Sunday, August 30, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, August 30, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

by admin August 29, 2026
written by admin August 29, 2026 0 comments 2 minutes read
0FacebookTwitterPinterestEmail
7

ನಾಗೇಂದ್ರ ಕಣ್ಣೀರಿಗೆ ಬಿಜೆಪಿ ಕಾರಣವಲ್ಲ, ಕಾಂಗ್ರೆಸ್ ಕಾರಣ

ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಪೂರ್ವನಿಗದಿಯಂತೆ ಪಾದಯಾತ್ರೆ ನಡೆಸುವಂತೆ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಆದೇಶಿಸಿದ್ದಾರೆ.

ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರನ್ನು ದೆಹಲಿಗೆ ಕರೆಸಿಕೊಂಡ ಬಿಜೆಪಿ ರಾಷ್ಟ್ರೀಯ ನಿತಿನ್ ನಬಿನ್, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮುದುವರಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಜನತೆಗೆ ತಿಳಿಸಲು ಸಲಹೆ

ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸಂಪರ್ಕಿಸಿದ ನಬಿನ್, ಪೂರ್ವ ನಿಧಾರದಂತೆ ಬಳ್ಳಾರಿ ಪಾದಯಾತ್ರೆ ನಡೆಸಿ ಎಂಬುದಾಗಿ ಸಲಹೆ ಮಾಡಿರುವುದಲ್ಲದೆ, ಈ ವೇಳೆ, ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ನಿಗದಿ ಪಡಿಸಿದ ಹಣವನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಪಡಿಸಿಕೊಂಡ ವಿಷಯವನ್ನು ಜನತೆಯ ಮನ ಮುಟ್ಟುವಂತೆ ತಿಳಿಸಿ ಎಂದಿದ್ದಾರೆ.

ನಾಗೇಂದ್ರರ ಹಗರಣ ಮಾತ್ರವಲ್ಲದೆ, ಕಾಂಗ್ರೆಸ್ ಆಡಳಿತದಲ್ಲಿ ಹಲವು ಹಗರಣಗಳು ನಡೆದಿವೆ, ಅವುಗಳನ್ನೂ ಬಯಲಿಗೆಳೆಯಿರಿ ಎಂದಿದ್ದಾರೆ.

ವರಿಷ್ಠರ ಆದೇಶದ ನಂತರ ಪ್ರತ್ಯೇಕವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ಮಾತನಾಡಿ, ಪೂರ್ವ ನಿಗದಿಯಂತೆ ಸೆಪ್ಟೆಂಬರ್ 1ರಂದು ರಾಯಚೂರಿನ ಲಿಂಗಸೂಗೂರಿನಲ್ಲಿ ಬೈಹತ್ ಸಮಾವೇಶ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಗುವುದು ಎಂದರು.

ಬಳ್ಳಾರಿಯಲ್ಲಿ ಪಾದಯಾತ್ರೆ ಸಮಾರೋಪ

ಸೆಪ್ಟೆಂಬರ್ 10ರಂದು ಬಳ್ಳಾರಿಯಲ್ಲಿ ಪಾದಯಾತ್ರೆ ಅಂತಿಮಗೊಳ್ಳಲಿದ್ದು, ಅದಕ್ಕೂ ಮೊದಲು ಮಸ್ಕಿ, ಸಿಂಧನೂರು, ಕಾರಟಗಿ, ಗಂಗಾವತಿ, ಕಂಪ್ಲಿ, ಸಂಡೂರು, ಬಳ್ಳಾರಿ ಗ್ರಾಮಾಂತರ ಮೂಲಕ ಪಾದಯಾತ್ರೆ ಸಾಗಲಿದೆ ಎಂದರು.

ವಾಲ್ಮೀಕಿ ನಿಗಮದ 187 ಕೋಟಿ ರೂ. ವಾಪಾಸ್ ಆಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.

ಪಾದಯಾತ್ರೆಯಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿ, ಉಪಸ್ಥಿತರಿರುವರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ನಾಗೇಂದ್ರ ಅವರನ್ನು ಸಮರ್ಥಿಸಿಕೊಳ್ಳಬಹುದಿತ್ತು, ವಿರೋಧ ಪಕ್ಷಗಳ ಒತಾಯದ ಹಿನ್ನೆಲೆ ರಾಜೀನಾಮೆ ಪಡೆದರು.

ನಾಗೇಂದ್ರ ಕಣ್ಣೀರಿಗೆ ಬಿಜೆಪಿ ಕಾರಣವಲ್ಲ

ರಾಜೀನಾಮೆ ವೇಳೆ ಕಣ್ಣೀರು ಹಾಕುವಂತೆ ನಾಗೇಂದ್ರ ಅವರಿಗೆ ಯಾರು ಹೇಳಿದ್ದರೋ ಗೊತ್ತಿಲ್ಲ, ಅವರ ಕಣ್ಣೀರಿಗೆ ಬಿಜೆಪಿ ಕಾರಣವಲ್ಲ, ಕಾಂಗ್ರೆಸ್ ಕಾರಣ.

ನಮ್ಮ ಸ್ವಾರ್ಥಕ್ಕೆ ಹೋರಾಟ ಮಾಡಲಿಲ್ಲ, ಎಸ್‌ಟಿ ಸಮುದಾಯದ ಮಕ್ಕಳ ಭವಿಷ್ಯಕ್ಕಾಗಿ ಹೋರಾಡಿದೆವು.

ಬಿಜೆಪಿ ಮನುವಾದಿಗಳೆಂದು ಟೀಕೆ ಮಾಡುವ ನಾಗೇಂದ್ರ ಅವರನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸಿದ್ದೇ ನಮ್ಮ ಪಕ್ಷ, 2013 ರಲ್ಲಿ ಗೆಲುವು ಸಾಧಿಸಿದಾಗ ಜನಾರ್ದನ ರೆಡ್ಡಿ ಸೇರಿ ಹಲವರು ಅವರ ಜೊತೆಯಲ್ಲಿದ್ದರು, ಆಗ ನಮ್ಮ ಪಕ್ಷ ಮನುವಾದಿಗಳಾಗಿ ಕಾಣಲಿಲ್ಲ.

ಹಿಂಸೆ ತಾಳದೆ ಅಧಿಕಾರಿ ಆತ್ಮಹತ್ಯೆ

ದಲಿತ ಸಮುದಾಯದ ಅಧಿಕಾರಿ ಚಂದ್ರಶೇಖರ್ ತಮಗಾದ ಬೆದರಿಕೆ, ಹಿಂಸೆ ತಾಳದೆ ಆತ್ಮಹತ್ಯೆ ಮಾಡಿಕೊಂಡರು, ಇದರ ಕರ್ಮ ನಾಗೇಂದ್ರ ಅವರ ಬೆನ್ನು ಹತ್ತಿದೆ.

ಅಧಿಕಾರಿ ಪತ್ನಿ, ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ, ಕುಟುಂಬಕ್ಕೆ ಕಿಂಚಿತ್ತೂ ಕಾಳಜಿ ತೋರಲಿಲ್ಲ, ಕಣ್ಣೆತ್ತಿಯೂ ನೋಡಿಲ್ಲ ಎಂದರು.

ಕಾಂಗ್ರೆಸ್ ಪಕ್ಷವನ್ನು ದೇಶದ ದಲಿತರು ಎಂದಿಗೂ ಕ್ಷಮಿಸುವುದಿಲ್ಲ, ಡಾ.ಬಾಬಾ ಸಾಹೇಬರನ್ನು ಸೋಲಿಸಿದ ಕಾಂಗ್ರೆಸ್, ಜಗಜೀವನ್ ರಾಮ್ ಅವರನ್ನು ಬಳಸಿಕೊಂಡು ತುರ್ತು ಪರಿಸ್ಥಿತಿ ಹೇರಿತು, ಪ್ರಧಾನಿ ಆಗದಂತೆ ಅವರನ್ನು ತುಳಿಯಿತು.

ಕಾಂಗ್ರೆಸ್ ಮೊಸಳೆ ಕಣ್ಣೀರು

ದಲಿತರನ್ನು ಬಳಸಿಕೊಂಡು ಕಾಂಗ್ರೆಸ್ ಹೊಲಸು ಕೆಲಸ ಮಾಡುತ್ತಾ ಬಂದಿದೆ, ಎರಡು ದಿನ ಕೋಪಿಸಿಕೊಳ್ಳುವ ದಲಿತರು ಮಾರನೇ ದಿನ ಎಲ್ಲಾ ಮರೆಯುತ್ತಾರೆ, ಅವರನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ಕಾಂಗ್ರೆಸ್ ಮಾಡುತ್ತದೆ, ಮೀಸಲಾತಿ ವಿಚಾರದಲ್ಲೂ ಮೋಸ ಮಾಡಿದೆ, ಸರ್ಕಾರಿ ನೇಮಕಾತಿಯಲ್ಲೂ ಮೀಸಲಾತಿ ಕಡಿಮೆ ಮಾಡಿದರು.

ದಲಿತ ನಾಯಕ ಕೆ.ಎನ್.ರಾಜಣ್ಣ ಅವರನ್ನೂ ಸಚಿವ ಸ್ಥಾನದಿಂದ ತೆಗೆದು ಬಲಿಪಶು ಮಾಡಿದರು, ಆಗ ಇಲ್ಲದ ಮೊಸಳೆ ಕಣ್ಣೀರು, ನಾಟಕ, ದಲಿತರ ಮೇಲಿನ ಅಭಿಮಾನ ಈಗ ಏಕೆ ಎಂದು ಪ್ರಶ್ನಿಸಿದರು.

ಜನರ ಹಣ ಕಾಂಗ್ರೆಸ್ ಪಾಲು

ನಾಗೇಂದ್ರ ಪಕ್ಷದ ಆಸ್ತಿ ಎಂದು ಮುಖ್ಯಮಂತ್ರಿ ಹೇಳುತ್ತಾರೆ, ಅವರು ಕಾಂಗ್ರೆಸ್ ಪಕ್ಷದ ಆಸ್ತಿ, ಸೋನಿಯಾ, ರಾಹುಲ್, ಪ್ರಿಯಾಂಕಾ, ಕೆಪಿಸಿಸಿ ಆಸ್ತಿ, ಜನರ ಹಣ ಕಾಂಗ್ರೆಸ್ ಗೆ ನೀಡುವ ಕೆಲಸ ಮಾಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮನೆಗೆ ಹೋಗಲಿದೆ, ಇಡೀ ಸರ್ಕಾರವನ್ನೇ ವಜಾ ಮಾಡಿ ಚುನಾವಣೆ ನಡೆಸಲಿ, ಜನತಾ ನ್ಯಾಯಾಲಯಕ್ಕೆ ಹೋಗೋಣ ಎಂದು ಸವಾಲು ಎಸೆದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b.nagendrabjp padayatrecentral ministersjds supportrayachuru to bellaryresignationseptember 1 to 10valmiki corporation
0 FacebookTwitterPinterestEmail
admin

previous post
ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

You may also like

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

August 25, 2026

ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

August 24, 2026

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

August 22, 2026

’ಬಿ’ ಯಿಂದ ’ಎ’ ಖಾತಾ ಕಾಯ್ದೆ ರಾಜ್ಯಾದ್ಯಂತ ವಿಸ್ತರಣೆ

August 21, 2026

ಕರ್ನಾಟಕಕ್ಕೆ ನ್ಯಾಯಯುತ ಅನುದಾನ ನೀಡಿ: ಡಿಕೆಶಿ

August 20, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

ವಿಧಾನಸಭೆ ಮತ್ತೆ ಪ್ರವೇಶಿಸಲು ಜನಪ್ರಿಯತೆ ಗಳಿಸಿ

August 19, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (552)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,045)
  • ರಾಜ್ಯ (2,360)
  • ರಾಷ್ಟ್ರ (2,325)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

    August 29, 2026
  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026

KMS Special

  • ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

    August 29, 2026
  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ...

August 28, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ