Tuesday, October 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, October 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆಶಿಕ್ಷಣ

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

by KM Shivaraju August 27, 2026
written by KM Shivaraju August 27, 2026 0 comments 1 minutes read
0FacebookTwitterPinterestEmail
95

ಬೆಂಗಳೂರು: ಸಂಪುಟದಲ್ಲಿ ಮಹಿಳೆಗೆ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಂತ್ರಿಮಂಡಲ ಪುನಾರಚನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರಿಂದ ಅನುಮತಿ ಪಡೆದುಕೊಂಡಿದ್ದಾರೆ.

ಅನುಮತಿ ಉದ್ದೇಶಕ್ಕಾಗಿ ದಹೆಲಿಗೆ ತೆರಳಿದ್ದ ಮುಖ್ಯಮಂತ್ರಿಯವರು ವರಿಷ್ಠರೊಟ್ಟಿಗೆ ಸಮಾಲೋಚನೆ ನಡೆಸಿ, ಒಬ್ಬರನ್ನು ಕೈಬಿಟ್ಟು, ಖಾಲಿ ಇರುವ ಒಂದು ಸ್ಥಾನ ಸೇರಿದಂತೆ ಎರಡು ಸಚಿವ ಸ್ಥಾನ ತುಂಬಲು ವರಿಷ್ಠರಿಂದ ಹಸಿರು ನಿಶಾನೆ ಪಡೆದಿದ್ದಾರೆ.

ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನೇ ಮತ್ತೆ ಪುನಾರಚನೆ ಸಂದರ್ಭದಲ್ಲಿ ಮಂತ್ರಿ ಮಾಡಲು ಮುಖ್ಯಮಂತ್ರಿಯವರು ಆಸಕ್ತಿ ಹೊಂದಿದ್ದಾರೆ.

ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ‌ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುನಿಸನ್ನು ಹೊಗಲಾಡಿಸಲು ಉದ್ದೇಶಿಸಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಅವರೇ ಹೆಸರಿಸಿದ ಹಾವೇರಿ ಜಿಲ್ಲೆಯ ಕುರುಬ ಸಮುದಾಯಕ್ಕೆ ಸೇರಿದ ಶಾಸಕ ಬಸವರಾಜ ನೀಲಪ್ಪ ಶಿವಣ್ಣನವರನ್ನು ಮಂತ್ರಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮಹರ್ಷಿ ಮಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆದು, ಈ ಎರಡು ಸ್ಥಾನಗಳನ್ನು ಭರ್ತಿ ಮಾಡುವ ನಿರ್ಧಾರಕ್ಕೆ ಬಂದಿದ್ದು, ವರಿಷ್ಠರ ಅನುಮೋದನೆ ಪಡೆದಿದ್ದಾರೆ ಎನ್ನಲಾಗಿದೆ.

ಪುನಾರಚನೆ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬಡ್ತಿ ನೀಡುವ ಮೂಲಕ ನಾಗೇಂದ್ರ ರಾಜೀನಾಮೆಯಿಂದ ಎಸ್‌ಟಿ ಸಮುದಾಯಕ್ಕೆ ಆದ ಅನ್ಯಾಯ ಸರಿಪಡಿಸಲು ಮುಂದಾಗಿದ್ದಾರೆ.

ತಮ್ಮ ರಾಜೀನಾಮೆಯಿಂದ ತೆರವಾದ ನಂತರ ಬಳ್ಳಾರಿ ಜಿಲ್ಲೆಯಲ್ಲಿ ಯಾರಿಗೂ ಮಂತ್ರಿ ಸ್ಥಾನ ನೀಡಬಾರದೆಂದು ನಾಗೇಂದ್ರ ಷರತ್ತು ವಿಧಿಸಿರುವುದರಿಂದ ಶಾಸಕಿ ಅನ್ನಪೂರ್ಣ ತುಕಾರಾಂ ಅವರಿಗೆ ಮಂತ್ರಿ ಸ್ಥಾನ ಕೈತಪ್ಪಿದೆ.

ಅನ್ನಪೂರ್ಣ ತುಕಾರಾಂ ಅವರನ್ನು ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಂಡು ಮಹಿಳಾ ಪ್ರಾತಿನಿಧ್ಯ ಕಲ್ಪಿಸಲು ಪಕ್ಷ ನಿರ್ಧರಿಸಿತ್ತು. ಆದರೆ ನಾಗೇಂದ್ರ ಅವರ ಷರತ್ತಿನ ಹಿನ್ನೆಲೆಯಲ್ಲಿ ಅನ್ನಪೂರ್ಣ ಅವರಿಗೆ ಕೈತಪ್ಪಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ಧಕ್ಕಲಿದೆ.

ಈ ಮಾಹಿತಿ ತಿಳಿಯುತ್ತಿದ್ದಂತೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ, ಪಕ್ಷ ತಮಗೆ ಯಾವುದೇ ಸ್ಥಾನಮಾನ ನೀಡಿದರೂ, ಅದನ್ನು ನಿಭಾಯಿಸುವುದಾಗಿ ಹೇಳಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಮೂರು ವರ್ಷಗಳ ಕಾಲ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದೇನೆ. ಇದಕ್ಕೆ ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಋಣಿಯಾಗಿದ್ದೇನೆ. ಮುಂದೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ, ಪ್ರಾಮಾಣಿಕವಾಗಿ ಅದನ್ನು ನಿಭಾಯಿಸುತ್ತೇನೆ. ನಾನು ಪಕ್ಷದ ಶಿಸ್ತಿನ ಶಿಪಾಯಿ ಹೇಳಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
.representationapprovecabinetChief MinistercongressDKlakshmi hebbalkarleadersprovidereshuffleShivakumarWomen
0 FacebookTwitterPinterestEmail
KM Shivaraju

previous post
ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ
next post
ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

You may also like

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

ಶೀಘ್ರದಲ್ಲೇ ಬಸ್ ಪ್ರಯಾಣ ದರ ಶೇ.25ರಿಂದ ಶೇ.50 ಏರಿಕೆ

October 5, 2026

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

October 3, 2026

ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

October 1, 2026

ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

September 30, 2026

ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

September 29, 2026

ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

September 28, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (587)
  • ಅಂಕಣ (109)
  • ಉದ್ಯೋಗ (355)
  • ದಿನ ಭವಿಷ್ಯ (110)
  • ರಾಜಕೀಯ (2,080)
  • ರಾಜ್ಯ (2,395)
  • ರಾಷ್ಟ್ರ (2,359)
  • ವಿಶ್ಲೇಷಣೆ (202)
  • ಶಿಕ್ಷಣ (412)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

    October 12, 2026
  • 2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

    October 10, 2026
  • ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

    October 7, 2026

KMS Special

  • ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

    October 12, 2026
  • 2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

    October 10, 2026
  • ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

    October 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ