ನವದೆಹಲಿ:ವೈದ್ಯಕೀಯ ಕೋರ್ಸ್‌ಗಳಿಗೆ ನಡೆದ ನೀಟ್ (ಎನ್‌ಇಇಟಿ) ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ಭಾರೀ ಆಕ್ರೋಶ ಹಾಗೂ ಆಂದೋಲನಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ದೇಶಾದ್ಯಂತ ವಿದ್ಯಾರ್ಥಿ ಆಂದೋಲನ
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟಿಸಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶಾದ್ಯಂತ ವಿದ್ಯಾರ್ಥಿ ಸಂಘಟನೆಗಳು ನಡೆಸಿದ ಬೃಹತ್ ಪ್ರತಿಭಟನೆ ಹಾಗೂ ಆಂದೋಲನ ನಡೆಸಿದವು.
ಈ ಪರಿಸ್ಥಿತಿ ರಾಷ್ಟ್ರವಿರೋಧಿ ಶಕ್ತಿಗಳಿಗೆ ಅನುಕೂಲ ಆಗಬಾರದು, ಅಲ್ಲದೆ, ದೇಶದ ಯುವಜನರು ಕಾನೂನು ತೊಡಕಿಗೆ ಸಿಲುಕದೆ ಶಿಕ್ಷಣ ಮತ್ತು ವೃತ್ತಿಜೀವನದ ಕಡೆ ಗಮನಹರಿಸಬೇಕು, ರಾಷ್ಟ್ರ ಒಗ್ಗಟ್ಟಿನಿಂದ ಇರಬೇಕೆಂಬ ಉದ್ದೇಶದಿಂದ ರಾಜೀನಾಮೆ ನಿರ್ಧಾರ ಕೈಗೊಂಡಿರುವುದಾಗಿ ಧರ್ಮೇಂದ್ರ ಪ್ರಧಾನ್ ತಮ್ಮ ಜಾಲತಾಣ ಖಾತೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನಾ ಮೆರವಣಿಗೆ ವೇಳೆ ಉಂಟಾದ ಹಿಂಸಾಚಾರ ಘಟನೆಗಳು ತಮಗೆ ತೀವ್ರ ದುಃಖ ನೀಡಿದೆ ಎಂದಿದ್ದಾರೆ.

’ವಿದ್ಯಾರ್ಥಿ ಶಕ್ತಿ ಚಿರಾಯು’
ಸಚಿವರ ರಾಜೀನಾಮೆ ಘೋಷಣೆ ಬಳಿಕ ಪ್ರತಿಕ್ರಿಯಿಸಿದ ಸಂಘಟನೆಗಳು “ವಿದ್ಯಾರ್ಥಿ ಶಕ್ತಿ ಚಿರಾಯುವಾಗಲಿ” ಎಂದಿವೆ.
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸುದ್ದಿಗಾರರೊಂದಿಗೆ ಮಾತನಾಡಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಯುವಶಕ್ತಿಗೆ ಸಂದ ಜಯವಾಗಿದೆ ಎಂದಿದ್ದಾರೆ.


