೂ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರು.

ಪಕ್ಷ ನಿಷ್ಠರಿಗೆ ಮಂತ್ರಿ ಸ್ಥಾನ

ಶಿವಕುಮಾರ್ ನೀಡಿದ ಪಟ್ಟಿಯಲ್ಲಿರುವವರ ಪ್ರಾಮಾಣಿಕತೆ, ಪಕ್ಷ ನಿಷ್ಠೆ ಹಾಗೂ ಸಂಘಟನಾ ಚತುರತೆ ಕುರಿತು ಮಾಹಿತಿ ನೀಡಲು ಸಂಸದ ಸಸಿಕಾಂತ್ ಸೆಂಥಿಲ್ ಅವರಿಗೆ ಜವಾಬ್ದಾರಿ ವಹಿಸಲಾಗಿತ್ತು.

ಸೆಂಥಿಲ್ ಕಳೆದ ಸೋಮವಾರ ಎಐಸಿಸಿಗೆ ವರದಿ ನೀಡಿದ್ದರು, ಇದನ್ನು ಪರಿಶೀಲಿಸಿದ ಖರ್ಗೆ, ಯುವಪಡೆ ಜೊತೆಗೆ ಹಿರಿಯರಿಗೂ ಅವಕಾಶ ಮಾಡಿಕೊಡಬೇಕೆಂದು ಕೆಲವು ಬದಲಾವಣೆ ಮಾಡಿದರು.

ಸೆಂಥಿಲ್ ವರದಿ ಬರುತ್ತಿದ್ದಂತೆ ಮುಖ್ಯಮಂತ್ರಿ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರನ್ನು ವರಿಷ್ಠರು ಇಂದು ದೆಹಲಿಗೆ ಕರೆಸಿಕೊಂಡರು.

ಖರ್ಗೆ ನಿವಾಸದಲ್ಲಿ ಚರ್ಚೆ

ದೆಹಲಿಯಲ್ಲಿನ ಖರ್ಗೆ ನಿವಾಸದಲ್ಲಿ ಮಂಗಳವಾರ ಮಧ್ಯಾನ್ಹ ಸಭೆ ಸೇರಿ ಅಂತಿಮ ಪಟ್ಟಿ ಸಿದ್ಧಪಡಿಸಿದ್ದಲ್ಲದೆ, ನಿಗಮ-ಮಂಡಳಿಗಳಿಗೆ ನೇಮಕಾತಿ, ವಿಧಾನಮಂಡಲದ ಉಭಯ ಸದನಗಳ ಪೀಠಾಸೀನಾಧಿಕಾರಿಗಳ ಆಯ್ಕೆ, ಕೆಪಿಸಿಸಿ ಪುನರ್ ರಚನೆಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಯಿತು.

ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕಾಂಗ್ರೆಸ್ ಹಿರಿಯ ನಾಯಕ ಜೈರಾಂ ರಮೇಶ್, ಸಿದ್ದರಾಮಯ್ಯ ಹಾಗೂ ಹರಿಪ್ರಸಾದ್ ಭಾಗವಹಿಸಿದ್ದರು.

ಶಿವಕುಮಾರ್ ಜೂನ್ 3ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ವೇಳೆ ತಮ್ಮನ್ನೂ ಸೇರಿದಂತೆ 14 ಮಂದಿಯ ಮಂತ್ರಿಮಂಡಲ ರಚಿಸಿದ್ದರು.

ರಾಹುಲ್ ಗಾಂಧಿ ಪ್ರವಾಸ

ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿ ಇದ್ದ ಕಾರಣ ಮಂತ್ರಿಮಂಡಲ ವಿಸ್ತರಿಸಿ ಖಾಲಿ ಇರುವ ೨೦ ಸ್ಥಾನಗಳ ಭರ್ತಿ ಸಾಧ್ಯವಾಗಿರಲಿಲ್ಲ.

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಗಳ ಉಸ್ತುವಾರಿಗೆ ಅಡಚಣೆ ಆಗದಂತೆ ನೋಡಿಕೊಳ್ಳಲು ವರಿಷ್ಠರ ಮನವೊಲಿಸಿ ಸಂಪುಟ ವಿಸ್ತರಿಸುತ್ತಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
18 to be inductedcabinet expansioncm d k shivakumargovernor thavar chand gehlotlist tonightlokabhavana glass houseyouth force
0 FacebookTwitterPinterestEmail
KM Shivaraju

previous post
ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

You may also like

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (520)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,014)
  • ರಾಜ್ಯ (2,328)
  • ರಾಷ್ಟ್ರ (2,293)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026

KMS Special

  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

    July 17, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ